ಯೇಸು ಅವನಿಗೆ, “ಇದು ಹೇಗಾಯಿತೆಂಬುದನ್ನು ಯಾರಿಗೂ ಹೇಳಬೇಡ. ಈಗ ನೀನು ಹೋಗಿ ಯಾಜಕನಿಗೆ ನಿನ್ನ ಮೈಯನ್ನು ತೋರಿಸು. ಗುಣಹೊಂದಿದವರು ಮೋಶೆಯ ಆಜ್ಞೆಗನುಸಾರವಾಗಿ ಕೊಡತಕ್ಕ ಕಾಣಿಕೆಯನ್ನು ಅರ್ಪಿಸು. ನೀನು ಗುಣವಾದದ್ದಕ್ಕೆ ಅದು ಸಾಕ್ಷಿಯಾಗಿರುವುದು” ಎಂದು ಹೇಳಿದನು.
ನಾನು ಸಹ ಬೇರೆ ಅಧಿಕಾರಿಗಳ ಅಧೀನದಲ್ಲಿದ್ದೇನೆ. ನನ್ನ ಅಧೀನದಲ್ಲಿ ಸಿಪಾಯಿಗಳಿದ್ದಾರೆ. ನಾನು ಒಬ್ಬ ಸಿಪಾಯಿಗೆ ‘ಹೋಗು’ ಅಂದರೆ ಅವನು ಹೋಗುತ್ತಾನೆ; ಮತ್ತೊಬ್ಬ ಸಿಪಾಯಿಗೆ ‘ಬಾ’ ಅಂದರೆ ಅವನು ಬರುತ್ತಾನೆ. ನಾನು ನನ್ನ ಸೇವಕನಿಗೆ, ‘ಇದನ್ನು ಮಾಡು’ ಅಂದರೆ ಅವನು ವಿಧೇಯತೆಯಿಂದ ಮಾಡುತ್ತಾನೆ. ನಿನಗೂ ಇದೇ ರೀತಿಯ ಅಧಿಕಾರವಿದೆ ಎಂದು ನನಗೆ ಗೊತ್ತಿದೆ” ಎಂದು ಹೇಳಿದನು.
ಇದನ್ನು ಕೇಳಿ ಯೇಸುವಿಗೆ ಆಶ್ಚರ್ಯವಾಯಿತು. ಯೇಸು ತನ್ನ ಸಂಗಡ ಇದ್ದವರಿಗೆ, “ನಾನು ಇಸ್ರೇಲಿನಲ್ಲಿಯೂ ಸಹ ಇಷ್ಟು ನಂಬಿಕೆಯುಳ್ಳ ವ್ಯಕ್ತಿಯನ್ನು ಕಾಣಲಿಲ್ಲ ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ ಎಂದನು.
ಅಂದು ಸಾಯಂಕಾಲ ಜನರು ದೆವ್ವದಿಂದ ಪೀಡಿತರಾಗಿದ್ದ ಅನೇಕರನ್ನು ಯೇಸುವಿನ ಬಳಿಗೆ ಕರೆದುಕೊಂಡು ಬಂದರು. ಯೇಸುವು ಮಾತಿನಿಂದಲೇ ದೆವ್ವಗಳನ್ನು ಅವರಿಂದ ಓಡಿಸಿದನು; ಕಾಯಿಲೆಯಾಗಿದ್ದ ಜನರೆಲ್ಲರನ್ನೂ ಗುಣಪಡಿಸಿದನು.
ಶಿಷ್ಯರಲ್ಲಿ ಒಬ್ಬನು ಯೇಸುವಿಗೆ, “ನಾನು ಮೊದಲು ಹೋಗಿ ನನ್ನ ತಂದೆಯ ಉತ್ತರಕ್ರಿಯೆಗಳನ್ನು ಮಾಡಿಬರಲು ನನಗೆ ಅಪ್ಪಣೆಯಾಗಲಿ. ಆಮೇಲೆ ನಾನು ನಿನ್ನನ್ನು ಹಿಂಬಾಲಿಸುತ್ತೇನೆ” ಎಂದು ಹೇಳಿದನು.
ಯೇಸು, “ನೀವು ಭಯಪಡುವುದೇಕೆ? ನಿಮ್ಮಲ್ಲಿ ಸಾಕಷ್ಟು ನಂಬಿಕೆಯಿಲ್ಲ” ಎಂದು ಉತ್ತರಿಸಿ ಎದ್ದುನಿಂತುಕೊಂಡು ಆ ದೊಡ್ಡ ಬಿರುಗಾಳಿಗೂ ಅಲೆಗಳಿಗೂ ಆಜ್ಞಾಪಿಸಿದನು. ಆ ಕೂಡಲೇ ಬಿರುಗಾಳಿ ನಿಂತುಹೋಯಿತು. ಸರೋವರ ಪ್ರಶಾಂತವಾಯಿತು.
(ಮಾರ್ಕ 5:1-20; ಲೂಕ 8:26-39) ಯೇಸು ಸರೋವರದ ಮತ್ತೊಂದು ತೀರದಲ್ಲಿದ್ದ ಗದರೇನ ಪ್ರಾಂತ್ಯಕ್ಕೆ ಬಂದನು. ಅಲ್ಲಿ ದೆವ್ವಗಳಿಂದ ಪೀಡಿತರಾಗಿದ್ದ ಇಬ್ಬರು ಯೇಸುವಿನ ಬಳಿಗೆ ಬಂದರು. ಅವರು ಸಮಾಧಿಯ ಗವಿಗಳಲ್ಲಿ ವಾಸವಾಗಿದ್ದರು ಮತ್ತು ಬಹಳ ಅಪಾಯಕಾರಿಗಳಾಗಿದ್ದರು. ಆದ್ದರಿಂದ ಜನರು ಆ ಮಾರ್ಗದಲ್ಲಿ ಹೋಗುತ್ತಿರಲಿಲ್ಲ.
ಅವರಿಬ್ಬರು ಯೇಸುವಿನ ಬಳಿಗೆ ಬಂದು. “ನೀನು ನಮಗೆ ಏನು ಮಾಡಬೇಕೆಂದಿರುವೆ? ದೇವಕುಮಾರನೇ, ನೇಮಿತ ಕಾಲಕ್ಕಿಂತ ಮುಂಚೆಯೇ ನಮ್ಮನ್ನು ಶಿಕ್ಷಿಸಲು ಇಲ್ಲಿಗೆ ಬಂದೆಯಾ?” ಎಂದು ಗಟ್ಟಿಯಾಗಿ ಕೂಗಿಕೊಂಡರು.
ಯೇಸು ಅವುಗಳಿಗೆ, “ಹೋಗಿ” ಅಂದನು. ಆಗ ಆ ದೆವ್ವಗಳು ಅವರಿಬ್ಬರನ್ನು ಬಿಟ್ಟು ಹಂದಿಗಳೊಳಗೆ ಹೋದವು. ಕೂಡಲೇ ಹಂದಿಗಳೆಲ್ಲಾ ಗುಡ್ಡದ ಕೆಳಗೆ ಓಡಿ ಸರೋವರದಲ್ಲಿ ಬಿದ್ದು ನೀರಿನಲ್ಲಿ ಮುಳುಗಿಹೋದವು.