1
|
ಆದಿಯಿಂದ ಇದ್ದದ್ದನ್ನೂ ಆ ಜೀವ ವಾಕ್ಯದ ವಿಷಯವಾಗಿ ಕೇಳಿದ್ದನ್ನೂ ಕಣ್ಣಾರೆ ಕಂಡು ನೋಡಿದ್ದನ್ನೂ ನಾವು ಕೈಯಿಂದ ಮುಟ್ಟಿದ್ದೇವೆ. |
2
|
(ಆ ಜೀವವು ಪ್ರತ್ಯಕ್ಷವಾಯಿತು, ತಂದೆಯ ಬಳಿಯಲ್ಲಿದ್ದು ನಮಗೆ ಪ್ರತ್ಯಕ್ಷವಾದಂಥ ಆ ನಿತ್ಯಜೀವವನ್ನು ನಾವು ಕಂಡು ಅದನ್ನು ಕುರಿತು ಸಾಕ್ಷಿ ಹೇಳಿ ಅದನ್ನು ನಿಮಗೆ ತಿಳಿಯಪಡಿಸುತ್ತೇವೆ). |
3
|
ನಮಗಿರುವ ಅನ್ಯೋನ್ಯತೆಯಲ್ಲಿ ನೀವೂ ಇರ ಬೇಕೆಂದು ನಾವು ಕಂಡು ಕೇಳಿದ್ದನ್ನು ನಿಮಗೆ ಪ್ರಸಿದ್ಧಿ ಪಡಿಸುತ್ತೇವೆ. ನಿಜವಾಗಿಯೂ ನಮಗಿರುವ ಅನ್ಯೋನ್ಯತೆಯು ತಂದೆಯ ಸಂಗಡಲೂ ಆತನ ಮಗನಾದ ಯೇಸು ಕ್ರಿಸ್ತನ ಸಂಗಡಲೂ ಇರು ವಂಥದ್ದು. |
4
|
ನಿಮ್ಮ ಸಂತೋಷವು ಪರಿಪೂರ್ಣ ವಾಗಬೇಕೆಂದು ನಾವು ಇವುಗಳನ್ನು ಬರೆಯುತ್ತೇವೆ. |
5
|
ನಾವು ಆತನಿಂದ ಕೇಳಿ ನಿಮಗೆ ತಿಳಿಸುವ ವಾರ್ತೆ ಯಾವದಂದರೆ--ದೇವರು ಬೆಳಕಾಗಿದ್ದಾನೆ; ಆತನಲ್ಲಿ ಎಷ್ಟು ಮಾತ್ರವೂ ಕತ್ತಲೆಯಿಲ್ಲ ಎಂಬದೇ. |
6
|
ನಾವು ಆತನ ಸಂಗಡ ಅನ್ಯೋನ್ಯತೆಯುಳ್ಳವರಾಗಿದ್ದೇವೆಂದು ಹೇಳಿ ಕತ್ತಲೆಯಲ್ಲಿ ನಡೆದರೆ ಸುಳ್ಳಾಡುವವರಾಗಿದ್ದೇವೆ, ಸತ್ಯವನ್ನನುಸರಿಸುವವರಲ್ಲ. |
7
|
ಆತನು ಬೆಳಕಿನಲ್ಲಿರು ವಂತೆಯೇ ನಾವೂ ಬೆಳಕಿನಲ್ಲಿ ನಡೆದರೆ ನಾವು ಒಬ್ಬರ ಸಂಗಡಲೊಬ್ಬರು ಅನ್ಯೋನ್ಯತೆಯಲ್ಲಿದ್ದೇವೆ; ಆತನ ಮಗನಾದ ಯೇಸುಕ್ರಿಸ್ತನ ರಕ್ತವು ನಮ್ಮನ್ನು ಸಕಲ ಪಾಪದಿಂದ ಶುದ್ಧಿಮಾಡುತ್ತದೆ. |
8
|
ನಮ್ಮಲ್ಲಿ ಪಾಪವಿಲ್ಲ ವೆಂದು ನಾವು ಹೇಳಿದರೆ ನಮ್ಮನ್ನು ನಾವೇ ಮೋಸ ಪಡಿಸಿಕೊಳ್ಳುತ್ತೇವೆ, ಸತ್ಯವು ನಮ್ಮಲ್ಲಿಲ್ಲ. |
9
|
ನಾವು ನಮ್ಮ ಪಾಪಗಳನ್ನು ಅರಿಕೆ ಮಾಡಿದರೆ ಆತನು ನಂಬಿಗಸ್ತನೂ ನೀತಿವಂತನೂ ಆಗಿರುವದರಿಂದ ನಮ್ಮ ಪಾಪಗಳನ್ನು ಕ್ಷಮಿಸಿಬಿಟ್ಟು ಸಕಲ ಅನೀತಿಯಿಂದ ನಮ್ಮನ್ನು ಶುದ್ಧಿ ಮಾಡುವನು. |
10
|
ನಾವು ಪಾಪ ಮಾಡಲಿಲ್ಲವೆಂದು ಹೇಳಿದರೆ ಆತನನ್ನು ಸುಳ್ಳುಗಾರನನ್ನಾಗಿ ಮಾಡುತ್ತೇವೆ, ಮತ್ತು ಆತನ ವಾಕ್ಯವು ನಮ್ಮಲ್ಲಿಲ್ಲ. |
1-John 1:10 Kannada Language Bible Words basic statistical display
COMING SOON ...