Indian Language Bible Word Collections
Proverbs 9
Proverbs Chapters
Proverbs 9 Verses
Books
Old Testament
New Testament
Bible Versions
English
Tamil
Hebrew
Greek
Malayalam
Hindi
Telugu
Kannada
Gujarati
Punjabi
Urdu
Bengali
Oriya
Marathi
Books
Old Testament
New Testament
Proverbs Chapters
Proverbs 9 Verses
1
|
ಜ್ಞಾನವೆಂಬಾಕೆ ತನ್ನ ಮನೆಯನ್ನು ಕಟ್ಟಿಕೊಂಡಿದ್ದಾಳೆ. ಆಕೆ ಅದಕ್ಕೆ ಏಳು ಕಂಬಗಳನ್ನು ಹಾಕಿದ್ದಾಳೆ. |
2
|
ಜ್ಞಾನವೆಂಬಾಕೆ ಮಾಂಸದ ಅಡಿಗೆಯನ್ನೂ ದ್ರಾಕ್ಷಾರಸವನ್ನೂ ತಯಾರಿಸಿದ್ದಾಳೆ. ಆಕೆ ತನ್ನ ಮೇಜಿನ ಮೇಲೆ ಆಹಾರವನ್ನು ಇಟ್ಟಿದ್ದಾಳೆ. |
3
|
ಆಮೇಲೆ ಆಕೆ, ತನ್ನ ಸೇವಕಿಯರನ್ನು ಕಳುಹಿಸಿ ನಗರದ ಎತ್ತರವಾದ ಸ್ಥಳದಿಂದ, |
4
|
“ಕಲಿತುಕೊಳ್ಳಬೇಕಾಗಿರುವ ಜನರೇ, ಬನ್ನಿರಿ” ಎಂದು ಕೂಗುತ್ತಾಳೆ. ಆಕೆಯು ಬುದ್ಧಿಹೀನರಿಗೆ, |
5
|
“ಬನ್ನಿರಿ, ನನ್ನ ಜ್ಞಾನದ ಆಹಾರವನ್ನು ತಿನ್ನಿರಿ. ನಾನು ತಯಾರಿಸಿರುವ ದ್ರಾಕ್ಷಾರಸವನ್ನು ಕುಡಿಯಿರಿ. |
6
|
ನಿಮ್ಮ ಮೂರ್ಖ ಮಾರ್ಗಗಳನ್ನು ತೊರೆದುಬಿಡಿ. ಆಗ ನಿಮಗೆ ಜೀವವು ದೊರೆಯುವುದು. ವಿವೇಕ ಮಾರ್ಗದಲ್ಲಿ ಮುಂದೆ ಸಾಗಿರಿ” ಎಂದು ಆಕೆ ಹೇಳಿದಳು. |
7
|
ನೀನು ಅಹಂಕಾರಿಗೆ ಅವನ ತಪ್ಪನ್ನು ತಿಳಿಸಲು ಪ್ರಯತ್ನಿಸಿದರೆ ಅವನು ನಿನ್ನನ್ನೇ ಖಂಡಿಸುವನು. ನೀನು ಕೆಡುಕನಿಗೆ ಅವನ ತಪ್ಪನ್ನು ತಿಳಿಸಿದರೆ ಅವನು ನಿನ್ನನ್ನೇ ಗೇಲಿಮಾಡುವನು. |
8
|
ದುರಾಭಿಮಾನಿಯನ್ನು ಗದರಿಸಬೇಡ; ಅವನು ನಿನ್ನನ್ನೇ ದ್ವೇಷ ಮಾಡುವನು. ಆದರೆ ನೀನು ಜ್ಞಾನಿಯನ್ನು ಗದರಿಸಿದರೆ ಅವನು ನಿನ್ನನ್ನು ಪ್ರೀತಿಸುವನು. |
9
|
[This verse may not be a part of this translation] |
10
|
ಯೆಹೋವನಲ್ಲಿ ಭಯಭಕ್ತಿಯಿಂದಿರುವುದೇ ಜ್ಞಾನದ ಮೂಲ. ಯೆಹೋವನ ತಿಳುವಳಿಕೆಯನ್ನು ಪಡೆದುಕೊಳ್ಳುವುದೇ ವಿವೇಕದ ಮೂಲ. |
11
|
ನೀನು ಜ್ಞಾನಿಯಾಗಿದ್ದರೆ, ಬಹುಕಾಲ ಬದುಕುವೆ. |
12
|
ನೀನು ಜ್ಞಾನಿಯಾಗಿದ್ದರೆ ನಿನ್ನ ಜ್ಞಾನವು ನಿನಗೇ ಲಾಭಕರ. ಆದರೆ ನೀನು ದುರಾಭಿಮಾನದಿಂದ ಬೇರೆಯವರನ್ನು ಗೇಲಿಮಾಡಿದರೆ ನಿನ್ನನ್ನೇ ಕಷ್ಟಕ್ಕೆ ಗುರಿಮಾಡಿಕೊಳ್ಳುವೆ. |
13
|
ಅಜ್ಞಾನವೆಂಬಾಕೆಯು ಬಾಯಿಬಡುಕಿ; ಮಂದಮತಿ ಮತ್ತು ಮೂಢಳು, |
14
|
ಅವಳು ತನ್ನ ಮನೆಯ ಬಾಗಿಲ ಬಳಿಯಲ್ಲಿ ನಗರದ ಎತ್ತರವಾದ ಸ್ಥಳಗಳಲ್ಲಿ ಕುಳಿತಿದ್ದಾಳೆ. |
15
|
ತಮ್ಮ ಕೆಲಸಕಾರ್ಯಗಳ ನಿಮಿತ್ತ ಹಾದುಹೋಗುವ ಜನರನ್ನು, |
16
|
“ಕಲಿತುಕೊಳ್ಳಬೇಕಾಗಿರುವ ಜನರೇ ಬನ್ನಿ” ಎಂದು ಕೂಗಿಕರೆಯುತ್ತಾಳೆ. ಅವಳು ಮೂಢರನ್ನು ಸಹ ಕರೆದು, |
17
|
“ನೀವು ಕದ್ದ ನೀರು ಸ್ವಂತ ನೀರಿಗಿಂತಲೂ ಹೆಚ್ಚು ರುಚಿಯಾಗಿರುವುದು. ನೀವು ಕದ್ದ ರೊಟ್ಟಿ ತಯಾರಿಸಿದ ರೊಟ್ಟಿಗಿಂತಲೂ ಹೆಚ್ಚು ರುಚಿಯಾಗಿರುವುದು” ಎಂದು ಹೇಳುವಳು. |
18
|
ಆದರೆ ಆ ಮೂಢರಿಗೆ, ಅವಳ ಮನೆ ಕೇವಲ ದೆವ್ವಗಳಿಂದ ತುಂಬಿರುವುದಾಗಲಿ ಆಕೆಯ ಅತಿಥಿಗಳು ಅಗಾಧವಾದ ಪಾತಾಳದಲ್ಲಿ ಬಿದ್ದಿರುವುದಾಗಲಿ ತಿಳಿದಿಲ್ಲ. |