1
|
ಯೆಹೋವನೇ, ನೀನೇ ನನಗೆ ಬೆಳಕೊ ರಕ್ಷಕನೂ ಆಗಿರುವೆ. ನಾನು ಯಾರಿಗೂ ಭಯಪಡಬೇಕಿಲ್ಲ! ಯೋಹೋವನೇ, ನನ್ನ ಪ್ರಾಣಕ್ಕೆ ಆಶ್ರಯಸ್ಥಾನವೂ ನೀನೇ. ಆದ್ದರಿಂದ ನಾನು ಯಾರಿಗೂ ಹೆದರುವುದಿಲ್ಲ! |
2
|
ದುಷ್ಟರು ನನ್ನನ್ನು ಕೊಲ್ಲಲು ಆಕ್ರಮಣಮಾಡುವಾಗ ತಾವೇ ಮುಗ್ಗರಿಸಿ ಬೀಳುವರು. |
3
|
ಮಹಾಸೈನ್ಯವೇ ನನಗೆ ಮುತ್ತಿಗೆ ಹಾಕಿದರೂ ನಾನು ಭಯಪಡುವುದಿಲ್ಲ. ಸೈನಿಕರು ನನ್ನ ಮೇಲೆ ಆಕ್ರಮಣ ಮಾಡಿದರೂ ನಾನು ಹೆದರುವುದಿಲ್ಲ. ಯಾಕೆಂದರೆ ನಾನು ಯೆಹೋವನಲ್ಲಿ ಭರವಸವಿಟ್ಟಿದ್ದೇನೆ. |
4
|
ನನ್ನ ಜೀವಮಾನವೆಲ್ಲಾ ಯೆಹೋವನ ಆಲಯದಲ್ಲಿ ವಾಸಿಸುತ್ತಾ ಆತನ ಪ್ರಸನ್ನತೆಯನ್ನು ವೀಕ್ಷಿಸುತ್ತಾ ಆತನ ಮಾರ್ಗದರ್ಶನವನ್ನು ಎದುರುನೋಡುತ್ತಾ ಇರಬೇಕೆಂಬ ಒಂದೇ ಒಂದು ಕೋರಿಕೆಯನ್ನು ಯೋಹೋವನಲ್ಲಿ ಕೇಳಿಕೊಂಡು ಅದನ್ನೇ ಎದುರು ನೋಡುತ್ತಿದ್ದೇನೆ. |
5
|
ನಾನು ಅಪಾಯದಲ್ಲಿರುವಾಗ ಯೆಹೋವನು ನನ್ನನ್ನು ಸಂರಕ್ಷಿಸುತ್ತಾನೆ; ತನ್ನ ಗುಡಾರದಲ್ಲಿ ನನ್ನನ್ನು ಅಡಗಿಸುತ್ತಾನೆ. ಸುರಕ್ಷಿತವಾದ ಸ್ಥಳಕ್ಕೆ ನನ್ನನ್ನು ಕೊಂಡೊಯ್ಯುವನು. |
6
|
ವೈರಿಗಳು ನನಗೆ ಮುತ್ತಿಗೆ ಹಾಕಿದ್ದರೂ ಅವರನ್ನು ಸೋಲಿಸಲು ಯೆಹೋವನು ನನಗೆ ಸಹಾಯಮಾಡುವನು! ಆಗ ನಾನು ಆತನ ಗುಡಾರದಲ್ಲಿ ಉತ್ಸಾಹ ಧ್ವನಿಯೊಡನೆ ಯಜ್ಞಗಳನ್ನು ಅರ್ಪಿಸುವೆನು. ವಾದ್ಯಗಳನ್ನು ನುಡಿಸುತ್ತಾ ಆತನನ್ನು ಕೊಂಡಾಡುವೆನು. |
7
|
ಯೆಹೋವನೇ, ನನ್ನ ಸ್ವರವನ್ನು ಕೇಳಿ ನನಗೆ ಉತ್ತರಿಸು. ನನ್ನನ್ನು ಕರುಣಿಸು. |
8
|
ಯೆಹೋವನೇ, ನಾನು ನಿನ್ನೊಂದಿಗೆ ಹೃದಯ ಪೂರ್ವಕವಾಗಿ ಮಾತನಾಡಬೇಕೆಂದಿದ್ದೇನೆ. ದೇವರೇ, ನಾನು ನಿನ್ನ ಸನ್ನಿಧಿಗೆ ಬರುತ್ತೇನೆ. |
9
|
ಯೆಹೋವನೇ, ನನಗೆ ವಿಮುಖನಾಗಬೇಡ: ನಿನ್ನ ಸೇವಕನನ್ನು ಕೋಪದಿಂದ ತಳ್ಳಿಬಿಡಬೇಡ. ನನ್ನ ದೇವರೇ, ನನ್ನ ರಕ್ಷಕನು ನೀನೇ. ನನ್ನನ್ನು ಕೈ ಬಿಡಬೇಡ! ತೊರೆದು ಬಿಡಬೇಡ! |
10
|
ತಂದೆತಾಯಿಗಳು ನನ್ನನ್ನು ತೊರೆದುಬಿಟ್ಟರೇನು; ಯೆಹೋವನು ನನ್ನನ್ನು ಸೇರಿಸಿಕೊಳ್ಳುವನು. |
11
|
ಯೆಹೋವನೇ, ನನಗೆ ವೈರಿಗಳಿರುವುದರಿಂದ ನಿನ್ನ ಮಾರ್ಗವನ್ನು ನನಗೆ ಉಪದೇಶಿಸಿ ನಿನ್ನ ಚಿತ್ತಾನುಸಾರವಾಗಿ ನನ್ನನ್ನು ನಡೆಸು. |
12
|
ವೈರಿಗಳು ನನ್ನ ಮೇಲೆ ಆಕ್ರಮಣ ಮಾಡಿದ್ದಾರೆ. ನನಗೆ ಕೇಡಾಗಲೆಂದು ಸುಳ್ಳುಗಳನ್ನು ಹೇಳಿದ್ದಾರೆ. ಯೆಹೋವನೇ, ಇಂಥ ವೈರಿಗಳ ಕೈಗೆ ನನ್ನನ್ನು ಕೊಡಬೇಡ. |
13
|
ಯೆಹೋವನ ಒಳ್ಳೆಯತನವನ್ನು ಸಾಯುವುದಕ್ಕಿಂತ ಮುಂಚೆ ನೋಡುತ್ತೇನೆ ಎಂಬ ದೃಢನಂಬಿಕೆ ನನ್ನಲ್ಲಿದೆ. |
14
|
ಯೆಹೋವನ ಸಹಾಯಕ್ಕಾಗಿ ಕಾದುಕೊಂಡಿರಿ! ಬಲವಾಗಿಯೂ ಧೈರ್ಯವಾಗಿಯೂ ಇರಿ! ಯೆಹೋವನ ಸಹಾಯಕ್ಕಾಗಿ ಕಾದುಕೊಂಡಿರಿ! |
Psalms 27:2 Kannada Language Bible Words basic statistical display
COMING SOON ...