Bible Languages

Indian Language Bible Word Collections

Bible Versions

Books

Song of Solomon Chapters

Song of Solomon 2 Verses

Bible Versions

Books

Song of Solomon Chapters

Song of Solomon 2 Verses

1 ನಾನು ಶಾರೋನಿನಲ್ಲಿರುವ ಗುಲಾಬಿ; ತಗ್ಗುಗಳಲ್ಲಿರುವ ತಾವರೆ.
2 ನನ್ನ ಪ್ರಿಯೆ, ಮುಳ್ಳುಗಳ ನಡುವೆ ಇರುವ ತಾವರೆ ಹೂವಿನಂತೆ ನೀನು ಯುವತಿಯರಲ್ಲೆಲ್ಲಾ ಶ್ರೇಷ್ಠಳು.
3 ನನ್ನ ಪ್ರಿಯನೇ, ಕಾಡುಮರಗಳ ನಡುವೆ ಇರುವ ಒಂದು ಸೇಬಿನ ಮರದಂತೆ ನೀನು ಯುವಕರಲ್ಲೆಲ್ಲಾ ಶ್ರೇಷ್ಠನು. ನಾನು ಅವನ ನೆರಳಲ್ಲಿ ಕುಳಿತುಕೊಂಡು ಸಂತೋಷಿಸಿದೆ; ಅವನ ಫಲವು ನನ್ನ ನಾಲಿಗೆಗೆ ಸಿಹಿಯಾಗಿತ್ತು.
4 ನನ್ನ ಪ್ರಿಯಕರನು ನನ್ನನ್ನು ದ್ರಾಕ್ಷಾರಸದ ಮನೆಗೆ ಕರೆದುಕೊಂಡು ಬಂದನು; ನನ್ನ ಕುರಿತು ಆತನಿಗಿದ್ದ ಉದ್ದೇಶ ಪ್ರೀತಿಯೇ.
5 ದ್ರಾಕ್ಷಿಯಿಂದ ನನ್ನನ್ನು ಉಪಚರಿಸಿರಿ; ಸೇಬು ಹಣ್ಣುಗಳಿಂದ ನನ್ನನ್ನು ಆದರಿಸಿರಿ; ನಾನು ಅನುರಾಗದಿಂದ ಅಸ್ವಸ್ಥಳಾಗಿರುವೆ.
6 ನನ್ನ ಪ್ರಿಯನ ಎಡಗೈ ತಲೆದಿಂಬಾಗಿ ಅವನ ಬಲಗೈ ನನ್ನನ್ನು ತಬ್ಬಿಕೊಳ್ಳುವುದು!
7 ಜೆರುಸಲೇಮಿನ ಸ್ತ್ರೀಯರೇ, ತಕ್ಕಕಾಲಕ್ಕೆ ಮೊದಲೇ ಪ್ರೀತಿಯನ್ನು ಹುಟ್ಟಿಸಿ, ಬೆಳೆಯಿಸುವುದಿಲ್ಲವೆಂದು ಜಿಂಕೆಗಳ ಮೇಲೆಯೂ ಕಾಡುಹುಲ್ಲೆಗಳ ಮೇಲೆಯೂ ನನಗೆ ಪ್ರಮಾಣ ಮಾಡಿರಿ.
8 ಅಗೋ, ನನ್ನ ಪ್ರಿಯನ ಸ್ವರ! ಅವನು ಬೆಟ್ಟಗಳ ಮೇಲೆ ನೆಗೆಯುತ್ತಾ ಗುಡ್ಡಗಳ ಮೇಲೆ ಕುಪ್ಪಳಿಸುತ್ತಾ ಬರುತ್ತಿದ್ದಾನೆ.
9 ನನ್ನ ಪ್ರಿಯನು ಸಾರಂಗದಂತೆಯೂ ಪ್ರಾಯದ ಜಿಂಕೆಯಂತೆಯೂ ಇದ್ದಾನೆ. ಅಗೋ, ಅವನು ನಮ್ಮ ಗೋಡೆಯ ಆಚೆ ನಿಂತಿದ್ದಾನೆ; ತಡಕೆಗಳಿಂದ ಇಣಿಕಿಹಾಕುತ್ತಿದ್ದಾನೆ; ಕಿಟಕಿಗಳಿಂದ ನೋಡುತ್ತಿದ್ದಾನೆ.
10 ನನ್ನ ಪ್ರಿಯನು ನನಗೆ ಹೀಗಂದನು: “ನನ್ನ ಪ್ರಿಯಳೇ, ನನ್ನ ಸುಂದರಿಯೇ, ಎದ್ದೇಳು, ನಾವು ದೂರ ಹೋಗೋಣ!
11 ಇಗೋ, ಚಳಿಗಾಲ ಕಳೆಯಿತು; ಮಳೆಗಾಲ ಮುಗಿದುಹೋಯಿತು.
12 ಭೂಮಿಯ ಮೇಲೆ ಹೂವುಗಳು ಕಾಣುತ್ತವೆ; ಪಕ್ಷಿಗಳು ಹಾಡುವ ಸಮಯವು ಬಂದಿದೆ. ದೇಶದಲ್ಲಿ ಪಾರಿವಾಳದ ಸ್ವರವು ಕೇಳಿಸುತ್ತದೆ.
13 ಅಂಜೂರದ ಮರ ಕಾಯಿಗಳನ್ನು ಬಿಡುತ್ತಿದೆ; ದ್ರಾಕ್ಷಿಬಳ್ಳಿಯ ಹೂವುಗಳಿಂದ ಸುವಾಸನೆಯು ಬರುತ್ತಿದೆ. ನನ್ನ ಪ್ರಿಯಳೇ, ನನ್ನ ಸುಂದರಿಯೇ, ಎದ್ದೇಳು, ನಾವು ದೂರ ಹೋಗೋಣ!”
14 ಬಂಡೆಯ ಬಿರುಕುಗಳಲ್ಲಿಯೂ ಜರಿಯ ಮರೆಯಲ್ಲಿಯೂ ಇರುವ ನನ್ನ ಪಾರಿವಾಳವೇ, ನಿನ್ನ ರೂಪವನ್ನು ತೋರಿಸು; ನಿನ್ನ ಸ್ವರವನ್ನು ಕೇಳಿಸು, ನಿನ್ನ ಸ್ವರ ಎಷ್ಟೋ ಮಧುರ! ನಿನ್ನ ರೂಪ ಎಷ್ಟೋ ಅಂದ!
15 ದ್ರಾಕ್ಷಿತೋಟಗಳನ್ನು ಹಾಳುಮಾಡುವ ನರಿಗಳನ್ನೂ ನರಿಮರಿಗಳನ್ನೂ ಹಿಡಿಯಿರಿ! ನಮ್ಮ ದ್ರಾಕ್ಷಿತೋಟಗಳು ಈಗ ಹೂಬಿಡುತ್ತಿವೆ.
16 [This verse may not be a part of this translation]
17 [This verse may not be a part of this translation]

Song-of-Solomon 2:1 Kannada Language Bible Words basic statistical display

COMING SOON ...

×

Alert

×