ಪಟ್ಟಣದ ಹೊರಗೆ ಪ್ರತಿಯೊಂದು ದಿಕ್ಕಿನಲ್ಲಿ ಎರಡು ಸಾವಿರ ಮೊಳಗಳನ್ನು ಅಳೆದು ಪಟ್ಟಣಕ್ಕೆ ಗಡಿಯನ್ನು ಗೊತ್ತುಪಡಿಸಬೇಕು; ಪೂರ್ವದಿಕ್ಕಿನಲ್ಲಿ ಎರಡು ಸಾವಿರ ಮೊಳಗಳು; ದಕ್ಷಿಣದಿಕ್ಕಿನಲ್ಲಿ ಎರಡು ಸಾವಿರ ಮೊಳಗಳು; ಪಶ್ಚಿಮದಿಕ್ಕಿನಲ್ಲಿ ಎರಡು ಸಾವಿರ ಮೊಳಗಳು ಮತ್ತು ಉತ್ತರದಿಕ್ಕಿನಲ್ಲಿ ಎರಡು ಸಾವಿರ ಮೊಳಗಳು. ಇವುಗಳ ಮಧ್ಯದಲ್ಲಿ ಪಟ್ಟಣವಿರಬೇಕು. ಅದು ಅವರ ಪಟ್ಟಣಗಳಿಗೆ ಹುಲ್ಲುಗಾವಲುಗಳಾಗಿರುವುದು.
ನೀವು ಲೇವಿಯರಿಗೆ ಕೊಡುವ ಆರು ಪಟ್ಟಣಗಳು ಆಶ್ರಯ ನಗರಗಳಾಗಿರುತ್ತವೆ. ಬೇರೊಬ್ಬನನ್ನು ಕೊಂದು ಸಂರಕ್ಷಣೆಗಾಗಿ ಓಡಿಹೋಗುವವರು ಈ ಪಟ್ಟಣಗಳಿಗೆ ಬಂದು ಸಂರಕ್ಷಣೆ ಪಡೆಯಲು ನೀವು ಅವಕಾಶ ಕೊಡಬೇಕು. ಇದಲ್ಲದೆ ಇತರ ನಲವತ್ತೆರಡು ಪಟ್ಟಣಗಳನ್ನು ನೀವು ಲೇವಿಯರಿಗೆ ಕೊಡಬೇಕು.
ನೀವು ಇತರ ಇಸ್ರೇಲರ ಆಸ್ತಿಯಿಂದ ಲೇವಿಯರಿಗೆ ಪಟ್ಟಣಗಳನ್ನು ಕೊಡುವಾಗ, ಪ್ರತಿಯೊಂದು ಕುಲವು ಹೊಂದಿರುವ ಭೂಮಿಗನುಸಾರವಾಗಿ ಕೊಡಬೇಕು. ದೊಡ್ಡಕುಲಗಳಿಂದ ಹೆಚ್ಚು ಪಟ್ಟಣಗಳನ್ನೂ ಚಿಕ್ಕಕುಲಗಳಿಂದ ಕೆಲವು ಪಟ್ಟಣಗಳನ್ನೂ ತೆಗೆದುಕೊಳ್ಳಿ.”
ಕೊಂದವನು ನ್ಯಾಯ ವಿಚಾರಣಾಸಭೆಯ ಮುಂದೆ ನಿಂತುಕೊಳ್ಳುವುದಕ್ಕಿಂತ ಮೊದಲೇ ಕೊಲ್ಲಲ್ಪಟ್ಟವನ ಸಂಬಂಧಿಕನಿಂದ ಕೊಲ್ಲಲ್ಪಡದೆ ಸುರಕ್ಷಿತನಾಗಿರಲು ಆ ಆಶ್ರಯ ಸ್ಥಳಗಳು ನಿಮ್ಮ ಮಧ್ಯದಲ್ಲಿ ಇರಲೇಬೇಕು.
ಯಾವನಾದರೂ ಮನುಷ್ಯನನ್ನು ಕೊಲ್ಲುವಷ್ಟು ದೊಡ್ಡ ಮರದ ವಸ್ತುವನ್ನು ಕೈಯಲ್ಲಿ ಹಿಡಿದು ಮತ್ತೊಬ್ಬನನ್ನು ಹೊಡೆದು ಕೊಂದರೆ, ಅವನು ಕೊಲೆಗಾರ. ಅವನಿಗೆ ಮರಣಶಿಕ್ಷೆಯಾಗಬೇಕು. ಲೇವಿಯರ ಪಟ್ಟಣಗಳು
ಕೊಂದವನು ಓಡಿಹೋಗಿದ್ದ ಆಶ್ರಯ ನಗರಕ್ಕೆ ಸಭೆಯವರು ಅವನನ್ನು ಮತ್ತೆ ಕರೆದುಕೊಂಡು ಹೋಗಿ ಕೊಲ್ಲಲ್ಪಟ್ಟವನ ಸಮೀಪಬಂಧುವಿನಿಂದ ರಕ್ಷಿಸಬೇಕು. ಅಭಿಷೇಕ ಹೊಂದಿದ ಮಹಾಯಾಜಕನು ಜೀವದಿಂದಿರುವ ತನಕ ಅವನು ಆ ಪಟ್ಟಣದಲ್ಲೇ ವಾಸಿಸಬೇಕು.
(26-27) “ಆ ವ್ಯಕ್ತಿಯು ತನ್ನ ಆಶ್ರಯನಗರದ ಮೇರೆಯನ್ನು ಎಂದಿಗೂ ದಾಟಿ ಹೊರಗೆ ಹೋಗಬಾರದು. ಆ ಮೇರೆಗಳನ್ನು ದಾಟಿ ಹೊರಗೆ ಹೋದರೆ, ಹತವಾದವನ ಸಮೀಪಬಂಧುವು ಅವನನ್ನು ಕಂಡು ಕೊಂದುಹಾಕಿದರೆ, ಆಗ ಆ ಸಮೀಪ ಬಂಧುವು ನರಹತ್ಯ ಮಾಡಿದ ದೋಷಿಯಾಗುವುದಿಲ್ಲ.