English Bible Languages

Indian Language Bible Word Collections

Bible Versions

English

Tamil

Hebrew

Greek

Malayalam

Hindi

Telugu

Kannada

Gujarati

Punjabi

Urdu

Bengali

Oriya

Marathi

Assamese

Books

Numbers Chapters

Numbers 28 Verses

1 ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ:
2 “ನೀನು ಇಸ್ರೇಲರಿಗೆ ಈ ಆಜ್ಞೆಯನ್ನು ಕೊಡು. ನೀವು ಎಚ್ಚರಿಕೆಯಾಗಿದ್ದು ನೇಮಿತ ಕಾಲಗಳಲ್ಲಿ ನನಗೆ ಅರ್ಪಿಸತಕ್ಕ ಧಾನ್ಯಸಮರ್ಪಣೆಗಳನ್ನು ನನಗೆ ಸುಗಂಧ ಹೋಮಮಾಡಬೇಕು.
3 ಅವರಿಗೆ ಹೀಗೆ ಹೇಳು: ನೀವು ಯೆಹೋವನಿಗೆ ಕೊಡಬೇಕಾಗಿರುವ ತ್ಯಾಗಮಯವಾದ ಕಾಣಿಕೆಗಳು ಇವುಗಳೇ: ದಿನನಿತ್ಯದ ಸರ್ವಾಂಗಹೋಮಕ್ಕಾಗಿ ಒಂದು ವರ್ಷ ವಯಸ್ಸಿನ ಎರಡು ಗಂಡುಕುರಿಗಳು.
4 ನೀವು ಒಂದು ಕುರಿಮರಿಯನ್ನು ಹೊತ್ತಾರೆಯಲ್ಲಿಯೂ ಇನ್ನೊಂದನ್ನು ನಸುಸಂಜೆಯಲ್ಲಿಯೂ ಅರ್ಪಿಸಬೇಕು.
5 ಹೊತ್ತಾರೆಯ ಸಮರ್ಪಣೆಯೊಂದಿಗೆ ನೀವು ಧಾನ್ಯಸಮರ್ಪಣೆಗಾಗಿ ಒಂದೂವರೆ ಸೇರು ಶ್ರೇಷ್ಠವಾದ ಎಣ್ಣೆಯನ್ನೂ ಮೂರು ಸೇರು ಗೋಧಿಹಿಟ್ಟನ್ನೂ ಬೆರೆಸಿ ಸಮರ್ಪಿಸಬೇಕು.”
6 (ಈ ಸರ್ವಾಂಗಹೋಮವನ್ನು ಸೀನಾಯಿ ಬೆಟ್ಟದ ಮೇಲೆ ಯೆಹೋವನಿಗೆ ತ್ಯಾಗಮಯವಾದ ಕಾಣಿಕೆಯಾಗಿಯೂ ಸುಗಂಧ ವಾಸನೆಯಾಗಿಯೂ ಕ್ರಮವಾಗಿ ಅರ್ಪಿಸಲಾಯಿತು.)
7 “ಪ್ರತಿಯೊಂದು ಕುರಿಮರಿಯೊಂದಿಗೆ ಒಂದೂವರೆ ಸೇರು ದ್ರಾಕ್ಷಾರಸವನ್ನು ಪಾನದ್ರವ್ಯದ ಕಾಣಿಕೆಯಾಗಿ ಅರ್ಪಿಸಬೇಕು. ಯೆಹೋವನಿಗೆ ಪಾನದ್ರವ್ಯವಾಗಿ ಅರ್ಪಿಸತಕ್ಕ ದ್ರಾಕ್ಷಾರಸವನ್ನು ಪವಿತ್ರಸ್ಥಳದಲ್ಲಿ ಸುರಿಯಿರಿ.
8 ನೀವು ಎರಡನೆ ಕುರಿಮರಿಯನ್ನು ನಸುಸಂಜೆಯಲ್ಲಿ ಅರ್ಪಿಸುವಾಗ, ಮುಂಜಾನೆಯಲ್ಲಿ ಅರ್ಪಿಸಿದಂತೆಯೇ ಅದರೊಡನೆ ಸಮರ್ಪಕವಾದ ಧಾನ್ಯಾರ್ಪಣೆಯನ್ನು ಮತ್ತು ಪಾನದ್ರವ್ಯಾರ್ಪಣೆಯನ್ನು ಮಾಡಬೇಕು. ಇದು ಯೆಹೋವನಿಗೆ ತ್ಯಾಗಮಯವಾದ ಅರ್ಪಣೆಯಾಗಿದ್ದು ಸುಗಂಧ ವಾಸನೆಯನ್ನು ಉಂಟುಮಾಡುವುದು.
9 (9-10) “ಸಬ್ಬತ್‌ದಿನದಲ್ಲಿ ಎರಡು ಪೂರ್ಣಾಂಗವಾದ ಒಂದು ವರ್ಷದ ಗಂಡುಕುರಿಗಳನ್ನೂ ಧಾನ್ಯದ್ರವ್ಯಾರ್ಪಣೆಗಾಗಿ ಎಣ್ಣೆ ಬೆರೆಸಿದ ಆರು ಸೇರು ಗೋಧಿಹಿಟ್ಟನ್ನೂ ಅದಕ್ಕೆ ತಕ್ಕ ಪಾನದ್ರವ್ಯವನ್ನೂ ಸಮರ್ಪಿಸಬೇಕು. ಕ್ರಮವಾಗಿ ಅರ್ಪಿಸತಕ್ಕ ಸರ್ವಾಂಗಹೋಮ ಮತ್ತು ಅದರ ಪಾನದ್ರವ್ಯಾರ್ಪಣೆಗಳಲ್ಲದೆ, ಪ್ರತಿಸಬ್ಬತ್ ದಿನ ಸರ್ವಾಂಗಹೋಮವನ್ನು ಅರ್ಪಿಸಬೇಕು.
11 “ಪ್ರತಿ ತಿಂಗಳ ಮೊದಲನೆಯ ದಿನದಲ್ಲಿ, ನೀವು ಯೆಹೋವನಿಗೆ ಸರ್ವಾಂಗಹೋಮವನ್ನು ಅರ್ಪಿಸಬೇಕು: ಎರಡು ಹೋರಿಗಳು, ಒಂದು ಟಗರು ಮತ್ತು ಒಂದು ವರ್ಷದ ಏಳು ಕುರಿಮರಿಗಳು. ಇವುಗಳೆಲ್ಲಾ ಪೂರ್ಣಾಂಗವಾದವುಗಳಾಗಿರಬೇಕು.
12 ಇವುಗಳೊಡನೆ ಧಾನ್ಯನೈವೇದ್ಯಕ್ಕಾಗಿ ನೀವು ಪ್ರತಿಯೊಂದು ಹೋರಿಗೆ ಎಣ್ಣೆ ಬೆರೆಸಿದ ಉತ್ತಮವಾದ ಒಂಭತ್ತು ಸೇರು ಗೋಧಿಹಿಟ್ಟನ್ನು ಅರ್ಪಿಸಬೇಕು. ಪ್ರತಿಯೊಂದು ಟಗರಿಗೆ ಎಣ್ಣೆ ಬೆರೆಸಿದ ಉತ್ತಮವಾದ ಆರು ಸೇರು ಗೋಧಿಹಿಟ್ಟನ್ನು ಅರ್ಪಿಸಬೇಕು.
13 ಪ್ರತಿಯೊಂದು ಕುರಿಮರಿಗೆ ಎಣ್ಣೆ ಬೆರೆಸಿದ ಉತ್ತಮವಾದ ಮೂರು ಸೇರು ಗೋಧಿಹಿಟ್ಟನ್ನು ಅರ್ಪಿಸಬೇಕು. ಈ ಸರ್ವಾಂಗಹೋಮವು ಯೆಹೋವನಿಗೆ ಸುಗಂಧ ವಾಸನೆಯಾಗಿಯೂ ತ್ಯಾಗಮಯವಾದ ಕಾಣಿಕೆಯಾಗಿಯೂ ಇದೆ.
14 ಇವುಗಳಿಗೆ ತಕ್ಕ ಪಾನದ್ರವ್ಯಾರ್ಪಣೆಗಳನ್ನು ಮಾಡಬೇಕು. ಅವು ಯಾವುವೆಂದರೆ: ಒಂದು ಹೋರಿಯೊಡನೆ ಮೂರು ಸೇರು ದ್ರಾಕ್ಷಾರಸವನ್ನೂ ಟಗರಿನೊಡನೆ ಎರಡು ಸೇರು ದ್ರಾಕ್ಷಾರಸವನ್ನೂ ಕುರಿಮರಿಯೊಡನೆ ಒಂದೂವರೆ ಸೇರು ದ್ರಾಕ್ಷಾರಸವನ್ನೂ ಅರ್ಪಿಸಬೇಕು. ವರ್ಷದ ಪ್ರತಿತಿಂಗಳು ಅಮಾವಾಸ್ಯೆಯಲ್ಲಿ ಅರ್ಪಿಸತಕ್ಕ ಮಾಸಿಕ ಸರ್ವಾಂಗಹೋಮಗಳು ಇವುಗಳೇ.
15 ಕ್ರಮಾನುಸಾರವಾದ ಸರ್ವಾಂಗಹೋಮ ಮತ್ತು ಅದರ ಪಾನದ್ರವ್ಯಾರ್ಪಣೆಗಳಲ್ಲದೆ, ಪಾಪಪರಿಹಾರಕ ಯಜ್ಞವಾಗಿ ಒಂದು ಹೋತವನ್ನು ಯೆಹೋವನಿಗೆ ಅರ್ಪಿಸಬೇಕು.
16 “ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನದಲ್ಲಿ ಯೆಹೋವನಿಗೆ ಪಸ್ಕಹಬ್ಬದ ಯಜ್ಞವನ್ನು ಅರ್ಪಿಸಬೇಕು.
17 ಹುಳಿಯಿಲ್ಲದ ರೊಟ್ಟಿಯ ಹಬ್ಬವು ಅದೇ ತಿಂಗಳಿನ ಹದಿನೈದನೆಯ ದಿನದಿಂದ ಪ್ರಾರಂಭವಾಗುವುದು. ಏಳು ದಿನಗಳವರೆಗೂ ಹುಳಿಯಿಲ್ಲದ ರೊಟ್ಟಿಯನ್ನೇ ಊಟಮಾಡಬೇಕು.
18 ಮೊದಲನೆಯ ದಿನದಲ್ಲಿ ದೇವಾರಾಧನೆಗಾಗಿ ಸಭೆ ಸೇರಬೇಕು. ಆ ದಿನದಲ್ಲಿ ಯಾವ ಪ್ರಯಾಸದ ಕೆಲಸವನ್ನು ಮಾಡಬಾರದು.
19 ಯೆಹೋವನಿಗೆ ಸರ್ವಾಂಗಹೋಮಕ್ಕಾಗಿ ಎರಡು ಹೋರಿಗಳನ್ನು, ಒಂದು ಟಗರನ್ನು ಮತ್ತು ಒಂದು ವರ್ಷದ ಏಳು ಗಂಡುಕುರಿಮರಿಗಳನ್ನು ಅರ್ಪಿಸಬೇಕು. ಈ ಪಶುಗಳೆಲ್ಲ ಪೂರ್ಣಾಂಗವಾದವುಗಳಾಗಿರಬೇಕು.
20 ಇವುಗಳೊಂದಿಗೆ ಧಾನ್ಯಸಮರ್ಪಣೆಗಾಗಿ ಎಣ್ಣೆ ಬೆರೆಸಿದ ಗೋಧಿಹಿಟ್ಟನ್ನು ತಂದುಕೊಡಬೇಕು; ಹೇಗೆಂದರೆ, ಒಂದು ಹೋರಿಗೆ ಒಂಭತ್ತು ಸೇರು ಗೋಧಿಹಿಟ್ಟು, ಒಂದು ಟಗರಿಗೆ ಆರು ಸೇರು ಗೋಧಿಹಿಟ್ಟು,
21 ಏಳು ಕುರಿಮರಿಗಳಲ್ಲಿ ಪ್ರತಿಯೊಂದಕ್ಕೂ ಮೂರು ಸೇರು ಗೋಧಿಹಿಟ್ಟು.
22 ಇದಲ್ಲದೆ ನಿಮಗೋಸ್ಕರ ಪ್ರಾಯಶ್ಚಿತ್ತ ಮಾಡಲು ಒಂದು ಹೋತವನ್ನು ಪಾಪಪರಿಹಾರಕ ಯಜ್ಞವಾಗಿ ಅರ್ಪಿಸಬೇಕು.
23 ಕ್ರಮವಾಗಿ ಮುಂಜಾನೆ ಅರ್ಪಿಸುವ ಸರ್ವಾಂಗಹೋಮವಲ್ಲದೆ ಇವುಗಳನ್ನೂ ಅರ್ಪಿಸಬೇಕು.
24 “ಈ ಎಲ್ಲ ಅರ್ಪಣೆಗಳನ್ನು ಆ ಏಳು ದಿನಗಳಲ್ಲಿ ಪ್ರತಿಯೊಂದು ದಿನವೂ ಆಹಾರವಾಗಿಯೂ ತ್ಯಾಗಮಯವಾದ ಕಾಣಿಕೆಯಾಗಿಯೂ ಯೆಹೋವನಿಗೆ ಸುಗಂಧ ವಾಸನೆಯಾಗಿಯೂ ಅರ್ಪಿಸಬೇಕು. ಕ್ರಮಾನುಸಾರವಾದ ಸರ್ವಾಂಗಹೋಮ ಮತ್ತು ಅದರ ಪಾನದ್ರವ್ಯಾರ್ಪಣೆಗಳಲ್ಲದೆ ಇವುಗಳನ್ನೂ ಅರ್ಪಿಸಬೇಕು.
25 “ಇದಲ್ಲದೆ ಏಳನೆಯ ದಿನದಲ್ಲಿ ವಿಶೇಷ ಸಭೆ ಸೇರಬೇಕು. ಆ ದಿನದಲ್ಲಿ ನೀವು ಪ್ರಯಾಸದ ಕೆಲಸವನ್ನು ಮಾಡಕೂಡದು. ವಾರಗಳ ಹಬ್ಬ (ಪಂಚಾಶತ್ತಮ)
26 “ನಿಮ್ಮ ಪ್ರಥಮಫಲಗಳ ಹಬ್ಬದಲ್ಲಿ ಅಂದರೆ ವಾರಗಳ ಹಬ್ಬದಲ್ಲಿ ನೀವು ಹೊಸದಾಗಿ ಬೆಳೆದ ಗೋಧಿಯನ್ನು ಯೆಹೋವನಿಗೆ ಅರ್ಪಿಸುವಾಗ, ದೇವರನ್ನು ಆರಾಧಿಸಲು ನೀವು ಸಭೆ ಸೇರಬೇಕು. ನೀವು ಯಾವ ಪ್ರಯಾಸದ ಕೆಲಸವನ್ನೂ ಮಾಡಬಾರದು.
27 ಆ ದಿನದಲ್ಲಿ ಎರಡು ಹೋರಿಗಳನ್ನು, ಒಂದು ಟಗರನ್ನು ಮತ್ತು ಒಂದು ವರ್ಷದ ಏಳು ಗಂಡು ಕುರಿಮರಿಗಳನ್ನು ಯೆಹೋವನಿಗೆ ಸುಗಂಧ ವಾಸನೆಯಾಗಿರುವ ಸರ್ವಾಂಗಹೋಮವಾಗಿ ಅರ್ಪಿಸಬೇಕು.
28 ಇವುಗಳೊಂದಿಗೆ ಧಾನ್ಯಸಮರ್ಪಣೆಗಾಗಿ ಎಣ್ಣೆ ಬೆರೆಸಿದ ಗೋಧಿಹಿಟ್ಟನ್ನು ಪ್ರತಿಯೊಂದು ಹೋರಿಗೆ ಒಂಭತ್ತು ಸೇರು,
29 ಟಗರಿಗೆ ಆರು ಸೇರು ಮತ್ತು ಪ್ರತಿಯೊಂದು ಕುರಿಗೆ ಮೂರು ಸೇರು ಈ ಮೇರೆಗೆ ಸಮರ್ಪಿಸಬೇಕು.
30 ನಿಮಗೋಸ್ಕರ ಪ್ರಾಯಶ್ಚಿತ್ತ ಮಾಡಲು ಒಂದು ಹೋತವನ್ನೂ ಪಾಪಪರಿಹಾರಕ ಯಜ್ಞವಾಗಿ ಅರ್ಪಿಸಬೇಕು.
31 ಈ ಪಶುಗಳೆಲ್ಲಾ ಪೂರ್ಣಾಂಗವಾದವುಗಳಾಗಿರಬೇಕು. ಕ್ರಮಾನುಸಾರವಾದ ಸರ್ವಾಂಗಹೋಮ ಮತ್ತು ಅದರ ಧಾನ್ಯಾರ್ಪಣೆಗಳಲ್ಲದೆ ಈ ಯಜ್ಞಗಳನ್ನು ಮತ್ತು ಅವುಗಳೊಡನೆ ಪಾನದ್ರವ್ಯಾರ್ಪಣೆಗಳನ್ನು ಅರ್ಪಿಸಬೇಕು. ನೀವು ಸಮರ್ಪಿಸುವ ಪಶುಗಳಲ್ಲಿಯೂ ಅಥವಾ ಪಾನದ್ರವ್ಯಸಮರ್ಪಣೆಗಳಲ್ಲಿಯೂ ಯಾವ ದೋಷವೂ ಇರಬಾರದು.
×

Alert

×