ನೀವು ಎರಡನೆ ಕುರಿಮರಿಯನ್ನು ನಸುಸಂಜೆಯಲ್ಲಿ ಅರ್ಪಿಸುವಾಗ, ಮುಂಜಾನೆಯಲ್ಲಿ ಅರ್ಪಿಸಿದಂತೆಯೇ ಅದರೊಡನೆ ಸಮರ್ಪಕವಾದ ಧಾನ್ಯಾರ್ಪಣೆಯನ್ನು ಮತ್ತು ಪಾನದ್ರವ್ಯಾರ್ಪಣೆಯನ್ನು ಮಾಡಬೇಕು. ಇದು ಯೆಹೋವನಿಗೆ ತ್ಯಾಗಮಯವಾದ ಅರ್ಪಣೆಯಾಗಿದ್ದು ಸುಗಂಧ ವಾಸನೆಯನ್ನು ಉಂಟುಮಾಡುವುದು.
(9-10) “ಸಬ್ಬತ್ದಿನದಲ್ಲಿ ಎರಡು ಪೂರ್ಣಾಂಗವಾದ ಒಂದು ವರ್ಷದ ಗಂಡುಕುರಿಗಳನ್ನೂ ಧಾನ್ಯದ್ರವ್ಯಾರ್ಪಣೆಗಾಗಿ ಎಣ್ಣೆ ಬೆರೆಸಿದ ಆರು ಸೇರು ಗೋಧಿಹಿಟ್ಟನ್ನೂ ಅದಕ್ಕೆ ತಕ್ಕ ಪಾನದ್ರವ್ಯವನ್ನೂ ಸಮರ್ಪಿಸಬೇಕು. ಕ್ರಮವಾಗಿ ಅರ್ಪಿಸತಕ್ಕ ಸರ್ವಾಂಗಹೋಮ ಮತ್ತು ಅದರ ಪಾನದ್ರವ್ಯಾರ್ಪಣೆಗಳಲ್ಲದೆ, ಪ್ರತಿಸಬ್ಬತ್ ದಿನ ಸರ್ವಾಂಗಹೋಮವನ್ನು ಅರ್ಪಿಸಬೇಕು.
“ಪ್ರತಿ ತಿಂಗಳ ಮೊದಲನೆಯ ದಿನದಲ್ಲಿ, ನೀವು ಯೆಹೋವನಿಗೆ ಸರ್ವಾಂಗಹೋಮವನ್ನು ಅರ್ಪಿಸಬೇಕು: ಎರಡು ಹೋರಿಗಳು, ಒಂದು ಟಗರು ಮತ್ತು ಒಂದು ವರ್ಷದ ಏಳು ಕುರಿಮರಿಗಳು. ಇವುಗಳೆಲ್ಲಾ ಪೂರ್ಣಾಂಗವಾದವುಗಳಾಗಿರಬೇಕು.
ಇವುಗಳೊಡನೆ ಧಾನ್ಯನೈವೇದ್ಯಕ್ಕಾಗಿ ನೀವು ಪ್ರತಿಯೊಂದು ಹೋರಿಗೆ ಎಣ್ಣೆ ಬೆರೆಸಿದ ಉತ್ತಮವಾದ ಒಂಭತ್ತು ಸೇರು ಗೋಧಿಹಿಟ್ಟನ್ನು ಅರ್ಪಿಸಬೇಕು. ಪ್ರತಿಯೊಂದು ಟಗರಿಗೆ ಎಣ್ಣೆ ಬೆರೆಸಿದ ಉತ್ತಮವಾದ ಆರು ಸೇರು ಗೋಧಿಹಿಟ್ಟನ್ನು ಅರ್ಪಿಸಬೇಕು.
ಪ್ರತಿಯೊಂದು ಕುರಿಮರಿಗೆ ಎಣ್ಣೆ ಬೆರೆಸಿದ ಉತ್ತಮವಾದ ಮೂರು ಸೇರು ಗೋಧಿಹಿಟ್ಟನ್ನು ಅರ್ಪಿಸಬೇಕು. ಈ ಸರ್ವಾಂಗಹೋಮವು ಯೆಹೋವನಿಗೆ ಸುಗಂಧ ವಾಸನೆಯಾಗಿಯೂ ತ್ಯಾಗಮಯವಾದ ಕಾಣಿಕೆಯಾಗಿಯೂ ಇದೆ.
ಇವುಗಳಿಗೆ ತಕ್ಕ ಪಾನದ್ರವ್ಯಾರ್ಪಣೆಗಳನ್ನು ಮಾಡಬೇಕು. ಅವು ಯಾವುವೆಂದರೆ: ಒಂದು ಹೋರಿಯೊಡನೆ ಮೂರು ಸೇರು ದ್ರಾಕ್ಷಾರಸವನ್ನೂ ಟಗರಿನೊಡನೆ ಎರಡು ಸೇರು ದ್ರಾಕ್ಷಾರಸವನ್ನೂ ಕುರಿಮರಿಯೊಡನೆ ಒಂದೂವರೆ ಸೇರು ದ್ರಾಕ್ಷಾರಸವನ್ನೂ ಅರ್ಪಿಸಬೇಕು. ವರ್ಷದ ಪ್ರತಿತಿಂಗಳು ಅಮಾವಾಸ್ಯೆಯಲ್ಲಿ ಅರ್ಪಿಸತಕ್ಕ ಮಾಸಿಕ ಸರ್ವಾಂಗಹೋಮಗಳು ಇವುಗಳೇ.
“ಈ ಎಲ್ಲ ಅರ್ಪಣೆಗಳನ್ನು ಆ ಏಳು ದಿನಗಳಲ್ಲಿ ಪ್ರತಿಯೊಂದು ದಿನವೂ ಆಹಾರವಾಗಿಯೂ ತ್ಯಾಗಮಯವಾದ ಕಾಣಿಕೆಯಾಗಿಯೂ ಯೆಹೋವನಿಗೆ ಸುಗಂಧ ವಾಸನೆಯಾಗಿಯೂ ಅರ್ಪಿಸಬೇಕು. ಕ್ರಮಾನುಸಾರವಾದ ಸರ್ವಾಂಗಹೋಮ ಮತ್ತು ಅದರ ಪಾನದ್ರವ್ಯಾರ್ಪಣೆಗಳಲ್ಲದೆ ಇವುಗಳನ್ನೂ ಅರ್ಪಿಸಬೇಕು.
“ನಿಮ್ಮ ಪ್ರಥಮಫಲಗಳ ಹಬ್ಬದಲ್ಲಿ ಅಂದರೆ ವಾರಗಳ ಹಬ್ಬದಲ್ಲಿ ನೀವು ಹೊಸದಾಗಿ ಬೆಳೆದ ಗೋಧಿಯನ್ನು ಯೆಹೋವನಿಗೆ ಅರ್ಪಿಸುವಾಗ, ದೇವರನ್ನು ಆರಾಧಿಸಲು ನೀವು ಸಭೆ ಸೇರಬೇಕು. ನೀವು ಯಾವ ಪ್ರಯಾಸದ ಕೆಲಸವನ್ನೂ ಮಾಡಬಾರದು.
ಈ ಪಶುಗಳೆಲ್ಲಾ ಪೂರ್ಣಾಂಗವಾದವುಗಳಾಗಿರಬೇಕು. ಕ್ರಮಾನುಸಾರವಾದ ಸರ್ವಾಂಗಹೋಮ ಮತ್ತು ಅದರ ಧಾನ್ಯಾರ್ಪಣೆಗಳಲ್ಲದೆ ಈ ಯಜ್ಞಗಳನ್ನು ಮತ್ತು ಅವುಗಳೊಡನೆ ಪಾನದ್ರವ್ಯಾರ್ಪಣೆಗಳನ್ನು ಅರ್ಪಿಸಬೇಕು. ನೀವು ಸಮರ್ಪಿಸುವ ಪಶುಗಳಲ್ಲಿಯೂ ಅಥವಾ ಪಾನದ್ರವ್ಯಸಮರ್ಪಣೆಗಳಲ್ಲಿಯೂ ಯಾವ ದೋಷವೂ ಇರಬಾರದು.