Indian Language Bible Word Collections
Proverbs 2:15
Proverbs Chapters
Proverbs 2 Verses
Books
Old Testament
New Testament
Bible Versions
English
Tamil
Hebrew
Greek
Malayalam
Hindi
Telugu
Kannada
Gujarati
Punjabi
Urdu
Bengali
Oriya
Marathi
Books
Old Testament
New Testament
Proverbs Chapters
Proverbs 2 Verses
1
|
ನನ್ನ ಮಗನೇ, ನಾನು ಹೇಳುವ ಈ ಮಾತುಗಳನ್ನು ಸ್ವೀಕಾರಮಾಡಿಕೋ. ನನ್ನ ಆಜ್ಞೆಗಳನ್ನು ನೆನಪು ಮಾಡಿಕೋ. |
2
|
ಜ್ಞಾನಕ್ಕೆ ಕಿವಿಗೊಡು; ಅದನ್ನು ಅರ್ಥಮಾಡಿಕೊಳ್ಳಲು ನಿನ್ನಿಂದಾದಷ್ಟು ಪ್ರಯತ್ನಿಸು. |
3
|
ಬುದ್ಧಿಗಾಗಿ ಮೊರೆಯಿಡು! ವಿವೇಕಕ್ಕಾಗಿ ಕೂಗಿಕೊ! |
4
|
ಬೆಳ್ಳಿಯನ್ನು ಹುಡುಕುವಂತೆ ವಿವೇಕವನ್ನು ಹುಡುಕು. ಅಡಗಿರುವ ಭಂಡಾರದಂತೆ ಅದನ್ನು ಹುಡುಕು. |
5
|
ಆಗ ನೀನು ಯೆಹೋವನಲ್ಲಿ ಭಯಭಕ್ತಿಯಿಂದಿರಲು ಕಲಿತುಕೊಳ್ಳುವೆ; ದೈವಜ್ಞಾನವನ್ನು ಹೊಂದಿಕೊಳ್ಳುವೆ. |
6
|
ಜ್ಞಾನವನ್ನು ಕೊಡುವಾತನು ಯೆಹೋವನೇ. ವಿವೇಕ ಮತ್ತು ತಿಳುವಳಿಕೆ ಆತನ ಬಾಯಿಂದ ಬರುತ್ತವೆ. |
7
|
ಆತನು ನೀತಿವಂತರಿಗಾಗಿ ಸುಜ್ಞಾನವನ್ನು ಕೂಡಿಸಿಡುವನು; ನಿರ್ದೋಷಿಗಳಿಗೆ ಗುರಾಣಿಯಂತಿರುವನು. |
8
|
ಆತನು ನ್ಯಾಯವಂತರನ್ನು ಕಾಪಾಡುತ್ತಾನೆ; ತನ್ನ ಪವಿತ್ರ ಜನರಿಗೆ ಕಾವಲಾಗಿರುತ್ತಾನೆ. |
9
|
ಆಗ ನೀನು ಒಳ್ಳೆಯದನ್ನೂ ನ್ಯಾಯನೀತಿಗಳನ್ನೂ ಸನ್ಮಾರ್ಗಗಳನ್ನೂ ಅರ್ಥಮಾಡಿಕೊಳ್ಳುವೆ. |
10
|
ಆಗ ಜ್ಞಾನವು ನಿನ್ನ ಹೃದಯದ ಒಳಗೆ ಬರುವುದು; ನಿನ್ನ ಆತ್ಮವು ತಿಳುವಳಿಕೆಯೊಡನೆ ಸಂತೋಷವಾಗಿರುವುದು. |
11
|
ವಿವೇಕವು ನಿನ್ನನ್ನು ಕಾಪಾಡುವುದು; ಬುದ್ಧಿಯು ನಿನಗೆ ಕಾವಲಾಗಿರುವುದು; |
12
|
ಹೀಗೆ ನೀನು ದುರ್ಮಾರ್ಗಗಳಿಂದಲೂ ಸುಳ್ಳುಗಾರರಿಂದಲೂ ತಪ್ಪಿಸಿಕೊಳ್ಳುವೆ. |
13
|
ಅವರಾದರೊ ನೀತಿಮಾರ್ಗವನ್ನು ಬಿಟ್ಟು ಪಾಪವೆಂಬ ಕತ್ತಲೆಯಲ್ಲಿ ಜೀವಿಸುತ್ತಿದ್ದಾರೆ. |
14
|
ಅವರಿಗೆ ಕೆಟ್ಟದ್ದನ್ನು ಮಾಡುವುದರಲ್ಲೇ ಸಂತೋಷ; ಕೆಡುಕರ ಕೆಟ್ಟಕಾರ್ಯಗಳಲ್ಲೇ ಆನಂದ. |
15
|
ಅವರ ಮಾರ್ಗಗಳು ವಕ್ರವಾಗಿವೆ; ಅವರ ನಡತೆಗಳು ದುರ್ನಡತೆಗಳಾಗಿವೆ. |
16
|
ವ್ಯಭಿಚಾರಿಣಿಯು ನಿನ್ನೊಡನೆ ಸವಿಮಾತುಗಳನ್ನಾಡಿ ತನ್ನೊಡನೆ ಪಾಪ ಮಾಡುವಂತೆ ನಿನ್ನನ್ನು ಒತ್ತಾಯಿಸಬಹುದು. |
17
|
ಯೌವನಪ್ರಾಯದಲ್ಲಿ ಮದುವೆಮಾಡಿಕೊಂಡ ಅವಳು ತನ್ನ ಗಂಡನನ್ನು ಬಿಟ್ಟುಬಿಟ್ಟಿದ್ದಾಳೆ; ಮದುವೆಯಲ್ಲಿ ದೇವರ ಮುಂದೆ ಮಾಡಿದ ವಾಗ್ದಾನಗಳನ್ನು ಮೀರಿದ್ದಾಳೆ. |
18
|
ನೀನು ಅವಳ ಮನೆಯೊಳಗೆ ಹೋದರೆ, ನಾಶನದ ಕಡೆಗೆ ಮೊದಲನೆ ಹೆಜ್ಜೆ ಹಾಕುತ್ತಿರುವೆ. ನೀವು ಅವಳನ್ನು ಹಿಂಬಾಲಿಸಿದರೆ, ಅವಳು ನಿನ್ನನ್ನು ಸಮಾಧಿಗೆ ನಡೆಸುವಳು. |
19
|
ಅವಳು ಸಮಾಧಿಯಂತೆ ಇದ್ದಾಳೆ. ಅವಳ ಬಳಿಗೆ ಹೋಗುವವನು ಎಂದಿಗೂ ಹಿಂತಿರುಗಿ ಬರುವುದಿಲ್ಲ; ಅವನ ಜೀವನವು ಮೊದಲಿನಂತಿರುವುದಿಲ್ಲ. |
20
|
ಆದ್ದರಿಂದ ನೀನು ಒಳ್ಳೆಯವರ ಮಾದರಿಯನ್ನು ಅನುಸರಿಸಬೇಕು. ನೀತಿವಂತರ ಮಾರ್ಗದಲ್ಲಿ ಜೀವಿಸಬೇಕು. |
21
|
ಯಥಾರ್ಥವಂತರು ಸ್ವದೇಶದಲ್ಲಿ ವಾಸಿಸುವರು. ನಿರ್ದೋಷಿಗಳು ಸ್ವದೇಶದಲ್ಲಿ ನೆಲೆಸುವರು. |
22
|
ದುಷ್ಟರಾದರೊ ಸ್ವದೇಶದಿಂದ ತೆಗೆದುಹಾಕಲ್ಪಡುವರು; ದ್ರೋಹಿಗಳು ನಿರ್ಮೂಲವಾಗುವರು. |