ದೇವರು ನಿನ್ನನ್ನು ಶಾಶ್ವತವಾಗಿ ನಾಶಮಾಡುವನು, ಗಿಡವನ್ನು ಬೇರು ಸಹಿತ ಕಿತ್ತುಹಾಕುವಂತೆ ಆತನು ನಿನ್ನನ್ನು ಹಿಡಿದು ನಿನ್ನ ಮನೆಯೊಳಗಿಂದ [*ಮನೆಯೊಳಗಿಂದ ಇದರ ಅರ್ಥ ದೇಹ. ದೇವರು ಈ ವ್ಯಕ್ತಿಯನ್ನು ಕೊಲ್ಲುತ್ತಾನೆ ಎಂದು ತಿಳಿಸುವ ಪದ್ಯರೂಪವಿದು.] ಕಿತ್ತು ಬೀಸಾಡುವನು.
ದೇವರೇ, ನಿನ್ನ ಉಪಕಾರಗಳಿಗಾಗಿ ನಾನು ನಿನ್ನನ್ನು ಎಂದೆಂದಿಗೂ ಕೊಂಡಾಡುವೆನು. ನಿನ್ನ ಹೆಸರಿನಲ್ಲೇ ಭರವಸವಿಟ್ಟಿರುವೆ; ಯಾಕೆಂದರೆ ನಿನ್ನ ಹೆಸರು ಎಷ್ಟೋ ಒಳ್ಳೆಯದು. ನಿನ್ನ ಪವಿತ್ರ ಜನರ ಸನ್ನಿಧಿಯಲ್ಲಿ ನಿನ್ನನ್ನು ಕೊಂಡಾಡುವೆನು.