Indian Language Bible Word Collections
Psalms 5:1
Psalms Chapters
Psalms 5 Verses
Books
Old Testament
New Testament
Bible Versions
English
Tamil
Hebrew
Greek
Malayalam
Hindi
Telugu
Kannada
Gujarati
Punjabi
Urdu
Bengali
Oriya
Marathi
Assamese
Books
Old Testament
New Testament
Psalms Chapters
Psalms 5 Verses
1
|
ಯೆಹೋವನೇ, ನನ್ನ ಮಾತುಗಳಿಗೆ ಕಿವಿಗೊಡು. ನನ್ನ ಆಲೋಚನೆಗಳಿಗೆ ಗಮನಕೊಡು. |
2
|
ನನ್ನ ರಾಜನೇ, ನನ್ನ ದೇವರೇ, ನಿನಗೇ ಮೊರೆಯಿಡುವೆನು. ನನ್ನ ಪ್ರಾರ್ಥನೆಯನ್ನು ಆಲೈಸು. |
3
|
ಯೆಹೋವನೇ, ಪ್ರತಿಮುಂಜಾನೆ ನಿನಗೆ ಕಾಣಿಕೆಗಳನ್ನು ಅರ್ಪಿಸಿ ಸಹಾಯಕ್ಕಾಗಿ ಎದುರುನೋಡುವೆನು; ಪ್ರತಿಮುಂಜಾನೆ ನೀನು ನನ್ನ ಪ್ರಾರ್ಥನೆಗಳಿಗೆ ಕಿವಿಗೊಡುವೆ. |
4
|
ನೀನು ದುಷ್ಟತ್ವದಲ್ಲಿ ಸಂತೋಷಿಸುವ ದೇವರಲ್ಲ. ನಿನ್ನ ಸನ್ನಿಧಿಯಲ್ಲಿ ದುಷ್ಟರು ಇರಲಾರರು. |
5
|
ನಿನ್ನನ್ನು ನಂಬದವರು ನಿನ್ನ ಬಳಿಗೆ ಬರಲಾರರು; ದುಷ್ಟರನ್ನು ನೀನು ದ್ವೇಷಿಸುವೆ. |
6
|
ಸುಳ್ಳಾಡುವವರನ್ನು ನೀನು ನಾಶಪಡಿಸುವೆ. ಕೊಲೆಗಾರರನ್ನೂ ಮೋಸಗಾರರನ್ನೂ ಯೆಹೋವನು ದ್ವೇಷಿಸುವನು. |
7
|
ನಾನಂತೂ ನಿನ್ನ ಮಹಾಕೃಪೆಯನ್ನು ಹೊಂದಿದವನಾಗಿ ನಿನ್ನ ಆಲಯಕ್ಕೆ ಬರುವೆನು, ನಿನ್ನಲ್ಲಿ ಭಯಭಕ್ತಿಯುಳ್ಳವನಾಗಿ ನಿನ್ನ ಪವಿತ್ರ ಆಲಯದ ಕಡೆಗೆ ಅಡ್ಡಬೀಳುವೆನು. |
8
|
ಯೆಹೋವನೇ, ವೈರಿಗಳು ನನ್ನನ್ನು ಗಮನಿಸುತ್ತಿರುವುದರಿಂದ ನಿನ್ನ ನೀತಿಯ ಮಾರ್ಗವನ್ನು ನನಗೆ ತೋರಿಸಿ, ನಿನ್ನ ಚಿತ್ತಾನುಸಾರವಾಗಿ ನನ್ನನ್ನು ನಡೆಸು. |
9
|
ಅವರ ಮಾತುಗಳಲ್ಲಿ ಸತ್ಯವೆಂಬುದೇ ಇಲ್ಲ. ಅವರ ಬಾಯಿಗಳು ಸವಿಮಾತುಗಳನ್ನಾಡಿದರೂ ಅವರ ಹೃದಯಗಳು ನಾಶಕರವಾದ ಗುಂಡಿಯಾಗಿವೆ. ಅವರ ಗಂಟಲು ತೆರೆದ ಸಮಾಧಿಗಳಂತಿವೆ. |
10
|
ದೇವರೇ, ಅವರನ್ನು ದಂಡಿಸು! ಅವರು ತಮ್ಮ ಬಲೆಗಳಿಗೇ ಸಿಕ್ಕಿಕೊಳ್ಳಲಿ. ಅವರು ನಿನಗೆ ವಿರೋಧವಾಗಿ ತಿರುಗಿಬಿದ್ದಿದ್ದಾರೆ. ಅವರ ಅನೇಕ ಅಪರಾಧಗಳ ನಿಮಿತ್ತ ಅವರನ್ನು ದಂಡಿಸು. |
11
|
ದೇವರಲ್ಲಿ ಭರವಸವಿಟ್ಟಿರುವ ಜನರೆಲ್ಲರೂ ಸದಾಕಾಲ ಸಂತೋಷವಾಗಿರಲಿ. ನಿನ್ನ ಹೆಸರನ್ನು ಪ್ರೀತಿಸುವ ಜನರನ್ನು ಕಾಪಾಡಿ ಅವರಿಗೆ ಶಕ್ತಿಯನ್ನು ದಯಪಾಲಿಸು. |
12
|
ಯೆಹೋವನೇ, ನೀನು ನೀತಿವಂತರಿಗೆ ಒಳ್ಳೆಯದನ್ನೇ ಮಾಡುವೆ; ನೀನು ಅವರನ್ನು ವಿಶಾಲವಾದ ಗುರಾಣಿಯಂತೆ ಸಂರಕ್ಷಿಸುವೆ. |