1
|
ಕೊಲೆಗಡುಕರ ಆ ಪಟ್ಟಣಕ್ಕೆ ಬಹಳ ಕೆಡುಕು ಉಂಟಾಗುವದು. ನಿನೆವೆಯು ಸುಳ್ಳಿನಿಂದ ತುಂಬಿದ ನಗರ. ಬೇರೆ ರಾಜ್ಯಗಳಿಂದ ದೋಚಿದ ವಸ್ತುಗಳಿಂದ ತುಂಬಿದ ನಗರ. ಆ ಪಟ್ಟಣವು ಕೊಲ್ಲುವುದನ್ನೂ ಲೂಟಿ ಮಾಡುವುದನ್ನೂ ನಿಲ್ಲಿಸುವುದೇ ಇಲ್ಲ. |
2
|
ಚಾವಟಿಯ ಚಟಾರವೆಂಬ ಶಬ್ಧವನ್ನು ನೀನು ಕೇಳಬಹುದು. ಚಕ್ರಗಳ ತಿರುಗುವ ಶಬ್ಧ, ಕುದುರೆಗಳ ನಾಗಾಲೋಟವನ್ನು ಮತ್ತು ರಥಗಳ ಹಾರಾಟವನ್ನು ನೀವು ನೋಡಬಹುದು. |
3
|
ಕುದುರೆಗಳ ಮೇಲಿರುವ ಸೈನಿಕರು ಆಕ್ರಮಣವೆಸಗಿದ್ದಾರೆ. ಅವರ ಖಡ್ಗವು ಮಿಂಚುತ್ತದೆ. ಅವರ ಬರ್ಜಿಯು ಹೊಳೆಯುತ್ತದೆ, ಬಹು ಮಂದಿ ಸತ್ತಿರುತ್ತಾರೆ. ಶವಗಳ ರಾಶಿ ಬಿದ್ದಿವೆ. ಅವು ಲೆಕ್ಕವಿಲ್ಲದಷ್ಟು ಇವೆ. ಅವುಗಳ ಮೇಲೆ ಜನರು ಎಡವಿ ಬೀಳುತ್ತಾರೆ. |
4
|
“ಇದಕ್ಕೆಲ್ಲಾ ಕಾರಣ ನಿನೆವೆ. ನಿನೆವೆಯು ಒಬ್ಬ ವೇಶ್ಯೆ. ಆಕೆಗೆ ತೃಪ್ತಿ ಇರದು. ಆಕೆಗೆ ಹೆಚ್ಚುಹೆಚ್ಚು ಬೇಕು. ಅನೇಕ ದೇಶಗಳಿಗೆ ತನ್ನನ್ನು ಮಾರಿಬಿಟ್ಟಿದ್ದಾಳೆ. ಮಂತ್ರ ತಂತ್ರಗಳನ್ನು ಉಪಯೋಗಿಸಿ ಜನರನ್ನು ತನ್ನ ಗುಲಾಮರನ್ನಾಗಿ ಮಾಡಿದ್ದಾಳೆ. |
5
|
ಸರ್ವಶಕ್ತನಾದ ಯೆಹೋವನು ಹೇಳುವದೇನೆಂದರೆ: “ನಿನೆವೆಯೇ, ನಾನು ನಿನಗೆ ವಿರೋಧವಾಗಿದ್ದೇನೆ. ನಿನ್ನ ಮೇಲಂಗಿಯನ್ನು ನಿನ್ನ ಮುಖದ ತನಕ ಎತ್ತುವೆನು. ಜನಾಂಗಗಳು ನಿನ್ನ ಬೆತ್ತಲೆತನವನ್ನು ನೋಡಲಿ. ನಿನ್ನ ನಾಚಿಕೆಯನ್ನು ಅವರು ನೋಡಲಿ. |
6
|
ಹೊಲಸುಗಳನ್ನು ನಿನ್ನ ಮೇಲೆ ಬಿಸಾಡುವೆನು. ನಿನ್ನನ್ನು ದ್ವೇಷದಿಂದ ಕಾಣುವೆನು. ಜನರು ನಿನ್ನನ್ನು ನೋಡಿ ನಗಾಡುವರು. |
7
|
ನಿನ್ನನ್ನು ನೋಡಿದವರೆಲ್ಲರು ದಂಗುಬಡಿಯಲ್ಪಟ್ಟರು. ‘ನಿನೆವೆಯು ನಾಶವಾಯಿತು. ಆಕೆಗಾಗಿ ಯಾರು ಮರುಗುವರು?’ ಎಂದು ಜನರು ಹೇಳುವರು. ನಿನ್ನನ್ನು ಸಂತೈಸುವವರು ಯಾರೂ ಸಿಗುವುದಿಲ್ಲವಲ್ಲಾ?” |
8
|
ನಿನೆವೆಯೇ, ನೀನು ನೈಲ್ ನದಿಯ ದಡದಲ್ಲಿರುವ ತೆಬೆಸ್ಗಿಂತಲೂ ಉತ್ತಮಳೋ? ಇಲ್ಲ. ತೆಬೆಸ್ನ ಸುತ್ತಲೂ ನೀರು ಇತ್ತು. ಆ ನೀರು ಆಕೆಯನ್ನು ತನ್ನ ವೈರಿಗಳಿಂದ ಕಾಪಾಡಲು ಶಕ್ತವಾಯಿತು. ಆ ನೀರನ್ನು ಆಕೆಯು ಗೋಡೆಯಂತೆ ಉಪಯೋಗಿಸಿದಳು. |
9
|
[This verse may not be a part of this translation] |
10
|
ಆದರೆ ತೆಬೆಸ್ ಸೋಲಿಸಲ್ಪಟ್ಟಿತು. ಆಕೆಯ ಪ್ರಜೆಗಳು ಬೇರೆ ದೇಶಕ್ಕೆ ಕೈದಿಗಳಾಗಿ ಒಯ್ಯಲ್ಪಟ್ಟರು. ಸೈನಿಕರು ಆಕೆಯ ಹಸುಗೂಸುಗಳನ್ನು ರಸ್ತೆಯ ಮೂಲೆಮೂಲೆಗಳಲ್ಲಿ ಹೊಡೆದು ಸಾಯಿಸಿದರು. ತಮ್ಮಲ್ಲಿ ಯಾರು ಉನ್ನತ ಅಧಿಕಾರಿಗಳನ್ನು ಗುಲಾಮರನ್ನಾಗಿ ಉಪಯೋಗಿಸಬೇಕೆಂಬದಾಗಿ ಚೇಟುಹಾಕಿದರು. ಅವರು ತೆಬೆಸ್ನ ಮುಖ್ಯ ಅಧಿಕಾರಿಗಳನ್ನು ಸಂಕೋಲೆಗಳಿಂದ ಬಂಧಿಸಿದರು. |
11
|
ಆದುದರಿಂದ ನಿನೆವೆಯೇ, ನೀನು ಸಹ ಕುಡಿದು ಅಮಲೇರಿದವರಂತೆ ಕೆಳಗೆ ಬಿದ್ದುಬಿಡುವಿ. ನೀನು ಅಡಗಿಕೊಳ್ಳಲು ಪ್ರಯತ್ನಿಸುವಿ. ವೈರಿಯಿಂದ ತಪ್ಪಿಸಿಕೊಳ್ಳಲು ಸುರಕ್ಷಿತವಾದ ಸ್ಥಳವನ್ನು ಹುಡುಕುವಿ. |
12
|
ಆದರೆ ನಿನೆವೆಯೇ, ನಿನ್ನ ಎಲ್ಲಾ ಬಲವಾದ ಬುರುಜುಗಳು ಅಂಜೂರದ ಮರದಂತಿರುವವು. ಹೊಸ ಅಂಜೂರ ಹಣ್ಣುಗಳು ಮಾಗುವವು. ಒಬ್ಬನು ಬಂದು ಮರವನ್ನು ಅಲ್ಲಾಡಿಸಲು ಅಂಜೂರ ಹಣ್ಣುಗಳು ಅಲ್ಲಾಡಿಸುವವನ ಬಾಯಿಗೆ ಬೀಳುವವು. ಅವನು ಅವುಗಳನ್ನು ತಿಂದುಬಿಡುವನು; ಅವು ಇಲ್ಲವಾಗುವವು. |
13
|
ನಿನೆವೆಯೇ, ನಿನ್ನ ಜನರೆಲ್ಲಾ ಹೆಂಗಸರಂತೆ, ವೈರಿ ಸೈನಿಕರು ಅವರನ್ನು ಹಿಡಿದುಕೊಳ್ಳಲು ತಯಾರಾಗಿದ್ದಾರೆ. ನಿನ್ನ ದೇಶದ ದ್ವಾರಗಳು, ವೈರಿಗಳು ಪ್ರವೇಶಿಸುವಂತೆ ಅಗಲವಾಗಿ ತೆರೆಯಲ್ಪಟ್ಟಿವೆ. ದ್ವಾರದ ಬಾಗಿಲಿನ ಅಡ್ಡಪಟ್ಟಿಯು ಬೆಂಕಿಯಿಂದ ಸುಟ್ಟಿರುತ್ತದೆ. |
14
|
ನೀರನ್ನು ತಂದು ಪಟ್ಟಣದೊಳಗೆ ಶೇಖರಿಸಿಡು. ಯಾಕೆಂದರೆ ವೈರಿ ಸೈನ್ಯವು ನಿನ್ನ ನಗರವನ್ನು ಮುತ್ತುವವು. ನಗರದೊಳಗೆ ಅನ್ನ ನೀರನ್ನು ಯಾರಿಗೂ ತರಲು ಬಿಡುವುದಿಲ್ಲ. ನಿನ್ನ ಬುರುಜುಗಳನ್ನು ಬಲಪಡಿಸಿಕೋ. ಹೆಚ್ಚು ಇಟ್ಟಿಗೆಗಳನ್ನು ಮಾಡುವಂತೆ ಆವೆಮಣ್ಣನ್ನು ಶೇಖರಿಸು. ಗಾರೆಯನ್ನು ಕಲಸಿಕೋ. ಇಟ್ಟಿಗೆಗಳನ್ನು ಮಾಡುವ ಅಚ್ಚನ್ನು ತೆಗೆದುಕೋ. |
15
|
ಇವೆಲ್ಲವನ್ನು ನೀನು ಮಾಡಬಹುದು. ಆದರೂ ಬೆಂಕಿಯು ನಿನ್ನನ್ನು ಸಂಪೂರ್ಣವಾಗಿ ನಾಶಮಾಡುವುದು. ಖಡ್ಗವು ನಿನ್ನನ್ನು ಸಾಯಿಸುವದು. ನಿನ್ನ ದೇಶವು ಮಿಡಿತೆಗಳ ಹಿಂಡಿನಿಂದ ತಿಂದು ಹಾಕಲ್ಪಟ್ಟ ದೇಶದಂತೆ ಕಾಣುವುದು. ನಿನೆವೆಯೇ, ನೀನು ಬೆಳೆಯುತ್ತಾ ಬೆಳೆಯುತ್ತಾ ಮಿಡಿತೆಗಳ ಹಿಂಡಿನಂತಾದಿ. ನೀನು ಮಿಡಿತೆಗಳಂತಾದಿ. |
16
|
ನಿನ್ನಲ್ಲಿ ಅನೇಕ ವ್ಯಾಪಾರಸ್ಥರು ಊರೂರಿಗೆ ತಿರುಗಿ ವ್ಯಾಪಾರ ಮಾಡುವವರಿದ್ದಾರೆ. ಅವರು ಆಕಾಶದಲ್ಲಿರುವ ನಕ್ಷತ್ರಗಳಷ್ಟು ಇದ್ದಾರೆ. ಅವರು ಮಿಡಿತೆಗಳಂತೆ ಬಂದು, ಎಲ್ಲವನ್ನು ತಿಂದು ಮುಗಿಸಿದ ಬಳಿಕ ಹೋಗುವಂಥವರಾಗಿದ್ದಾರೆ. |
17
|
ನಿನ್ನ ಸರಕಾರದ ಅಧಿಕಾರಿಗಳು ಸಹ ಮಿಡಿತೆಗಳಂತಿದ್ದಾರೆ. ಅವರು ಚಳಿಯ ದಿವಸದಲ್ಲಿ ಕಲ್ಲಿನ ಗೋಡೆಯ ಮೇಲೆ ಬಂದು ಕುಳಿತುಕೊಳ್ಳುವ ಮಿಡಿತೆಯಂತಿದ್ದಾರೆ. ಆದರೆ ಸೂರ್ಯನು ಮೇಲೆ ಬಂದಾಗ ಬಿಸಿಲು ಏರಿ ಕಲ್ಲು ಬಿಸಿಯಾದಾಗ ಆ ಮಿಡಿತೆಗಳೆಲ್ಲಾ ಹಾರಿಹೋಗುವವು. ಅವು ಎಲ್ಲಿಗೆ ಹೋದವು ಎಂದು ಯಾರಿಗೂ ಗೊತ್ತಿಲ್ಲ. ನಿನ್ನ ಅಧಿಕಾರಿಗಳೂ ಅದೇ ರೀತಿಯಲ್ಲಿರುವರು. |
18
|
ಅಶ್ಶೂರದ ಅರಸನೇ, ನಿನ್ನ ಕುರುಬರು ನಿದ್ರಿಸುತ್ತಿದ್ದಾರೆ. ಆ ಬಲಾಢ್ಯ ಕುರುಬರು ನಿದ್ರೆ ಮಾಡುತ್ತಿದ್ದಾರೆ. ಮತ್ತು ನಿನ್ನ ಕುರಿಗಳು ಬೆಟ್ಟಗಳ ಮೇಲೆ ಚದರಿಹೋಗಿವೆ. ಅವುಗಳನ್ನು ಹಿಂತಿರುಗಿಸಿ ಒಟ್ಟುಗೂಡಿಸಲು ಯಾರೂ ಇಲ್ಲ. |
19
|
ನಿನೆವೆಯೇ, ನೀನು ತೀವ್ರವಾದ ಗಾಯಹೊಂದಿರುವಿ. ಯಾವದೂ ನಿನ್ನನ್ನು ಗುಣಪಡಿಸಲಾರದು. ನಿನ್ನ ನಾಶನದ ಸುದ್ದಿ ಕೇಳಿದವರೆಲ್ಲರೂ ಚಪ್ಪಾಳೆ ತಟ್ಟುವರು. ಅವರು ಹರ್ಷಿಸುವರು. ಯಾಕೆಂದರೆ ನಿನಗಾದ ತೀವ್ರ ಗಾಯದ ನೋವನ್ನು ಅವರೆಲ್ಲರೂ ಅನುಭವಿಸಿದರು. |
Nahum 3:14 Kannada Language Bible Words basic statistical display
COMING SOON ...