ಯೆಹೋವನು ಮೋಶೆಗೆ, “ನೀನು ಜನರ ನಾಯಕರನ್ನೆಲ್ಲ ಬಂಧಿಸಿ ಯೆಹೋವನ ಮುಂದೆ ಬಹಿರಂಗವಾಗಿ ಅವರನ್ನು ನೇಣುಗಂಬಕ್ಕೆ ಏರಿಸು. ಹೀಗೆ ಯೆಹೋವನ ಕೋಪಾಗ್ನಿಯನ್ನು ಇಸ್ರೇಲರಿಂದ ತೊಲಗಿಸಬೇಕು” ಎಂದು ಹೇಳಿದನು.
ಆದಕಾರಣ ಮೋಶೆ ಇಸ್ರೇಲರ ನ್ಯಾಯಾಧಿಪತಿಗಳಿಗೆ, “ನಿಮ್ಮಲ್ಲಿ ಪ್ರತಿಯೊಬ್ಬನು, ಸುಳ್ಳುದೇವರಾದ ಪೆಗೋರದ ಬಾಳನನ್ನು ಆರಾಧಿಸುವಂತೆ ಜನರನ್ನೂ ಪ್ರೋತ್ಸಾಹಿಸಿದವರನ್ನು ಕಂಡು ಹಿಡಿದು ನೀವು ಅವರನ್ನು ಕೊಲ್ಲಬೇಕು” ಎಂದು ಆಜ್ಞಾಪಿಸಿದನು.
ಆಗ ಮೋಶೆ ಮತ್ತು ಇಡೀ ಇಸ್ರೇಲ್ ಸಮುದಾಯವು ಒಟ್ಟಾಗಿ ಸೇರಿಬಂದು ದೇವದರ್ಶನಗುಡಾರದ ಬಾಗಿಲಲ್ಲಿ ಅಳುತ್ತಿದ್ದರು. ಅಷ್ಟರಲ್ಲಿ ಇಸ್ರೇಲ್ ಮನುಷ್ಯನೊಬ್ಬನು ಮಿದ್ಯಾನ್ ಸ್ತ್ರೀಯೊಬ್ಬಳನ್ನು ತನ್ನ ಸಂಬಂಧಿಕರ ಬಳಿಗೆ ಕರೆದುಕೊಂಡು ಬಂದನು. ಮೋಶೆಯ ಮತ್ತು ಎಲ್ಲಾ ಜನರ ಕಣ್ಣೆದುರಿನಲ್ಲೇ ಅವನು ಹೀಗೆ ಮಾಡಿದನು.
ಆ ಇಸ್ರೇಲನನ್ನು ಹಿಂಬಾಲಿಸಿ ಮಲಗುವ ಕೋಣೆಯೊಳಗೆ ಹೋಗಿ ಅವನನ್ನೂ ಆ ಮಿದ್ಯಾನ್ ಸ್ತ್ರೀಯನ್ನೂ ಒಂದೇ ಏಟಿನಿಂದ ಹೊಟ್ಟೆಯಲ್ಲಿ ತಿವಿದು ಕೊಂದನು. ಆಗ ಇಸ್ರೇಲರಿಗುಂಟಾದ ವ್ಯಾಧಿ ನಿಂತುಹೋಯಿತು.
ಆ ಒಡಂಬಡಿಕೆಯ ಪ್ರಕಾರವಾಗಿ ಅವನಿಗೂ ಅವನ ತರುವಾಯ ಅವನ ಸಂತತಿಯವರಿಗೂ ಯಾಜಕತ್ವವು ಶಾಶ್ವತವಾಗಿಯೇ ಇರುವುದೆಂದು ಮಾತು ಕೊಡುತ್ತೇನೆ. ಅವನು ತನ್ನ ದೇವರ ಗೌರವವನ್ನು ಕಾಪಾಡಿ ಇಸ್ರೇಲರಿಗೋಸ್ಕರ ದೋಷಪರಿಹಾರವನ್ನು ಮಾಡಿದ್ದರಿಂದ ನಾನು ಅವನಿಗೆ ಈ ಮಾತನ್ನು ಕೊಟ್ಟಿದ್ದೇನೆ” ಎಂದು ಹೇಳಿದನು.
ಯಾಕೆಂದರೆ ಅವರು ನಿಮ್ಮನ್ನು ವೈರಿಗಳೆಂದು ಪರಿಗಣಿಸಿ ಪೆಗೋರನ ಘಟನೆಯಲ್ಲಿ ನಿಮ್ಮನ್ನು ಮೋಸಗೊಳಿಸಿದರು. ಮಿದ್ಯಾನಿನ ನಾಯಕನೊಬ್ಬನ ಮಗಳೂ ತಮ್ಮ ರಕ್ತಸಂಬಂಧಿಯೂ ಆಗಿದ್ದ ಕೊಜ್ಬೀಯ ವಿಷಯದಲ್ಲಿಯೂ ಅವರು ನಿಮ್ಮನ್ನು ಮೋಸಗೊಳಿಸಿದರು. ಪೆಗೋರಿನ ಘಟನೆಯಿಂದ ಇಸ್ರೇಲರಿಗೆ ಕಾಯಿಲೆ ಉಂಟಾದಾಗ ಆ ಸ್ತ್ರೀಯೂ ಸತ್ತಳು.”