ಕೆಲವರು ಒಬ್ಬ ಪಾರ್ಶ್ವವಾಯು ರೋಗಿಯನ್ನು ಯೇಸುವಿನ ಬಳಿಗೆ ತಂದರು. ಅವನು ತನ್ನ ಹಾಸಿಗೆಯ ಮೇಲೆ ಮಲಗಿದ್ದನು. ಯೇಸು ಈ ಜನರಲ್ಲಿದ್ದ ದೊಡ್ಡ ನಂಬಿಕೆಯನ್ನು ಕಂಡು ಪಾರ್ಶ್ವವಾಯು ರೋಗಿಗೆ, “ಯುವಕನೇ, ಸಂತೋಷಪಡು. ನಿನ್ನ ಪಾಪಗಳು ಕ್ಷಮಿಸಲ್ಪಟ್ಟಿವೆ” ಎಂದು ಹೇಳಿದನು.
ಆದರೆ ಮನುಷ್ಯಕುಮಾರನಿಗೆ ಪಾಪಗಳನ್ನು ಕ್ಷಮಿಸಲು ಭೂಲೋಕದಲ್ಲಿ ಅಧಿಕಾರವಿದೆ ಎಂಬುದನ್ನು ನಾನು ನಿಮಗೆ ನಿರೂಪಿಸುತ್ತೇನೆ” ಎಂದನು. ನಂತರ ಯೇಸು ಪಾರ್ಶ್ವವಾಯು ರೋಗಿಗೆ, “ಎದ್ದು, ನಿನ್ನ ಹಾಸಿಗೆಯನ್ನು ತೆಗೆದುಕೊಂಡು ಮನೆಗೆ ಹೋಗು” ಎಂದನು.
ನೀವು ಹೋಗಿ, ‘ನನಗೆ ಯಜ್ಞ ಬೇಡ, ದಯೆ ಬೇಕು’ [✡ಉಲ್ಲೇಖನ: ಹೋಶೇಯ 6:6.] ಎಂದು ಪವಿತ್ರ ಗ್ರಂಥದಲ್ಲಿ ಬರೆದಿರುವ ವಾಕ್ಯದ ಅರ್ಥವನ್ನು ಕಲಿತುಕೊಳ್ಳಿ. ನಾನು ನೀತಿವಂತರನ್ನು ಕರೆಯಲು ಬರಲಿಲ್ಲ, ಪಾಪಿಗಳನ್ನು ಕರೆಯಲು ಬಂದೆನು” ಎಂದು ಹೇಳಿದನು.
(ಮಾರ್ಕ 2:18-22; ಲೂಕ 5:33-39) ನಂತರ ಯೋಹಾನನ ಶಿಷ್ಯರು ಯೇಸುವಿನ ಬಳಿಗೆ ಬಂದರು. ಅವರು ಯೇಸುವಿಗೆ, “ನಾವು ಮತ್ತು ಫರಿಸಾಯರು ಆಗಾಗ್ಗೆ ಉಪವಾಸ ಮಾಡುತ್ತೇವೆ. ಆದರೆ ನಿನ್ನ ಶಿಷ್ಯರು ಏಕೆ ಉಪವಾಸ ಮಾಡುವುದಿಲ್ಲ?” ಎಂದು ಕೇಳಿದರು.
ಯೇಸು, “ಮದುವೆ ಸಮಯದಲ್ಲಿ ಮದುಮಗನ ಸಂಗಡವಿರುವ ಅವನ ಸ್ನೇಹಿತರು ದುಃಖಪಡುವುದಿಲ್ಲ. ಆದರೆ ಮದುಮಗನು ಅವರನ್ನು ಬಿಟ್ಟುಹೋಗುವ ಸಮಯ ಬರುತ್ತದೆ. ಆಗ ಅವರು ದುಃಖಪಡುತ್ತಾರೆ ಮತ್ತು ಉಪವಾಸ ಮಾಡುತ್ತಾರೆ.
“ಒಬ್ಬನು ಹರಿದುಹೋದ ಹಳೆ ಮೇಲಂಗಿಗೆ ಹೊಸ ಬಟ್ಟೆಯ ತುಂಡನ್ನು ತೇಪೆಹಾಕಿ ಹೊಲಿಯುವುದಿಲ್ಲ. ಒಂದುವೇಳೆ ಹೊಲಿದರೆ, ಆ ತೇಪೆಯು ಹಿಂಜಿಕೊಂಡು ಮೇಲಂಗಿಯಿಂದ ಕಿತ್ತುಬರುವುದು. ಆಗ ಆ ಮೇಲಂಗಿಯು ಮತ್ತಷ್ಟು ಹರಿದುಹೋಗುವುದು.
ಇದಲ್ಲದೆ ಜನರು ಹೊಸ ದ್ರಾಕ್ಷಾರಸವನ್ನು ಹಳೆ ದ್ರಾಕ್ಷಾರಸದ ಬುದ್ದಲಿಗಳಲ್ಲಿ ಹಾಕುವುದಿಲ್ಲ; ಏಕೆಂದರೆ ಹಳೆ ಬುದ್ದಲಿಗಳು ಒಡೆದುಹೋಗುತ್ತವೆ; ಮತ್ತು ದ್ರಾಕ್ಷಾರಸವು ಚೆಲ್ಲಿಹೋಗುತ್ತದೆ. ಆದ್ದರಿಂದ ಜನರು ಯಾವಾಗಲೂ ಹೊಸ ದ್ರಾಕ್ಷಾರಸವನ್ನು ಹೊಸ ಬುದ್ದಲಿಗಳಲ್ಲಿ ಹಾಕಿಡುವರು. ಆಗ ಎರಡೂ ಉಳಿಯುತ್ತವೆ” ಅಂದನು.
(ಮಾರ್ಕ 5:21-43; ಲೂಕ 8:40-56) ಯೇಸು ಈ ಸಂಗತಿಗಳನ್ನು ಹೇಳುತ್ತಿರುವಾಗ ಸಭಾಮಂದಿರದ ಅಧಿಕಾರಿಯೊಬ್ಬನು ಆತನ ಬಳಿಗೆ ಬಂದು ಆತನಿಗೆ ಬಾಗಿ ನಮಸ್ಕರಿಸಿ, “ನನ್ನ ಮಗಳು ಈಗ ತಾನೇ ಸತ್ತುಹೋದಳು. ನೀನು ಬಂದು ಅವಳನ್ನು ಮುಟ್ಟಿದರೆ ಅವಳು ಮತ್ತೆ ಜೀವಂತಳಾಗುವಳು” ಎಂದು ಹೇಳಿದನು.
ಯೇಸು ಮನೆಯೊಳಗೆ ಹೋದನು. ಕುರುಡರೂ ಆತನ ಸಂಗಡ ಹೋದರು. ಯೇಸು ಅವರಿಗೆ, “ನಾನು ನಿಮ್ಮನ್ನು ಗುಣಪಡಿಸಬಲ್ಲೆನೆಂದು ನೀವು ನಂಬುತ್ತೀರೋ?” ಎಂದು ಕೇಳಿದನು. ಕುರುಡರು, “ಹೌದು ಪ್ರಭುವೇ, ನಾವು ನಂಬುತ್ತೇವೆ” ಎಂದು ಉತ್ತರಕೊಟ್ಟರು.
ಯೇಸು ಆ ದೆವ್ವಕ್ಕೆ ಅವನನ್ನು ಬಿಟ್ಟುಹೋಗುವಂತೆ ಆಜ್ಞಾಪಿಸಿದನು. ಅವನು ಮಾತನಾಡತೊಡಗಿದನು. ಇದನ್ನು ಕಂಡ ಜನರು ಆಶ್ಚರ್ಯಚಕಿತರಾಗಿ, “ಇಸ್ರೇಲಿನಲ್ಲಿ ಇಂಥ ಕಾರ್ಯವನ್ನು ನೋಡಿಯೇ ಇಲ್ಲ” ಅಂದರು.
ಯೇಸು ಊರುಗಳಲ್ಲೆಲ್ಲಾ ಮತ್ತು ಹಳ್ಳಿಗಳಲ್ಲೆಲ್ಲಾ ಸಂಚಾರ ಮಾಡಿದನು. ಯೇಸು ಅವರ ಸಭಾಮಂದಿರಗಳಲ್ಲಿ ಉಪದೇಶಿಸಿ ಪರಲೋಕರಾಜ್ಯದ ವಿಷಯವಾಗಿ ಶುಭವಾರ್ತೆಯನ್ನು ಹೇಳಿದನು. ಎಲ್ಲಾ ತರದ ರೋಗಗಳನ್ನು ಬೇನೆಗಳನ್ನು ವಾಸಿಮಾಡಿದನು.