1
|
ನೀತಿವಂತರೆ, ಯೆಹೋವನಲ್ಲಿ ಉಲ್ಲಾಸಪಡಿರಿ. ಯಥಾರ್ಥವಂತರು ಆತನನ್ನು ಸ್ತುತಿಸುವುದು ಯೋಗ್ಯವಾಗಿದೆ. |
2
|
ಲೈರ್ ವಾದ್ಯವನ್ನು ನುಡಿಸುತ್ತಾ ಯೆಹೋವನನ್ನು ಸ್ತುತಿಸಿರಿ! ಹತ್ತುತಂತಿಗಳ ಹಾರ್ಪ್ವಾದ್ಯವನ್ನು ಬಾರಿಸುತ್ತಾ ಆತನನ್ನು ಕೊಂಡಾಡಿರಿ. |
3
|
ಆತನಿಗೆ ಹೊಸ ಹಾಡನ್ನು ಹಾಡಿರಿ! ಹಾರ್ಪ್ವಾದ್ಯಗಳನ್ನು ಇಂಪಾಗಿ ನುಡಿಸುತ್ತಾ ಆನಂದದಿಂದ ಆರ್ಭಟಿಸಿರಿ. |
4
|
ಯೆಹೋವನ ವಾಕ್ಯವು ಸತ್ಯವಾದದ್ದು! ಆತನ ಕಾರ್ಯಗಳೆಲ್ಲಾ ಭರವಸೆಗೆ ಯೋಗ್ಯವಾಗಿವೆ. |
5
|
ಆತನು ನೀತಿಯನ್ನೂ ನ್ಯಾಯವನ್ನೂ ಪ್ರೀತಿಸುವನು. ಯೆಹೋವನ ಶಾಶ್ವತವಾದ ಪ್ರೀತಿಯು ಭೂಲೋಕವನ್ನೆಲ್ಲಾ ತುಂಬಿಕೊಂಡಿದೆ. |
6
|
ಯೆಹೋವನು ಆಜ್ಞಾಪಿಸಲು ಆಕಾಶವು ಸೃಷ್ಟಿಯಾಯಿತು! ಆತನ ಉಸಿರು ಭೂಮಿಯ ಮೇಲಿರುವ ಸಮಸ್ತವನ್ನು ಸೃಷ್ಟಿಸಿತು. |
7
|
ಆತನು ನೀರುಗಳನ್ನು ಒಟ್ಟುಗೂಡಿಸಿ ಸಮುದ್ರವನ್ನು ನಿರ್ಮಿಸಿದನು; ಮಹಾಸಾಗರಕ್ಕೆ ಸ್ಥಳವನ್ನು ಗೊತ್ತುಪಡಿಸಿದನು. |
8
|
ಭೂಲೋಕದವರೆಲ್ಲರೂ ಯೆಹೋವನಲ್ಲಿ ಭಯಭಕ್ತಿಯಿಂದಿರಲಿ. ಭೂನಿವಾಸಿಗಳೆಲ್ಲರೂ ಆತನಿಗೆ ಭಯಪಡಲಿ. |
9
|
ಯಾಕಂದರೆ ಆತನು ನುಡಿದಾಗ ಭೂಲೋಕವು ಸೃಷ್ಟಿಯಾಯಿತು; ಆತನು ಆಜ್ಞಾಪಿಸಿದಾಗ ಸಮಸ್ತವು ಉಂಟಾಯಿತು. |
10
|
ಯೆಹೋವನು ಜನಾಂಗಗಳ ಉದ್ದೇಶಗಳನ್ನು ವ್ಯರ್ಥಗೊಳಿಸಬಲ್ಲನು; ಅವರ ಆಲೋಚನೆಗಳನ್ನು ನಿಷ್ಪಲ ಮಾಡಬಲ್ಲನು. |
11
|
ಆದರೆ ಯೆಹೋವನ ಯೋಜನೆಗಳು ಶಾಶ್ವತವಾಗಿವೆ. ಆತನ ಆಲೋಚನೆಗಳು ಸದಾಕಾಲಕ್ಕೂ ಒಳ್ಳೆಯದಾಗಿವೆ. |
12
|
ಯಾರಿಗೆ ಯೆಹೋವನು ದೇವರಾಗಿದ್ದಾನೋ ಅವರೇ ಧನ್ಯರು. ಯಾಕಂದರೆ ಆತನು ಅವರನ್ನು ಸ್ವಕೀಯರನ್ನಾಗಿ ಆರಿಸಿಕೊಂಡಿದ್ದಾನೆ. |
13
|
ಯೆಹೋವನು ಪರಲೋಕದಿಂದ ಮನುಷ್ಯರನ್ನು ದೃಷ್ಟಿಸಿ ನೋಡುವನು. |
14
|
ಆತನು ತನ್ನ ಮಹಾಸಿಂಹಾಸನದಿಂದ ಭೂನಿವಾಸಿಗಳೆಲ್ಲರನ್ನು ನೋಡುವನು. |
15
|
ಆವರೆಲ್ಲರ ಮನುಸ್ಸುಗಳನ್ನು ಸೃಷ್ಟಿಸಿದವನು ಆತನೇ. ಅವರೆಲ್ಲರ ಆಲೋಚನೆಗಳು ಆತನಿಗೆ ತಿಳಿದಿವೆ. |
16
|
ಮಹಾಸೇನಾಬಲದಿಂದಲೇ ಯಾವ ಅರಸನಿಗೂ ಜಯವಾಗುವುದಿಲ್ಲ. ಭುಜಬಲದಿಂದಲೇ ಯಾವ ಯುದ್ಧವೀರನೂ ಸುರಕ್ಷಿತನಾಗಿರಲಾರನು. |
17
|
ಯುದ್ಧದಲ್ಲಿ ದೊರೆಯುವ ಜಯ ಕುದುರೆಗಳಿಂದಲ್ಲ. ಅವುಗಳ ಬಲವು ನಿನ್ನನ್ನು ರಕ್ಷಿಸಲಾರದು. |
18
|
ಯೆಹೋವನು ತನ್ನಲ್ಲಿ ಭಯಭಕ್ತಿಯುಳ್ಳವರನ್ನು ಲಕ್ಷಿಸುವನು. ಆತನ ಶಾಶ್ವತವಾದ ಪ್ರೀತಿಯು ಆತನ ಭಕ್ತರನ್ನು ಕಾಪಾಡುವುದು. |
19
|
ಅವರನ್ನು ಸಾವಿನಿಂದ ರಕ್ಷಿಸುವಾತನು ಆತನೇ. ಅವರು ಹಸಿವೆಯಿಂದಿರುವಾಗ ಆತನು ಅವರಿಗೆ ಶಕ್ತಿಕೊಡುವನು. |
20
|
ಆದ್ದರಿಂದ ಯೆಹೋವನಿಗಾಗಿಯೇ ಕಾದುಕೊಂಡಿರುತ್ತೇವೆ. ಆತನೇ ನಮ್ಮ ಸಹಾಯಕನೂ ಗುರಾಣಿಯೂ ಆಗಿದ್ದಾನೆ. |
21
|
ದೇವರು ನನ್ನನ್ನು ಸಂತೋಷಗೊಳಿಸುವನು. ನಾನು ಆತನ ಪರಿಶುದ್ಧ ಹೆಸರಿನಲ್ಲಿಯೇ ಭರವಸವಿಟ್ಟಿದ್ದೇನೆ. |
22
|
ಯೆಹೋವನೇ, ನಾವು ನಿನ್ನನ್ನೇ ನಿರೀಕ್ಷಿಸಿಕೊಂಡಿದ್ದೇವೆ. ನಿನ್ನ ಶಾಶ್ವತವಾದ ಪ್ರೀತಿಯು ನಮ್ಮ ಮೇಲಿರಲಿ. |
Psalms 33:11 Kannada Language Bible Words basic statistical display
COMING SOON ...