ಆಗ ಯೇಸು “ಈ ಕಟ್ಟಡಗಳನ್ನೆಲ್ಲ ನೋಡುತ್ತಿದ್ದೀರಾ? ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಇವುಗಳೆಲ್ಲಾ ನಾಶವಾಗುತ್ತವೆ. ಇಲ್ಲಿ ಕಲ್ಲಿನ ಮೇಲೆ ಕಲ್ಲು ಉಳಿಯದಂತೆ ಎಲ್ಲಾ ಕಲ್ಲುಗಳು ಕೆಡವಲ್ಪಡುತ್ತವೆ” ಎಂದು ಹೇಳಿದನು.
ಬಳಿಕ ಯೇಸು ಆಲಿವ್ ಗುಡ್ಡದ ಮೇಲೆ ಕುಳಿತುಕೊಂಡಿದ್ದಾಗ, ಶಿಷ್ಯರು ಪ್ರತ್ಯೇಕವಾಗಿ ಯೇಸುವಿನ ಬಳಿಗೆ ಬಂದು, “ಇವುಗಳೆಲ್ಲಾ ಯಾವಾಗ ಸಂಭವಿಸುತ್ತವೆ! ನೀನು ಈ ಲೋಕಕ್ಕೆ ಮತ್ತೊಮ್ಮೆ ಬರುವಾಗ ಮತ್ತು ಲೋಕದ ಸಮಾಪ್ತಿಯ ಸಮಯ ಬಂದಾಗ ಸೂಚನೆಗಾಗಿ ಏನು ಸಂಭವಿಸುವುದು? ನಮಗೆ ತಿಳಿಸು!” ಎಂದು ಕೇಳಿದರು.
ನಿಮ್ಮ ಸಮೀಪದಲ್ಲಿ ನಡೆಯುತ್ತಿರುವ ಯುದ್ಧಗಳ ಶಬ್ದವನ್ನೂ ಬಹು ದೂರದಲ್ಲಿ ನಡೆಯುತ್ತಿರುವ ಯುದ್ಧಗಳ ಸುದ್ದಿಯನ್ನೂ ನೀವು ಕೇಳುವಿರಿ. ಆದರೆ ಹೆದರಬೇಡಿ. ಅಂತ್ಯವು ಬರುವುದಕ್ಕಿಂತ ಮುಂಚೆ ಇವುಗಳು ಸಂಭವಿಸಲೇಬೇಕು.
ಜನಾಂಗಗಳು ಬೇರೆ ಜನಾಂಗಗಳಿಗೆ ವಿರೋಧವಾಗಿ ಯುದ್ದ ಮಾಡುತ್ತವೆ. ರಾಜ್ಯಗಳು ಬೇರೆಬೇರೆ ರಾಜ್ಯಗಳಿಗೆ ವಿರೋಧವಾಗಿ ಯುದ್ಧ ಮಾಡುತ್ತವೆ. ಬರಗಾಲಗಳು ಬರುತ್ತವೆ. ಬೇರೆಬೇರೆ ಸ್ಥಳಗಳಲ್ಲಿ ಭೂಕಂಪಗಳು ಆಗುತ್ತವೆ.
“ಆಗ ಜನರು ನಿಮ್ಮನ್ನು ಹಿಂಸಿಸಿ, ಮರಣದಂಡನೆ ವಿಧಿಸಲು ಅಧಿಕಾರಿಗಳಿಗೆ ಒಪ್ಪಿಸಿಕೊಡುವರು. ಜನರೆಲ್ಲರೂ ನಿಮ್ಮನ್ನು ವಿರೋಧಿಸುವರು. ನೀವು ನನ್ನಲ್ಲಿ ನಂಬಿಕೆ ಇಟ್ಟದ್ದಕ್ಕಾಗಿ ಇವುಗಳೆಲ್ಲಾ ನಿಮಗೆ ಸಂಭವಿಸುವವು.
“ಭಯಂಕರವಾದ ನಾಶಕ್ಕೆ ಕಾರಣವಾದ ವಸ್ತುವೊಂದನ್ನು [*ಭಯಂಕರವಾದ … ವಸ್ತುವೊಂದನ್ನು ನೋಡಿರಿ: ದಾನಿಯೇಲ 9:27; 12:11.] ಕುರಿತು ಪ್ರವಾದಿ ದಾನಿಯೇಲನು ಹೇಳಿದ್ದಾನೆ. ಈ ಭಯಂಕರವಾದ ವಸ್ತುವು ದೇವಾಲಯದ ಪರಿಶುದ್ಧ ಸ್ಥಳದಲ್ಲಿ ನಿಂತಿರುವುದನ್ನು ನೀವು ನೋಡುವಿರಿ. (ಇದನ್ನು ಓದುತ್ತಿರುವವನು ಇದರ ಅರ್ಥವನ್ನು ಗ್ರಹಿಸಿಕೊಳ್ಳಲಿ.)
“ದೇವರು ಭಯಂಕರವಾದ ಆ ಸಮಯವನ್ನು ಕಡಿಮೆಗೊಳಿಸಲು ತೀರ್ಮಾನಿಸಿದ್ದಾನೆ. ಇಲ್ಲವಾದರೆ, ಜೀವದಿಂದ ಉಳಿಯಲು ಯಾರಿಗೂ ಸಾಧ್ಯವಿಲ್ಲ. ತಾನು ಆರಿಸಿಕೊಂಡ ಜನರ ನಿಮಿತ್ತ ದೇವರು ಆ ಸಮಯವನ್ನು ಕಡಿಮೆ ಮಾಡಿದ್ದಾನೆ.
ಮಹಾಶಬ್ದದ ತುತ್ತೂರಿಯ ಘೋಷಣೆಯೊಡನೆ ಮನುಷ್ಯಕುಮಾರನು ತನ್ನ ದೂತರನ್ನು ಭೂಮಿಯ ಎಲ್ಲಾ ಕಡೆಗೆ ಕಳುಹಿಸುವನು. ಆತನು ಆರಿಸಿಕೊಂಡವರನ್ನು ದೇವದೂತರು ಭೂಲೋಕದ ಎಲ್ಲಾ ಕಡೆಗಳಿಂದಲೂ ಒಟ್ಟುಗೂಡಿಸುವರು.
“ಅಂಜೂರದ ಮರವು ನಮಗೆ ಒಂದು ಪಾಠವನ್ನು ಕಲಿಸುತ್ತದೆ. ಅಂಜೂರದ ಮರದ ಕೊಂಬೆಗಳು ಹಸುರಾಗಿ ಎಳೆಯದಾಗಿದ್ದು ಹೊಸ ಎಲೆಗಳು ಬೆಳೆಯುವುದಕ್ಕೆ ಪ್ರಾರಂಭಿಸಿದಾಗ, ಬೇಸಿಗೆಯು ಹತ್ತಿರವಾಯಿತೆಂದು ನೀವು ತಿಳಿದುಕೊಳ್ಳುತ್ತೀರಿ.
ನಾನು ನಿಮಗೆ ಹೇಳಿದ ಈ ಸಂಗತಿಗಳಿಗೂ ಅದು ಅನ್ವಯಿಸುತ್ತದೆ. ಈ ಸಂಗತಿಗಳೆಲ್ಲಾ ಸಂಭವಿಸುತ್ತಿರುವುದನ್ನು ನೀವು ನೋಡುವಾಗ ಆ ಸಮಯ ಹತ್ತಿರವಾಯಿತೆಂದೂ ಬರುವುದಕ್ಕೆ ಸಿದ್ಧವಾಗಿದೆಯೆಂದೂ ತಿಳಿದುಕೊಳ್ಳುವಿರಿ. ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ.
(ಮಾರ್ಕ 13:32-37; ಲೂಕ 17:26-30; 34-36) “ಆ ದಿನವು ಇಲ್ಲವೆ ಆ ಸಮಯವು ಯಾವಾಗ ಬರುತ್ತದೆ ಎಂಬುದು ಯಾರಿಗೂ ತಿಳಿಯದು. ಮಗನಿಗೂ ಮತ್ತು ಪರಲೋಕದಲ್ಲಿರುವ ದೇವದೂತರಿಗೂ ಆ ದಿನವು ಅಥವಾ ಆ ಸಮಯವು ಯಾವಾಗ ಬರುತ್ತದೆ ಎಂಬುದು ತಿಳಿಯದು. ತಂದೆಗೆ ಮಾತ್ರ ಗೊತ್ತಿದೆ.
ಜಲಪ್ರಳಯಕ್ಕಿಂತ ಮುಂಚೆ ಜನರು ತಿನ್ನುತ್ತಿದ್ದರು, ಕುಡಿಯುತ್ತಿದ್ದರು, ಮದುವೆಯಾಗುತ್ತಿದ್ದರು ಮತ್ತು ತಮ್ಮ ಮಕ್ಕಳಿಗೂ ಮದುವೆ ಮಾಡಿಕೊಡುತ್ತಾ ಇದ್ದರು. ನೋಹನು ನಾವೆಯೊಳಗೆ ಹೋಗುವ ತನಕ ಜನರು ಅವುಗಳನ್ನು ಮಾಡುತ್ತಲೇ ಇದ್ದರು.
(ಲೂಕ 12:41-48; 34-36) “ವಿವೇಕಿಯೂ ನಂಬಿಗಸ್ತನೂ ಆದ ಸೇವಕನು ಯಾರು? ಇತರ ಸೇವಕರಿಗೆ ಆಹಾರವನ್ನು ತಕ್ಕ ಸಮಯದಲ್ಲಿ ಕೊಡುವುದಕ್ಕಾಗಿ ಯಜಮಾನನು ಯಾವ ಸೇವಕನ ಮೇಲೆ ಭರವಸೆಯಿಡುತ್ತಾನೋ ಅವನೇ.