(ಮಾರ್ಕ 9:42-48; ಲೂಕ 17:1-2) “ದೀನತೆಯಿಂದ ನನ್ನನ್ನು ಹಿಂಬಾಲಿಸುವವರಲ್ಲಿ ಯಾರನ್ನಾದರೂ ಪಾಪಕ್ಕೆ ನಡೆಸುವವನಿಗೆ ಬಹಳ ಕೇಡಾಗುವುದು. ಅವನು ತನ್ನ ಕೊರಳಿಗೆ ಬೀಸುವ ಕಲ್ಲನ್ನು ಕಟ್ಟಿಕೊಂಡು, ಆಳವಾದ ಸಮುದ್ರದಲ್ಲಿ ಮುಳುಗುವುದೇ ಉತ್ತಮ.
“ನಿನ್ನ ಕೈಯಾಗಲಿ, ನಿನ್ನ ಕಾಲಾಗಲಿ ನಿನ್ನ ಪಾಪಕ್ಕೆ ಕಾರಣವಾದರೆ ಅದನ್ನು ಕತ್ತರಿಸಿ ಎಸೆದುಬಿಡು. ಕೈಯನ್ನಾಗಲಿ ಕಾಲನ್ನಾಗಲಿ ಕಳೆದುಕೊಂಡು ನಿತ್ಯಜೀವ ಹೊಂದುವುದೇ ನಿನಗೆ ಉತ್ತಮ. ಎರಡು ಕೈ ಮತ್ತು ಎರಡು ಕಾಲುಳ್ಳವನಾಗಿದ್ದು ಶಾಶ್ವತವಾದ ಬೆಂಕಿಯ ನರಕದಲ್ಲಿ ಹಾಕಿಸಿಕೊಳ್ಳುವುದಕ್ಕಿಂತ ಅದು ಎಷ್ಟೋ ಉತ್ತಮ.
ನಿನ್ನ ಕಣ್ಣು ನಿನ್ನನ್ನು ಪಾಪಕ್ಕೆ ನಡೆಸಿದರೆ, ಅದನ್ನು ಕಿತ್ತು ಎಸೆದುಬಿಡು. ಎರಡು ಕಣ್ಣುಳ್ಳವನಾಗಿದ್ದು ಬೆಂಕಿಯ ನರಕದಲ್ಲಿ ಹಾಕಿಸಿಕೊಳ್ಳುವದಕ್ಕಿಂತ ಒಂದೇ ಕಣ್ಣುಳ್ಳವನಾಗಿದ್ದು ನಿತ್ಯಜೀವ ಹೊಂದುವುದೇ ನಿನಗೆ ಉತ್ತಮ.
“ಎಚ್ಚರವಾಗಿರಿ! ಈ ಚಿಕ್ಕ ಮಕ್ಕಳಿಗೆ ಬೆಲೆಯೇ ಇಲ್ಲವೆಂದು ನೆನೆಸಬೇಡಿ. ಇವರಿಗಾಗಿ ಪರಲೋಕದಲ್ಲಿ ದೂತರನ್ನು ನೇಮಿಸಲಾಗಿದೆ. ಆ ದೂತರು ಪರಲೋಕದಲ್ಲಿರುವ ನನ್ನ ತಂದೆಯ ಸಮ್ಮುಖದಲ್ಲಿ ಇರುತ್ತಾರೆ.
“ಒಬ್ಬ ಮನುಷ್ಯನಿಗೆ ನೂರು ಕುರಿಗಳಿದ್ದು ಅದರಲ್ಲಿ ಒಂದು ಕುರಿಯು ತಪ್ಪಿಸಿಕೊಂಡರೆ, ಅವನು ಉಳಿದ ತೊಂಭತ್ತೊಂಭತ್ತು ಕುರಿಗಳನ್ನು ಬೆಟ್ಟದ ಮೇಲೆಯೇ ಬಿಟ್ಟು ತಪ್ಪಿಸಿಕೊಂಡ ಕುರಿಯನ್ನು ಹುಡುಕಲು ಹೋಗುತ್ತಾನಲ್ಲವೇ?
“ನಿನ್ನ ಸಹೋದರನಾಗಲಿ ಸಹೋದರಿಯಾಗಲಿ ನಿನಗೆ ಯಾವುದಾದರೂ ತಪ್ಪು ಮಾಡಿದರೆ, ನೀನು ಹೋಗಿ ಅವನೊಬ್ಬನೇ ಇರುವಾಗ ಅವನ ತಪ್ಪನ್ನು ತಿಳಿಸು. ಅವನು ನಿನ್ನ ಮಾತಿಗೆ ಕಿವಿಗೊಟ್ಟರೆ, ಮತ್ತೆ ನಿನ್ನ ಸಹೋದರನಾಗಿರಲು ನೀನೇ ಅವನಿಗೆ ಸಹಾಯ ಮಾಡಿದಂತಾಗುವುದು.
ಆದರೆ ಅವನು ನಿನ್ನ ಮಾತನ್ನು ಕೇಳದಿದ್ದರೆ, ನಿನ್ನೊಂದಿಗೆ ಒಬ್ಬಿಬ್ಬರನ್ನು ಕರೆದುಕೊಂಡು ಮತ್ತೆ ಅವನ ಬಳಿಗೆ ಹೋಗು. ಆಗ ಪ್ರತಿಯೊಂದು ದೂರಿನ ವಿಷಯದಲ್ಲೂ ಇಬ್ಬರು ಅಥವಾ ಮೂವರು ಸಾಕ್ಷಿಗಳಿರುವರು. [†ಆದರೆ … ಸಾಕ್ಷಿಗಳಿರುವರು ನೋಡಿರಿ: ಧರ್ಮೋಪದೇಶ. 19:15.]
“ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನೀವು ಈ ಲೋಕದಲ್ಲಿ ನೀಡುವ ನಿಷಿದ್ಧಾಜ್ಞೆಯು ದೇವರೇ ನೀಡಿದ ನಿಷಿದ್ಧಾಜ್ಞೆಯಾಗಿರುತ್ತದೆ. ನೀವು ಭೂಲೋಕದಲ್ಲಿ ನೀಡುವ ಅನುಮತಿಯು ದೇವರೇ ನೀಡಿದ ಅನುಮತಿಯಾಗಿರುತ್ತದೆ.
ಆಗ ಪೇತ್ರನು ಯೇಸುವಿನ ಬಳಿಗೆ ಬಂದು, “ಪ್ರಭುವೇ, ನನ್ನ ಸಹೋದರನು ನನಗೆ ಯಾವುದಾದರೂ ತಪ್ಪು ಮಾಡುತ್ತಲೇ ಇದ್ದರೆ ನಾನು ಎಷ್ಟು ಸಲ ಅವನನ್ನು ಕ್ಷಮಿಸಬೇಕು? ನಾನು ಅವನನ್ನು ಏಳು ಸಲ ಕ್ಷಮಿಸಬೇಕೋ?” ಎಂದು ಕೇಳಿದನು.
ಆ ಸೇವಕನು ತನ್ನ ಯಜಮಾನನಾದ ರಾಜನಿಗೆ ಹಣವನ್ನು ಕೊಡಲು ಸಮರ್ಥನಾಗಿರಲಿಲ್ಲ. ಆದ್ದರಿಂದ ಆ ಸೇವಕನನ್ನು ಮತ್ತು ಅವನಲ್ಲಿದ್ದ ಪ್ರತಿಯೊಂದನ್ನೂ ಅವನ ಹೆಂಡತಿ ಮತ್ತು ಮಕ್ಕಳ ಸಮೇತವಾಗಿ ಮಾರಿ, ಬಂದ ಹಣವನ್ನೆಲ್ಲಾ ಕೊಡಬೇಕಾದ ಸಾಲಕ್ಕೆ ವಜಾ ಮಾಡಬೇಕೆಂದು ರಾಜನು ಆಜ್ಞಾಪಿಸಿದನು.
“ತರುವಾಯ, ಅದೇ ಸೇವಕನು ತನಗೆ ನೂರು ಬೆಳ್ಳಿಯ ನಾಣ್ಯಗಳನ್ನು ಕೊಡಬೇಕಾಗಿದ್ದ ಬೇರೊಬ್ಬ ಸೇವಕನನ್ನು ಕಂಡು ಅವನ ಕುತ್ತಿಗೆ ಹಿಡಿದು, ‘ನೀನು ನನಗೆ ಕೊಡಬೇಕಾಗಿರುವ ಹಣವನ್ನು ಕೊಡು’ ಎಂದನು.
“ಆದರೆ ಮೊದಲನೇ ಸೇವಕನು ತಾಳಿಕೊಳ್ಳಲಿಲ್ಲ. ತನಗೆ ಸಾಲ ಕೊಡಬೇಕಾಗಿದ್ದ ಸೇವಕನ ವಿಷಯದಲ್ಲಿ ನ್ಯಾಯಾಧಿಪತಿಗೆ ದೂರುಕೊಟ್ಟು ಅವನನ್ನು ಸೆರೆಮನೆಗೆ ಹಾಕಿಸಿದನು. ಆ ಸೇವಕನು ಸಾಲ ತೀರಿಸುವವರೆಗೂ ಸೆರೆಮನೆಯಲ್ಲಿ ಇರಬೇಕಾಯಿತು.
“ಆಗ ಯಜಮಾನನು ತನ್ನ ಸೇವಕನನ್ನು ಒಳಗೆ ಕರೆದು, ‘ನೀನು ದುಷ್ಟ ಸೇವಕನು. ನೀನು ನನಗೆ ಹೆಚ್ಚು ಹಣ ಕೊಡಬೇಕಾಗಿತ್ತು. ಆದರೆ ನೀನು ನನ್ನನ್ನು ಬೇಡಿಕೊಂಡದ್ದರಿಂದ ನಿನ್ನ ಸಾಲವನ್ನೆಲ್ಲ ನಾನು ಮನ್ನಿಸಿಬಿಟ್ಟೆ.
“ಪರಲೋಕದ ನನ್ನ ತಂದೆಯು ನಿಮಗೆ ಮಾಡುವಂತೆಯೇ ಈ ರಾಜನು ಮಾಡಿದನು. ನೀವು ನಿಮ್ಮ ಸಹೋದರನನ್ನಾಗಲಿ ಸಹೋದರಿಯನ್ನಾಗಲಿ ನಿಜವಾಗಿಯೂ ಕ್ಷಮಿಸಬೇಕು. ಇಲ್ಲದಿದ್ದರೆ ಪರಲೋಕದ ನನ್ನ ತಂದೆಯೂ ನಿಮ್ಮನ್ನು ಕ್ಷಮಿಸುವುದಿಲ್ಲ” ಎಂದು ಹೇಳಿದನು.