ಕಾನಾನ್ಯನಾಗಿದ್ದ ಅರಾದಿನ ರಾಜನು ನೆಗೆವ್ನಲ್ಲಿದ್ದುಕೊಂಡು ರಾಜ್ಯಭಾರ ಮಾಡುತ್ತಿದ್ದನು. ಇಸ್ರೇಲರು ಅತಾರೀಮಿನ ಮಾರ್ಗವಾಗಿ ಬರುತ್ತಾರೆಂಬ ಸುದ್ದಿಯು ಅವನಿಗೆ ಮುಟ್ಟಿತು. ಆದ್ದರಿಂದ ಅವನು ಹೋಗಿ ಇಸ್ರೇಲರೊಡನೆ ಯುದ್ಧಮಾಡಿ ಅವರಲ್ಲಿ ಕೆಲವರನ್ನು ಸೆರೆಹಿಡಿದನು.
ಇಸ್ರೇಲರು ಯೆಹೋವನಿಗೆ ಹರಕೆಯನ್ನು ಮಾಡಿಕೊಂಡು, “ನಾವು ಈ ಜನರನ್ನು ಜಯಿಸುವಂತೆ ನೀನು ಅನುಗ್ರಹಿಸಿದರೆ ನಾವು ಅವರ ಗ್ರಾಮಗಳನ್ನು ಪೂರ್ಣವಾಗಿ ಹಾಳುಮಾಡಿ ಯೆಹೋವನಿಗಾಗಿಯೇ ಬಿಟ್ಟುಬಿಡುತ್ತೇವೆ” ಅಂದರು.
ಯೆಹೋವನು ಅವರ ಪ್ರಾರ್ಥನೆಯನ್ನು ಕೇಳಿ ಕಾನಾನ್ಯರನ್ನು ಜಯಿಸಲು ಸಹಾಯಮಾಡಿದ್ದರಿಂದ ಅವರು ಕಾನಾನ್ಯರನ್ನೂ ಅವರ ಗ್ರಾಮಗಳನ್ನೂ ಸಂಪೂರ್ಣವಾಗಿ ನಾಶಮಾಡಿಬಿಟ್ಟರು. ಆದ್ದರಿಂದ ಆ ಪ್ರದೇಶಕ್ಕೆ ಹೊರ್ಮಾ ಎಂದು ಹೆಸರಾಯಿತು.
ಇಸ್ರೇಲರು ಹೋರ್ ಬೆಟ್ಟದಿಂದ ಹೊರಟು ಕೆಂಪು ಸಮುದ್ರದ ಮಾರ್ಗವಾಗಿ ಪ್ರಯಾಣಮಾಡಿದರು. ಅವರು ಎದೋಮ್ ದೇಶವನ್ನು ಸುತ್ತಿಕೊಂಡು ಹೋಗುವುದಕ್ಕೆ ಹೀಗೆ ಮಾಡಿದರು. ಜನರು ಮಾರ್ಗದಲ್ಲಿ ತಾಳ್ಮೆ ತಪ್ಪಿದರು.
ಆಗ ಅವರು ದೇವರಿಗೂ ಮೋಶೆಗೂ ವಿರೋಧವಾಗಿ ಮಾತಾಡುತ್ತಾ “ಈ ಮರುಭೂಮಿಯಲ್ಲಿ ಸಾಯಲೆಂದು ನಮ್ಮನ್ನು ಈಜಿಪ್ಟಿನಿಂದ ಯಾಕೆ ಬರಮಾಡಿದೆ? ಇಲ್ಲಿ ಆಹಾರವೂ ಇಲ್ಲ, ನೀರೂ ಇಲ್ಲ. ಈ ನಿಸ್ಸಾರವಾದ ಆಹಾರವನ್ನು ತಿಂದು ನಮಗೆ ಬೇಸರವಾಯಿತು” ಎಂದು ಹೇಳಿದರು.
ಆಗ ಜನರು ಮೋಶೆಯ ಬಳಿಗೆ ಬಂದು, “ನಾವು ನಿನಗೂ ಯೆಹೋವನಿಗೂ ವಿರೋಧವಾಗಿ ಮಾತಾಡಿ ಪಾಪ ಮಾಡಿದ್ದೇವೆ. ಈ ಸರ್ಪಗಳನ್ನು ನಮ್ಮಿಂದ ತೊಲಗಿ ಹೋಗುವಂತೆ ಪ್ರಾರ್ಥನೆ ಮಾಡು” ಎಂದು ಬೇಡಿಕೊಂಡರು. ಮೋಶೆ ಜನರಿಗೋಸ್ಕರ ಪ್ರಾರ್ಥಿಸಿದನು.
ಯೆಹೋವನು ಮೋಶೆಗೆ, “ನೀನು ತಾಮ್ರದಿಂದ ವಿಷಸರ್ಪದ ಆಕಾರವನ್ನು ಮಾಡಿಸಿ ಧ್ವಜಸ್ತಂಭದ ಮೇಲೆ ಎತ್ತಿ ನಿಲ್ಲಿಸಬೇಕು, ಸರ್ಪಗಳಿಂದ ಕಚ್ಚಿಸಿಕೊಂಡವನು ಅದನ್ನು ನೋಡಿದರೆ ಬದುಕಿಕೊಳ್ಳುವನು” ಎಂದು ಆಜ್ಞಾಪಿಸಿದನು.
ಅವರು ಅಲ್ಲಿಂದ ಹೊರಟು ಅರ್ನೋನ್ ಹೊಳೆಯ ಆಚೆ ಕಡೆಯಲ್ಲಿ ಅಂದರೆ ಅಮೋರಿಯರ ಪ್ರದೇಶದೊಳಗೆ ವಿಸ್ತರಿಸಿರುವ ಮರುಭೂಮಿಯಲ್ಲಿ ಪಾಳೆಯ ಮಾಡಿಕೊಂಡರು. ಅರ್ನೋನ್ ನದಿಯು ಮೋವಾಬ್ಯರಿಗೂ ಅಮೋರಿಯರಿಗೂ ಗಡಿಯಾಗಿದೆ.
ಪ್ರಧಾನರು ಈ ಬಾವಿಯನ್ನು ತೋಡಿದರು. ಪ್ರಮುಖ ನಾಯಕರು ಈ ಬಾವಿಯನ್ನು ತೋಡಿದರು. ಅವರು ತಮ್ಮ ದೊಣ್ಣೆಗಳಿಂದ ಮತ್ತು ಕೋಲುಗಳಿಂದ ಈ ಬಾವಿಯನ್ನು ಅಗೆದರು.” ಆಮೇಲೆ ಜನರು “ಮತ್ತಾನ” ಎಂಬ ಮರುಭೂಮಿಯಿಂದ ಹೊರಟರು.
“ನಿಮ್ಮ ದೇಶವನ್ನು ಹಾದುಹೋಗುವುದಕ್ಕೆ ನಮಗೆ ಅಪ್ಪಣೆಕೊಡು. ನಿಮ್ಮ ಹೊಲಗಳಿಗಾಗಲಿ ದ್ರಾಕ್ಷಿತೋಟಗಳಿಗಾಗಲಿ ನಾವು ತಿರುಗಿಕೊಳ್ಳುವುದಿಲ್ಲ. ನಿನ್ನ ಯಾವ ಬಾವಿಗಳಿಂದಲೂ ನಾವು ನೀರು ಕುಡಿಯುವುದಿಲ್ಲ. ನಾವು ನಿಮ್ಮ ದೇಶವನ್ನು ದಾಟಿಹೋಗುವ ತನಕ ರಾಜ ಮಾರ್ಗದಲ್ಲಿಯೇ ಪ್ರಯಾಣ ಮಾಡುತ್ತೇವೆ” ಎಂದು ಹೇಳಿದರು.
ಆದರೆ ಅರಸನಾದ ಸೀಹೋನನು ಇಸ್ರೇಲರಿಗೆ ತನ್ನ ದೇಶದ ಮೂಲಕ ಹಾದುಹೋಗಲು ಬಿಡಲಿಲ್ಲ. ಅರಸನು ತನ್ನ ಇಡೀ ಸೈನ್ಯವನ್ನು ಕೂಡಿಸಿಕೊಂಡು ಇಸ್ರೇಲರ ವಿರುದ್ಧ ಯುದ್ಧಮಾಡಲು ಮರುಭೂಮಿಯ ಕಡೆಗೆ ಹೊರಟನು. ಅವನು ಯಹಜ್ ಎಂಬಲ್ಲಿಗೆ ಬಂದನು; ಅಲ್ಲಿ ರಾಜನ ಸೈನ್ಯವು ಇಸ್ರೇಲರಿಗೆ ವಿರೋಧವಾಗಿ ಯುದ್ಧಮಾಡಿತು.
ಆದರೆ ಇಸ್ರೇಲರು ಅರಸನನ್ನು ಕೊಂದುಹಾಕಿದರು. ಬಳಿಕ ಅವರು ಅರ್ನೋನ್ ನದಿಯಿಂದ ಹಿಡಿದು ಯಬ್ಬೋಕ್ ನದಿಯವರೆಗಿರುವ ಅವನ ಭೂಮಿಯನ್ನು ವಶಪಡಿಸಿಕೊಂಡರು. ಅವರು ಅಮ್ಮೋನಿಯರ ಮೇರೆಯವರೆಗಿರುವ ಪ್ರದೇಶವನ್ನೆಲ್ಲಾ ವಶಪಡಿಸಿಕೊಂಡರು. ಅಮ್ಮೋನಿಯರು ತಮ್ಮ ಗಡಿಯನ್ನು ಭದ್ರವಾಗಿ ರಕ್ಷಿಸಿಕೊಂಡದ್ದರಿಂದ ಇಸ್ರೇಲರು ಮುಂದಕ್ಕೆ ಹೋಗಲಿಲ್ಲ.
ಹೆಷ್ಬೋನಿನಲ್ಲಿ ಅಮೋರಿಯರ ಅರಸನಾದ ಸೀಹೋನನು ವಾಸಿಸುತ್ತಿದ್ದನು. ಸೀಹೋನನು ಮೊದಲಿನ ಮೋವಾಬ್ಯರ ಅರಸನೊಡನೆ ಯುದ್ಧ ಮಾಡಿದ್ದನು. ಸೀಹೋನನು ಅರ್ನೋನ್ ನದಿಯವರೆಗಿರುವ ಆ ರಾಜನ ಪ್ರದೇಶವನ್ನೆಲ್ಲ ವಶಪಡಿಸಿಕೊಂಡಿದ್ದನು.
ಹೆಷ್ಬೋನಿನಲ್ಲಿ ಬೆಂಕಿಯುಂಟಾಯಿತು. ಆ ಬೆಂಕಿ ಸೀಹೋನನ ಪಟ್ಟಣದಲ್ಲಿ ಉಂಟಾಯಿತು. ಆ ಬೆಂಕಿಯು ಮೋವಾಬಿನಲ್ಲಿರುವ ‘ಆರ್’ ಪಟ್ಟಣವನ್ನು ನಾಶಮಾಡಿತು. ಅದು ಅರ್ನೋನ್ ನದಿಯ ಬಳಿಯಲ್ಲಿರುವ ಬೆಟ್ಟಗಳನ್ನು ಸುಟ್ಟುಹಾಕಿತು.
ಆದರೆ ನಾವು ಆ ಅಮೋರಿಯರನ್ನು ಸೋಲಿಸಿದೆವು. ಹೆಷ್ಬೋನಿನಿಂದ ದೀಬೋನಿನವರೆಗಿರುವ ಅವರ ಪಟ್ಟಣಗಳನ್ನೂ ನಾಶೀಮಿನಿಂದ ನೋಫಹದ (ಮೇದೆಬಾದ ಹತ್ತಿರ) ವರೆಗಿರುವ ಪಟ್ಟಣಗಳನ್ನೂ ನಾವು ನಾಶಮಾಡಿದೆವು.”
ಮೋಶೆಯು ಯಗ್ಜೇರ್ ಪಟ್ಟಣದ ಗುಟ್ಟನ್ನು ತಿಳಿದುಕೊಂಡು ಬರುವುದಕ್ಕೆ ಕೆಲವು ಜನರನ್ನು ಕಳುಹಿಸಿದ ನಂತರ, ಇಸ್ರೇಲರು ಆ ಪಟ್ಟಣವನ್ನು ವಶಪಡಿಸಿಕೊಂಡರು. ಅದರ ಸುತ್ತಲಿರುವ ಚಿಕ್ಕ ಪಟ್ಟಣಗಳನ್ನು ಅವರು ವಶಪಡಿಸಿಕೊಂಡರು. ಇಸ್ರೇಲರು ಅಲ್ಲಿದ್ದ ಅಮೋರಿಯರನ್ನು ಓಡಿಸಿದರು.
ಬಳಿಕ ಇಸ್ರೇಲರು ಬೇರೆ ದಿಕ್ಕಿಗೆ ತಿರುಗಿ ಬಾಷಾನಿನ ಮಾರ್ಗವಾಗಿ ಪ್ರಯಾಣಮಾಡಿದರು. ಆಗ ಬಾಷಾನಿನ ಅರಸನಾದ ಓಗನು ಎದ್ರೈ ಎಂಬಲ್ಲಿ ಇಸ್ರೇಲರೊಂದಿಗೆ ಯುದ್ಧಮಾಡಲು ತನ್ನ ಸೈನ್ಯ ಸಮೇತವಾಗಿ ಬಂದನು.
ಆದರೆ ಯೆಹೋವನು ಮೋಶೆಗೆ, “ಆ ಅರಸನಿಗೆ ಹೆದರಬೇಡ. ನೀನು ಅವನನ್ನು ಸೋಲಿಸುವಂತೆ ಮಾಡುವೆನು. ನೀನು ಅವನ ಸೈನ್ಯವನ್ನು ಮತ್ತು ಅವನ ದೇಶವನ್ನು ಪೂರ್ಣವಾಗಿ ವಶಪಡಿಸಿಕೊಳ್ಳುವೆ. ಹೆಷ್ಬೋನಿನಲ್ಲಿ ವಾಸಿಸಿದ್ದ ಅಮೋರಿಯರ ಅರಸನಾದ ಸೀಹೋನನಿಗೆ ಮಾಡಿದಂತೆ ಇವನಿಗೂ ಸಹ ಮಾಡುವಿರಿ” ಅಂದನು.
ಇಸ್ರೇಲರು ಓಗನನ್ನೂ ಅವನ ಸೈನ್ಯವನ್ನೂ ಸೋಲಿಸಿದರು. ಅವರು ಅವನನ್ನೂ ಅವನ ಪುತ್ರರನ್ನೂ ಕೊಂದುಹಾಕಿ ಅವನ ಸೈನ್ಯವನ್ನೆಲ್ಲಾ ನಾಶಮಾಡಿದರು. ಯಾರನ್ನೂ ಜೀವಂತವಾಗಿ ಉಳಿಸಲಿಲ್ಲ. ಇಸ್ರೇಲರು ಅವನ ದೇಶವನ್ನು ವಶಪಡಿಸಿಕೊಂಡರು.