ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಪ್ರಪಂಚದಾದ್ಯಂತ ಎಲ್ಲೆಲ್ಲಿ ಸುವಾರ್ತೆಯನ್ನು ತಿಳಿಸಲಾಗುವುದೋ ಅಲ್ಲೆಲ್ಲಾ ಈ ಕಾರ್ಯವನ್ನು ಈಕೆಯ ನೆನಪಿಗಾಗಿ ತಿಳಿಸಲಾಗುವುದು” ಎಂದು ಹೇಳಿದನು.
ಅದಕ್ಕೆ ಯೇಸು, “ನೀವು ನಗರಕ್ಕೆ ಹೋಗಿ ನಾನು ಸೂಚಿಸುವ ವ್ಯಕ್ತಿಯನ್ನು ಭೇಟಿಮಾಡಿ ಅವನಿಗೆ, ‘ಆರಿಸಿಕೊಂಡ ಸಮಯ ಸಮೀಪಿಸಿತು. ನಾನು ಪಸ್ಕಹಬ್ಬದ ಊಟವನ್ನು ನಿನ್ನ ಮನೆಯಲ್ಲಿ ನನ್ನ ಶಿಷ್ಯರೊಂದಿಗೆ ಮಾಡುತ್ತೇನೆ ಎಂದು ಉಪದೇಶಕನು ಹೇಳುತ್ತಾನೆ’ ಎಂಬುದಾಗಿ ತಿಳಿಸಿರಿ” ಎಂದು ಉತ್ತರಕೊಟ್ಟನು.
ಪವಿತ್ರ ಗ್ರಂಥದಲ್ಲಿ ಬರೆದಿರುವ ಪ್ರಕಾರ ಮನುಷ್ಯಕುಮಾರನು ಹೊರಟುಹೋಗಿ ಮರಣ ಹೊಂದುತ್ತಾನೆ. ಆದರೆ ಆತನನ್ನು ಕೊಲ್ಲಲು ಒಪ್ಪಿಸುವವನಿಗೆ ಬಹಳ ಕೇಡಾಗುತ್ತದೆ. ಅವನು ಹುಟ್ಟದೆ ಇದ್ದಿದ್ದರೆ ಎಷ್ಟೋ ಚೆನ್ನಾಗಿತ್ತು!” ಎಂದು ಹೇಳಿದನು.
ಆಗ, ಯೇಸುವನ್ನು ಆತನ ಶತ್ರುಗಳಿಗೆ ಒಪ್ಪಿಸಿಕೊಡಲಿದ್ದ ಯೂದನು, “ಗುರುವೇ, ನಿನಗೆ ವಿರೋಧವಾಗಿರುವವನು ನಾನಲ್ಲ ತಾನೇ?” ಎಂದನು. ಅದಕ್ಕೆ ಯೇಸು, “ಹೌದು, ಅವನು ನೀನೇ?” ಎಂದು ಉತ್ತರಿಸಿದನು.
(ಮಾರ್ಕ 14:22-26; 22:15-20; 1 ಕೊರಿಂಥ 11:23-25) ಅವರು ಊಟಮಾಡುತ್ತಿದ್ದಾಗ, ಯೇಸು ರೊಟ್ಟಿಯನ್ನು ತೆಗೆದುಕೊಂಡು ಅದಕ್ಕಾಗಿ ದೇವರಿಗೆ ಸ್ತೋತ್ರ ಸಲ್ಲಿಸಿ, ಅದನ್ನು ಮುರಿದು, “ತೆಗೆದುಕೊಳ್ಳಿರಿ, ತಿನ್ನಿರಿ, ಇದು ನನ್ನ ದೇಹ” ಎಂದು ಹೇಳಿ ತನ್ನ ಶಿಷ್ಯರಿಗೆ ಕೊಟ್ಟನು.
(ಮಾರ್ಕ 14:27-31; ಲೂಕ 22:31-34; ಯೋಹಾನ 13:36-38) ಆಗ ಯೇಸು ತನ್ನ ಶಿಷ್ಯರಿಗೆ, “ಇಂದು ರಾತ್ರಿ ನೀವೆಲ್ಲರೂ ನನ್ನ ದೆಸೆಯಿಂದ ನಿಮ್ಮ ವಿಶ್ವಾಸವನ್ನು ಕಳೆದುಕೊಳ್ಳುವಿರಿ. ‘ನಾನು ಕುರುಬನನ್ನು ಕೊಲ್ಲುವೆನು, ಆಗ ಕುರಿಗಳೆಲ್ಲಾ ಚದರಿಹೋಗುತ್ತವೆ’ ಜೆಕರ್ಯ 13:7 ಎಂದು ಪವಿತ್ರ ಗ್ರಂಥದಲ್ಲಿ ಬರೆದಿದೆ.
(ಮಾರ್ಕ 14:32-42; ಲೂಕ 22:39-46) ಅನಂತರ ಯೇಸು ತನ್ನ ಶಿಷ್ಯರೊಂದಿಗೆ ಗೆತ್ಸೆಮನೆ ಎಂಬ ಸ್ಥಳಕ್ಕೆ ಹೋದನು. ಯೇಸು ತನ್ನ ಶಿಷ್ಯರಿಗೆ, “ನಾನು ಅಲ್ಲಿಗೆ ಹೋಗಿ, ಪ್ರಾರ್ಥಿಸಿ ಬರುವ ತನಕ ಇಲ್ಲಿಯೇ ಇರಿ” ಎಂದು ಹೇಳಿದನು.
ಬಳಿಕ ಯೇಸು ಅವರಿಂದ ಸ್ವಲ್ಪದೂರ ಹೋಗಿ ನೆಲದ ಮೇಲೆ ಬೋರಲಬಿದ್ದು, “ನನ್ನ ತಂದೆಯೇ, ಸಾಧ್ಯವಿದ್ದರೆ, ಸಂಕಟದ ಈ ಪಾತ್ರೆಯನ್ನು ನನಗೆ ಕೊಡಬೇಡ. ಆದರೆ ನನ್ನ ಇಷ್ಟದಂತಲ್ಲ, ನಿನ್ನ ಇಷ್ಟದಂತೆಯೇ ಮಾಡು” ಎಂದು ಪ್ರಾರ್ಥಿಸಿದನು.
ಯೇಸು ಎರಡನೆಯ ಸಾರಿ ಸ್ಪಲ್ಪದೂರ ಹೋಗಿ ಪ್ರಾರ್ಥಿಸುತ್ತಾ, “ನನ್ನ ತಂದೆಯೇ, ಸಂಕಟದ ಈ ಪಾತ್ರೆಯನ್ನು ನನ್ನಿಂದ ತೆಗೆದುಕೊಳ್ಳಲು ಸಾಧ್ಯವಿಲ್ಲದಿದ್ದರೆ ಮತ್ತು ನಾನು ಅದನ್ನು ನೆರವೇರಿಸಲೇಬೇಕಿದ್ದರೆ, ನಿನ್ನ ಇಷ್ಟದಂತೆಯೇ ಆಗಲಿ” ಎಂದನು.
ಬಳಿಕ ಯೇಸು ತನ್ನ ಶಿಷ್ಯರ ಬಳಿಗೆ ಹಿಂದಿರುಗಿ, “ನೀವು ಇನ್ನೂ ನಿದ್ರೆ ಮಾಡುತ್ತಾ ವಿಶ್ರಾಂತಿ ತೆಗೆದುಕೊಳ್ಳುತ್ತಿದ್ದೀರಾ? ಪಾಪಿಷ್ಠರಾದ ಜನರಿಗೆ ಮನುಷ್ಯಕುಮಾರನನ್ನು ಒಪ್ಪಿಸುವ ಕಾಲ ಸಮೀಪಿಸಿದೆ.
(ಮಾರ್ಕ 14:43-50; ಲೂಕ 22:47-53; ಯೋಹಾನ 18:3-12) ಯೇಸು ಮಾತಾಡುತ್ತಿರವಷ್ಟರಲ್ಲೇ ಯೂದನು ಅಲ್ಲಿಗೆ ಬಂದನು. ಯೂದನು ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾಗಿದ್ದನು. ಮಹಾಯಾಜಕರು ಮತ್ತು ಹಿರಿಯ ನಾಯಕರು ಕಳುಹಿಸಿದ್ದ ಅನೇಕ ಜನರು ಅವನೊಂದಿಗಿದ್ದರು. ಅವರು ಕತ್ತಿ ಮತ್ತು ದೊಣ್ಣೆಗಳನ್ನು ಹಿಡಿದುಕೊಂಡಿದ್ದರು.
ನಂತರ ಯೇಸು ಆ ಜನರಿಗೆ, “ನೀವು ಅಪರಾಧಿಯನ್ನು ಬಂಧಿಸುವವರಂತೆ ಕತ್ತಿ ಮತ್ತು ದೊಣ್ಣೆಗಳನ್ನು ಹಿಡಿದುಕೊಂಡು ಇಲ್ಲಿಗೆ ಬಂದಿದ್ದೀರಿ. ನಾನು ಪ್ರತಿದಿನವೂ ದೇವಾಲಯದಲ್ಲಿ ಕುಳಿತುಕೊಂಡು ಬೋಧಿಸುತ್ತಿದ್ದಾಗ ನೀವು ನನ್ನನ್ನು ಅಲ್ಲಿ ಬಂಧಿಸಲೇ ಇಲ್ಲ.
ಆದರೆ ಪ್ರವಾದಿಗಳು ಬರೆದಿರುವುದೆಲ್ಲಾ ನೆರವೇರುವುದಕ್ಕಾಗಿ ಇದೆಲ್ಲಾ ಆಯಿತು” ಎಂದು ಹೇಳಿದನು. ಆಗ ಶಿಷ್ಯರೆಲ್ಲರೂ ಆತನನ್ನು ಬಿಟ್ಟು ಓಡಿಹೋದರು. (ಮಾರ್ಕ 14:53-65; ಲೂಕ 22:54-55, 63-71; ಯೋಹಾನ 18:13-14, 19-24)
ಪ್ರಧಾನಯಾಜಕನು ಎದ್ದುನಿಂತು ಯೇಸುವಿಗೆ, “ಈ ಜನರು ನಿನ್ನ ಮೇಲೆ ಹೊರಿಸಿರುವ ಆಪಾದನೆಗಳ ಬಗ್ಗೆ ನೀನು ಏನಾದರೂ ಹೇಳಬೇಕೆಂದಿರುವೆಯಾ? ಇವರು ಹೇಳುತ್ತಿರುವುದೆಲ್ಲಾ ನಿಜವೇ?” ಎಂದು ಕೇಳಿದನು.
ಯೇಸು, “ಹೌದು, ನೀನು ಹೇಳಿದಂತೆ ಆತನೇ ನಾನು. ಆದರೆ ನಿನಗೆ ಹೇಳುವುದೇನೆಂದರೆ, ಇನ್ನು ಮೇಲೆ ಮನುಷ್ಯಕುಮಾರನು ದೇವರ ಬಲಗಡೆಯಲ್ಲಿ ಕುಳಿತಿರುವುದನ್ನೂ ಆಕಾಶದ ಮೋಡಗಳ ಮೇಲೆ ಕುಳಿತು ಬರುವುದನ್ನೂ ನೀವು ಕಾಣುವಿರಿ” ಎಂದು ಹೇಳಿದನು.
ಪ್ರಧಾನಯಾಜಕನು ಇದನ್ನು ಕೇಳಿ ಬಹಳ ಕೋಪಗೊಂಡು ತನ್ನ ಬಟ್ಟೆಗಳನ್ನು ಹರಿದುಕೊಂಡು, “ಈ ಮನುಷ್ಯನು ದೇವದೂಷಣೆ ಮಾಡಿದ್ದಾನೆ. ನಮಗೆ ಇನ್ನು ಯಾವ ಸಾಕ್ಷಿಗಳ ಅಗತ್ಯವೂ ಇಲ್ಲ. ಇವನು ಮಾಡಿದ ದೇವದೂಷಣೆಯನ್ನು ನೀವೇ ಕೇಳಿದಿರಿ.
ಸ್ವಲ್ಪ ಸಮಯದ ತರುವಾಯ, ಅಲ್ಲಿ ನಿಂತಿದ್ದ ಕೆಲವು ಜನರು ಪೇತ್ರನ ಸಮೀಪಕ್ಕೆ ಹೋಗಿ, “ಯೇಸುವನ್ನು ಹಿಂಬಾಲಿಸಿಕೊಂಡು ಬಂದ ಜನರಲ್ಲಿ ನೀನೂ ಒಬ್ಬನಾಗಿರುವೆ ಎಂಬುದನ್ನು ನೀನು ಮಾತಾಡುವ ರೀತಿಯೇ ತೋರಿಸುತ್ತದೆ” ಎಂದು ಹೇಳಿದರು.
“ಆತನು ಯಾರೋ ನನಗೆ ಗೊತ್ತೇ ಇಲ್ಲ ಎಂಬುದಾಗಿ ಕೋಳಿ ಕೂಗುವುದಕ್ಕಿಂತ ಮುಂಚೆ ನೀನು ಮೂರು ಸಲ ಹೇಳುವೆ” ಎಂದು ತನಗೆ ಯೇಸು ಹೇಳಿದ್ದ ಮಾತನ್ನು ಪೇತ್ರನು ನೆನಪು ಮಾಡಿಕೊಂಡು ಹೊರಗೆ ಹೋಗಿ ಬಹಳವಾಗಿ ವ್ಯಥೆಪಟ್ಟು ಅತ್ತನು.