1
|
ದುಷ್ಟರನ್ನು ನೋಡಿ ಉರಿಗೊಳ್ಳಬೇಡ. ಕೆಡುಕರನ್ನು ಕಂಡು ಹೊಟ್ಟೆಕಿಚ್ಚು ಪಡಬೇಡ. |
2
|
ದುಷ್ಟರು ಹುಲ್ಲಿನಂತೆಯೂ ಸೊಪ್ಪಿನಂತೆಯೂ ಬೇಗನೆ ಒಣಗಿಹೋಗುವರು. |
3
|
ನೀನು ಯೆಹೋವನಲ್ಲಿ ಭರವಸವಿಟ್ಟು ಒಳ್ಳೆಯ ಕಾರ್ಯಗಳನ್ನು ಮಾಡಿದರೆ, ದೀರ್ಘಕಾಲ ಬದುಕುವೆ; ಭೂಮಿಯ ಅನೇಕ ಫಲಗಳನ್ನು ಅನುಭವಿಸುವೆ. |
4
|
ಯೆಹೋವನಿಗೆ ಸಂತೋಷದಿಂದ ಸೇವೆಮಾಡು. ನಿನಗೆ ಬೇಕಾದುದನ್ನು ಆತನೇ ಕೊಡುವನು. |
5
|
ಯೆಹೋವನನ್ನು ಆಶ್ರಯಿಸಿಕೋ, ಆತನಲ್ಲಿ ಭರವಿಸವಿಡು. ನಿನಗೆ ಅಗತ್ಯವಾದದ್ದನ್ನು ಆತನೇ ಮಾಡುವನು. |
6
|
ನಿನ್ನ ನೀತಿಯೂ ನ್ಯಾಯವೂ ಮಧಾಹ್ನದ ಸೂರ್ಯನಂತೆ ಪ್ರಕಾಶಿಸಲಿ. |
7
|
ಯೆಹೋವನಲ್ಲಿ ಭರವಸವಿಟ್ಟು ಆತನ ಸಹಾಯಕ್ಕಾಗಿ ಕಾದುಕೊಂಡಿರು. ಕೆಡುಕರ ಅಭಿವೃದ್ಧಿಯನ್ನು ಕಂಡು ಉರಿಗೊಳ್ಳಬೇಡ. ಕೆಡುಕರ ಕುಯುಕ್ತಿಗಳು ನೆರವೇರಿದರೂ ಹೊಟ್ಟೇಕಿಚ್ಚುಪಡಬೇಡ. |
8
|
ಕೋಪದಿಂದಿರಬೇಡ! ರೋಷದಿಂದಿರಬೇಡ! ಉರಿಗೊಳ್ಳಬೇಡ! ಅವು ನಿನ್ನನ್ನು ಕೆಡುಕಿಗೆ ನಡೆಸುತ್ತವೆ. |
9
|
ದುಷ್ಟರಾದರೋ ನಾಶವಾಗುವರು. ಯೆಹೋವನಲ್ಲಿ ಮೊರೆಯಿಡುವವರಾದರೋ ವಾಗ್ದಾನ ಮಾಡಲ್ಪಟ್ಟ ಭೂಮಿಯನ್ನು ಪಡೆದುಕೊಳ್ಳುವರು. |
10
|
ಇನ್ನು ಸ್ವಲ್ಪ ಕಾಲದೊಳಗೆ ದುಷ್ಟರು ಇರುವುದೇ ಇಲ್ಲ. ನೀನು ಅವರಿಗಾಗಿ ಹುಡುಕಿದರೂ ಅವರು ಸಿಕ್ಕುವುದಿಲ್ಲ! |
11
|
ವಾಗ್ದಾನ ಮಾಡಲ್ಪಟ್ಟ ಭೂಮಿಯನ್ನು ದೀನರು ಪಡೆದುಕೊಳ್ಳುವರು; ಸಮಾಧಾನವನ್ನು ಅನುಭವಿಸುವರು. |
12
|
ದುಷ್ಟರು ನೀತಿವಂತರ ವಿರುದ್ಧ ದುರಾಲೋಚನೆಗಳನ್ನು ಮಾಡುವರು. ನೀತಿವಂತರ ಮೇಲೆ ತಮಗಿರುವ ಕೋಪದಿಂದ ಅವರು ಹಲ್ಲುಕಡಿಯುವರು. |
13
|
ಆದರೆ ನಮ್ಮ ಒಡೆಯನು ಆ ದುಷ್ಟರನ್ನು ನೋಡಿ ನಗುವನು. ಅವರಿಗೆ ಬರಲಿರುವ ಆಪತ್ತುಗಳು ಆತನಿಗೆ ತಿಳಿದಿವೆ. |
14
|
ಕೆಡುಕರು ಖಡ್ಗಗಳನ್ನು ಕೈಗೆತ್ತಿಕೊಳ್ಳುವರು; ತಮ್ಮ ಬಿಲ್ಲುಗಳಿಗೆ ಬಾಣಗಳನ್ನು ಹೂಡಿ ಗುರಿಯಿಡುವರು. ಅವರು ಬಡವರನ್ನೂ ಅಸಹಾಯಕರನ್ನೂ ಒಳ್ಳೆಯವರನ್ನೂ ಯಥಾರ್ಥವಂತರನ್ನೂ ಕೊಲ್ಲಬೇಕೆಂದಿದ್ದಾರೆ. |
15
|
ಆದರೆ ಅವರ ಬಿಲ್ಲುಗಳು ಮುರಿದುಹೋಗುತ್ತವೆ. ಅವರ ಖಡ್ಗಗಳು ಅವರ ಹೃದಯಗಳಿಗೇ ನಾಟಿಕೊಳ್ಳುತ್ತವೆ. |
16
|
ದುಷ್ಟನ ಶ್ರೀಮಂತಿಕೆಗಿಂತಲೂ ನೀತಿವಂತನ ಬಡತನವೇ ಮೇಲು. |
17
|
ಯಾಕಂದರೆ ದುಷ್ಟರು ನಾಶವಾಗುವರು. ನೀತಿವಂತರನ್ನಾದರೋ ಯೆಹೋವನು ಪರಿಪಾಲಿಸುವನು. |
18
|
ಯೆಹೋವನು ತನ್ನ ಭಕ್ತರನ್ನು ಅವರ ಜೀವಮಾನ ಪೂರ್ತಿ ಕಾಪಾಡುವನು. ಅವರ ಭೂಮಿಯು ಸದಾಕಾಲ ಅವರದೇ ಆಗಿರುವುದು. |
19
|
ಆಪತ್ಕಾಲದಲ್ಲಿ ನೀತಿವಂತರು ನಾಶವಾಗುವುದಿಲ್ಲ. ಬರಗಾಲದಲ್ಲಿಯೂ ಅವರಿಗೆ ಕೊರತೆಯಿರುವುದಿಲ್ಲ. |
20
|
ದುಷ್ಟರಾದರೊ ಯೆಹೋವನ ವೈರಿಗಳಾಗಿದ್ದಾರೆ. ಅವರು ನಾಶವಾಗುವರು. ಅವರ ಕಣಿವೆಗಳು ಒಳಗಿ ಸುಟ್ಟುಹೋಗುತ್ತವೆ; ಅವರು ಹೊಗೆಯಂತೆ ಇಲ್ಲವಾಗುವರು. |
21
|
ದುಷ್ಟನು ತಾನು ಮಾಡಿದ ಸಾಲವನ್ನು ತೀರಿಸುವುದಿಲ್ಲ. ನೀತಿವಂತನಾದರೊ ಬೇರೆಯವರಿಗೆ ಉದಾರವಾಗಿ ಕೊಡುವನು. |
22
|
ನೀತಿವಂತರು ಆಶೀರ್ವದಿಸಿದರೆ, ವಾಗ್ದಾನಮಾಡಲ್ಪಟ್ಟ ಭೂಮಿಯನ್ನು ಜನರು ಪಡೆದುಕೊಳ್ಳುವರು. ಆದರೆ ಅವರು ಶಪಿಸಿದರೆ, ಜನರು ನಾಶವಾಗುವರು. |
23
|
ಯೆಹೋವನು ನೀತಿವಂತನನ್ನು ತನ್ನ ಮಾರ್ಗದಲ್ಲಿ ನಡೆಸುವನು ಮತ್ತು ಅವನನ್ನು ಮೆಚ್ಚಿಕೊಳ್ಳುವನು. |
24
|
ಅವನು ಎಡವಿದರೂ ಬೀಳುವುದಿಲ್ಲ; ಯಾಕಂದರೆ ಯೆಹೋವನು ಅವನ ಕೈಹಿಡಿದುಕೊಂಡಿದ್ದಾನೆ. |
25
|
ನಾನು ಬಾಲಕನಾಗಿದ್ದೆನು, ಈಗ ವೃದ್ಧನಾಗಿದ್ದೇನೆ. ನೀತಿವಂತರನ್ನು ದೇವರು ತೊರೆದುಬಿಟ್ಟಿದ್ದನ್ನಾಗಲೀ ಅವನ ಮಕ್ಕಳು ಆಹಾರಕ್ಕಾಗಿ ಬೇಡುವುದನ್ನಾಗಲಿ ನಾನೆಂದೂ ಕಾಣಲಿಲ್ಲ. |
26
|
ನೀತಿವಂತನು ಬೇರೆಯವರಿಗೆ ಉದಾರವಾಗಿ ಕೊಡುವನು. ಅವನ ಮಕ್ಕಳು ಆಶೀರ್ವಾದ ಹೊಂದುವರು. |
27
|
ನೀನು ಕೆಟ್ಟದ್ದನ್ನು ಮಾಡದೆ ಒಳ್ಳೆಯದನ್ನೇ ಮಾಡಿದರೆ ಸದಾಕಾಲ ಬದುಕುವೆ. |
28
|
ಯೆಹೋವನು ನ್ಯಾಯವನ್ನು ಪ್ರೀತಿಸುವನು. ಆತನು ತನ್ನ ಭಕ್ತರನ್ನು ತೊರೆದುಬಿಡದೆ ಅವರನ್ನು ಯಾವಾಗಲೂ ಕಾಪಾಡುವನು. ದುಷ್ಟರನ್ನಾದರೋ ಆತನು ನಾಶಮಾಡುವನು. |
29
|
ದೇವರು ವಾಗ್ದಾನ ಮಾಡಿದ ಭೂಮಿಯನ್ನು ನೀತಿವಂತರು ಪಡೆದುಕೊಂಡು ಅಲ್ಲಿ ಸದಾಕಾಲ ವಾಸಿಸುವರು. |
30
|
ನೀತಿವಂತನು ಒಳ್ಳೆಯ ಬುದ್ಧಿವಾದ ಹೇಳುವನು. ಅವನ ತೀರ್ಮಾನಗಳು ನ್ಯಾಯಬದ್ಧವಾಗಿರುತ್ತವೆ. |
31
|
ಯೆಹೋವನ ಉಪದೇಶವು ನೀತಿವಂತನ ಹೃದಯದಲ್ಲಿರುತ್ತದೆ. ಅವನು ನೀತಿ ಮಾರ್ಗದಲ್ಲಿ ನಡೆಯವನು. |
32
|
ಕೆಡುಕರಾದರೋ ನೀತಿವಂತರಿಗೆ ಕೇಡುಮಾಡಲು ಹೊಂಚುಹಾಕುವರು. |
33
|
ಆದರೆ ಯೆಹೋವನು ನೀತಿವಂತಿರನ್ನು ತೊರೆದುಬಿಡುವುದಿಲ್ಲ. ನೀತಿವಂತರಿಗೆ ಅಪರಾಧಿಗಳೆಂದು ತೀರ್ಪಾಗಲು ಆತನು ಬಿಡುವುದಿಲ್ಲ. |
34
|
ಯೆಹೋವನನ್ನೇ ನಿರೀಕ್ಷಿಸಿಕೊಂಡು ಆತನ ಮಾರ್ಗವನ್ನು ಅನುಸರಿಸಿರಿ. ಆಗ ಆತನು ನಿಮ್ಮನ್ನು ಜಯಶಾಲಿಗಳನ್ನಾಗಿ ಮಾಡುವನು; ದೇವರು ವಾಗ್ದಾನ ಮಾಡಿದ ಭೂಮಿಯನ್ನು ನೀವು ಪಡೆದುಕೊಳ್ಳುವಿರಿ. |
35
|
ಮಹಾದುಷ್ಟನನ್ನು ನಾನು ನೋಡಿದ್ದೇನೆ. ಅವನು ಮಹಾವೃಕ್ಷದಂತೆ ಬಲಿಷ್ಠನಾಗಿದ್ದನು. |
36
|
ಸ್ವಲ್ಪಕಾಲದ ಮೇಲೆ ಅವನು ಇಲ್ಲವಾದನು. ನಾನು ಅವನಿಗಾಗಿ ಹುಡುಕಿದರೂ ಅವನು ಸಿಕ್ಕಲಿಲ್ಲ. |
37
|
ಪವಿತ್ರರನ್ನೂ ಯಥಾರ್ಥರನ್ನೂ ಗಮನಿಸು. ಶಾಂತಿ ಪ್ರಿಯರು ಅನೇಕ ಸಂತಾನಗಳನ್ನು ಹೊಂದಿಕೊಳ್ಳುವರು. |
38
|
ಧರ್ಮಶಾಸ್ತ್ರವನ್ನು ಉಲ್ಲಂಘಿಸುವವರು ಸಂಪೂರ್ಣವಾಗಿ ನಾಶವಾಗುವರು. ಅವರ ಮಕ್ಕಳೂ ನಾಶವಾಗುವರು. |
39
|
ಯೆಹೋವನು ನೀತಿವಂತರನ್ನು ಕಾಪಾಡುತ್ತಾನೆ. ಅವರು ಆಪತ್ತಿನಲ್ಲಿರುವಾಗ ಆತನೇ ಅವರಿಗೆ ಆಶ್ರಯ ಸ್ಥಾನವಾಗಿದ್ದಾನೆ. |
40
|
ಯೆಹೋವನು ನೀತಿವಂತರಿಗೆ ಸಹಾಯಕನಾಗಿ ಅವರನ್ನು ರಕ್ಷಿಸುತ್ತಾನೆ. ನೀತಿವಂತರು ಆತನನ್ನು ಆಶ್ರಯಿಸಿಕೊಂಡಾಗ ಆತನು ಅವರನ್ನು ದುಷ್ಟರಿಂದ ತಪ್ಪಿಸಿ ಕಾಪಾಡುವನು. |
Psalms 37:27 Kannada Language Bible Words basic statistical display
COMING SOON ...