ಆಗ ಮೋಶೆ ಇಸ್ರೇಲರಿಗೆ, “ಮಿದ್ಯಾನ್ಯರು ಯೆಹೋವನಿಗೆ ವಿರೋಧವಾಗಿ ಮಾಡಿದ ಕೃತ್ಯಗಳಿಗಾಗಿ ಅವರ ಮೇಲೆ ಆಕ್ರಮಣ ಮಾಡಿ ದಂಡಿಸಲು ನಿಮ್ಮಲ್ಲಿರುವ ಗಂಡಸರಲ್ಲಿ ಕೆಲವರನ್ನು ದಂಡೆಯಾತ್ರೆಗೆ ಆರಿಸಿಕೊಳ್ಳಬೇಕು.
ಮೋಶೆಯು ಅವರನ್ನು ಯುದ್ಧಕ್ಕೆ ಕಳುಹಿಸಿದನು. ಅವರ ಸಂಗಡ ಎಲ್ಲಾಜಾರನ ಮಗನಾದ ಫೀನೆಹಾಸನನ್ನೂ ಕಳುಹಿಸಿದನು. ಫೀನೆಹಾಸನು ಪವಿತ್ರವಸ್ತುಗಳನ್ನು ತೆಗೆದುಕೊಂಡನು ಮತ್ತು ಸೂಚನೆ ಕೊಡುವುದಕ್ಕಾಗಿ ತುತ್ತೂರಿಗಳನ್ನು ತೆಗೆದುಕೊಂಡನು.
ತಾವು ಸೆರೆಹಿಡಿದವರನ್ನೂ ಪಶುಗಳನ್ನೂ ಆಸ್ತಿಯನ್ನೂ ತೆಗೆದುಕೊಂಡು ಜೆರಿಕೊ ಪಟ್ಟಣದ ಆಚೆ ಜೋರ್ಡನ್ ಹೊಳೆಯ ತೀರದಲ್ಲಿ ಮೋವಾಬ್ಯರ ಬಯಲಿನಲ್ಲಿದ್ದ ಪಾಳೆಯಕ್ಕೆ ಅಂದರೆ ಮೋಶೆ, ಯಾಜಕನಾದ ಎಲ್ಲಾಜಾರ್ ಮತ್ತು ಇಸ್ರೇಲರ ಸರ್ವಸಮೂಹದವರು ಇದ್ದಲ್ಲಿಗೆ ಬಂದರು.
ಬಿಳಾಮನ ಸಲಹೆಯನ್ನು ಅನುಸರಿಸಿ, ಯೆಹೋವನಿಗೆ ವಿರೋಧವಾಗಿ ಇಸ್ರೇಲರು ಪಾಪಮಾಡುವಂತೆ ಮಾಡಿ ಪೆಗೋರದ ಬಾಳನ ಸಂಗತಿಗೆ ಕಾರಣರಾದವರು ಇವರೇ ಅಲ್ಲವೇ? ಅದರ ಫಲವಾಗಿ ಭಯಂಕರವಾದ ಕಾಯಿಲೆಯು ಜನರಿಗೆ ಬಂದಿತು.
ನೀವಾದರೋ ಏಳು ದಿನಗಳವರೆಗೂ ಪಾಳೆಯದ ಹೊರಗೆ ಇರಬೇಕು. ಮನುಷ್ಯರನ್ನು ಕೊಂದವರೂ ಶವಸೋಂಕಿದವರೂ ನಿಮ್ಮವರಾಗಿರಲಿ ಸೆರೆಯವರಾಗಿರಲಿ ಮೂರನೆಯ ಮತ್ತು ಏಳನೆಯ ದಿನದಲ್ಲಿ ನಿಮ್ಮನ್ನು ಶುದ್ಧೀಕರಿಸಿಕೊಳ್ಳಬೇಕು.
(22-23) ಬೆಂಕಿಯನ್ನು ಸಹಿಸಬಲ್ಲ ಚಿನ್ನ, ಬೆಳ್ಳಿ, ತಾಮ್ರ, ಕಬ್ಬಿಣ, ತವರ, ಸೀಸ ಮೊದಲಾದವುಗಳನ್ನು ಬೆಂಕಿಯಲ್ಲಿ ಹಾಯಿಸಿ ಶುದ್ಧಮಾಡಬೇಕು. ಬಳಿಕ ಶುದ್ಧೀಕರಣದ ನೀರಿನಿಂದ ಅವುಗಳನ್ನು ಶುದ್ಧೀಕರಿಸಬೇಕು. ಬೆಂಕಿಯನ್ನು ಸಹಿಸಲಾರದ ವಸ್ತುಗಳನ್ನು ನೀರಿನಿಂದ ಮಾತ್ರ ತೊಳೆಯಬೇಕು.
ಮಿಕ್ಕ ಇಸ್ರೇಲರಿಗೆ ಬರುವ ಭಾಗದಿಂದ ಮನುಷ್ಯರನ್ನು, ದನಕರುಗಳನ್ನು, ಕತ್ತೆಗಳನ್ನು, ಕುರಿಗಳನ್ನು ಐವತ್ತರಲ್ಲಿ ಒಂದರ ಮೇರೆಗೆ ತೆಗೆದುಕೊಳ್ಳಬೇಕು. ಅದನ್ನು ಯೆಹೋವನ ಪವಿತ್ರ ಗುಡಾರವನ್ನು ನೋಡಿಕೊಳ್ಳುವ ಲೇವಿಯರಿಗೆ ಕೊಡಬೇಕು” ಎಂದು ಆಜ್ಞಾಪಿಸಿದನು.
ಇಸ್ರೇಲ್ ಜನರಿಗೆ ದೊರಕಿದ ಅರ್ಧ ಭಾಗದಿಂದ ಮನುಷ್ಯರಲ್ಲಿಯೂ ಪಶುಗಳಲ್ಲಿಯೂ ಮೋಶೆ ಐವತ್ತನೆ ಒಂದು ಭಾಗವನ್ನು ತೆಗೆದುಕೊಂಡು ಯೆಹೋವನ ಪವಿತ್ರಗುಡಾರವನ್ನು ನೋಡಿಕೊಳ್ಳುತ್ತಿದ್ದ ಲೇವಿಯರಿಗೆ ಕೊಟ್ಟನು.
ಆದಕಾರಣ ಯೆಹೋವನು ಕಾಪಾಡಿದ ನಮ್ಮ ಪ್ರಾಣಗಳಿಗೆ ಈಡಾಗಿ ಆತನಿಗೋಸ್ಕರ ಕಾಣಿಕೆಯಾಗಿ ನಮ್ಮಲ್ಲಿ ಒಬ್ಬೊಬ್ಬನು ತನಗೆ ಸಿಕ್ಕಿದ ಚಿನ್ನದ ಒಡವೆಗಳನ್ನು ಅಂದರೆ ತೋಳ್ಬಳೆ, ಕಡಗ, ಮುದ್ರೆಯುಂಗುರ, ಮುರುವು, ಕಂಠಮಾಲೆ ಮುಂತಾದವುಗಳನ್ನು ನಮ್ಮ ಶುದ್ಧೀಕರಣಕ್ಕಾಗಿ ಯೆಹೋವನಿಗೆ ತಂದಿದ್ದೇವೆ” ಅಂದರು.
ಸಹಸ್ರಾಧಿಪತಿಗಳೂ ಶತಾಧಿಪತಿಗಳೂ ಕೊಟ್ಟ ಚಿನ್ನವನ್ನು ಮೋಶೆಯೂ ಯಾಜಕನಾದ ಎಲ್ಲಾಜಾರನೂ ತೆಗೆದುಕೊಂಡು ದೇವದರ್ಶನಗುಡಾರದಲ್ಲಿ ಇಟ್ಟರು. ಇಸ್ರೇಲರ ವಿಷಯದಲ್ಲಿ ಜ್ಞಾಪಕಾರ್ಥವಾಗಿ ಇದು ಯೆಹೋವನ ಸನ್ನಿಧಿಯಲ್ಲಿ ಇಡಲ್ಪಟ್ಟಿತು.