(3-4) “ಯೆಹೋವನು ಇಸ್ರೇಲರಿಗೆ ಅಧೀನಪಡಿಸಿದ ಈ ಪ್ರದೇಶವು ಅಂದರೆ, ಅಟಾರೋತ್, ದೀಬೋನ್, ಯಗ್ಜೇರ್, ನಿಮ್ರಾ, ಹೆಷ್ಬೋನ್, ಎಲೆಯಾಲೆ, ಸೆಬಾಮ್, ನೆಬೋ, ಬೆಯೋನ್ ಎಂಬ ಪಟ್ಟಣಗಳ ಪ್ರದೇಶವು ಪಶುಗಳ ಮೇವಿಗೆ ಒಳ್ಳೆಯ ಸ್ಥಳವಾಗಿದೆ. ನಿಮ್ಮ ದಾಸರಾದ ನಮಗೆ ಬಹಳ ಪಶುಗಳು ಇವೆ.
(11-12) ‘ಈಜಿಪ್ಟಿನಿಂದ ಬಂದ ಈ ಜನರಲ್ಲಿ ಮತ್ತು ಇಪ್ಪತ್ತು ವರ್ಷ ಮೊದಲುಗೊಂಡು ಅದಕ್ಕಿಂತ ಹೆಚ್ಚು ವಯಸ್ಸಾದ ನಿಮ್ಮವರೆಲ್ಲಾ ಕೆನಿಜ್ಜೀಯನಾದ ಯೆಫುನ್ನೆಯ ಮಗ ಕಾಲೇಬನ ಮತ್ತು ನೂನನ ಮಗನಾದ ಯೆಹೋಶುವನ ಹೊರತು ಯಾರೂ ನನ್ನನ್ನು ನಿಜವಾಗಿಯೂ ಅನುಸರಿಸದೆ ಹೋದದ್ದರಿಂದ, ನಾನು ಅಬ್ರಹಾಮ್, ಇಸಾಕ್, ಯಾಕೋಬರಿಗೆ ಪ್ರಮಾಣಪೂರ್ವಕವಾಗಿ ಕೊಟ್ಟ ದೇಶವನ್ನು ಅವರಿಬ್ಬರೇ ಹೊರತು ಬೇರೆ ಯಾರೂ ನೋಡುವುದೇ ಇಲ್ಲ’ ಎಂದು ಖಂಡಿತವಾಗಿ ಹೇಳಿದನು.
ಬಳಿಕ ಇಸ್ರೇಲರನ್ನು ಅವರವರ ಸ್ಥಳಗಳಿಗೆ ಸೇರಿಸುವವರೆಗೆ ನಾವು ಅವರ ಮುಂದೆ ಹೋಗುವ ಸೈನಿಕರಾಗಿ ಹೊರಡುವೆವು ಅಲ್ಲದೆ ನಮ್ಮ ಸ್ತ್ರೀಯರು ಮತ್ತು ಮಕ್ಕಳು ಈ ದೇಶದ ಇತರ ನಿವಾಸಿಗಳಿಂದ ತೊಂದರೆಗೊಳಗಾಗದೆ ಕೋಟೆಗಳುಳ್ಳ ಊರುಗಳಲ್ಲಿ ಸುರಕ್ಷಿತವಾಗಿರುವರು.
(20-22) ಅದಕ್ಕೆ ಮೋಶೆ, “ನೀವು ನಿಮ್ಮ ಮಾತಿನಂತೆ ಯೆಹೋವನ ಮುಂದೆ ಸನ್ನದ್ಧರಾದ ಸೈನಿಕರಾಗಿ ಯುದ್ಧಕ್ಕೆ ಹೋಗುವುದಾದರೆ, ಯೆಹೋವನು ತನ್ನ ವೈರಿಗಳನ್ನು ಓಡಿಸುವ ತನಕ ಮತ್ತು ಆ ದೇಶವನ್ನು ಗೆದ್ದುಕೊಳ್ಳುವ ತನಕ ಪ್ರತಿಯೊಬ್ಬ ಪ್ರವೀಣ ಸೈನಿಕನು ಯೆಹೋವನ ಮುಂದೆ ಜೋರ್ಡನ್ ನದಿಯನ್ನು ದಾಟುವುದಾದರೆ, ಆ ಬಳಿಕ ನೀವು ನಿಮ್ಮ ಮನೆಗಳಿಗೆ ಹಿಂತಿರುಗಬಹುದು ಮತ್ತು ನೀವು ಯೆಹೋವನ ದೃಷ್ಟಿಯಲ್ಲಿಯೂ ಇಸ್ರೇಲರ ದೃಷ್ಟಿಯಲ್ಲಿಯೂ ನಿಮ್ಮ ಕರ್ತವ್ಯವನ್ನು ಮಾಡಿದವರಾಗಿರುವಿರಿ.
ಆದರೆ ನೀವು ಈ ಸಂಗತಿಗಳನ್ನು ಮಾಡದಿದ್ದರೆ, ಯೆಹೋವನಿಗೆ ವಿರೋಧವಾಗಿ ಪಾಪ ಮಾಡಿದವರಾಗಿರುವಿರಿ. ಮತ್ತು ನಿಮ್ಮ ಪಾಪವು ನಿಮ್ಮನ್ನು ಹಿಡಿಯುವ ತನಕ ಹುಡುಕಿಕೊಂಡೇ ಬರುವುದು ಎಂದು ಖಚಿತವಾಗಿ ತಿಳಿದುಕೊಳ್ಳಿರಿ.
ಮೋಶೆ ಅವರಿಗೆ, “ಗಾದ್ ಮತ್ತು ರೂಬೇನ್ ಕುಲಗಳಿಂದ ಯುದ್ಧಕ್ಕಾಗಿ ಆರಿಸಲ್ಪಟ್ಟವರು ಜೋರ್ಡನ್ ನದಿಯನ್ನು ಯೆಹೋವನ ಮುಂದೆ ದಾಟಿ ಆ ದೇಶವನ್ನು ಗೆದ್ದುಕೊಂಡರೆ, ನೀವು ಅವರಿಗೆ ಗಿಲ್ಯಾದ್ ಪ್ರಾಂತ್ಯವನ್ನು ಸ್ವಾಸ್ತ್ಯವಾಗಿ ಕೊಡಬೇಕು.
ಆಗ ಮೋಶೆಯು ಗಾದ್ ಮತ್ತು ರೂಬೇನ್ ಕುಲಗಳವರಿಗೆ ಮತ್ತು ಯೋಸೇಫನ ಮಗನಾದ ಮನಸ್ಸೆಯ ಅರ್ಧಕುಲದವರಿಗೆ ಅಮೋರಿಯರ ರಾಜನಾದ ಸೀಹೋನನ ರಾಜ್ಯವನ್ನೂ ಬಾಷಾನಿನ ರಾಜನಾದ ಓಗನ ರಾಜ್ಯವನ್ನೂ ಅವುಗಳ ಎಲ್ಲಾ ಊರುಗಳನ್ನೂ ಆ ಊರುಗಳಿಗೆ ಸೇರಿದ ಭೂಮಿಗಳನ್ನೂ ಕೊಟ್ಟನು.
(37-38) ರೂಬೇನ್ ಕುಲದವರು ಹೆಷ್ಬೋನ್, ಎಲೆಯಾಲೆ, ಕಿರ್ಯಾತಯಿಮ್, ನೆಬೋ, ಬಾಳ್ಮೆಯೋನ್ ಮತ್ತು ಸಿಬ್ಮಾ ಎಂಬ ಊರುಗಳನ್ನು ಕೋಟೆ ಸಮೇತವಾಗಿ ಕಟ್ಟಿದರು; ಅಲ್ಲದೆ ತಮ್ಮ ಪಶುಗಳಿಗಾಗಿ ದೊಡ್ಡಿಯನ್ನು ಕಟ್ಟಿದರು. ಅವರು ತಾವು ಮತ್ತೆ ಕಟ್ಟಿದ ಊರುಗಳಿಗೆ ಅವುಗಳ ಮೊದಲಿನ ಹೆಸರುಗಳನ್ನು ಕೊಟ್ಟರು; ಆದರೆ ನೆಬೋ ಮತ್ತು ಬಾಳ್ಮೆಯೋನ್ಗಳ ಹೆಸರುಗಳನ್ನು ಬದಲಾಯಿಸಿದರು.