Bible Languages

Indian Language Bible Word Collections

Bible Versions

Books

Proverbs Chapters

Proverbs 7 Verses

Bible Versions

Books

Proverbs Chapters

Proverbs 7 Verses

1 ನನ್ನ ಮಗನೇ, ನನ್ನ ಮಾತುಗಳನ್ನು ಜ್ಞಾಪಕ ಮಾಡಿಕೋ, ನನ್ನ ಆಜ್ಞೆಗಳನ್ನು ಮರೆಯಬೇಡ.
2 ನನ್ನ ಆಜ್ಞೆಗಳಿಗೆ ವಿಧೇಯನಾಗು, ಆಗ ನೀನು ಜೀವಿಸುವೆ. ನಿನ್ನ ಕಣ್ಣುಗುಡ್ಡೆಗಳೊ ಎಂಬಂತೆ ನನ್ನ ಉಪದೇಶಗಳಿಗೆ ಎಚ್ಚರಿಕೆಯಿಂದ ವಿಧೇಯನಾಗಿರು.
3 ಅವುಗಳನ್ನು ನಿನ್ನ ಬೆರಳುಗಳ ಸುತ್ತಲೂ ಕಟ್ಟಿಕೋ; ನಿನ್ನ ಹೃದಯದ ಮೇಲೆ ಬರೆದುಕೋ,
4 ಜ್ಞಾನವನ್ನು ನಿನ್ನ ಸಹೋದರಿಯಂತೆ ಪ್ರೀತಿಸು. ವಿವೇಕವನ್ನು ನಿನ್ನ ಕುಟುಂಬದಂತೆ ಪ್ರೀತಿಸು.
5 ಆಗ ಅವು ನಿನ್ನನ್ನು ಬೇರೆ ಹೆಂಗಸರಿಂದ ತಪ್ಪಿಸಿ ಕಾಪಾಡುತ್ತವೆ; ನಿನ್ನನ್ನು ಪಾಪಕ್ಕೆ ನಡೆಸುವಂಥ ಅವರ ಸವಿ ಮಾತುಗಳಿಂದ ತಪ್ಪಿಸಿ ಕಾಪಾಡುತ್ತವೆ.
6 ಒಂದು ದಿನ ನಾನು ನನ್ನ ಮನೆಯ ಕಿಟಿಕಿಯಿಂದ ನೋಡಿದಾಗ
7 ಅನೇಕ ಮೂಢ ಯೌವನಸ್ಥರನ್ನು ಕಂಡೆನು. ಅವರಲ್ಲಿ ತುಂಬಾ ಮೂಢನಾಗಿದ್ದ ಒಬ್ಬ ಯೌವನಸ್ಥನನ್ನು ಗಮನಿಸಿದೆ.
8 ಅವನು ಒಬ್ಬ ಕೆಟ್ಟ ಹೆಂಗಸಿನ ಬೀದಿಯಲ್ಲಿ ಆಕೆಯ ಮನೆಯ ಕಡೆಗೆ ಹೋಗುತ್ತಿದ್ದನು.
9 ಆಗ ಕತ್ತಲಾಗುತ್ತಿತ್ತು. ಸೂರ್ಯ ಮುಳುಗುತ್ತಿದ್ದನು; ರಾತ್ರಿ ಆರಂಭವಾಗುತ್ತಿತ್ತು.
10 ಆ ಹೆಂಗಸು ಅವನನ್ನು ಎದುರುಗೊಳ್ಳಲು ಮನೆಯ ಹೊರಗಡೆ ಬಂದಳು. ಆಕೆಯ ಉಡುಪು ವ್ಯಭಿಚಾರಿಣಿಯ ಉಡುಪಿನಂತಿತ್ತು. ಅವನೊಡನೆ ಪಾಪಮಾಡಬೇಕೆಂಬ ಆಸೆ ಆಕೆಯಲ್ಲಿತ್ತು.
11 ಅವಳು ಸುಮ್ಮನಿರದವಳೂ ಹಟಮಾರಿಯೂ ಆಗಿದ್ದಾಳೆ. ಅವಳು ಎಂದೂ ಮನೆಯಲ್ಲಿ ಇದ್ದವಳಲ್ಲ.
12 ಅವಳು ಪ್ರತಿಯೊಂದು ಮೂಲೆಯಲ್ಲೂ ಗಂಡಸರನ್ನು ಬಲೆಗೆ ಹಾಕಿಕೊಳ್ಳಲು ಕಾದುಕೊಂಡಿರುವಳು. ಅವಳು ಬೀದಿಗಳಲ್ಲಿ ನಡೆದು ಹೋದಳು.
13 ಅವಳು ಆ ಯೌವನಸ್ಥವನನ್ನು ಹಿಡಿದುಕೊಂಡು ಮುದ್ದಿಟ್ಟಳು. ಅವಳು ನಾಚಿಕೆಯಿಲ್ಲದೆ ಅವನಿಗೆ,
14 “ಈ ದಿನ ನಾನು ಸಮಾಧಾನ ಯಜ್ಞವನ್ನು ಅರ್ಪಿಸಬೇಕಿತ್ತು. ನನ್ನ ಹರಕೆಯನ್ನು ಸಲ್ಲಿಸಿದೆನು. ಯಜ್ಞದಲ್ಲಿ ಉಳಿದ ಮಾಂಸ ನನ್ನಲ್ಲಿ ಬಹಳಷ್ಟಿದೆ.
15 ಆದ್ದರಿಂದ ನನ್ನೊಂದಿಗೆ ಬರುವಂತೆ ನಿನ್ನನ್ನು ಕರೆಯಲು ಬಂದೆ. ನಿನಗಾಗಿ ಹುಡುಕಾಡಿ ಈಗ ನಿನ್ನನ್ನು ಕಂಡುಕೊಂಡೆ.
16 ನನ್ನ ಹಾಸಿಗೆಯನ್ನು ಈಜಿಪ್ಟಿನ ಸುಂದರವಾದ ಹೊದಿಕೆಗಳಿಂದ ಹೊದಿಸಿ
17 ಪರಿಮಳದ್ರವ್ಯವನ್ನು ಚಿಮಿಕಿಸಿರುವೆ. ಆ ಪರಿಮಳ ದ್ರವ್ಯವನ್ನು ರಕ್ತಬೋಳ, ಅಗುರು ಮತ್ತು ಲವಂಗ ಚಕ್ಕೆಗಳಿಂದ ತಯಾರಿಸಿರುವೆ.
18 ಬಾ, ನಾವು ಮುಂಜಾನೆಯವರೆಗೆ ಪ್ರೇಮಿಸೋಣ; ರಾತ್ರಿಯೆಲ್ಲಾ ಸುಖಿಸೋಣ.
19 ನನ್ನ ಗಂಡನು ವ್ಯಾಪಾರಕ್ಕಾಗಿ ದೂರದೇಶಕ್ಕೆ ಹೋಗಿದ್ದಾನೆ.
20 ದೀರ್ಘಪ್ರಯಾಣಕ್ಕೆ ಬೇಕಾದಷ್ಟು ಹಣವನ್ನು ಅವನು ತನ್ನೊಡನೆ ತೆಗೆದುಕೊಂಡು ಹೋಗಿದ್ದಾನೆ; ಎರಡು ವಾರಗಳವರೆಗೆ ಅವನು ಮನೆಗೆ ಬರುವುದಿಲ್ಲ” ಎಂದು ಹೇಳಿದಳು.
21 ಅವಳು ಆ ಯೌವನಸ್ಥನನ್ನು ಪ್ರೇರೇಪಿಸಲು ಈ ಮಾತುಗಳನ್ನಾಡಿದಳು. ಆಕೆಯ ಸವಿನುಡಿಗಳು ಅವನನ್ನು ಮರುಳುಗೊಳಿಸಿತು.
22 [This verse may not be a part of this translation]
23 [This verse may not be a part of this translation]
24 ಗಂಡುಮಕ್ಕಳೇ, ನನಗೆ ಕಿವಿಗೊಡಿರಿ. ನಾನು ಹೇಳುವ ಮಾತುಗಳಿಗೆ ಗಮನಕೊಡಿರಿ.
25 ಅಂತಹ ಹೆಂಗಸಿನ ಬಗ್ಗೆ ಯೋಚಿಸಲೂಬೇಡಿ, ಆಕೆಗಾಗಿ ಅಲೆದಾಡಲೂಬೇಡಿ.
26 ಆಕೆಯಿಂದ ಅನೇಕ ಗಂಡಸರು ಬಿದ್ದುಹೋಗಿದ್ದಾರೆ; ಅವಳು ಅನೇಕ ಗಂಡಸರನ್ನು ನಾಶಮಾಡಿದ್ದಾಳೆ.
27 ಅವಳ ಮನೆಯು ಪಾತಾಳದ ಮಾರ್ಗದಲ್ಲಿದೆ. ಅವಳ ದಾರಿ ನೇರವಾಗಿ ಮರಣಕ್ಕೆ ನಡೆಸುತ್ತದೆ.

Proverbs 7:1 Kannada Language Bible Words basic statistical display

COMING SOON ...

×

Alert

×