English Bible Languages

Indian Language Bible Word Collections

Bible Versions

English

Tamil

Hebrew

Greek

Malayalam

Hindi

Telugu

Kannada

Gujarati

Punjabi

Urdu

Bengali

Oriya

Marathi

Assamese

Books

Proverbs Chapters

Proverbs 26 Verses

1 ಮೂಢನನ್ನು ಗೌರವಿಸುವುದು ಸರಿಯಲ್ಲ. ಅದು ಬೇಸಿಗೆಕಾಲದಲ್ಲಿ ಬೀಳುವ ಹಿಮದಂತೆಯೂ ಸುಗ್ಗೀಕಾಲದಲ್ಲಿ ಬೀಳುವ ಮಳೆಯಂತೆಯೂ ಇದೆ.
2 ಅಯೋಗ್ಯವಾದ ಶಾಪ ನಿರಪರಾಧಿಗೆ ತಟ್ಟುವುದಿಲ್ಲ. ಆ ಶಾಪದ ಮಾತುಗಳು ಹಾರಿಹೋಗಿ ಎಂದೂ ಕೆಳಗಿಳಿಯದ ಪಕ್ಷಿಗಳಂತಿವೆ.
3 ಕುದುರೆಗೆ ಚಬುಕಬೇಕು. ಹೇಸರಕತ್ತೆಗೆ ಕಡಿವಾಣಬೇಕು. ಮೂಢನಿಗೆ ಹೊಡೆತಬೇಕು.
4 ಮೂಢನಿಗೆ ಅವನ ಮೂರ್ಖತನದ ಮಟ್ಟದಲ್ಲಿ ಉತ್ತರ ಕೊಡಬೇಡ; ಇಲ್ಲವಾದರೆ ನೀನೂ ಅವನಂತಾಗುವೆ.
5 ಮೂಢನಿಗೆ ಅವನ ಮೂಢತನದ ಮಟ್ಟದಲ್ಲಿ ಉತ್ತರಿಸು; ಇಲ್ಲವಾದರೆ ಅವನು ತನ್ನನ್ನು ಜ್ಞಾನಿಯೆಂದು ಭಾವಿಸಿಕೊಳ್ಳುವನು.
6 ನಿನ್ನ ಸಂದೇಶವನ್ನು ಮೂಢನ ಮೂಲಕ ಎಂದಿಗೂ ಕಳುಹಿಸಿಕೊಡಬೇಡ. ಅದು ನಿನ್ನ ಸ್ವಂತ ಕಾಲನ್ನೇ ಕತ್ತರಿಸಿಕೊಂಡಂತಿರುವುದು; ನೀನೇ ಕೇಡಿಗಾಗಿ ಕೇಳಿಕೊಂಡಂತಾಗುವುದು.
7 ಮೂಢನು ಜ್ಞಾನದ ಮಾತನ್ನು ಹೇಳಲು ಮಾಡುವ ಪ್ರಯತ್ನವು, ಕುಂಟನು ನಡೆಯಲು ಮಾಡುವ ಪ್ರಯತ್ನದಂತಿದೆ.
8 ಮೂಢನಿಗೆ ತೋರುವ ಗೌರವ, ಕವಣೆಯಲ್ಲಿರುವ ಕಲ್ಲಿನಷ್ಟೇ ಕೆಟ್ಟದ್ದು.
9 ಮೂಢನು ಜ್ಞಾನೋಕ್ತಿಯನ್ನು ಬಳಸಲು ಮಾಡುವ ಪ್ರಯತ್ನವು ಕುಡುಕನೊಬ್ಬನು ಮುಳ್ಳುಕೊಂಬೆಯೊಂದನ್ನು ತನ್ನ ಕೈಯಲ್ಲಿ ಝಳಪಿಸುವಂತಿರುವುದು.
10 ಮೂಢನನ್ನಾಗಲಿ ಕುಡುಕನನ್ನಾಗಲಿ ಕೂಲಿಗೆ ನೇಮಿಸಿಕೊಳ್ಳುವವನು ಹಾದುಹೋಗುವವರಿಗೆಲ್ಲ ಗಾಯ ಮಾಡುವ ಬಿಲ್ಲುಗಾರನಂತಿರುವನು.
11 ನಾಯಿ ತಾನು ಕಕ್ಕಿದ್ದನ್ನೇ ನೆಕ್ಕಲು ಹಿಂತಿರುಗುವಂತೆ ಮೂಢನು ತನ್ನ ಮೂಢತನವನ್ನು ಪದೇಪದೇ ಮಾಡುವನು.
12 ಅಜ್ಞಾನಿಯು ತನ್ನನ್ನು ಜ್ಞಾನಿಯೆಂದು ಭಾವಿಸಿಕೊಂಡರೆ ಅವನು ಮೂಢನಿಗಿಂತಲೂ ಕೀಳಾದವನು.
13 “ನಾನು ನನ್ನ ಮನೆಯಿಂದ ಹೊರಗೆ ಹೋಗಲಾರೆ. ಬೀದಿಯಲ್ಲಿ ಸಿಂಹವಿದೆ” ಎನ್ನುತ್ತಾನೆ ಸೋಮಾರಿ.
14 ಬಾಗಿಲು ತಿರುಗುಣಿಯ ಮೇಲೆ ಸುತ್ತುವಂತೆ ಸೋಮಾರಿಯು ತನ್ನ ಹಾಸಿಗೆಯ ಮೇಲೆ ಹೊರಳಾಡುವನು.
15 ಸೋಮಾರಿಯು ತಟ್ಟೆಯಲ್ಲಿರುವ ಊಟವನ್ನು ತಿನ್ನುವುದಕ್ಕೂ ಬಹು ಆಯಾಸಪಡುವನು.
16 ತಮ್ಮ ಆಲೋಚನೆಗಳಿಗೆ ಒಳ್ಳೆಯ ಕಾರಣಗಳನ್ನು ಕೊಡುವ ಏಳು ಜನರಿಗಿಂತಲೂ ತಾನು ಜ್ಞಾನಿಯೆಂದು ಸೋಮಾರಿಯು ಭಾವಿಸುವನು.
17 ಬೇರೆಯವರ ವಾಗ್ವಾದದಲ್ಲಿ ಮಧ್ಯೆ ಪ್ರವೇಶಿಸಲು ಮಾಡುವ ಪ್ರಯತ್ನ ಹಾದಿಯಲ್ಲಿ ಹೋಗುತ್ತಿರುವ ನಾಯಿಯ ಕಿವಿಗಳನ್ನು ಹಿಡಿದುಕೊಳ್ಳುವಷ್ಟೇ ಅಪಾಯಕರ.
18 (18-19) ಮತ್ತೊಬ್ಬನನ್ನು ಮೋಸಗೊಳಿಸಿ ತಾನು ಕೇವಲ ತಮಾಷೆಮಾಡಿದ್ದಾಗಿ ಹೇಳುವವನು ಉರಿಯುವ ಬಾಣಗಳನ್ನು ಆಕಾಶದ ಕಡೆಗೆ ಎಸೆದು ಬೇರೊಬ್ಬನನ್ನು ಆಕಸ್ಮಿಕವಾಗಿ ಕೊಲ್ಲುವ ಹುಚ್ಚನಂತಿರುವನು.
20 ಸೌದೆ ಇಲ್ಲದಿದ್ದರೆ ಬೆಂಕಿಯು ಆರಿಹೋಗುವುದು. ಅಂತೆಯೇ ಹುರುಳಿಲ್ಲದ ವಾಗ್ವಾದ ನಿಂತುಹೋಗುವುದು.
21 ಕೆಂಡದಿಂದ ಕಲ್ಲಿದ್ದಲು ಉರಿಯುತ್ತದೆ; ಸೌದೆಯಿಂದ ಬೆಂಕಿ ಉರಿಯುತ್ತದೆ; ಅಂತೆಯೇ ಜಗಳಗಂಟರು ವಾಗ್ವಾದವನ್ನು ಮುಂದುವರಿಸುವರು.
22 ಹರಟೆಮಾತು ಜನರಿಗೆ ಪ್ರಿಯ. ಅವರಿಗೆ ಅದು ಒಳ್ಳೆಯ ಆಹಾರವನ್ನು ತಿಂದಂತಿರುವುದು.
23 ಕೆಟ್ಟ ಆಲೋಚನೆಯನ್ನು ಅಡಗಿಸಿಡುವ ಕನಿಕರದ ಮಾತುಗಳು ಕಡಿಮೆ ಬೆಲೆಯ ಮಡಿಕೆಯ ಮೇಲಿನ ಬೆಳ್ಳಿಯ ಲೇಪನದಂತಿವೆ.
24 ಕೆಡುಕನು ತಾನು ಹೇಳುವ ಸಂಗತಿಗಳ ಮೂಲಕ ತನ್ನನ್ನು ಒಳ್ಳೆಯವನನ್ನಾಗಿ ತೋರಿಸಿಕೊಳ್ಳುವನು. ಆದರೆ ಅವನು ತನ್ನ ಕೆಟ್ಟ ಆಲೋಚನೆಗಳನ್ನು ತನ್ನ ಹೃದಯದಲ್ಲಿ ಅಡಗಿಸಿಕೊಳ್ಳುವನು.
25 ಅವನು ಹೇಳುವ ಸಂಗತಿಗಳು ಒಳ್ಳೆಯದಾಗಿ ಕಂಡರೂ ಅವನನ್ನು ನಂಬಬೇಡಿ. ಅವನ ಹೃದಯವು ಕೆಟ್ಟ ಆಲೋಚನೆಗಳಿಂದ ತುಂಬಿದೆ.
26 ದ್ವೇಷವು ತನ್ನನ್ನು ಮೋಸದಿಂದ ಮರೆಮಾಡಿಕೊಳ್ಳುತ್ತದೆ. ಆದರೆ ಅವನು ಕೀಳಾದವನು; ಕೊನೆಯಲ್ಲಿ, ಅವನ ಕೆಟ್ಟಕಾರ್ಯಗಳನ್ನು ಜನರೆಲ್ಲರೂ ನೋಡುವರು.
27 ಮತ್ತೊಬ್ಬನಿಗೆ ಬಲೆಹಾಕುವವನು ತನಗೇ ಬಲೆಹಾಕಿಕೊಳ್ಳುವನು. ಮತ್ತೊಬ್ಬನ ಮೇಲೆ ಬಂಡೆ ಉರುಳಿಸಲು ಪ್ರಯತ್ನಿಸುವವನು ಅದರಿಂದಲೇ ಜಜ್ಜಲ್ಪಡುವನು.
28 ಸುಳ್ಳುಗಾರನು ತಾನು ಕೇಡುಮಾಡಲಿರುವ ಜನರನ್ನು ದ್ವೇಷಿಸುವನು. ಕಪಟದ ಸಂಗತಿಗಳನ್ನು ಹೇಳುವವನು ತನ್ನನ್ನೇ ನಾಶಪಡಿಸಿಕೊಳ್ಳುವನು.
×

Alert

×