ಸೇನಾಧೀಶ್ವರನಾದ ಯೆಹೋವನೇ, ನನ್ನ ರಾಜನೇ, ನನ್ನ ದೇವರೇ, ಗುಬ್ಬಚ್ಚಿಗಳಿಗೂ ಪಾರಿವಾಳಗಳಿಗೂ ನಿನ್ನ ಆಲಯದಲ್ಲಿ ಗೂಡುಗಳಿವೆ. ನಿನ್ನ ಯಜ್ಞವೇದಿಕೆಯ ಸಮೀಪದಲ್ಲಿಯೇ ಗೂಡುಕಟ್ಟಿಕೊಂಡು ಮರಿಮಾಡುತ್ತವೆ.
ಬೇರೊಂದು ಸ್ಥಳದಲ್ಲಿ ಸಾವಿರ ದಿನಗಳಿರುವುದಕ್ಕಿಂತಲೂ ನಿನ್ನಾಲಯದಲ್ಲಿ ಒಂದು ದಿನವಿರುವುದೇ ಉತ್ತಮ. ದುಷ್ಟರ ಮನೆಯಲ್ಲಿ ವಾಸಿಸುವುದಕ್ಕಿಂತಲೂ ನನ್ನ ದೇವರ ಆಲಯದಲ್ಲಿ ದ್ವಾರಪಾಲಕನಾಗಿರುವುದೇ ಉತ್ತಮ.
ಯೆಹೋವದೇವರು ನಮ್ಮ ಸಂರಕ್ಷಕನೂ ಮಹಿಮಾ ಪೂರ್ಣನಾದ ರಾಜನೂ ಆಗಿದ್ದಾನೆ. ಯೆಹೋವನು ನಮಗೆ ದಯೆಯನ್ನೂ ಘನತೆಯನ್ನೂ ಅನುಗ್ರಹಿಸುವನು. ಆತನು ಎಲ್ಲಾ ಒಳ್ಳೆಯವುಗಳನ್ನು ತನ್ನ ಭಕ್ತರಿಗೆ ಕೊಡುವನು.