ಆದರೆ ನಾದ್ವಾ್ ಮತ್ತು ಅಬೀಹೂ ಎಂಬಿಬ್ಬರು ಸೀನಾಯಿ ಮರುಭೂಮಿಯಲ್ಲಿ ಯೆಹೋವನಿಗೆ ಧೂಪವನ್ನು ಸಮರ್ಪಿಸುವಾಗ ಯೆಹೋವನು ಅಪ್ಪಣೆ ಕೊಡದೆ ಇದ್ದ ಬೆಂಕಿಯನ್ನು ಉಪಯೋಗಿಸಿದರು. ಆದ್ದರಿಂದ ನಾದ್ವಾ್ ಮತ್ತು ಅಬೀಹೂ ಅಲ್ಲಿ ಸತ್ತರು. ಅವರಿಗೆ ಗಂಡುಮಕ್ಕಳಿಲ್ಲದ್ದರಿಂದ ಎಲ್ಲಾಜಾರನು ಮತ್ತು ಈತಾಮಾರನು ಅವರ ತಂದೆಯಾದ ಆರೋನನ ಕೈಕೆಳಗೆ ಯೆಹೋವನ ಸೇವೆ ಮಾಡಿದರು.
ದೇವದರ್ಶನಗುಡಾರವು ಚಲಿಸುತ್ತಿರುವಾಗ ಲೇವಿಯರು ದೇವದರ್ಶನಗುಡಾರಕ್ಕೆ ಸಂಬಂಧಿಸಿದ ಭಾರವಾದ ಕೆಲಸಗಳನ್ನು ಮಾಡುವುದಲ್ಲದೆ, ದೇವದರ್ಶನ ಗುಡಾರದ ಎಲ್ಲಾ ಉಪಕರಣಗಳನ್ನು ಇಸ್ರೇಲರಿಗೋಸ್ಕರ ಕಾಯಬೇಕು.
“ಆರೋನನನ್ನೂ ಅವನ ಪುತ್ರರನ್ನೂ ಯಾಜಕರನ್ನಾಗಿ ನೇಮಿಸು. ಅವರು ತಮ್ಮತಮ್ಮ ಯಾಜಕ ಉದ್ಯೋಗವನ್ನು ಕಾಪಾಡಿಕೊಳ್ಳಬೇಕು. ಯಾಜಕರ ಕರ್ತವ್ಯಗಳನ್ನು ಮಾಡಲು ಪವಿತ್ರ ವಸ್ತುಗಳ ಬಳಿಗೆ ಬರಲು ಬೇರೆ ಯಾವನಾದರೂ ಪ್ರಯತ್ನಿಸಿದರೆ ಅವನು ಕೊಲ್ಲಲ್ಪಡಬೇಕು.”
“ಇಸ್ರೇಲಿನ ಪ್ರತಿ ಕುಟುಂಬವು ತನ್ನ ಚೊಚ್ಚಲ ಮಗನನ್ನು ನನಗೆ ಕೊಡಬೇಕೆಂದು ನಿನಗೆ ಹೇಳಿದ್ದೆ. ಆದರೆ ನನ್ನ ಸೇವೆಮಾಡುವುದಕ್ಕೆ ಈಗ ನಾನು ಲೇವಿಯರನ್ನು ಆರಿಸಿಕೊಂಡಿದ್ದೇನೆ. ಅವರು ನನ್ನವರಾಗಿರುವರು. ಆದ್ದರಿಂದ ಬೇರೆ ಎಲ್ಲಾ ಇಸ್ರೇಲರು ತಮ್ಮ ಚೊಚ್ಚಲು ಗಂಡುಮಕ್ಕಳನ್ನು ನನಗೆ ಕೊಡಬೇಕಾಗಿಲ್ಲ.
ನೀವು ಈಜಿಪ್ಟಿನಲ್ಲಿದ್ದಾಗ ನಾನು ಈಜಿಪ್ಟಿನವರ ಎಲ್ಲಾ ಚೊಚ್ಚಲು ಮಕ್ಕಳನ್ನು ಕೊಂದೆನು. ಆ ಕಾಲದಲ್ಲಿ ನಾನು ಇಸ್ರೇಲರ ಎಲ್ಲಾ ಚೊಚ್ಚಲು ಮಕ್ಕಳನ್ನು ನನ್ನವರನ್ನಾಗಿ ತೆಗೆದುಕೊಂಡೆನು. ಎಲ್ಲಾ ಚೊಚ್ಚಲು ಗಂಡುಮಕ್ಕಳು ಮತ್ತು ಚೊಚ್ಚಲು ಪಶುಗಳು ನನ್ನದಾಗಿದ್ದವು. ಆದರೆ ಈಗ ನಿಮ್ಮ ಎಲ್ಲಾ ಚೊಚ್ಚಲು ಗಂಡುಮಕ್ಕಳನ್ನು ನಿಮಗೇ ಹಿಂದಕ್ಕೆ ಕೊಡುತ್ತಿದ್ದೇನೆ ಮತ್ತು ಲೇವಿಯರನ್ನು ನನ್ನವರನ್ನಾಗಿ ಮಾಡುತ್ತಿದ್ದೇನೆ. ನಾನೇ ಯೆಹೋವನು!”
ದೇವದರ್ಶನಗುಡಾರದಲ್ಲಿ ಪವಿತ್ರ ಗುಡಾರವನ್ನು, ಹೊರಡೇರೆಯನ್ನು ಮತ್ತು ಅದರ ಮೇಲ್ಹೊದಿಕೆಯನ್ನು ನೋಡಿಕೊಳ್ಳವುದು ಗೇರ್ಷೋನ ವಂಶದವರ ಕೆಲಸವಾಗಿತ್ತು. ಇದಲ್ಲದೆ ಅವರು ಅಂಗಳದ ಪರದೆಯನ್ನೂ ನೋಡಿಕೊಳ್ಳುತ್ತಿದ್ದರು.
ಅವರು ಅಂಗಳದ ಪರದೆಗಳನ್ನೂ ಅಂಗಳದ ಪ್ರವೇಶದ್ವಾರದ ಪರದೆಯನ್ನೂ ನೋಡಿಕೊಳ್ಳಬೇಕು. ಈ ಅಂಗಳವು ಪವಿತ್ರ ಗುಡಾರದ ಮತ್ತು ವೇದಿಕೆಯ ಸುತ್ತಲೂ ಇತ್ತು. ಅವರು ಹಗ್ಗಗಳನ್ನೂ ಪರದೆಗಳೊಂದಿಗೆ ಉಪಯೋಗಿಸುವ ಪ್ರತಿಯೊಂದನ್ನೂ ನೋಡಿಕೊಂಡರು.
ಈ ಕುಲದಲ್ಲಿ ಒಂದು ತಿಂಗಳು ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳ 8,300 [*8,300 ಪುರಾತನ ಗ್ರೀಕ್ ಭಾಷಾಂತರದ ಕೆಲವು ಗ್ರೀಕ್ ಪ್ರತಿಗಳಲ್ಲಿ “8,300” ಎಂದು ಬರೆದಿದೆ. ಆದರೆ ಹೀಬ್ರೂ ಪ್ರತಿಗಳಲ್ಲಿ “8,600” ಎಂದು ಬರೆದಿದೆ.] ಗಂಡಸರು ಮತ್ತು ಗಂಡುಮಕ್ಕಳು ಇದ್ದರು. ಕೆಹಾತ್ಯರಿಗೆ ಪವಿತ್ರಸ್ಥಳದ ವಸ್ತುಗಳನ್ನು ನೋಡಿಕೊಳ್ಳುವ ಕೆಲಸ ಕೊಡಲ್ಪಟ್ಟಿತು.
ಅವರು ಪವಿತ್ರಪೆಟ್ಟಿಗೆ, ಮೇಜು, ದೀಪಸ್ತಂಭ, ವೇದಿಕೆಗಳನ್ನು ಮತ್ತು ಪವಿತ್ರಸ್ಥಳದ ಸಾಮಗ್ರಿಗಳನ್ನು, ಪರದೆಯನ್ನು ಮತ್ತು ಅವುಗಳಿಗೆ ಸಂಬಂಧಪಟ್ಟ ಎಲ್ಲಾ ಕಷ್ಟಕರವಾದ ಕೆಲಸಗಳನ್ನು ನೋಡಿಕೊಳ್ಳಬೇಕಾಗಿತ್ತು.
(33-34) ಮಹ್ಲೀ ಮತ್ತು ಮೂಷೀಯ ಗೋತ್ರಗಳವರು ಮೆರಾರೀಯ ಕುಲದವರಾಗಿದ್ದರು. ಮಹ್ಲೀಯ ಗೋತ್ರದಲ್ಲಿ ಒಂದು ತಿಂಗಳು ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳ 6,200 ಮಂದಿ ಗಂಡಸರು ಮತ್ತು ಗಂಡುಮಕ್ಕಳು ಇದ್ದರು.
ಮೆರಾರೀ ಕುಲದವರಿಗೆ ಪವಿತ್ರ ಗುಡಾರದ ಚೌಕಟ್ಟುಗಳನ್ನು ನೋಡಿಕೊಳ್ಳುವ ಕೆಲಸ ಕೊಡಲ್ಪಟ್ಟಿತು. ಅವರು ಎಲ್ಲಾ ಅಗುಳಿಗಳನ್ನು, ಕಂಬಗಳನ್ನು, ಗದ್ದಿಗೇಕಲ್ಲುಗಳನ್ನು, ಅದರ ಎಲ್ಲ ಉಪಕರಣಗಳನ್ನು ಮತ್ತು ಅವುಗಳಿಗೆ ಸಂಬಂಧಪಟ್ಟ ಕಷ್ಟಕರವಾದ ಎಲ್ಲಾ ಕೆಲಸವನ್ನು ನೋಡಿಕೊಳ್ಳಬೇಕಾಗಿತ್ತು.
ಮೋಶೆ, ಆರೋನ ಮತ್ತು ಆರೋನನ ಪುತ್ರರು ದೇವದರ್ಶನಗುಡಾರದ ಮುಂದೆ ಪವಿತ್ರ ಗುಡಾರದ ಪೂರ್ವ ದಿಕ್ಕಿನಲ್ಲಿ ಪಾಳೆಯಮಾಡಿಕೊಂಡರು. ಪವಿತ್ರಸ್ಥಳವನ್ನು ನೋಡಿಕೊಳ್ಳುವ ಕೆಲಸ ಅವರಿಗೆ ಕೊಡಲ್ಪಟ್ಟಿತು. ಅವರು ಇಸ್ರೇಲರೆಲ್ಲರಿಗೋಸ್ಕರ ಇದನ್ನು ಮಾಡಿದರು. ಇವರ ಕರ್ತವ್ಯಗಳನ್ನು ಬೇರೆ ಯಾವನಾದರೂ ಮಾಡಲು ಪ್ರಯತ್ನಿಸಿದರೆ ಅವನು ಕೊಲ್ಲಲ್ಪಡಬೇಕು.
ಆ ಲೇವಿಯರಲ್ಲಿದ್ದ ಒಂದು ತಿಂಗಳು ಮೊದಲುಗೊಂಡು ಹೆಚ್ಚು ವಯಸ್ಸುಳ್ಳ ಎಲ್ಲಾ ಗಂಡಸರನ್ನು ಮತ್ತು ಗಂಡುಮಕ್ಕಳನ್ನು ಅವರ ಗೋತ್ರಗಳಿಗನುಸಾರವಾಗಿ ಲೆಕ್ಕಿಸಬೇಕೆಂದು ಯೆಹೋವನು ಮೋಶೆ ಆರೋನರಿಗೆ ಆಜ್ಞಾಪಿಸಿದನು. ಅವರ ಒಟ್ಟು ಸಂಖ್ಯೆ 22,000.
ನಾನು ಈಗ ಇಸ್ರೇಲಿನ ಚೊಚ್ಚಲು ಗಂಡಸರನ್ನು ತೆಗೆದುಕೊಳ್ಳುವುದಿಲ್ಲ. ಯೆಹೋವನಾದ ನಾನು ಲೇವಿಯರನ್ನು ತೆಗೆದುಕೊಳ್ಳುವೆನು. ಮಾತ್ರವಲ್ಲದೆ ಇಸ್ರೇಲಿನಲ್ಲಿ ಇತರ ಜನರ ಚೊಚ್ಚಲು ಪ್ರಾಣಿಗಳ ಬದಲು, ಲೇವಿಯರ ಎಲ್ಲಾ ಚೊಚ್ಚಲು ಪ್ರಾಣಿಗಳನ್ನು ತೆಗೆದುಕೊಳ್ಳುವೆನು” ಎಂದು ಹೇಳಿದನು.
“ದೇವರಾದ ನಾನು ಈ ಆಜ್ಞೆಯನ್ನು ಕೊಡುತ್ತೇನೆ: ‘ಇಸ್ರೇಲಿನ ಇತರ ಕುಟುಂಬಗಳಿಂದ ಚೊಚ್ಚಲು ಗಂಡಸರನ್ನು ತೆಗೆದುಕೊಳ್ಳುವ ಬದಲು ಲೇವಿಯರನ್ನೇ ತೆಗೆದುಕೊ. ಇಸ್ರೇಲರ ಚೊಚ್ಚಲು ಪಶುಗಳನ್ನು ತೆಗೆದುಕೊಳ್ಳುವ ಬದಲು ಲೇವಿಯರ ಪಶುಗಳನ್ನೇ ತೆಗೆದುಕೊ. ಲೇವಿಯರು ನನ್ನ ಸ್ವತ್ತಾಗಿದ್ದಾರೆ.
ಅಧಿಕೃತ ಅಳತೆಯನ್ನು ಉಪಯೋಗಿಸಿ ಪ್ರತಿಯೊಬ್ಬನಿಗೆ ಅಂದರೆ 273 ಮಂದಿಗೆ ಐದೈದು ಶೆಕೆಲ್ ಬೆಳ್ಳಿಯನ್ನು ಸಂಗ್ರಹಿಸು. (ಅಧಿಕೃತ ಅಳತೆಯಲ್ಲಿ ಒಂದು ಶೆಕೆಲ್ ಅಂದರೆ ಇಪ್ಪತ್ತು ಗೆರಾ.) ಇಸ್ರೇಲರಿಂದ ಈ ಬೆಳ್ಳಿಯನ್ನು ಸಂಗ್ರಹಿಸು.