ಬೇರೆ ಕೆಲವು ಬೀಜಗಳು ಒಳ್ಳೆಯ ನೆಲದಲ್ಲಿ ಬಿದ್ದವು. ಅವು ಬೆಳೆದು ಕಾಳುಬಿಟ್ಟವು. ಕೆಲವು ಗಿಡಗಳು ನೂರರಷ್ಟು, ಕೆಲವು ಗಿಡಗಳು ಅರವತ್ತರಷ್ಟು, ಇನ್ನು ಕೆಲವು ಮೂವತ್ತರಷ್ಟು ಕಾಳುಬಿಟ್ಟವು.
ಸ್ವಲ್ಪ ಜ್ಞಾನವನ್ನು ಹೊಂದಿರುವವನು ಇನ್ನೂ ಹೆಚ್ಚು ಜ್ಞಾನವನ್ನು ಪಡೆದುಕೊಂಡು ಸಾಕಷ್ಟು ಜ್ಞಾನವಂತನಾಗುವನು. ಆದರೆ ಜ್ಞಾನವನ್ನು ಹೊಂದಿಲ್ಲದವನು ತನಗಿರುವ ಸ್ವಲ್ಪ ಜ್ಞಾನವನ್ನೂ ಕಳೆದುಕೊಳ್ಳುವನು.
ಇಂಥವರ ಬಗ್ಗೆ ಯೆಶಾಯನು ಹೇಳಿದ್ದೇನೆಂದರೆ: ‘ನೀವು ಆಲಿಸುತ್ತೀರಿ, ಕೇಳುತ್ತೀರಿ, ಆದರೆ ನಿಮಗೆ ಅರ್ಥವಾಗುವುದಿಲ್ಲ. ನೀವು ದೃಷ್ಟಿಸಿ ನೋಡುತ್ತೀರಿ, ಆದರೆ ನಿಮಗೆ ಕಾಣುವುದನ್ನು ಅರ್ಥಮಾಡಿಕೊಳ್ಳುವುದಿಲ್ಲ.
ಹೌದು, ಇವರ ಮನಸ್ಸುಗಳು ಕಠಿಣವಾಗಿವೆ. ಕಿವಿ ಮಂದವಾಗಿವೆ, ಕಣ್ಣು ಮಬ್ಬಾಗಿವೆ. ಅವರು ತಮ್ಮ ಕಣ್ಣುಗಳಿಂದ ನೋಡದಂತೆಯೂ ತಮ್ಮ ಕಿವಿಗಳಿಂದ ಕೇಳದಂತೆಯೂ ತಮ್ಮ ಮನಸ್ಸುಗಳಿಂದ ಅರ್ಥಮಾಡಿಕೊಳ್ಳದಂತೆಯೂ ನನ್ನ ಕಡೆಗೆ ತಿರುಗಿಕೊಳ್ಳದಂತೆಯೂ ನನ್ನಿಂದ ಗುಣಹೊಂದದಂತೆಯೂ ಹೀಗಾಯಿತು.’ ಯೆಶಾಯ 6:9-10
ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ, ನೀವು ಈಗ ನೋಡುವ ಸಂಗತಿಗಳನ್ನು ನೋಡಲು ಮತ್ತು ಈಗ ನೀವು ಕೇಳುವ ಸಂಗತಿಗಳನ್ನು ಕೇಳಲು ಅನೇಕ ಪ್ರವಾದಿಗಳು ಮತ್ತು ಒಳ್ಳೆಯ ಜನರು ಅಪೇಕ್ಷಿಸಿದರು. ಆದರೆ ಅವರಿಗೆ ಸಾಧ್ಯವಾಗಲಿಲ್ಲ.
“ಮಗ್ಗುಲಲ್ಲಿ ಬಿದ್ದ ಬೀಜ ಅಂದರೇನು? ಪರಲೋಕರಾಜ್ಯವನ್ನು ಕುರಿತು ಬೋಧಿಸಿದ್ದನ್ನು ಕೇಳಿ ಅದನ್ನು ಅರ್ಥಮಾಡಿಕೊಳ್ಳದೆ ಇರುವ ಮನುಷ್ಯನೇ ಬೀಜ ಬಿದ್ದ ದಾರಿ ಮಗ್ಗುಲಾಗಿರುವನು. ಕೆಡುಕನು (ಸೈತಾನನು) ಬಂದು ಆ ಮನುಷ್ಯನ ಹೃದಯದಲ್ಲಿ ಬಿತ್ತಿದ್ದ ಬೀಜಗಳನ್ನು ತೆಗೆದುಹಾಕುತ್ತಾನೆ.
ಆದರೆ ಆ ಮನುಷ್ಯನು ಬೋಧನೆಯನ್ನು ತನ್ನ ಜೀವಿತದಲ್ಲಿ ಬೇರೂರಿಸಿಕೊಳ್ಳುವುದಿಲ್ಲ. ಅವನು ಆ ಬೋಧನೆಯನ್ನು ಸ್ವಲ್ಪಕಾಲ ಮಾತ್ರ ಅನುಸರಿಸುವನು. ಆ ಬೋಧನೆಯನ್ನು ಅಂಗೀಕರಿಸಿದ್ದರಿಂದ ತನಗೆ ಕಷ್ಟವಾಗಲಿ ಹಿಂಸೆಯಾಗಲಿ ಬಂದಾಗ ಅದನ್ನು ಬೇಗನೆ ಬಿಟ್ಟುಬಿಡುವನು.
“ಮುಳ್ಳುಗಿಡಗಳ ನಡುವೆ ಬಿದ್ದ ಬೀಜ ಅಂದರೇನು? ಬೋಧನೆಯನ್ನು ಕೇಳಿದರೂ ಜೀವನದ ಚಿಂತೆಗಳಿಂದ ಮತ್ತು ಹಣದ ಮೇಲಿನ ಪ್ರೀತಿಯಿಂದ ಬೋಧನೆಯನ್ನು ತನ್ನಲ್ಲಿ ಬೆಳೆಯದಂತೆ ಮಾಡುವವನೇ ಬೀಜ ಬಿದ್ದ ಮುಳ್ಳುಗಿಡಗಳ ನೆಲವಾಗಿರವನು. ಆದ್ದರಿಂದ ಬೋಧನೆಯು ಆ ಮನುಷ್ಯನ ಜೀವಿತದಲ್ಲಿ ಫಲ ಕೊಡುವುದಿಲ್ಲ.
“ಒಳ್ಳೆಯ ನೆಲದ ಮೇಲೆ ಬಿದ್ದ ಬೀಜ ಅಂದರೇನು? ಬೋಧನೆಯನ್ನು ಕೇಳಿ ಅದನ್ನು ಅರ್ಥಮಾಡಿಕೊಂಡ ವ್ಯಕ್ತಿಯೇ ಬೀಜ ಬಿದ್ದ ಒಳ್ಳೆಯ ನೆಲವಾಗಿರುವನು. ಆ ಮನುಷ್ಯನು ಬೆಳೆದು ಕೆಲವು ಸಾರಿ ನೂರರಷ್ಟು ಕೆಲವು ಸಾರಿ ಅರವತ್ತರಷ್ಟು ಮತ್ತು ಕೆಲವು ಸಾರಿ ಮೂವತ್ತರಷ್ಟು ಫಲ ಕೊಡುವನು” ಎಂದು ಹೇಳಿದನು.
ಸುಗ್ಗಿಕಾಲದವರೆಗೆ ಹಣಜಿಯೂ ಗೋಧಿಯೂ ಒಟ್ಟಿಗೆ ಬೆಳೆಯಲಿ. ಸುಗ್ಗಿಕಾಲದ ಸಮಯದಲ್ಲಿ ನಾನು ಕೆಲಸದವರಿಗೆ, ಮೊದಲು ಹಣಜಿಗಳನ್ನು ಕೂಡಿಸಿ ಅದನ್ನು ಸುಡುವುದಕ್ಕಾಗಿ ಹೊರೆ ಕಟ್ಟಿ, ನಂತರ ಗೋಧಿಯನ್ನು ಕೂಡಿಸಿ ಅದನ್ನು ನನ್ನ ಕಣಜಕ್ಕೆ ತನ್ನಿರಿ ಎಂದು ಹೇಳುವೆನು’ ಎಂದು ಉತ್ತರಕೊಟ್ಟನು.”
(ಮಾರ್ಕ 4:30-34; ಲೂಕ 13:18-21) ನಂತರ ಯೇಸು ಜನರಿಗೆ ಮತ್ತೊಂದು ಸಾಮ್ಯವನ್ನು ಹೇಳಿದನು: “ಪರಲೋಕರಾಜ್ಯ ಸಾಸಿವೆ ಕಾಳಿಗೆ ಹೋಲಿಕೆಯಾಗಿದೆ. ಒಬ್ಬನು ಅದನ್ನು ತನ್ನ ಹೊಲದಲ್ಲಿ ಬಿತ್ತಿದನು.
ಅದು ಎಲ್ಲಾ ಬೀಜಗಳಿಗಿಂತಲೂ ಸಣ್ಣ ಬೀಜವಾಗಿದೆ. ಆದರೆ ಅದು ಬೆಳೆದಾಗ ತೋಟದ ಗಿಡಗಳಿಗಿಂತಲೂ ದೊಡ್ಡದಾಗಿರುವುದು. ಅದು ಮರವಾದಾಗ ಪಕ್ಷಿಗಳು ಬಂದು ಅದರ ಕೊಂಬೆಗಳಲ್ಲಿ ಗೂಡು ಮಾಡಿಕೊಳ್ಳುವಷ್ಟು ದೊಡ್ಡದಾಗಿರುತ್ತದೆ.”
ಬಳಿಕ ಯೇಸು ಜನರಿಗೆ ಇನ್ನೊಂದು ಸಾಮ್ಯವನ್ನು ಹೇಳಿದನು: “ಪರಲೋಕರಾಜ್ಯವು ಒಬ್ಬ ಸ್ತ್ರೀ ರೊಟ್ಟಿ ಮಾಡುವುದಕ್ಕೆ ಒಂದು ದೊಡ್ಡ ಬೋಗುಣಿಯ ಹಿಟ್ಟಿಗೆ ಬೆರೆಸಿದ ಹುಳಿಗೆ ಹೋಲಿಕೆಯಾಗಿದೆ. ಆ ಹುಳಿಯು ನಾದಿದ ಹಿಟ್ಟನ್ನೆಲ್ಲಾ ಉಬ್ಬಿಸಿತು.”
“ಪರಲೋಕರಾಜ್ಯವು ಹೊಲದಲ್ಲಿ ಹೂಳಿಟ್ಟ ನಿಧಿಗೆ ಹೋಲಿಕೆಯಾಗಿದೆ. ಒಂದು ದಿನ ಒಬ್ಬನು ಆ ನಿಧಿಯನ್ನು ಕಂಡು ಬಹಳ ಸಂತೋಷದಿಂದ ಅದನ್ನು ಹೊಲದಲ್ಲಿ ಅಡಗಿಸಿಟ್ಟನು. ಬಳಿಕ ಅವನು ತನ್ನ ಆಸ್ತಿಯನ್ನೆಲ್ಲಾ ಮಾರಿ ಆ ಹೊಲವನ್ನು ಕೊಂಡುಕೊಂಡನು.
ಆಗ ಯೇಸು ತನ್ನ ಶಿಷ್ಯರಿಗೆ, “ಹೀಗಿರಲಾಗಿ ಪರಲೋಕರಾಜ್ಯದ ವಿಷಯವಾಗಿ ಬೋಧಿಸಿದಂಥ ಪ್ರತಿಯೊಬ್ಬ ಧರ್ಮೋಪದೇಶಕನು ಒಂದು ಮನೆಯ ಯಜಮಾನನಂತಿದ್ದಾನೆ. ಆ ಮನುಷ್ಯನು ಹೊಸ ವಸ್ತುಗಳನ್ನೂ ಹಳೆಯ ವಸ್ತುಗಳನ್ನೂ ಆ ಮನೆಯಲ್ಲಿ ಶೇಖರಿಸಿಕೊಂಡು ಅವುಗಳನ್ನು ಹೊರಗೆ ತರುವನು” ಎಂದನು.
ಆತನನ್ನು ಸ್ವೀಕರಿಸಿಕೊಳ್ಳಲಿಲ್ಲ. ಯೇಸು ಅವರಿಗೆ, “ಪ್ರವಾದಿಗೆ ಪರಜನರು ಮರ್ಯಾದೆ ಸಲ್ಲಿಸುತ್ತಾರೆ; ಆದರೆ ಸ್ವಂತ ಊರಿನವರಾಗಲಿ ಸ್ವಂತ ಮನೆಯವರಾಗಲಿ ಮರ್ಯಾದೆ ಕೊಡುವುದಿಲ್ಲ” ಎಂದು ಹೇಳಿದನು.