1
|
ಆಕಾಶಮಂಡಲವು ದೇವರ ಮಹಿಮೆಯನ್ನು ಪ್ರಕಟಿಸುವುದು. ಗಗನವು ಆತನ ಕೈಕೆಲಸವನ್ನು ತಿಳಿಸುವುದು. |
2
|
ಪ್ರತಿಯೊಂದು ದಿನವೂ ಅದರ ಕುರಿತು ಹೊಸ ವಿಷಯವನ್ನು ತಿಳಿಸುವುದು. ಪ್ರತಿಯೊಂದು ರಾತ್ರಿಯೂ ಅದರ ಕುರಿತು ಹೊಸ ಸಂಗತಿಯನ್ನು ಪ್ರಕಟಿಸುವುದು. |
3
|
ಅವುಗಳ ಮಾತಾಗಲಿ ನುಡಿಗಳಾಗಲಿ ಸ್ವರವಾಗಲಿ ನಮಗೆ ಕೇಳಿಸದು. |
4
|
ಆದರೂ ಅವುಗಳ ಸಂದೇಶವು ಭೂಲೋಕದಲ್ಲೆಲ್ಲಾ ಹರಡುತ್ತದೆ; ಭೂಮಿಯ ಕಟ್ಟಕಡೆಗಳವರೆಗೂ ವ್ಯಾಪಿಸುತ್ತದೆ. ಆಕಾಶವು ಸೂರ್ಯನಿಗೆ ಮನೆಯಂತಿದೆ. |
5
|
ಮದುವೆಯ ಮಂಟಪದಿಂದ ಆನಂದದಿಂದ ಬರುವ ಮದುಮಗನಂತೆ ಸೂರ್ಯನು ಮುಂಜಾನೆ ಉದಯಿಸುವನು. ಕ್ರೀಡಾಪಟುವಿನಂತೆ ಸೂರ್ಯನು ಆಕಾಶದಲ್ಲಿ ಓಡಲಾರಂಭಿಸುವನು. |
6
|
ಸೂರ್ಯನು ಆಕಾಶದ ಒಂದು ಕಡೆಯಿಂದ ಉದಯಿಸಿ ಮತ್ತೊಂದು ಕೊನೆಗೆ ಓಡುತ್ತಾಹೋಗುವನು. ಅವನ ತಾಪಕ್ಕೆ ಯಾವುದೂ ಮರೆಯಾಗಿರಲಾರದು. |
7
|
ಯೆಹೋವನ ಉಪದೇಶಗಳು ನಿಷ್ಕಳಂಕವಾಗಿವೆ. ಅವು ದೇವಜನರಿಗೆ ಬಲವನ್ನು ಕೊಡುತ್ತವೆ. ಯೆಹೋವನ ಕಟ್ಟಳೆಯು ಭರವಸೆಗೆ ಯೋಗ್ಯವಾಗಿದೆ. ಅದು ಮೂಢರನ್ನು ಜ್ಞಾನಿಗಳನ್ನಾಗಿ ಮಾಡುತ್ತದೆ. |
8
|
ಯೆಹೋವನ ನಿಯಮಗಳು ನೀತಿಯ ಕಟ್ಟಳೆಗಳಾಗಿವೆ. ಅವು ಮನುಸ್ಸನ್ನು ಸಂತೋಷಗೂಳಿಸುತ್ತವೆ. ಯೆಹೋವನ ಆಜ್ಞೆಗಳು ಒಳ್ಳೆಯ ಆಜ್ಞೆಗಳಾಗಿವೆ. ಅವು ಕಣ್ಣುಗಳಿಗೆ ಬೆಳಕನ್ನು ನೀಡುತ್ತವೆ. |
9
|
ಯೆಹೋವನಲ್ಲಿಡುವ ಭಯಭಕ್ತಿಯು ಪರಿಶುದ್ಧವಾಗಿದೆ; ಅದು ಶಾಶ್ವತವಾದದ್ದು. ಯೆಹೋವನ ವಿಧಿಗಳು ಯಥಾರ್ಥವಾಗಿವೆ; ಅವು ಯಾವಾಗಲೂ ನ್ಯಾಯಾನುಸಾರವಾಗಿವೆ. |
10
|
ಆತನ ಉಪದೇಶಗಳು ಬಂಗಾರಕ್ಕಿಂತಲೂ ಅಮ್ಯೂಲ್ಯವಾಗಿವೆ; ಅಪ್ಪಟವಾದ ಜೇನುತುಪ್ಪಕ್ಕಿಂತಲೂ ಮಧುರವಾಗಿವೆ. |
11
|
ಆತನ ಉಪದೇಶಗಳು ಆತನ ಸೇವಕನನ್ನು ಎಚ್ಚರಿಸುತ್ತವೆ; ಅವುಗಳನ್ನು ಕೈಕೊಂಡು ನಡೆದರೆ ಒಳ್ಳೆಯದಾಗುವುದು. |
12
|
ಯೆಹೋವನೇ, ಯಾವನೂ ತನ್ನ ತಪ್ಪುಗಳನ್ನೆಲ್ಲಾ ತಿಳಿದುಕೊಳ್ಳುವುದಿಲ್ಲ. ಆದ್ದರಿಂದ ಗುಪ್ತ ಪಾಪಗಳನ್ನು ಮಾಡಲು ನನ್ನನ್ನು ಬಿಟ್ಟುಬಿಡಬೇಡ. |
13
|
ನನ್ನ ಇಷ್ಟಾನುಸಾರ ಪಾಪಮಾಡಲು ನನ್ನನ್ನು ಬಿಟ್ಟುಬಿಡಬೇಡ. ಆ ಪಾಪಗಳು ನನ್ನನ್ನು ಆಳದಿರಲಿ. ನೀನು ಸಹಾಯಮಾಡಿದರೆ ನಾನು ಪರಿಶುದ್ಧನಾಗಿಯೂ ಪಾಪದಿಂದ ವಿಮುಕ್ತನಾಗಿಯೂ ಇರಲು ಸಾಧ್ಯ. |
14
|
ನನ್ನ ಮಾತುಗಳೂ ನನ್ನ ಆಲೋಚನೆಗಳೂ ನಿನಗೆ ಮೆಚ್ಚಿಕೆಯಾಗಿರಲಿ. ಯೆಹೋವನೇ, ನೀವೇ ನನ್ನ ಬಂಡೆಯಾಗಿರುವೆ. ನನ್ನನ್ನು ರಕ್ಷಿಸುವಾತನು ನೀನೇ. |
Psalms 19:11 Kannada Language Bible Words basic statistical display
COMING SOON ...