1
|
ಯೇಸು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ಒಟ್ಟಿಗೆ ಕರೆದು, ಅವರಿಗೆ ದುರಾತ್ಮಗಳನ್ನು ಬಿಡಿಸುವುದಕ್ಕೂ ಎಲ್ಲಾ ತರದ ವ್ಯಾಧಿ ಮತ್ತು ಕಾಯಿಲೆಗಳನ್ನು ವಾಸಿಮಾಡುವುದಕ್ಕೂ ಅಧಿಕಾರ ಕೊಟ್ಟನು. |
2
|
ಹನ್ನೆರಡು ಮಂದಿ ಅಪೊಸ್ತಲರ ಹೆಸರುಗಳು ಹೀಗಿವೆ: ಸೀಮೋನ (ಪೇತ್ರನೆಂದು ಕರೆಯುತ್ತಾರೆ) ಮತ್ತು ಇವನ ಸಹೋದರ ಅಂದ್ರೆಯ, ಜೆಬೆದಾಯನ ಮಗನಾದ ಯಾಕೋಬ, ಅವನ ಸಹೋದರ ಯೋಹಾನ, |
3
|
ಫಿಲಿಪ್ಪ ಮತ್ತು ಬಾರ್ತೊಲೊಮಾಯ, ತೋಮ, ಸುಂಕವಸೂಲಿಗಾರನಾಗಿದ್ದ ಮತ್ತಾಯ, ಅಲ್ಛಾಯನ ಮಗನಾದ ಯಾಕೋಬ, ತದ್ದಾಯ, |
4
|
ಯೆಹೂದ್ಯರ ರಾಜಕೀಯ ಪಂಗಡಕ್ಕೆ ಸೇರಿದ ಸಿಮೋನ, ಮತ್ತು ಯೇಸುವನ್ನು ಶತ್ರುಗಳಿಗೆ ಒಪ್ಪಿಸಿದ ಇಸ್ಕರಿಯೋತ ಯೂದ. |
5
|
ಯೇಸು ಈ ಹನ್ನೆರಡು ಅಪೊಸ್ತಲರಿಗೆ ಕೆಲವು ಆಜ್ಞೆಗಳನ್ನು ನೀಡಿ ಪರಲೋಕ ರಾಜ್ಯವನ್ನು ಕುರಿತು ತಿಳಿಸುವುದಕ್ಕಾಗಿ ಅವರನ್ನು ಕಳುಹಿಸಿದನು. ಯೇಸು ಅವರಿಗೆ ಹೇಳಿದ್ದೇನೆಂದರೆ: “ಯೆಹೂದ್ಯರಲ್ಲದ ಜನರ ಬಳಿಗಾಗಲಿ ಸಮಾರ್ಯದವರು ವಾಸಿಸುವ ಯಾವ ಊರಿಗಾಗಲಿ ಹೋಗಬೇಡಿ. |
6
|
ಆದರೆ ತಪ್ಪಿಸಿಕೊಂಡ ಕುರಿಗಳಂತಿರುವ ಇಸ್ರೇಲರ ಬಳಿಗೆ ಹೋಗಿ, |
7
|
ಪರಲೋಕರಾಜ್ಯವು ಬೇಗನೆ ಬರುತ್ತದೆ ಎಂದು ಬೋಧಿಸಿ. |
8
|
ರೋಗಿಗಳನ್ನು ವಾಸಿಮಾಡಿರಿ. ಸತ್ತವರನ್ನು ಬದುಕಿಸಿರಿ. ಕುಷ್ಠರೋಗಿಗಳನ್ನು ವಾಸಿಮಾಡಿರಿ. ಜನರನ್ನು ದೆವ್ವಗಳಿಂದ ಬಿಡಿಸಿರಿ. ನಾನು ನಿಮಗೆ ಈ ಅಧಿಕಾರಗಳನ್ನು ಉಚಿತವಾಗಿ ಕೊಡುತ್ತೇನೆ. ಆದ್ದರಿಂದ ಬೇರೆಯವರಿಗೆ ಉಚಿತವಾಗಿ ಸಹಾಯಮಾಡಿ. |
9
|
ನಿಮ್ಮೊಂದಿಗೆ ಹಣವನ್ನಾಗಲಿ ತಾಮ್ರ, ಬೆಳ್ಳಿಬಂಗಾರಗಳನ್ನಾಗಲಿ ತೆಗೆದುಕೊಂಡು ಹೋಗಬೇಡಿ. |
10
|
ಚೀಲವನ್ನಾಗಲಿ ಹೆಚ್ಚಿನ ಬಟ್ಟೆಗಳನ್ನಾಗಲಿ ಪಾದರಕ್ಷೆಗಳನ್ನಾಗಲಿ ಊರುಗೋಲುಗಳನ್ನಾಗಲಿ ತೆಗೆದುಕೊಂಡು ಹೋಗಬೇಡಿ. ಕೆಲಸಗಾರನಿಗೆ ಅಗತ್ಯವಾದವುಗಳನ್ನು ಒದಗಿಸಲಾಗುವುದು. |
11
|
“ನೀವು ಯಾವುದೇ ಊರಿನೊಳಕ್ಕೆ ಅಥವಾ ನಗರಕ್ಕೆ ಪ್ರವೇಶಿಸಿದಾಗ ಅಲ್ಲಿರುವ ಉತ್ತಮ ವ್ಯಕ್ತಿಯನ್ನು ಗುರುತಿಸಿ, ನೀವು ಆ ಊರನ್ನು ಬಿಡುವ ತನಕ ಅವನ ಮನೆಯಲ್ಲೇ ತಂಗಿರಿ. |
12
|
ಆ ಮನೆಗೆ ನೀವು ಪ್ರವೇಶಿಸಿದಾಗ, ‘ನಿಮಗೆ ಶುಭವಾಗಲಿ’ ಎಂದು ಹೇಳಿರಿ. |
13
|
ಆ ಮನೆಯಲ್ಲಿರುವ ಜನರು ನಿಮ್ಮನ್ನು ಸ್ವಾಗತಿಸಿದರೆ ನಿಮ್ಮ ಆಶೀರ್ವಾದಕ್ಕೆ ಅವರು ಯೋಗ್ಯರಾಗಿರುವುದರಿಂದ ಆ ಆಶೀರ್ವಾದವು ಅವರಿಗೆ ದೊರೆಯಲಿ. ಅವರು ನಿಮ್ಮನ್ನು ಸ್ವಾಗತಿಸದಿದ್ದರೆ, ನಿಮ್ಮ ಆಶೀರ್ವಾದವು ನಿಮಗೇ ಹಿಂತಿರುಗಿ ಬರಲಿ. |
14
|
ಒಂದು ಮನೆಯವರು ಅಥವಾ ಒಂದು ಊರಿನವರು ನಿಮ್ಮನ್ನು ಸ್ವಾಗತಿಸದಿದ್ದರೆ ಇಲ್ಲವೇ ನಿಮ್ಮ ಮಾತನ್ನು ಕೇಳದಿದ್ದರೆ ನೀವು ಆ ಸ್ಥಳವನ್ನು ಬಿಟ್ಟುಹೋಗುವಾಗ, ನಿಮ್ಮ ಕಾಲಿಗೆ ಹತ್ತಿದ ಧೂಳನ್ನು ಝಾಡಿಸಿಬಿಡಿರಿ. |
15
|
ನ್ಯಾಯವಿಚಾರಣೆಯ ದಿನದಲ್ಲಿ ಈ ಊರಿನ ಗತಿಯು ಸೊದೋಮ್ ಮತ್ತು ಗೊಮೋರಗಳಿಗಿಂತ ಬಹಳ ಕೆಟ್ಟದ್ದಾಗಿರುವುದು ಎಂದು ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ. |
16
|
“ಕೇಳಿರಿ! ತೋಳಗಳ ನಡುವೆ ಕುರಿಗಳನ್ನು ಬಿಟ್ಟಂತೆ ನಾನು ನಿಮ್ಮನ್ನು ಕಳುಹಿಸುತ್ತಿದ್ದೇನೆ. ಆದ್ದರಿಂದ ನೀವು ಹಾವುಗಳಂತೆ ಸೂಕ್ಷ್ಮ ಬುದ್ದಿಯುಳ್ಳವರಾಗಿರಿ, ಪಾರಿವಾಳಗಳಂತೆ ಯಾವ ಹಾನಿಯನ್ನೂ ಮಾಡದಿರಿ. |
17
|
ಜನರ ವಿಷಯದಲ್ಲಿ ಎಚ್ಚರಿಕೆಯಿಂದಿರಿ. ನಿಮ್ಮನ್ನು ಅವರು ಬಂಧಿಸಿ ನ್ಯಾಯಾಲಯಕ್ಕೆ ಕರೆದುಕೊಂಡು ಹೋಗುವರು. ಅವರು ತಮ್ಮ ಸಭಾಮಂದಿರಗಳಲ್ಲಿ ನಿಮ್ಮನ್ನು ಕೊರಡೆಗಳಿಂದ ಹೊಡೆಯುವರು. |
18
|
ನಿಮ್ಮನ್ನು ಅಧಿಕಾರಿಗಳ ಸಮ್ಮುಖಕ್ಕೂ ಅರಸುಗಳ ಸಮ್ಮುಖಕ್ಕೂ ಕರೆದುಕೊಂಡು ಹೋಗುವರು. ನನ್ನ ನಿಮಿತ್ತ ಜನರು ನಿಮಗೆ ಹೀಗೆ ಮಾಡುವರು. ಆದರೆ ನೀವು ಆ ಅರಸುಗಳಿಗೂ ಅಧಿಕಾರಿಗಳಿಗೂ ಯಹೂದ್ಯರಲ್ಲದ ಜನರಿಗೂ ನನ್ನ ವಿಷಯವಾಗಿ ಹೇಳುವಿರಿ. |
19
|
ನಿಮ್ಮನ್ನು ಬಂಧಿಸಿದಾಗ ನೀವು ಏನು ಮಾತಾಡಬೇಕು, ಹೇಗೆ ಮಾತಾಡಬೇಕು ಎಂದು ಚಿಂತಿಸಬೇಡಿ. ನೀವು ಹೇಳಬೇಕಾದುವುಗಳನ್ನು ಆ ಸಮಯದಲ್ಲಿ ನಿಮಗೆ ಅನುಗ್ರಹಿಸಲಾಗುವುದು. |
20
|
ಮಾತಾಡುವವರು ನಿಜವಾಗಿಯೂ ನೀವಲ್ಲ. ನಿಮ್ಮ ತಂದೆಯ ಆತ್ಮನೇ ನಿಮ್ಮ ಮೂಲಕ ಮಾತನಾಡುತ್ತಾನೆ. |
21
|
“ಸಹೋದರರು ಸ್ವಂತ ಸಹೋದರರಿಗೆ ವಿರೋಧವಾಗಿ ತಿರುಗಿಬಿದ್ದು ಅವರನ್ನು ಮರಣದಂಡನೆಗೆ ಒಪ್ಪಿಸುವರು. ತಂದೆಯಂದಿರು ತಮ್ಮ ಸ್ವಂತ ಮಕ್ಕಳಿಗೆ ವಿರೋಧವಾಗಿ ತಿರುಗಿಬಿದ್ದು ಅವರನ್ನು ಮರಣದಂಡನೆಗೆ ಒಪ್ಪಿಸುವರು. |
22
|
ನೀವು ನನ್ನನ್ನು ಹಿಂಬಾಲಿಸುವುದರಿಂದ ಜನರೆಲ್ಲರೂ ನಿಮ್ಮನ್ನು ದ್ವೇಷಿಸುತ್ತಾರೆ. ಆದರೆ ಕಡೆಯವರೆಗೂ ತಾಳಿಕೊಳ್ಳುವವನು ರಕ್ಷಣೆ ಹೊಂದುವನು. |
23
|
ಒಂದು ಊರಿನಲ್ಲಿ ನಿಮ್ಮನ್ನು ಹಿಂಸಿಸಿದರೆ ಮತ್ತೊಂದು ಊರಿಗೆ ಹೋಗಿ. ಮನುಷ್ಯಕುಮಾರನು ಪುನಃ ಬರುವುದಕ್ಕಿಂತ ಮುಂಚೆ ನೀವು ಇಸ್ರೇಲರ ಊರುಗಳಿಗೆಲ್ಲಾ ಹೋಗುವುದನ್ನು ಮುಗಿಸಿರುವುದಿಲ್ಲ ಎಂದು ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ. |
24
|
“ಶಿಷ್ಯನು ಗುರುವಿಗಿಂತ ಉತ್ತಮನಲ್ಲ. ಆಳು ತನ್ನ ದಣಿಗಿಂತ ಉತ್ತಮನಲ್ಲ. |
25
|
ಶಿಷ್ಯನು ತನ್ನ ಗುರುವಿನಂತಾದರೆ ಸಾಕು. ಆಳು ತನ್ನ ದಣಿಯಂತಾದರೆ ಸಾಕು. ಕುಟುಂಬದ ಹಿರಿಯನನ್ನೇ ಬೆಲ್ಜೆಬೂಲ (ದೆವ್ವ) ಎಂದು ಕರೆದರೆ, ಆ ಕುಟುಂಬದ ಇತರರನ್ನು ಮತ್ತಷ್ಟು ಕೆಟ್ಟ ಹೆಸರಿನಿಂದ ಕರೆಯುವುದಿಲ್ಲವೇ? |
26
|
“ಆದಕಾರಣ ಆ ಜನರಿಗೆ ಹೆದರಬೇಡಿ. ಮರೆಯಾಗಿರುವ ಪ್ರತಿಯೊಂದೂ ಬಹಿರಂಗವಾಗುವುದು. ಗುಪ್ತವಾಗಿರುವ ಪ್ರತಿ ಸಂಗತಿಯು ಬಯಲಾಗುವುದು. |
27
|
ನಾನು ಕತ್ತಲೆಯಲ್ಲಿ (ರಹಸ್ಯವಾಗಿ) ಈ ಸಂಗತಿಗಳನ್ನು ನಿಮಗೆ ಹೇಳುತ್ತಿದ್ದೇನೆ. ಆದರೆ ನೀವು ಈ ಸಂಗತಿಗಳನ್ನು ಬೆಳಕಿನಲ್ಲಿ ಹೇಳಬೇಕೆಂಬುದು ನನ್ನ ಇಷ್ಟ. ನಾನು ಈ ವಿಷಯಗಳನ್ನು ನಿಮಗೆ ಮೆಲ್ಲಗೆ ಹೇಳುತ್ತಿದ್ದೇನೆ. ಆದರೆ ನೀವು ಈ ವಿಷಯಗಳನ್ನು ಜನರಿಗೆಲ್ಲ ಗಟ್ಟಿಯಾಗಿ ಹೇಳಿರಿ. |
28
|
“ಜನರಿಗೆ ಹೆದರಬೇಡಿ. ಅವರು ಶರೀರವನ್ನು ಮಾತ್ರ ಕೊಲ್ಲಬಹುದು. ಆತ್ಮವನ್ನು ಅವರು ಕೊಲ್ಲಲಾರರು. ಶರೀರವನ್ನೂ ಆತ್ಮವನ್ನೂ ನರಕಕ್ಕೆ ಹಾಕಬಲ್ಲ ದೇವರಿಗೆ ಭಯಪಡಿರಿ. |
29
|
ಮಾರುಕಟ್ಟೆಯಲ್ಲಿ ಎರಡು ಗುಬ್ಬಚ್ಚಿಗಳನ್ನು ಒಂದು ನಾಣ್ಯಕ್ಕೆ ಮಾರುತ್ತಾರೆ. ಆದರೆ ನಿಮ್ಮ ತಂದೆಯು ಅಪ್ಪಣೆ ಕೊಡದ ಹೊರತು ಅವುಗಳಲ್ಲಿ ಒಂದಾದರೂ ಸಾಯುವುದಿಲ್ಲ. |
30
|
ನಿಮ್ಮ ತಲೆಯಲ್ಲಿ ಎಷ್ಟು ಕೂದಲುಗಳು ಇವೆ ಎಂಬುದು ಸಹ ದೇವರಿಗೆ ತಿಳಿದಿದೆ. |
31
|
ಆದಕಾರಣ ಹೆದರಬೇಡಿ. ನೀವು ಅನೇಕ ಗುಬ್ಬಚ್ಚಿಗಳಿಗಿಂತಲೂ ಹೆಚ್ಚು ಬೆಲೆಯುಳ್ಳವರಾಗಿದ್ದೀರಿ. |
32
|
“ಒಬ್ಬನು ಬೇರೆಯವರ ಮುಂದೆ, ತಾನು ನನ್ನವನೆಂದು ಹೇಳಿದರೆ, ನಾನು ಸಹ ಪರಲೋಕದಲ್ಲಿ ನನ್ನ ತಂದೆಯ ಮುಂದೆ ಅವನನ್ನು ನನ್ನವನೆಂದು ಹೇಳುತ್ತೇನೆ. |
33
|
ಆದರೆ ಒಬ್ಬನು ಜನರ ಮುಂದೆ, ತಾನು ನನ್ನವನಲ್ಲವೆಂದು ಹೇಳಿದರೆ, ನಾನು ಸಹ ಪರಲೋಕದಲ್ಲಿ ನನ್ನ ತಂದೆಯ ಮುಂದೆ ಅವನು ನನ್ನವನಲ್ಲವೆಂದು ಹೇಳುತ್ತೇನೆ. |
34
|
“ಭೂಲೋಕದಲ್ಲಿ ಶಾಂತಿಯನ್ನು ಉಂಟುಮಾಡಲು ನಾನು ಬಂದಿದ್ದೇನೆಂದು ಯೋಚಿಸಬೇಡಿ. ನಾನು ಶಾಂತಿಯನ್ನು ಉಂಟುಮಾಡಲು ಬರಲಿಲ್ಲ. ಖಡ್ಗ ಹಾಕಲು ಬಂದಿದ್ದೇನೆ. |
35
|
[This verse may not be a part of this translation] |
36
|
[This verse may not be a part of this translation] |
37
|
“ಯಾರಾದರೂ ನನ್ನನ್ನು ಪ್ರೀತಿಸುವುದಕ್ಕಿಂತ ಹೆಚ್ಚಾಗಿ ತನ್ನ ತಂದೆ ಅಥವಾ ತಾಯಿಯನ್ನು ಪ್ರೀತಿಸಿದರೆ, ಅವನು ನನ್ನ ಹಿಂಬಾಲಕನಾಗಲು ಯೋಗ್ಯನಲ್ಲ. ಯಾವನಾದರೂ ನನ್ನನ್ನು ಪ್ರೀತಿಸುವುದಕ್ಕಿಂತ ಹೆಚ್ಚಾಗಿ ತನ್ನ ಮಗನನ್ನು ಇಲ್ಲವೆ ಮಗಳನ್ನು ಪ್ರೀತಿಸಿದರೆ, ಅವನು ನನ್ನ ಹಿಂಬಾಲಕನಾಗಲು ಯೋಗ್ಯನಲ್ಲ. |
38
|
ಯಾವನಾದರೂ ನನ್ನನ್ನು ಹಿಂಬಾಲಿಸುವಾಗ ಅವನಿಗೆ ಕೊಡುವಂಥ ಶಿಲುಬೆಯನ್ನು (ಸಂಕಟವನ್ನು) ಅಂಗೀಕರಿಸದಿದ್ದರೆ, ಅವನು ನನ್ನ ಹಿಂಬಾಲಕನಾಗಲು ಯೋಗ್ಯನಲ್ಲ. |
39
|
ನನ್ನನ್ನು ಪ್ರೀತಿಸುವುದಕ್ಕಿಂತ ಹೆಚ್ಚಾಗಿ ತನ್ನ ಪ್ರಾಣವನ್ನು ಪ್ರೀತಿಸುವವನು ಅದನ್ನು ಕಳೆದುಕೊಳ್ಳುತ್ತಾನೆ. ನನಗಾಗಿ ತನ್ನ ಪ್ರಾಣವನ್ನು ಕಳೆದುಕೊಳ್ಳುವವನು ಅದನ್ನು ಪಡೆದುಕೊಳ್ಳುವನು. |
40
|
“ನಿಮ್ಮನ್ನು ಅಂಗೀಕರಿಸುವವನು ನನ್ನನ್ನು ಸಹ ಅಂಗೀಕರಿಸುವನು. ನನ್ನನ್ನು ಅಂಗೀಕರಿಸುವವನು ನನ್ನನ್ನು ಕಳುಹಿಸಿದಾತನನ್ನು (ದೇವರನ್ನು) ಸಹ ಅಂಗೀಕರಿಸುವನು. |
41
|
ಪ್ರವಾದಿಯನ್ನು ಪ್ರವಾದಿಯೆಂದು ಸಂಧಿಸಿ ಸ್ವಾಗತಿಸುವವನು ಆ ಪ್ರವಾದಿಗೆ ಬರತಕ್ಕ ಪ್ರತಿಫಲವನ್ನು ಪಡೆಯುವನು. ಸತ್ಪುರುಷನನ್ನು ಸತ್ಪುರುಷನೆಂದು ಸ್ವಾಗತಿಸುವವನು ಆ ಸತ್ಪುರುಷನಿಗೆ ಬರತಕ್ಕ ಪ್ರತಿಫಲವನ್ನು ಪಡೆಯುವನು. |
42
|
ದೀನರಾದ ಇವರಿಗೆ ನನ್ನ ಹಿಂಬಾಲಕರೆಂಬ ನಿಮಿತ್ತ ಸಹಾಯ ಮಾಡುವವನು ಖಂಡಿತವಾಗಿಯೂ ಪ್ರತಿಫಲವನ್ನು ಪಡೆಯುವನು. ನನ್ನ ಹಿಂಬಾಲಕರಿಗೆ ಕೇವಲ ಒಂದು ಬಟ್ಟಲು ತಣ್ಣೀರನ್ನು ಕೊಟ್ಟರೂ ಸಹ ಅದಕ್ಕೆ ಬರತಕ್ಕ ಪ್ರತಿಫಲವು ತಪ್ಪುವುದೇ ಇಲ್ಲ.” |
Matthew 10:1 Kannada Language Bible Words basic statistical display
COMING SOON ...