ಆಗ ಪ್ರವಾದಿಯಾದ ಶೆಮಾಯನು ರೆಹಬ್ಬಾಮನ ಬಳಿಗೂ ಶೀಶಕನ ನಿಮಿತ್ತ ಯೆರೂಸಲೇಮಿನಲ್ಲಿ ಕೂಡಿಕೊಂಡ ಯೆಹೂದದ ಪ್ರಧಾನರ ಬಳಿಗೂ ಬಂದು ಅವರಿಗೆನೀವು ನನ್ನನ್ನು ಬಿಟ್ಟುಬಿಟ್ಟದ್ದರಿಂದ ನಾನು ನಿಮ್ಮನ್ನು ಶೀಶಕನ ಕೈಯಲ್ಲಿ ಬಿಟ್ಟುಬಿಟ್ಟೆನೆಂದು ಕರ್ತನು ಹೇಳು ತ್ತಾನೆ ಅಂದನು.
ಅವರು ತಮ್ಮನ್ನು ತಗ್ಗಿಸಿ ಕೊಂಡದ್ದನ್ನು ಕರ್ತನು ನೋಡಿದಾಗ ಕರ್ತನ ವಾಕ್ಯವು ಶೆಮಾಯನಿಗೆ ಉಂಟಾಯಿತು. ಏನಂದರೆಅವರು ತಮ್ಮನ್ನು ತಗ್ಗಿಸಿಕೊಂಡದ್ದರಿಂದ ನಾನು ಅವ ರನ್ನು ನಾಶಮಾಡದೆ ಅವರು ಸ್ವಲ್ಪಮಟ್ಟಿಗೆ ತಪ್ಪಿಸಿ ಕೊಳ್ಳುವಂತೆ ಮಾಡುವೆನು. ಶೀಶಕನ ಕೈಯಿಂದ ನನ್ನ ಕೋಪವು ಯೆರೂಸಲೇಮಿನ ಮೇಲೆ ಹೊಯ್ಯಲ್ಪಡು ವದಿಲ್ಲ.
ಹಾಗೆಯೇ ಐಗುಪ್ತದ ಅರಸನಾದ ಶೀಶಕನು ಯೆರೂಸಲೇಮಿಗೆ ವಿರೋಧ ವಾಗಿ ಬಂದು ಕರ್ತನ ಮನೆಯ ಬೊಕ್ಕಸಗಳನ್ನೂ ಅರಸನ ಮನೆಯ ಬೊಕ್ಕಸಗಳನ್ನೂ ತೆಗೆದುಕೊಂಡನು; ಎಲ್ಲವನ್ನೂ ತೆಗೆದುಕೊಂಡನು. ಇದಲ್ಲದೆ ಸೊಲೊ ಮೋನನು ಮಾಡಿಸಿದ ಬಂಗಾರದ ಗುರಾಣಿಗಳನ್ನು ತಕ್ಕೊಂಡು ಹೋದನು.
ಅರಸನಾದ ರೆಹಬ್ಬಾಮನು ಯೆರೂಸಲೇಮಿನಲ್ಲಿ ತನ್ನನ್ನು ಬಲಪಡಿಸಿಕೊಂಡು ರಾಜ್ಯವನ್ನು ಆಳಿದನು. ರೆಹಬ್ಬಾಮನು ಆಳಲು ಆರಂಭಿಸಿದಾಗ ನಾಲ್ವತ್ತೊಂದು ವರುಷದವನಾಗಿದ್ದು ಅಲ್ಲಿ ತನ್ನ ನಾಮವನ್ನು ಇರಿಸಲು ಇಸ್ರಾಯೇಲಿನ ಸಮಸ್ತ ಗೋತ್ರಗಳಲ್ಲಿ ಕರ್ತನು ಆದುಕೊಂಡ ಪಟ್ಟಣವಾದ ಯೆರೂಸಲೇಮಿನಲ್ಲಿ ಹದಿನೇಳು ವರುಷ ಆಳಿದನು. ಅವನ ತಾಯಿಯ ಹೆಸರು ನಯಮಾ; ಅವಳು ಅಮ್ಮೋನ್ಯಳಾಗಿದ್ದಳು.
ರೆಹಬ್ಬಾಮನ ಕ್ರಿಯೆಗಳು ಮೊದಲನೆಯವು ಗಳೂ ಕಡೆಯವುಗಳೂ ಪ್ರವಾದಿಯಾದ ಶೆಮಾಯನ ಪುಸ್ತಕದಲ್ಲಿಯೂ ವಂಶಾವಳಿಗಳನ್ನು ಕುರಿತು ಬರೆದ ದರ್ಶಿಯಾದ ಇದ್ದೋನ ಪುಸ್ತಕದಲ್ಲಿಯೂ ಬರೆಯ ಲ್ಪಟ್ಟವಲ್ಲವೇ? ಇದಲ್ಲದೆ ರೆಹಬ್ಬಾಮನಿಗೂ ಯಾರೊ ಬ್ಬಾಮನಿಗೂ ಯಾವಾಗಲೂ ಯುದ್ಧಉಂಟಾಗಿತ್ತು.