ಯೆಹೋವನೇ, ನೀನೇ ನನ್ನ ಬಂಡೆ. ಸಹಾಯಕ್ಕಾಗಿ ನಾನು ನಿನ್ನನ್ನು ಕೂಗಿಕೊಳ್ಳುತ್ತಿದ್ದೇನೆ. ನನ್ನ ಪ್ರಾರ್ಥನೆಗಳಿಗೆ ಕಿವಿಗಳನ್ನು ಮುಚ್ಚಿಕೊಳ್ಳಬೇಡ. ಇಲ್ಲವಾದರೆ ಸತ್ತು ಸಮಾಧಿಯಲ್ಲಿರುವವರಂತೆ ಜನರು ನನ್ನನ್ನು ಪರಿಗಣಿಸುವರು.
ನನ್ನನ್ನು ಆ ಕೆಟ್ಟವರೊಂದಿಗೆ ಲೆಕ್ಕಿಸಬೇಡ. ಅವರು ತಮ್ಮ ನೆರೆಯವರಿಗೆ “ಸಮಾಧಾನವಾಗಲಿ” ಎಂದು ಹರಸಿದರೂ ಅವರ ವಿರೋಧವಾಗಿ ಸಂಚುಗಳನ್ನು ಮಾಡುತ್ತರೆ. [*ಅವರು … ಮಾಡುತ್ತಾರೆ ಇದು ಶ್ಲೇಷ ಮಾತುಗಳ ಸರಣಿ. ಹೀಬ್ರೂ ಭಾಷೆಯಲ್ಲಿ “ನೆರೆಯವನು” ಎಂಬ ಪದವು “ದುಷ್ಟನು” ಎಂಬ ಪದದಂತೆ ಕಂಡುಬರುತ್ತದೆ. “ಸಮಾಧಾನ” ಎಂಬ ಪದಕ್ಕೆ ಹೀಬ್ರೂ ಭಾಷೆಯಲ್ಲಿ “ಶಾಲೋಮ್” ಎನ್ನುತ್ತಾರೆ. ಈ ಪದವನ್ನು ಒಬ್ಬರನ್ನೊಬ್ಬರು ಅಭಿನಂದಿಸುವಾಗ ಉಪಯೆಗಿಸುತ್ತಾರೆ.]
ಯೆಹೋವನೇ ನನಗೆ ಬಲವೂ ಗುರಾಣಿಯೂ ಆಗಿದ್ದಾನೆ. ನಾನು ಆತನಲ್ಲಿ ಭರವಸವಿಟ್ಟಿರುವುದರಿಂದ ಆತನು ನನಗೆ ಸಹಾಯಮಾಡಿದನು. ಆದಕಾರಣ ನನ್ನ ಹೃದಯವು ಹರ್ಷಿಸುವುದು; ನಾನು ಸ್ತುತಿಗೀತೆಗಳನ್ನು ಹಾಡುತ್ತಾ ಆತನನ್ನು ಕೊಂಡಾಡುವೆನು.