Bible Languages

Indian Language Bible Word Collections

Bible Versions

Books

Song of Solomon Chapters

Song of Solomon 1 Verses

Bible Versions

Books

Song of Solomon Chapters

Song of Solomon 1 Verses

1 ಸೊಲೊಮೋನನ ಮನೋಹರವಾದ ಗೀತೆ
2 ನಿನ್ನ ಬಾಯಿಂದ ನನ್ನನ್ನು ಮುದ್ದಾಡು, ನಿನ್ನ ಪ್ರೀತಿ ದ್ರಾಕ್ಷಾರಸಕ್ಕಿಂತಲೂ ಉತ್ತಮ.
3 ನಿನ್ನ ತೈಲವು ಪರಿಮಳಭರಿತವಾಗಿದೆ; ನಿನ್ನ ಹೆಸರು ಸುಗಂಧ ದ್ರವ್ಯದಂತಿದೆ. ಆದ್ದರಿಂದ ಯುವತಿಯರು ನಿನ್ನನ್ನು ಪ್ರೀತಿಸುವರು.
4 ನನ್ನನ್ನು ಕರೆದುಕೊಂಡು ಹೋಗು! ನಾವು ಓಡಿ ಹೋಗೋಣ! ರಾಜನು ನನ್ನನ್ನು ಅಂತಃಪುರಕ್ಕೆ ಬರಮಾಡಿದ್ದಾನೆ. ನಿನ್ನಲ್ಲಿ ಹರ್ಷಿಸಿ ಉಲ್ಲಾಸಿಸುವೆವು. ನಿನ್ನ ಪ್ರೀತಿಯು ದ್ರಾಕ್ಷಾರಸಕ್ಕಿಂತಲೂ ಉತ್ತಮ. ಯುವತಿಯರು ನಿನ್ನನ್ನು ಹೃದಯಪೂರ್ವಕವಾಗಿ ಪ್ರೀತಿಸುವರು.
5 ಜೆರುಸಲೇಮಿನ ಸ್ತ್ರೀಯರೇ, ನಾನು ಕೇದಾರಿನ ಗುಡಾರಗಳಂತೆ ಕಪ್ಪಾಗಿದ್ದರೂ ಸೊಲೊಮೋನನ ಪರದೆಗಳಂತೆ ಸುಂದರಳಾಗಿರುವೆ.
6 ಸೂರ್ಯನ ತಾಪಕ್ಕೆ ನಾನೆಷ್ಟು ಕಪ್ಪಾಗಿದ್ದೇನೆಂದು ನೋಡಬೇಡಿರಿ. ನನ್ನ ಸಹೋದರರು ನನ್ನ ಮೇಲೆ ಕೋಪಗೊಂಡು ದ್ರಾಕ್ಷಿತೋಟಗಳನ್ನು ನೋಡಿಕೊಳ್ಳಲು ನನ್ನನ್ನು ನೇಮಿಸಿದರು. ಆದರೆ ನಾನು ನನ್ನ ತೋಟವನ್ನು ಕಾಯಲಿಲ್ಲ.
7 ನನ್ನ ಪ್ರಾಣಪ್ರಿಯನೇ, ನಿನ್ನ ಕುರಿಗಳನ್ನು ಎಲ್ಲಿ ಮೇಯಿಸುವೆ? ಮಧ್ಯಾಹ್ನದಲ್ಲಿ ಅವುಗಳನ್ನು ಎಲ್ಲಿ ಮಲಗಿಸುವೆ? ಮುಸುಕುಹಾಕಿಕೊಂಡು ನಿನ್ನ ಸ್ನೇಹಿತರ ಮಂದೆಗಳ ಹತ್ತಿರ ಅಲೆದಾಡುವ ಹುಡುಗಿಯಂತೆ ನಾನೇಕಿರಬೇಕು?
8 ಸ್ತ್ರೀಯರಲ್ಲಿ ಅತ್ಯಂತ ರೂಪವತಿಯೇ, ನಿನ್ನ ಪ್ರಿಯನು ಎಲ್ಲಿದ್ದಾನೆಂಬುದು ನಿನಗೆ ಗೊತ್ತಿಲ್ಲದಿದ್ದರೆ, ಹೋಗು, ಕುರಿಗಳನ್ನು ಹಿಂಬಾಲಿಸು, ಕುರುಬರ ಗುಡಾರಗಳ ಬಳಿಯಲ್ಲಿ ನಿನ್ನ ಮೇಕೆಮರಿಗಳನ್ನು ಮೇಯಿಸು.
9 ನನ್ನ ಪ್ರಿಯೆ, ಫರೋಹನ ರಥಗಳ ಮಧ್ಯದಲ್ಲಿರುವ ಹೆಣ್ಣು ಕುದುರೆಗಿಂತಲೂ ನೀನು ಸುಂದರಳಾಗಿರುವೆ.
10 ನಿನ್ನ ಕೆನ್ನೆಗಳು ಅಲಂಕಾರಗಳಿಂದ ಸುಂದರವಾಗಿವೆ. ನಿನ್ನ ಕಂಠವು ಹಾರಗಳಿಂದ ಅಂದವಾಗಿವೆ.
11 ಬೆಳ್ಳಿಯ ತಿರುಪಿನಿಂದ ಕೂಡಿದ ಚಿನ್ನದ ಆಭರಣಗಳನ್ನು ನಾವು ನಿನಗೋಸ್ಕರ ಮಾಡಿಸುವೆವು.
12 ಓಲಗದ ಮೇಲೆ ಮಲಗಿರುವ ರಾಜನಿಗೆ ನನ್ನ ಸುಗಂಧ ದ್ರವ್ಯದ ಪರಿಮಳವು ಹರಡುವುದು.
13 ನನ್ನ ಪ್ರಿಯನು ರಾತ್ರಿಯೆಲ್ಲಾ ನನ್ನ ಸ್ತನಗಳ ನಡುವೆ ಇರುವ ಗೋಲರಸದ ಚೀಲದಂತಿದ್ದಾನೆ.
14 ನನ್ನ ಪ್ರಿಯನು ನನಗೆ ಏನ್ಗೆದಿಯ ತೋಟಗಳ ಗೋರಂಟೆಯ ಹೂಗೊಂಚಲು.
15 ನನ್ನ ಪ್ರಿಯೆ, ನೀನು ರೂಪವತಿ! ನೀನು ಸುಂದರಿ! ನಿನ್ನ ಕಣ್ಣುಗಳು ಪಾರಿವಾಳಗಳಂತೆ ಕೋಮಲ.
16 ನನ್ನ ಪ್ರಿಯನೇ, ನೀನು ಬಹು ಸುಂದರ! ಹೌದು, ನೀನು ಎಷ್ಟೋ ಮನೋಹರ! ನಮ್ಮ ಹಾಸಿಗೆ ಎಷ್ಟೋ ಉಲ್ಲಾಸಕರ!
17 ನಮ್ಮ ಮನೆಯ ತೊಲೆಗಳು ದೇವದಾರು ಮರದ ತೊಲಗಳು. ನಮ್ಮ ಮನೆಯ ಜಂತೆಗಳು ತುರಾಯಿ ಮರದ ಜಂತೆಗಳು.

Song of Solomon 1 Verses

Song-of-Solomon 1 Chapter Verses Kannada Language Bible Words display

COMING SOON ...

×

Alert

×