ಈ ಐದು ಹೆಣ್ಣುಮಕ್ಕಳು, “ನಮ್ಮ ತಂದೆ ಮರುಭೂಮಿಯಲ್ಲಿ ಸತ್ತುಹೋದನು. ಅವನು ಕೋರಹನ ಜೊತೆಯಲ್ಲಿ ಯೆಹೋವನಿಗೆ ವಿರೋಧವಾಗಿ ತಿರುಗಿ ಬಿದ್ದವರಲ್ಲಿ ಸೇರಿದವನಲ್ಲ. ನಮ್ಮ ತಂದೆಯು ತನ್ನ ಪಾಪದ ಫಲವಾಗಿ ಸತ್ತನು. ಅವನಿಗೆ ಗಂಡುಮಕ್ಕಳಿರಲಿಲ್ಲ.
ನಮ್ಮ ತಂದೆಗೆ ಗಂಡುಮಗನಿಲ್ಲದ ಮಾತ್ರದಿಂದ ಅವನ ಹೆಸರನ್ನು ಅವನ ಕುಲದವರ ಮಧ್ಯದಿಂದ ತೆಗೆಯುವುದು ನ್ಯಾಯವೋ? ನಮ್ಮ ತಂದೆಯ ಸಂಬಂಧಿಕರೊಡನೆ ನಮಗೂ ಸ್ವಾಸ್ತ್ಯವನ್ನು ಕೊಡು” ಎಂದು ಹೇಳಿದರು.
“ಚಲ್ಪಹಾದನ ಹೆಣ್ಣುಮಕ್ಕಳು ಹೇಳುವುದು ನ್ಯಾಯವಾಗಿದೆ. ಅವರ ತಂದೆಯ ಸಂಬಂಧಿಕರೊಡನೆ ಅವರಿಗೂ ನೀನು ಸ್ವಾಸ್ತ್ಯವನ್ನು ಕೊಡಬೇಕು. ಅವರ ತಂದೆಯ ಸ್ವಾಸ್ತ್ಯವನ್ನು ನೀನು ಅವರಿಗೆ ವರ್ಗಾವಣೆ ಮಾಡಬೇಕು.
(9-10) ಮಗಳು ಇಲ್ಲದ ಪಕ್ಷಕ್ಕೆ ಅವನ ಸ್ವಾಸ್ತ್ಯವನ್ನು ಅವನ ಅಣ್ಣತಮ್ಮಂದಿರಿಗೆ ಕೊಡಬೇಕು. ಅಣ್ಣತಮ್ಮಂದಿರು ಇಲ್ಲದ ಪಕ್ಷಕ್ಕೆ ಅವನ ಸ್ವಾಸ್ತ್ಯವನ್ನು ಅವನ ತಂದೆಯ ಸಹೋದರರಿಗೆ ಕೊಡಬೇಕು.
ಅವನ ತಂದೆಗೆ ಸಹೋದರರಿಲ್ಲದಿದ್ದರೆ, ಅವನ ಸ್ವಂತ ಕುಲದ ಅತಿ ಸಮೀಪದ ಸಂಬಂಧಿಕನಿಗೆ ಅದನ್ನು ವಹಿಸಿಕೊಡಬೇಕು. ಆಗ ಅವನು ಅದನ್ನು ಸ್ವಾಧೀನಪಡಿಸಿಕೊಳ್ಳುವನು. ಯೆಹೋವನು ಮೋಶೆಗೆ ಆಜ್ಞಾಪಿಸಿದ ಈ ನಿರ್ಧಾರವು ಇಸ್ರೇಲರಿಗೆ ಕಾನೂನು ಬದ್ಧವಾದ ವಿಧಿಯಾಗಿದೆ.’ ”
ಇಸ್ರೇಲರ ಸಮೂಹದವರು ಚಿನ್ ಮರುಭೂಮಿಯಲ್ಲಿ ನನ್ನೊಡನೆ ವಿವಾದಿಸಿದಾಗ ನೀವಿಬ್ಬರೂ ನನ್ನ ಪವಿತ್ರತೆಯನ್ನು ಜನರ ಮುಂದೆ ತೋರಿಸದೆ ನನ್ನ ಆಜ್ಞೆಗೆ ಅವಿಧೇಯರಾದ ಕಾರಣ ಆ ದೇಶವನ್ನು ನೀನು ಸೇರಬಾರದು.” ಚಿನ್ ಮರುಭೂಮಿಯಲ್ಲಿ ಕಾದೇಶಿನ ಬಳಿ ಮೆರೀಬಾ ಬುಗ್ಗೆಯ ಕುರಿತಾಗಿ ಯೆಹೋವನು ಇದನ್ನು ಹೇಳಿದನು.
ಯೆಹೋಶುವನು ತೀರ್ಮಾನವೇನಾದರೂ ಮಾಡಬೇಕಾದರೆ ಅವನು ಯಾಜಕನಾದ ಎಲ್ಲಾಜಾರನ ಬಳಿಗೆ ಹೋಗಲಿ, ಎಲ್ಲಾಜಾರನು ಊರೀಮಿನಿಂದ ಯೆಹೋವನ ಉತ್ತರವನ್ನು ಪಡೆಯುವನು. ಆಗ ಯೆಹೋಶುವನೂ ಇಸ್ರೇಲರೆಲ್ಲರೂ ದೇವರು ಹೇಳುವ ಕಾರ್ಯಗಳನ್ನು ಮಾಡುವರು. ಆತನು, ‘ಯುದ್ಧಕ್ಕೆ ಹೋಗಿರಿ’ ಎಂದು ಹೇಳಿದರೆ ಅವರು ಯುದ್ಧಕ್ಕೆ ಹೋಗುವರು. ಆತನು, ‘ಮನೆಗೆ ಹೋಗಿರಿ’ ಎಂದು ಹೇಳಿದರೆ ಅವರು ಮನೆಗೆ ಹೋಗುವರು” ಎಂದು ಹೇಳಿದನು.