1
|
ಸರ್ವಜನಾಂಗಗಳೇ, ಚಪ್ಪಾಳೆ ತಟ್ಟಿರಿ; ದೇವರಿಗೆ ಆನಂದ ಘೋಷಮಾಡಿರಿ! |
2
|
ಮಹೋನ್ನತನಾದ ಯೆಹೋವನು ಭಯಂಕರನಾಗಿದ್ದಾನೆ. ಆತನು ಭೂಲೋಕಕ್ಕೆಲ್ಲಾ ಮಹಾರಾಜನಾಗಿದ್ದಾನೆ. |
3
|
ಆತನು ಜನಾಂಗಗಳನ್ನು ಸೋಲಿಸಲು ನಮಗೆ ಸಹಾಯಮಾಡಿ ಅವುಗಳನ್ನು ನಮಗೆ ಅಧೀನಪಡಿಸಿದ್ದಾನೆ. |
4
|
ದೇವರು ಈ ದೇಶವನ್ನು ನಮಗೋಸ್ಕರವಾಗಿ ಆರಿಸಿಕೊಂಡನು; ತನಗೆ ಪ್ರಿಯರಾದ ಯಾಕೋಬನ ವಂಶಸ್ಥರಿಗಾಗಿ ಆತನು ಮನೋಹರವಾದ ಈ ದೇಶವನ್ನು ಆರಿಸಿಕೊಂಡನು. |
5
|
ಯೆಹೋವನು ಆನಂದಘೋಷದೊಡನೆಯೂ ತುತ್ತೂರಿಗಳ ಧ್ವನಿಯೊಡನೆಯೂ ಸಿಂಹಾಸನಾರೂಢನಾಗುವನು. |
6
|
ದೇವರನ್ನು ಸಂಕೀರ್ತಿಸಿರಿ, ಕೀರ್ತಿಸಿರಿ. ನಮ್ಮ ರಾಜನನ್ನು ಸಂಕೀರ್ತಿಸಿರಿ, ಸಂಕೀರ್ತಿಸಿರಿ. |
7
|
ದೇವರು ಇಡೀಲೋಕಕ್ಕೆ ರಾಜನಾಗಿದ್ದಾನೆ; ಆತನಿಗೆ ಸ್ತುತಿಗೀತೆಗಳನ್ನು ಹಾಡಿರಿ. |
8
|
ದೇವರು ತನ್ನ ಪರಿಶುದ್ಧ ಸಿಂಹಾಸನದ ಮೇಲೆ ಕುಳಿತುಕೊಂಡಿದ್ದಾನೆ; ದೇವರು ಎಲ್ಲಾ ಜನಾಂಗಗಳನ್ನು ಆಳುವನು. |
9
|
ಜನಾಂಗಗಳ ನಾಯಕರು ಅಬ್ರಹಾಮನ ದೇವಜನರೊಡನೆ ಕೂಡಿಬರುವರು. ಎಲ್ಲಾ ಜನಾಂಗಗಳ ಎಲ್ಲಾ ನಾಯಕರುಗಳು ದೇವರಿಗೆ ಅಧೀನರಾಗಿದ್ದಾರೆ. ದೇವರು ಅವರಿಗೆ ಸರ್ವಾಧಿಕಾರಿ! |
Psalms 47:7 Kannada Language Bible Words basic statistical display
COMING SOON ...