Indian Language Bible Word Collections
Proverbs 3:23
Proverbs Chapters
Proverbs 3 Verses
Books
Old Testament
New Testament
Bible Versions
English
Tamil
Hebrew
Greek
Malayalam
Hindi
Telugu
Kannada
Gujarati
Punjabi
Urdu
Bengali
Oriya
Marathi
Books
Old Testament
New Testament
Proverbs Chapters
Proverbs 3 Verses
1
|
ನನ್ನ ಮಗನೇ, ನನ್ನ ಉಪದೇಶವನ್ನು ಮರೆಯಬೇಡ. ನನ್ನ ಆಜ್ಞೆಗಳನ್ನು ಜ್ಞಾಪಕದಲ್ಲಿಟ್ಟುಕೋ. |
2
|
ಅವು ನಿನಗೆ ದೀರ್ಘಾಯುಷ್ಯವನ್ನು ನೀಡಿ ಸಂತೋಷ ಸಮಾಧಾನಗಳಿಂದ ಕೂಡಿದ ಜೀವಿತವನ್ನು ಕೊಡುತ್ತವೆ. |
3
|
ಪ್ರೀತಿಯೂ ನಂಬಿಗಸ್ತಿಕೆಯೂ ನಿನ್ನನ್ನು ಬಿಟ್ಟು ಹೋಗದಿರಲಿ. ಅವುಗಳನ್ನು ನಿನ್ನ ಕೊರಳಿಗೆ ಕಟ್ಟಿಕೋ; ನಿನ್ನ ಹೃದಯದ ಮೇಲೆ ಬರೆದುಕೊ. |
4
|
ಆಗ ನೀನು ದೇವರಿಂದಲೂ ಮನುಷ್ಯರಿಂದಲೂ ಮೆಚ್ಚಿಕೆಯನ್ನು ಮತ್ತು ಒಳ್ಳೆಯ ಹೆಸರನ್ನು ಸಂಪಾದಿಸಿಕೊಳ್ಳುವೆ. |
5
|
ಯೆಹೋವನಲ್ಲಿ ಸಂಪೂರ್ಣವಾಗಿ ಭರವಸೆ ಇಡು. ನಿನ್ನ ಸ್ವಂತ ಜ್ಞಾನವನ್ನು ಅವಲಂಬಿಸಬೇಡ. |
6
|
ನಿನ್ನ ಎಲ್ಲಾ ಕಾರ್ಯಗಳಲ್ಲಿ ಆತನನ್ನು ಜ್ಞಾಪಿಸಿಕೋ. ಆಗ ಆತನು ನಿನಗೆ ಸಹಾಯ ಮಾಡುವನು. |
7
|
ನಿನ್ನನ್ನು ಜ್ಞಾನಿಯೆಂದು ಪರಿಗಣಿಸಿಕೊಳ್ಳದೆ ಯೆಹೋವನಿಗೆ ಭಯಪಟ್ಟು ಕೆಟ್ಟದ್ದರಿಂದ ದೂರವಾಗಿರು. |
8
|
ನೀನು ಹೀಗೆ ಮಾಡುವುದಾದರೆ, ಅದು ನಿನ್ನ ದೇಹಕ್ಕೆ ಒಳ್ಳೆಯ ಆರೋಗ್ಯವನ್ನೂ ನಿನ್ನ ಎಲುಬುಗಳಿಗೆ ಹೊಸ ಶಕ್ತಿಯನ್ನೂ ಕೊಡುವುದು. |
9
|
ನಿನಗೆ ಬರುವ ಆದಾಯದಿಂದಲೂ ಬೆಳೆಯ ಪ್ರಥಮ ಫಲದಿಂದಲೂ ಯೆಹೋವನನ್ನು ಸನ್ಮಾನಿಸು. |
10
|
ಆಗ ನಿನ್ನ ಕಣಜಗಳು ದವಸಧಾನ್ಯಗಳಿಂದ ತುಂಬಿರುತ್ತವೆ. ನಿನ್ನ ದ್ರಾಕ್ಷಾರಸದ ತೊಟ್ಟಿಗಳು ತುಂಬಿತುಳುಕುತ್ತವೆ. |
11
|
ನನ್ನ ಮಗನೇ, ಯೆಹೋವನು ನಿನ್ನನ್ನು ಶಿಕ್ಷಿಸುವಾಗ ಕೋಪಗೊಳ್ಳಬೇಡ. ಆತನು ಗದರಿಸುವಾಗ ಬೇಸರಪಡಬೇಡ. |
12
|
ತಂದೆಯು ತನ್ನ ಮಗನನ್ನು ಗದರಿಸುವಂತೆಯೇ ಯೆಹೋವನು ತಾನು ಪ್ರೀತಿಸುವವರನ್ನು ಶಿಕ್ಷಿಸುತ್ತಾನೆ. |
13
|
ಜ್ಞಾನವನ್ನು ಕಂಡುಕೊಂಡು ವಿವೇಕವನ್ನು ಸಂಪಾದಿಸಿಕೊಳ್ಳುವವನೇ ಭಾಗ್ಯವಂತನು. |
14
|
ಜ್ಞಾನವು ಬೆಳ್ಳಿಗಿಂತಲೂ ಲಾಭದಾಯಕ. ಅದರ ಆದಾಯವು ಬಂಗಾರಕ್ಕಿಂತಲೂ ಅಧಿಕ. |
15
|
ಜ್ಞಾನವು ರತ್ನಕ್ಕಿಂತಲೂ ಅಮೂಲ್ಯವಾದದ್ದು. ನಿನ್ನ ಇಷ್ಟ ವಸ್ತುಗಳಲ್ಲಿ ಯಾವುದೂ ಅದಕ್ಕೆ ಸಮವಿಲ್ಲ. |
16
|
ಜ್ಞಾನವೆಂಬಾಕೆಯ ಬಲಗೈಯಿಂದ ದೀರ್ಘಾಯುಷ್ಯವೂ ಎಡಗೈಯಿಂದ ಐಶ್ವರ್ಯವೂ ಘನತೆಯೂ ಬರುವವು. |
17
|
ಜ್ಞಾನವು ನಿನ್ನ ಜೀವನವನ್ನು ಸುಖಕರವನ್ನಾಗಿ ಮಾಡುತ್ತದೆ; ಸಮಾಧಾನವನ್ನು ಬರಮಾಡುತ್ತದೆ. |
18
|
ಜ್ಞಾನವು ತನ್ನನ್ನು ಅವಲಂಬಿಸಿಕೊಳ್ಳುವವರಿಗೆ ಜೀವದಾಯಕ ಮರದಂತಿದೆ. ಅದನ್ನು ಹೊಂದಿರುವವರು ಧನ್ಯರಾಗಿದ್ದಾರೆ. |
19
|
ಯೆಹೋವನು ಜ್ಞಾನದ ಮೂಲಕ ಭೂಮಿಯನ್ನು ಸೃಷ್ಟಿಸಿದನು. ಆತನು ವಿವೇಕದ ಮೂಲಕ ಆಕಾಶವನ್ನು ಸೃಷ್ಟಿಸಿದನು. |
20
|
ಯೆಹೋವನು ತನ್ನ ತಿಳುವಳಿಕೆಯಿಂದ ಸಮುದ್ರಗಳನ್ನು ವಿಭಜಿಸಿದನು. ಮೋಡವು ಮಳೆಸುರಿಸುವುದಕ್ಕೆ ಆತನ ತಿಳುವಳಿಕೆಯೇ ಕಾರಣ. |
21
|
ನನ್ನ ಮಗನೇ, ಜ್ಞಾನವನ್ನೂ ಬುದ್ಧಿಯನ್ನೂ ಭದ್ರವಾಗಿಟ್ಟುಕೋ. ನಿನ್ನ ದೃಷ್ಟಿಯು ಅವುಗಳ ಮೇಲೇ ಇರಲಿ. |
22
|
ಜ್ಞಾನವಿವೇಕಗಳು ನಿನಗೆ ಜೀವವನ್ನೂ ನಿನ್ನ ಜೀವಿತಕ್ಕೆ ಸೌಂದರ್ಯವನ್ನೂ ನೀಡುತ್ತವೆ. |
23
|
ಆಗ ನೀನು ಎಡವಿಬೀಳದೆ ಸುರಕ್ಷಿತವಾಗಿ ನಡೆಯುವೆ. |
24
|
ಆಗ ನೀನು ನಿರ್ಭಯದಿಂದ ಮಲಗಿಕೊಂಡು ಸುಖವಾಗಿ ನಿದ್ರಿಸುವೆ. |
25
|
ದುಷ್ಟರ ಮೇಲೆ ಇದ್ದಕ್ಕಿದ್ದಂತೆ ಬರುವ ಅಪಾಯಕ್ಕಾಗಲಿ ನಾಶನಕ್ಕಾಗಲಿ ಹೆದರಿಕೊಳ್ಳಬೇಡ. |
26
|
ಯೆಹೋವನು ನಿನ್ನೊಂದಿಗಿದ್ದಾನೆ. ನೀನು ಬಲೆಗೆ ಸಿಕ್ಕಿಬೀಳದಂತೆ ಆತನು ನಿನ್ನನ್ನು ಕಾಪಾಡುತ್ತಾನೆ. |
27
|
ನಿನಗೆ ಸಾಧ್ಯವಾದಾಗಲೆಲ್ಲಾ ಉಪಕಾರಮಾಡು. |
28
|
ನಿನ್ನ ನೆರೆಯವನಿಗೆ ಕೊಡತಕ್ಕದ್ದು ನಿನ್ನಲ್ಲಿರುವಾಗ, “ನಾಳೆ ಬಾ, ಕೊಡುತ್ತೇನೆ” ಎಂದು ಹೇಳಬೇಡ. |
29
|
ನಿನ್ನ ನೆರೆಯವನಿಗೆ ಕೇಡನ್ನು ಕಲ್ಪಿಸಬೇಡ. ನಿನ್ನ ಸುರಕ್ಷತೆಗಾಗಿಯೇ ನಿನ್ನ ನೆರೆಯವನ ಸಮೀಪದಲ್ಲಿ ವಾಸಿಸುತ್ತಿದ್ದೀಯಲ್ಲಾ! |
30
|
ನಿನಗೆ ಕೇಡನ್ನು ಮಾಡಿಲ್ಲದಿರುವವನನ್ನು ನಿಷ್ಕಾರಣವಾಗಿ ನ್ಯಾಯಾಲಯಕ್ಕೆ ಕೊಂಡೊಯ್ಯಬೇಡ. |
31
|
ಬಲಾತ್ಕಾರಿಯನ್ನು ಕಂಡು ಹೊಟ್ಟೇಕಿಚ್ಚು ಪಡಬೇಡ; ಅವನ ನಡತೆಯನ್ನು ಅನುಸರಿಸಬೇಡ. |
32
|
ಯೆಹೋವನಿಗೆ ವಕ್ರಬುದ್ಧಿಯುಳ್ಳವರು ಅಸಹ್ಯ. ಆದರೆ ಆತನು ಯಥಾರ್ಥರೊಂದಿಗೆ ಸ್ನೇಹದಿಂದಿರುವನು. |
33
|
ದುಷ್ಟರ ಮನೆಯ ಮೇಲೆ ಯೆಹೋವನ ಶಾಪವಿರುವುದು; ಆದರೆ ನೀತಿವಂತರ ಮನೆಯ ಮೇಲೆ ಆತನ ಆಶೀರ್ವಾದವಿರುವುದು. |
34
|
ಯಾರು ಗರ್ವದಿಂದ ಬೇರೆಯವರನ್ನು ಗೇಲಿಮಾಡುತ್ತಾರೊ ಅವರನ್ನು ಯೆಹೋವನೂ ಗೇಲಿಮಾಡುತ್ತಾನೆ. ದೀನರಿಗಾದರೋ ಆತನ ಕರುಣೆ ದೊರೆಯುವುದು. |
35
|
ಜ್ಞಾನಿಗಳು ಸನ್ಮಾನ ಹೊಂದುವರು; ಮೂಢರಿಗೆ ಅವಮಾನವಾಗುವುದು. |