ಸಬ್ಬತ್ ದಿನದಂದು ಯೇಸು ಸಭಾಮಂದಿರದಲ್ಲಿ ಉಪದೇಶಿಸಿದನು. ಆತನ ಉಪದೇಶವನ್ನು ಕೇಳಿ ಆಶ್ಚರ್ಯಗೊಂಡ ಅನೇಕ ಜನರು, “ಈ ಉಪದೇಶವನ್ನು ಮತ್ತು ಈ ಜ್ಞಾನವನ್ನು ಇವನು ಎಲ್ಲಿಂದ ಪಡೆದನು? ಇವನಿಗೆ ಕೊಟ್ಟವರು ಯಾರು? ಇವನಿಗೆ ಅದ್ಭುತಕಾರ್ಯಗಳನ್ನು ಮಾಡುವ ಶಕ್ತಿಯು ಎಲ್ಲಿಂದ ಬಂತು?
ಯೇಸು ಆ ಊರಿನಲ್ಲಿ ಅನೇಕ ಅದ್ಭುತಕಾರ್ಯಗಳನ್ನು ಮಾಡಲು ಸಾಧ್ಯವಾಗಲಿಲ್ಲ. ಆತನು ತನ್ನ ಕೈಗಳನ್ನು ಕೆಲವು ಮಂದಿ ಕಾಯಿಲೆಯವರ ಮೇಲಿಟ್ಟು ಅವರ ಕಾಯಿಲೆಗಳನ್ನು ವಾಸಿಮಾಡಿದನು. ಇವುಗಳಲ್ಲದೆ ಬೇರೆ ಯಾವ ಅದ್ಭುತಕಾರ್ಯಗಳನ್ನೂ ಆತನು ಮಾಡಲಿಲ್ಲ.
ಯೇಸು ಅವರಿಗೆ ಹೇಳಿದ್ದೇನೆಂದರೆ: “ನಿಮ್ಮ ಪ್ರವಾಸಕ್ಕೆ ಏನನ್ನೂ ತೆಗೆದುಕೊಳ್ಳಬೇಡಿ. ಊರುಗೋಲನ್ನು ಮಾತ್ರ ತೆಗೆದುಕೊಳ್ಳಿ, ರೊಟ್ಟಿಯನ್ನಾಗಲಿ ಚೀಲವನ್ನಾಗಲಿ ತೆಗೆದುಕೊಳ್ಳಬೇಡಿ. ನಿಮ್ಮ ಜೇಬಿನಲ್ಲಿ ಹಣವನ್ನು ಇಟ್ಟುಕೊಳ್ಳಬೇಡಿ.
ಯಾವ ಊರಿನವರಾದರೂ ನಿಮ್ಮನ್ನು ಸ್ವೀಕರಿಸಿಕೊಳ್ಳದಿದ್ದರೆ ಮತ್ತು ನಿಮ್ಮ ಬೋಧನೆಯನ್ನು ಕೇಳದಿದ್ದರೆ ನಿಮ್ಮ ಪಾದಕ್ಕೆ ಹತ್ತಿದ ಧೂಳನ್ನು ಝಾಡಿಸಿ ಆ ಊರನ್ನು ಬಿಟ್ಟುಹೋಗಿರಿ. ಇದು ಅವರಿಗೆ ಎಚ್ಚರಿಕೆಯಾಗಿರುತ್ತದೆ.”
(ಮತ್ತಾಯ 14:1-12; ಲೂಕ 9:7-9) ಯೇಸು ಪ್ರಸಿದ್ಧನಾಗಿದ್ದುದರಿಂದ ರಾಜನಾದ ಹೆರೋದನಿಗೆ ಯೇಸುವಿನ ವಿಷಯ ತಿಳಿಯಿತು. ಕೆಲವು ಜನರು, “ಇವನು (ಯೇಸು) ಸ್ನಾನಿಕನಾದ ಯೋಹಾನ. ಇವನು ಮತ್ತೆ ಬದುಕಿಬಂದಿದ್ದಾನೆ. ಆದಕಾರಣವೇ ಈ ಅದ್ಭುತಕಾರ್ಯಗಳನ್ನು ಮಾಡಲು ಶಕ್ತನಾಗಿದ್ದಾನೆ” ಎಂದು ಹೇಳಿದರು.
ಯೋಹಾನನನ್ನು ಬಂಧಿಸಲು ತನ್ನ ಸೈನಿಕರಿಗೆ ಹೆರೋದನೇ ಆಜ್ಞಾಪಿಸಿದ್ದನು. ಅಂತೆಯೇ ಅವರು ಯೋಹಾನನನ್ನು ಸೆರೆಯಲ್ಲಿ ಹಾಕಿದ್ದರು. ಹೆರೋದನು ತನ್ನ ಪತ್ನಿಯಾಗಿ ಇಟ್ಟುಕೊಂಡಿದ್ದ ಹೆರೋದ್ಯಳ ನಿಮಿತ್ತ ಹೀಗೆ ಮಾಡಿದ್ದನು. ಹೆರೋದ್ಯಳು ಹೆರೋದನ ಸಹೋದರನಾದ ಫಿಲಿಪ್ಪನ ಪತ್ನಿ.
ಆದರೆ ಆಕೆಗೆ ಸಾಧ್ಯವಾಗಲಿಲ್ಲ. ಹೆರೋದನು ಯೋಹಾನನನ್ನು ಕೊಲ್ಲಿಸಲು ಭಯಪಟ್ಟನು. ಯೋಹಾನನನ್ನು ಒಳ್ಳೆಯವನೆಂದೂ ಪವಿತ್ರನೆಂದೂ ಜನರೆಲ್ಲರು ನಂಬಿದ್ದಾರೆಂಬುದು ಹೆರೋದನಿಗೆ ತಿಳಿದಿತ್ತು. ಆದ್ದರಿಂದ ಹೆರೋದನು ಯೋಹಾನನನ್ನು ರಕ್ಷಿಸಿದನು. ಹೆರೋದನು ಯೋಹಾನನ ಉಪದೇಶವನ್ನು ಕೇಳಿದಾಗಲೆಲ್ಲಾ ಗಲಿಬಿಲಿಗೊಳ್ಳುತ್ತಿದ್ದನು. ಆದರೂ ಅವನ ಉಪದೇಶವನ್ನು ಸಂತೋಷದಿಂದ ಕೇಳುತ್ತಿದ್ದನು.
ಒಮ್ಮೆ ಯೋಹಾನನನ್ನು ಮರಣಕ್ಕೆ ಈಡುಮಾಡುವ ಸುಸಮಯ ಹೆರೋದ್ಯಳಿಗೆ ದೊರೆಯಿತು. ಅಂದು ಹೆರೋದನ ಹುಟ್ಟುಹಬ್ಬದ ದಿನವಾಗಿತ್ತು. ಹೆರೋದನು ರಾಜಾಧಿಕಾರಿಗಳಿಗೂ ಸೇನಾಧಿಪತಿಗಳಿಗೂ ಮತ್ತು ಗಲಿಲಾಯದ ಪ್ರಮುಖರಿಗೂ ಒಂದು ಔತಣಕೂಟವನ್ನು ಏರ್ಪಡಿಸಿದನು.
ಹೆರೋದ್ಯಳ ಮಗಳು ಈ ಔತಣಕೂಟಕ್ಕೆ ಬಂದು ನರ್ತಿಸಿದಳು. ಹೆರೋದನಿಗೂ ಮತ್ತು ಅವನ ಜೊತೆಯಲ್ಲಿ ಊಟಮಾಡುತ್ತಿದ್ದವರಿಗೂ ಬಹಳ ಸಂತೋಷವಾಯಿತು. ಆಗ ರಾಜ ಹೆರೋದನು ಆ ಹುಡುಗಿಗೆ, “ನಿನಗೆ ಏನು ಬೇಕಾದರೂ ಕೇಳಿಕೊ, ನಾನು ನಿನಗೆ ಕೊಡುತ್ತೇನೆ.
ರಾಜ ಹೆರೋದನು ಬಹಳ ವ್ಯಸನಗೊಂಡನು. ಆದರೆ ಅವನು ಆ ಹುಡುಗಿಗೆ ಏನು ಬೇಕಾದರೂ ಕೊಡುವೆನೆಂದು ಪ್ರಮಾಣ ಮಾಡಿದ್ದನು. ಅಲ್ಲಿ ಹೆರೋದನ ಸಂಗಡ ಊಟಮಾಡುತ್ತಿದ್ದ ಜನರು ಆ ಪ್ರಮಾಣವನ್ನು ಕೇಳಿಸಿಕೊಂಡಿದ್ದರು. ಆದ್ದರಿಂದ ಅವಳು ಕೇಳಿದ್ದನ್ನು ನಿರಾಕರಿಸಲು ಹೆರೋದನು ಇಚ್ಛಿಸಲಿಲ್ಲ.
ಯೇಸು ಮತ್ತು ಆತನ ಶಿಷ್ಯರು ಜನರಿಂದ ತುಂಬಿದ ಸ್ಥಳದಲ್ಲಿದ್ದರು. ಅಲ್ಲಿ ಅನೇಕಾನೇಕ ಜನರಿದ್ದುದರಿಂದ ಯೇಸು ಮತ್ತು ಆತನ ಶಿಷ್ಯರಿಗೆ ಊಟಮಾಡಲು ಸಹ ಸಮಯವಿರಲಿಲ್ಲ. ಯೇಸು ತನ್ನ ಶಿಷ್ಯರಿಗೆ, “ನನ್ನೊಂದಿಗೆ ಬನ್ನಿ. ನಾವು ಪ್ರಶಾಂತವಾಗಿರುವ ಸ್ಥಳಕ್ಕೆ ಹೋಗಿ ಸ್ವಲ್ಪ ವಿಶ್ರಮಿಸಿಕೊಳ್ಳೋಣ” ಎಂದು ಹೇಳಿದನು.
ಆದರೆ ಅವರು ಹೋಗುತ್ತಿರುವುದನ್ನು ಅನೇಕ ಜನರು ನೋಡಿದರು. ಆತನು ಯೇಸುವೆಂಬುದು ಅವರಿಗೆ ತಿಳಿದಿತ್ತು. ಆದ್ದರಿಂದ ಆತನು ಹೋಗುತ್ತಿರುವ ಸ್ಥಳಕ್ಕೆ ಎಲ್ಲಾ ಊರುಗಳಿಂದ ಜನರು ಓಡಿಹೋಗಿ, ಆತನು ಅಲ್ಲಿಗೆ ಬರುವುದಕ್ಕೆ ಮುಂಚೆಯೇ ಅಲ್ಲಿದ್ದರು.
ಯೇಸು ಅಲ್ಲಿಗೆ ಬಂದಾಗ, ಅನೇಕ ಜನರು ತನಗಾಗಿ ಕಾಯುತ್ತಿರುವುದನ್ನು ನೋಡಿದನು. ಅವರು ಕುರುಬನಿಲ್ಲದ ಕುರಿಗಳಂತೆ ಇರುವುದನ್ನು ಕಂಡು ದುಃಖಗೊಂಡು ಅವರಿಗೆ ಅನೇಕ ಸಂಗತಿಗಳನ್ನು ಉಪದೇಶಿಸಿದನು.
ಆದರೆ ಯೇಸು, “ನೀವೇ ಅವರಿಗೆ ಊಟ ಕೊಡಿ” ಎಂದು ಉತ್ತರಕೊಟ್ಟನು. ಶಿಷ್ಯರು ಯೇಸುವಿಗೆ, “ಈ ಜನರಿಗೆಲ್ಲ ಬೇಕಾಗುವಷ್ಟು ರೊಟ್ಟಿಯನ್ನು ನಾವು ಎಲ್ಲಿಂದ ತರೋಣ! ಅವರಿಗೆ ಬೇಕಾಗುವಷ್ಟು ರೊಟ್ಟಿಯನ್ನು ಕೊಂಡುಕೊಂಡು ಬರಬೇಕಾದರೆ ನಮಗೆ ಇನ್ನೂರು ದಿನಾರಿ ನಾಣ್ಯ [*ಇನ್ನೂರು ದಿನಾರಿ ನಾಣ್ಯ ಒಬ್ಬನಿಗೆ ದೊರೆಯುತ್ತಿದ್ದ ಒಂದು ವರ್ಷದ ಆದಾಯ.] ಗಳಾದರೂ ಬೇಕು!” ಎಂದು ಹೇಳಿದರು.
ಯೇಸು ಶಿಷ್ಯರಿಗೆ, “ಈಗ ನಿಮ್ಮ ಬಳಿಯಲ್ಲಿ ಎಷ್ಟು ರೊಟ್ಟಿಗಳಿವೆ? ಹೋಗಿ ನೋಡಿ” ಎಂದು ಹೇಳಿದನು. ಶಿಷ್ಯರು ಹೋಗಿ ರೊಟ್ಟಿಗಳನ್ನು ಎಣಿಸಿ ಬಂದು, “ನಮ್ಮ ಬಳಿ ಐದು ರೊಟ್ಟಿಗಳಿವೆ ಮತ್ತು ಎರಡು ಮೀನುಗಳಿವೆ” ಎಂದು ಹೇಳಿದರು.
ಯೇಸು ಐದು ರೊಟ್ಟಿಗಳನ್ನು ಮತ್ತು ಎರಡು ಮೀನುಗಳನ್ನು ತೆಗೆದುಕೊಂಡು ಆಕಾಶದ ಕಡೆಗೆ ನೋಡಿ, ರೊಟ್ಟಿಗಾಗಿ ದೇವರಿಗೆ ಕೃತಜ್ಞತೆ ಸಲ್ಲಿಸಿದನು. ಬಳಿಕ ರೊಟ್ಟಿಯನ್ನು ಮುರಿದು, ಅದನ್ನು ಶಿಷ್ಯರಿಗೆ ಕೊಟ್ಟು ಜನರಿಗೆಲ್ಲ ಹಂಚಲು ತಿಳಿಸಿದನು. ಅಂತೆಯೇ ಎರಡು ಮೀನುಗಳನ್ನು ಮುರಿದು ಜನರಿಗೆ ಹಂಚಬೇಕೆಂದು ಶಿಷ್ಯರಿಗೆ ಕೊಟ್ಟನು.
(ಮತ್ತಾಯ 14:22-33; ಯೋಹಾನ 6:15-21) ಆಗ ಯೇಸು ತನ್ನ ಶಿಷ್ಯರಿಗೆ ದೋಣಿಯೊಳಕ್ಕೆ ಹೋಗಲು ತಿಳಿಸಿದನು. ಸರೋವರದ ಆಚೆಯ ದಡದಲ್ಲಿದ್ದ ಬೆತ್ಸಾಯಿದಕ್ಕೆ ಹೋಗಬೇಕೆಂತಲೂ ಸ್ವಲ್ಪ ಸಮಯದ ನಂತರ ತಾನು ಬರುವುದಾಗಿಯೂ ಯೇಸು ಅವರಿಗೆ ಹೇಳಿ ಅವರನ್ನು ಕಳುಹಿಸಿದನು. ತಮ್ಮತಮ್ಮ ಮನೆಗಳಿಗೆ ಹೋಗುವಂತೆ ಜನರಿಗೆ ತಿಳಿಸುವುದಕ್ಕಾಗಿ ಯೇಸು ಅಲ್ಲಿ ಉಳಿದುಕೊಂಡನು.
ದೋಣಿಯು ಸರೋವರದ ಮೇಲೆ ದೂರದಲ್ಲಿರುವುದನ್ನೂ ಶಿಷ್ಯರು ಅದನ್ನು ದಡಕ್ಕೆ ಸಾಗಿಸಲು ಬಹಳ ಕಷ್ಟಪಡುತ್ತಿರುವುದನ್ನೂ ಯೇಸು ನೋಡಿದನು. ಗಾಳಿಯು ಅವರಿಗೆ ಪ್ರತಿಕೂಲವಾಗಿ ಬೀಸುತ್ತಿತ್ತು. ಮುಂಜಾನೆ ಮೂರರಿಂದ ಆರು ಗಂಟೆಯ ಸಮಯದಲ್ಲಿ, ಯೇಸು ನೀರಿನ ಮೇಲೆ ನಡೆದುಕೊಂಡು ದೋಣಿಯ ಸಮೀಪಕ್ಕೆ ಬಂದು ಅವರನ್ನು ಹಾದು ಮುಂದೆ ಹೋಗುವುದರಲ್ಲಿದ್ದನು.
ಯೇಸು ಆ ಪ್ರದೇಶದಲ್ಲಿದ್ದ ಪಟ್ಟಣಗಳಿಗೆ, ನಗರಗಳಿಗೆ ಮತ್ತು ತೋಟಗಳಿಗೆ ಹೋದನು. ಆತನು ಹೋದ ಕಡೆಗಳಲ್ಲೆಲ್ಲಾ ಜನರು ಮಾರುಕಟ್ಟೆಯ ಸ್ಥಳಗಳಿಗೆ ಕಾಯಿಲೆಯ ಜನರನ್ನು ಕರೆತಂದರು. ಅವರು ಯೇಸುವಿಗೆ, ನಿನ್ನ ಮೇಲಂಗಿಯ ಅಂಚನ್ನಾದರೂ ಮುಟ್ಟಲು ತಮಗೆ ಅವಕಾಶ ಕೊಡಬೇಕೆಂದು ಬೇಡಿಕೊಂಡರು. ಆತನನ್ನು ಸ್ಪರ್ಶಿಸಿದ ಜನರೆಲ್ಲರಿಗೂ ಗುಣವಾಯಿತು.