ಫಿಲಿಷ್ಟಿ ಯರು ಇಸ್ರಾಯೇಲಿಗೆ ಎದುರಾಗಿ ವ್ಯೂಹವನ್ನು ಕಟ್ಟಿ ಯುದ್ಧ ಮಾಡಿದಾಗ ಇಸ್ರಾಯೇಲ್ಯರು ಫಿಲಿಷ್ಟಿಯರ ಮುಂದೆ ಹೊಡೆಯಲ್ಪಟ್ಟರು. ಹೇಗಂದರೆ, ಫಿಲಿಷ್ಟಿಯರು ಯುದ್ಧರಂಗದಲ್ಲಿ ಹೆಚ್ಚುಕಡಿಮೆ ನಾಲ್ಕು ಸಾವಿರ ಜನರನ್ನು ಕೊಂದುಹಾಕಿದರು.
ಜನರು ಪಾಳೆಯಕ್ಕೆ ಬಂದಾಗ ಇಸ್ರಾಯೇಲಿನ ಹಿರಿಯರು--ಈ ಹೊತ್ತು ಕರ್ತನು ಫಿಲಿಷ್ಟಿಯರ ಮುಂದೆ ನಮ್ಮನ್ನು ಹೊಡೆಸಿ ದ್ದೇನು? ಕರ್ತನ ಒಡಂಬಡಿಕೆಯ ಮಂಜೂಷವು ನಮ್ಮಲ್ಲಿದ್ದು ನಮ್ಮನ್ನು ನಮ್ಮ ಶತ್ರುಗಳಿಂದ ತಪ್ಪಿಸಿ ರಕ್ಷಿಸುವ ಹಾಗೆ ನಾವು ಅದನ್ನು ಶೀಲೋವಿನಿಂದ ತರಿಸೋಣ ಅಂದರು.
ಹಾಗೆಯೇ ಜನರನ್ನು ಕೆರೂಬಿಗಳ ಮಧ್ಯ ದಲ್ಲಿರುವ ಸೈನ್ಯಗಳ ಕರ್ತನ ಒಡಂಬಡಿಕೆಯ ಮಂಜೂ ಷವನ್ನು ತಕ್ಕೊಂಡು ಬರುವಂತೆ ಶೀಲೋವಿಗೆ ಕಳು ಹಿಸಿದರು. ಅಲ್ಲಿ ಏಲಿಯ ಇಬ್ಬರು ಮಕ್ಕಳಾದ ಹೊಫ್ನಿಯೂ ಫೀನೆಹಾಸನೂ ದೇವರ ಒಡಂಬಡಿಕೆಯ ಮಂಜೂಷದ ಬಳಿಯಲ್ಲಿದ್ದರು;
ಓ ಫಿಲಿಷ್ಟಿಯರೇ, ನೀವು ಬಲಗೊಂಡು ಧೈರ್ಯವುಳ್ಳ ಮನುಷ್ಯರಂತೆ ಇರ್ರಿ; ಇಬ್ರಿಯರು ನಿಮಗೆ ಸೇವೆಮಾಡಿದ ಪ್ರಕಾರ ನೀವು ಅವರಿಗೆ ಸೇವೆಮಾಡದ ಹಾಗೆ ಧೈರ್ಯವುಳ್ಳ ಮನುಷ್ಯರಂತೆ ಇದ್ದು ಯುದ್ಧಮಾಡಿರೆಂದು ಹೇಳಿ ಕೊಂಡರು.
ಫಿಲಿಷ್ಟಿಯರು ಯುದ್ಧಮಾಡಿದರು. ಇಸ್ರಾಯೇಲ್ಯರು ಹೊಡೆಯಲ್ಪಟ್ಟು ಅವರು ತಮ್ಮ ತಮ್ಮ ಡೇರೆಗಳಿಗೆ ಓಡಿಹೋದರು. ಅಲ್ಲಿ ಮಹಾಸಂಹಾರ ವಾಯಿತು. ಯಾಕಂದರೆ ಇಸ್ರಾಯೇಲಿನ ಮೂವತ್ತು ಸಾವಿರ ಕಾಲಾಳುಗಳು ಮಡಿದರು.
ಅವನು ಬರು ವಾಗ ಇಗೋ, ಏಲಿಯು ದೇವರ ಮಂಜೂಷಕ್ಕೋಸ್ಕರ ತನ್ನ ಹೃದಯವು ನಡುಗುತ್ತಾ ಇರುವದರಿಂದ ಆಸನದ ಮೇಲೆ ಮಾರ್ಗದ ಬಳಿಯಲ್ಲಿ ನಿರೀಕ್ಷಿಸುತ್ತಾ ಕುಳಿತಿ ದ್ದನು. ಊರಲ್ಲಿ ವರ್ತಮಾನ ತಿಳಿಸಲು ಆ ಮನು ಷ್ಯನು ಪಟ್ಟಣದಲ್ಲಿ ಪ್ರವೇಶಿಸಿದಾಗ ಪಟ್ಟಣವೆಲ್ಲಾ ಕೂಗಿತು.
ಏಲಿಯು ತೊಂಬತ್ತೆಂಟು ವರುಷ ಪ್ರಾಯದವ ನಾಗಿದ್ದನು. ಅವನು ನೋಡದ ಹಾಗೆ ಅವನ ಕಣ್ಣುಗಳು ಮೊಬ್ಬಾಗಿದ್ದವು. ಆ ಮನುಷ್ಯನು ಏಲಿಗೆ--ಯುದ್ಧರಂಗ ದಿಂದ ಬಂದವನು ನಾನೇ; ನಾನು ಈ ಹೊತ್ತು ಯುದ್ಧರಂಗದಿಂದ ಓಡಿಬಂದೆ ಅಂದನು. ಆಗ ಅವನು--ನನ್ನ ಮಗನೇ, ಅಲ್ಲಿ ನಡೆದ ವರ್ತಮಾನವೇನು ಅಂದನು.
ಅದಕ್ಕೆ ವರ್ತಮಾನ ತಂದವನು ಪ್ರತ್ಯುತ್ತರವಾಗಿ--ಇಸ್ರಾಯೇಲ್ಯರು ಫಿಲಿಷ್ಟಿಯರ ಮುಂದೆ ಓಡಿಹೋದರು. ಜನರಲ್ಲಿ ದೊಡ್ಡ ಸಂಹಾರ ವಾಯಿತು; ನಿನ್ನ ಇಬ್ಬರು ಮಕ್ಕಳಾದ ಹೊಫ್ನಿಯೂ ಫೀನೆಹಾಸನೂ ಸತ್ತರು; ಇದಲ್ಲದೆ ದೇವರ ಮಂಜೂ ಷವು ಶತ್ರುವಶವಾಯಿತು ಅಂದನು.
ಅವನು ದೇವರ ಒಡಂಬಡಿಕೆಯ ಮಂಜೂಷದ ಮಾತನ್ನು ಹೇಳಿದಾಗ ಏಲಿಯು ಆಸನದ ಮೇಲಿನಿಂದ ಬಾಗಲಿನ ಪಾರ್ಶ್ವವಾಗಿ ಹಿಂದಕ್ಕೆ ಬಿದ್ದು ಕುತ್ತಿಗೆ ಮುರಿದು ಸತ್ತನು. ಯಾಕಂದರೆ ಅವನು ಮುದುಕನಾಗಿಯೂ ಭಾರವುಳ್ಳ ವನಾಗಿಯೂ ಇದ್ದನು. ಅವನು ನಾಲ್ವತ್ತು ವರುಷ ಇಸ್ರಾಯೇಲಿಗೆ ನ್ಯಾಯತೀರಿಸಿದನು.
ಇದಲ್ಲದೆ ಅವನ ಸೊಸೆಯಾದ ಫೀನೆಹಾಸನ ಹೆಂಡತಿ ಗರ್ಭಿಣಿಯಾಗಿ ಹೆರುವದಕ್ಕಿದ್ದಳು. ಅವಳು ದೇವರ ಮಂಜೂಷವು ಶತ್ರುವಶವಾಯಿತೆಂಬ ವರ್ತ ಮಾನವನ್ನೂ ತನ್ನ ಮಾವನೂ ಗಂಡನೂ ಸತ್ತು ಹೋದರೆಂಬದನ್ನೂ ಕೇಳಿದಾಗ ಅವಳಿಗೆ ಪ್ರಸವ ವೇದನೆ ಉಂಟಾಗಿ ಅವಳು ಮಗನನ್ನು ಹೆತ್ತಳು.
ಆದರೆ ಅವಳು ಅದಕ್ಕೆ ಪ್ರತ್ಯುತ್ತರವಾಗಿ ಅದರ ಮೇಲೆ ಲಕ್ಷ್ಯವಿಡದೆ ದೇವರ ಮಂಜೂಷವು ಶತ್ರುವಶ ವಾಯಿತೆಂದೂ ತನ್ನ ಮಾವನೂ ತನ್ನ ಗಂಡನೂ ಸತ್ತುಹೋದದರಿಂದಲೂ ಮಹಿಮೆಯು ಇಸ್ರಾಯೇ ಲನ್ನು ಬಿಟ್ಟುಹೋಯಿತು ಎಂದು ಹೇಳಿ ಆ ಕೂಸಿಗೆ ಈಕಾಬೋದ್ ಎಂದು ಹೆಸರಿಟ್ಟಳು.