“ಆಮೇಲೆ ರಾಜನು ಇನ್ನೂ ಕೆಲವು ಸೇವಕರನ್ನು ಕರೆದು, ‘ಈ ಜನರನ್ನು ನಾನು ಆಗಲೇ ಆಹ್ವಾನಿಸಿದ್ದೇನೆ. ಆದ್ದರಿಂದ ಈಗ ಔತಣವು ಸಿದ್ಧವಾಗಿದೆ. ಅಡಿಗೆಗಾಗಿ ಕೊಬ್ಬಿದ ಎತ್ತುಗಳನ್ನು ಮತ್ತು ಕರುಗಳನ್ನು ಕೊಯ್ಸಿದ್ದೇನೆ. ಎಲ್ಲವೂ ಸಿದ್ಧವಾಗಿದೆ. ಮದುವೆ ಔತಣಕ್ಕೆ ಬನ್ನಿ ಎಂದು ಅವರಿಗೆ ತಿಳಿಸಿ’ ಎಂದು ಹೇಳಿ ಕಳುಹಿಸಿದನು.
“ಅಂತೆಯೇ ಸೇವಕರು ಹೋಗಿ ಆ ಜನರಿಗೆ ತಿಳಿಸಿದರು. ಆದರೆ ಅವರು ಸೇವಕರ ಮಾತಿಗೆ ಕಿವಿಗೊಡಲಿಲ್ಲ. ಒಬ್ಬನು ತನ್ನ ಹೊಲದಲ್ಲಿ ಕೆಲಸ ಮಾಡಲು ಹೊರಟುಹೋದನು. ಬೇರೊಬ್ಬನು ತನ್ನ ವ್ಯಾಪಾರಕ್ಕಾಗಿ ಹೊರಟುಹೋದನು.
ಅಂತೆಯೇ ಸೇವಕರು ಬೀದಿಬೀದಿಗಳಿಗೆ ಹೋಗಿ ತಾವು ಕಂಡ ಜನರನ್ನೆಲ್ಲಾ ಒಳ್ಳೆಯವರು, ಕೆಟ್ಟವರು ಎನ್ನದೆ ಒಟ್ಟುಗೂಡಿಸಿ ಊಟ ಸಿದ್ಧವಾಗಿದ್ದ ಸ್ಥಳಕ್ಕೆ ಕರೆತಂದರು. ಆ ಸ್ಥಳವು ಜನರಿಂದ ತುಂಬಿಹೋಯಿತು.
ಫರಿಸಾಯರು ಯೇಸುವನ್ನು ವಂಚಿಸುವುದಕ್ಕೆ ಕೆಲವರನ್ನು ಕಳುಹಿಸಿದರು. ಅವರಲ್ಲಿ ಕೆಲವರು ಫರಿಸಾಯರ ಹಿಂಬಾಲಕರಾಗಿದ್ದರು. ಇನ್ನು ಕೆಲವರು ಯೆಹೂದ್ಯರ ರಾಜಕೀಯ ಪಂಗಡಕ್ಕೆ ಸೇರಿದವರಾಗಿದ್ದರು. ಈ ಜನರು, “ಬೋಧಕನೇ, ನೀನು ಯಥಾರ್ಥವಂತನೆಂದು ನಾವು ಬಲ್ಲೆವು. ನೀನು ದೇವರ ಮಾರ್ಗದ ಕುರಿತು ಸತ್ಯವನ್ನೇ ಬೋಧಿಸುವೆ ಎಂಬುದು ನಮಗೆ ಗೊತ್ತಿದೆ. ಬೇರೆಯವರು ನಿನ್ನ ವಿಷಯವಾಗಿ ಏನೇ ಯೋಚಿಸಿದರೂ ನೀನು ಹೆದರುವುದಿಲ್ಲ. ನೀನು ಮುಖದಾಕ್ಷಿಣ್ಯ ಮಾಡುವುದಿಲ್ಲ.
“ಬೋಧಕನೇ, ವಿವಾಹಿತನೊಬ್ಬನು ಮಕ್ಕಳನ್ನು ಪಡೆಯದೆ ಸತ್ತರೆ, ಅವನ ಹೆಂಡತಿಯನ್ನು ಅವನ ತಮ್ಮನು ಮದುವೆ ಮಾಡಿಕೊಂಡು ಅಣ್ಣನಿಗಾಗಿ ಸಂತಾನ ಪಡೆಯಬೇಕೆಂದು [*ಬೋಧಕನೇ … ಬೇಕೆಂದು ನೋಡಿರಿ: ಧರ್ಮೋಪದೇಶ. 25:5; ಆದಿಕಾಂಡ 38:8.] ಮೋಶೆ ಹೇಳಿದ್ದಾನೆ.
‘ನಾನು ಅಬ್ರಹಾಮನ ದೇವರು, ಇಸಾಕನ ದೇವರು ಮತ್ತು ಯಾಕೋಬನ ದೇವರು’ [✡ಉಲ್ಲೇಖನ: ವಿಮೋಚನ. 3:6.] ಎಂದು ಹೇಳಿರುವುದನ್ನು ನೀವು ಓದಿಲ್ಲವೇ? ಹೀಗಿರುವಲ್ಲಿ, ದೇವರು ಜೀವಿತರಿಗೆ ಮಾತ್ರ ದೇವರೇ ಹೊರತು ಸತ್ತವರಿಗಲ್ಲಾ” ಅಂದನು.
ಯೇಸು, “ ‘ನಿನ್ನ ದೇವರಾಗಿರುವ ಪ್ರಭುವನ್ನು ಪ್ರೀತಿಸಬೇಕು. ನೀನು ಆತನನ್ನು ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ನಿನ್ನ ಪೂರ್ಣಮನಸ್ಸಿನಿಂದಲೂ ಪ್ರೀತಿಸಬೇಕು.’ [✡ಉಲ್ಲೇಖನ: ಧರ್ಮೋಪದೇಶ. 6:5.]
‘ಪ್ರಭು (ದೇವರು) ನನ್ನ ಪ್ರಭುವಿಗೆ (ಕ್ರಿಸ್ತನಿಗೆ), ನಾನು ನಿನ್ನ ವಿರೋಧಿಗಳನ್ನು ನಿನಗೆ ಪಾದಪೀಠವನ್ನಾಗಿ ಮಾಡುವ ತನಕ ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು’ ಕೀರ್ತನೆ. 110:1] ಎಂದು ಹೇಳಿದ್ದಾನೆ.