Bible Languages

Indian Language Bible Word Collections

Bible Versions

Books

Psalms Chapters

Psalms 87 Verses

Bible Versions

Books

Psalms Chapters

Psalms 87 Verses

1 ರಚನೆಗಾರರು : ಕೋರಹೀಯರು. ದೇವರು ತನ್ನ ಆಲಯವನ್ನು ಜೆರುಸಲೇಮಿನ ಪವಿತ್ರ ಪರ್ವತಗಳ ಮೇಲೆ ಕಟ್ಟಿದ್ದಾನೆ.
2 ಯೆಹೋವನು ಚೀಯೋನಿನ ಬಾಗಿಲುಗಳನ್ನು ಇಸ್ರೇಲಿನ ಇತರ ಸ್ಥಳಗಳಿಗಿಂತಲೂ ಹೆಚ್ಚಾಗಿ ಪ್ರೀತಿಸುವನು.
3 ದೇವರ ಪಟ್ಟಣವೇ, ಜನರು ನಿನ್ನ ಬಗ್ಗೆ ಆಶ್ಚರ್ಯಕರವಾದ ಸಂಗತಿಗಳನ್ನು ಹೇಳುವರು.
4 ದೇವಜನರು ಪ್ರಪಂಚದ ಅನೇಕ ಕಡೆಗಳಲ್ಲಿ ಈಗ ವಾಸವಾಗಿದ್ದಾರೆ. ಅವರಲ್ಲಿ ಕೆಲವರು ಈಜಿಪ್ಟಿನಲ್ಲಿಯೂ, ಬಾಬಿಲೋನಿನಲ್ಲಿಯೂ ನೆಲೆಸಿದ್ದಾರೆ. ಇನ್ನು ಕೆಲವರು ಫಿಲಿಷ್ಟಿಯದಲ್ಲಿಯೂ ತೂರಿನಲ್ಲಿಯೂ ಇಥಿಯೋಪಿಯದಲ್ಲಿಯೂ ನೆಲೆಸಿದ್ದಾರೆ.
5 ಚೀಯೋನಿನಲ್ಲಿ ಜನಿಸಿದ ಪ್ರತಿಯೊಬ್ಬರೂ ದೇವರಿಗೆ ಗೊತ್ತು. ಮಹೋನ್ನತನಾದ ದೇವರೇ ಆ ಪಟ್ಟಣವನ್ನು ಕಟ್ಟಿದನು.
6 ದೇವರು ತನ್ನ ಜನರೆಲ್ಲರ ಬಗ್ಗೆ ಪಟ್ಟಿಮಾಡಿದ್ದಾನೆ. ಪ್ರತಿಯೊಬ್ಬನ ಹುಟ್ಟಿದ ಸ್ಥಳವು ದೇವರಿಗೆ ತಿಳಿದಿದೆ.
7 ದೇವರ ಮಕ್ಕಳು ಹಬ್ಬಗಳನ್ನು ಆಚರಿಸಲು ಜೆರುಸಲೇಮಿಗೆ ಹೋಗುವರು. ಅವರು ಸಂತೋಷದಿಂದ ಹಾಡುತ್ತಾ ಕುಣಿದಾಡುವರು. “ಒಳ್ಳೆಯವುಗಳೆಲ್ಲ ಬರುವುದು ಜೆರುಸಲೇಮಿನಿಂದಲೇ” ಎಂದು ಅವರು ಹೇಳುವರು.

Psalms 87 Verses

Psalms 87 Chapter Verses Kannada Language Bible Words display

COMING SOON ...

×

Alert

×