Bible Languages

Indian Language Bible Word Collections

Bible Versions

Books

Psalms Chapters

Psalms 2 Verses

Bible Versions

Books

Psalms Chapters

Psalms 2 Verses

1 ಅನ್ಯಜನಾಂಗಗಳು ಕೋಪಗೊಂಡಿರುವುದೇಕೆ? ಅವರು ಮೂರ್ಖತನದ ಸಂಚುಗಳನ್ನು ಮಾಡುತ್ತಿರುವುದೇಕೆ?
2 ಅವುಗಳ ರಾಜರುಗಳೂ ನಾಯಕರುಗಳೂ ಯೆಹೋವನಿಗೂ ಆತನಿಂದ ಅಭಿಷೇಕಿಸಲ್ಪಟ್ಟವನಿಗೂ ವಿರೋಧವಾಗಿ ಕೂಡಿಬಂದಿದ್ದಾರೆ.
3 “ದೇವರಿಗೂ ಆತನು ಆಭಿಷೇಕಿಸಿದ ರಾಜನಿಗೂ ವಿರೋಧವಾಗಿ ದಂಗೆಎದ್ದು ಸ್ವತಂತ್ರರಾಗೋಣ” ಎಂದು ಅವರು ಮಾತಾಡಿಕೊಳ್ಳುತ್ತಿದ್ದಾರೆ.
4 ಆದರೆ ಒಡೆಯನೂ ಪರಲೋಕದ ರಾಜನೂ ಅವರನ್ನು ನೋಡಿ ನಗುವನು; ಆತನು ಅವರನ್ನು ರಿಹಾಸ್ಯಮಾಡುವನು.
5 [This verse may not be a part of this translation]
6 [This verse may not be a part of this translation]
7 ಯೆಹೋವನ ಒಡಂಬಡಿಕೆಯ ಕುರಿತು ಹೇಳುತ್ತಿರುವೆ. ಆತನು ನನಗೆ, “ಈ ಹೊತ್ತು ನಾನು ನಿನಗೆ ತಂದೆಯಾದೆ! ನೀನೇ ನನ್ನ ಮಗನು.
8 ನೀನು ಕೇಳಿಕೊಂಡರೆ ಅನ್ಯಜನಾಂಗಗಳನ್ನು ನಿನಗೆ ಅಧೀನಪಡಿಸುವೆನು. ಭೂಮಿಯ ಮೇಲಿರುವ ಜನರೆಲ್ಲರೂ ನಿನ್ನವರಾಗುವರು!
9 ಕಬ್ಬಿಣದ ಗದೆಯು ಮಣ್ಣಿನ ಮಡಿಕೆಯನ್ನು ನುಚ್ಚುನೂರು ಮಾಡುವಂತೆ ನೀನು ಅನ್ಯಜನಾಂಗಗಳನ್ನು ನಾಶಪಡಿಸುವೆ” ಎಂದು ಹೇಳಿದನು.
10 ಆದ್ದರಿಂದ ರಾಜರುಗಳೇ, ವಿವೇಕಿಗಳಾಗಿರಿ. ಅಧಿಪತಿಗಳೇ, ಬುದ್ಧಿಮಾತುಗಳಿಗೆ ಕಿವಿಗೊಡಿರಿ.
11 ಯೆಹೋವನಿಗೆ ಭಯಭಕ್ತಿಯಿಂದ ವಿಧೇಯರಾಗಿರಿ, ನಡುಗುತ್ತಾ ಉಲ್ಲಾಸಪಡಿರಿ.
12 ಆತನ ಮಗನಿಗೆ ನಂಬಿಗಸ್ತರಾಗಿರಿ. ಇಲ್ಲವಾದರೆ ಆತನ ಕೋಪವು ತೋರಿಬಂದು ನಿಮ್ಮನ್ನು ನಾಶಪಡಿಸುವುದು. ಯೆಹೋವನನ್ನು ಆಶ್ರಯಿಸಿಕೊಂಡಿರುವವರು ಭಾಗ್ಯವಂತರೇ ಸರಿ!

Psalms 2 Verses

Psalms 2 Chapter Verses Kannada Language Bible Words display

COMING SOON ...

×

Alert

×