ಯಾಕೆ ಹೀಗಾಯಿತಂದರೆ, ಇಸ್ರಾಯೇಲಿನ ಮಕ್ಕಳು, ಐಗುಪ್ತದ ಅರಸನಾದ ಫರೋಹನ ಕೈಯಿಂದ ತಪ್ಪಿಸಿ ಐಗುಪ್ತದೇಶದೊಳಗಿಂದ ಬರ ಮಾಡಿದ ತಮ್ಮ ದೇವರಾದ ಕರ್ತನಿಗೆ ವಿರೋಧ ವಾಗಿ ಪಾಪಮಾಡಿ ಇತರ ದೇವರುಗಳಿಗೆ ಭಯಪಟ್ಟರು.
ಇಸ್ರಾಯೇಲಿನ ಮಕ್ಕಳು ಗುಪ್ತವಾಗಿ ತಮ್ಮ ದೇವರಾದ ಕರ್ತನಿಗೆ ವಿರೋಧವಾಗಿ ಅಯುಕ್ತ ವಾದವುಗಳನ್ನು ಮಾಡಿ ಬರುವ ಸ್ಥಳಗಳು ಮೊದಲು ಗೊಂಡು ಕೋಟೆಯುಳ್ಳ ಪಟ್ಟಣಗಳ ವರೆಗೂ ತಮ್ಮ ಎಲ್ಲಾ ಪಟ್ಟಣಗಳಲ್ಲಿ ತಮಗೆ ಉನ್ನತ ಸ್ಥಳಗಳನ್ನು ಕಟ್ಟಿಸಿ ಕೊಂಡಿದ್ದರು.
ಅಲ್ಲಿ ಕರ್ತನು ತಮ್ಮ ಮುಂದೆ ಓಡಿಸಿಬಿಟ್ಟ ಅನ್ಯ ಜನಾಂಗಗಳ ಹಾಗೆ ಅವರು ಎಲ್ಲಾ ಉನ್ನತ ಸ್ಥಳಗಳಲ್ಲಿ ಧೂಪವನ್ನು ಸುಟ್ಟು ಕರ್ತನನ್ನು ಸಿಟ್ಟುಗೊಳಿಸುವ ಹಾಗೆ ಕೆಟ್ಟ ಕಾರ್ಯಗಳನ್ನು ಮಾಡಿದರು--
ನೀವು ನಿಮ್ಮ ದುರ್ಮಾರ್ಗಗಳನ್ನು ಬಿಟ್ಟು ತಿರುಗಿ ನಾನು ನಿಮ್ಮ ಪಿತೃಗಳಿಗೆ ಆಜ್ಞಾಪಿಸಿದ, ಪ್ರವಾದಿಗಳಾದ ನನ್ನ ಸೇವಕರ ಮುಖಾಂತರ ನಾನು ನಿಮಗೆ ಕಳುಹಿಸಿದ ನ್ಯಾಯಪ್ರಮಾಣದ ಪ್ರಕಾರ ನನ್ನ ಆಜ್ಞೆಗಳನ್ನೂ ಕಟ್ಟಳೆಗಳನ್ನೂ ಕೈಕೊಳ್ಳಿರೆಂದು ಕರ್ತನು ಎಲ್ಲಾ ಪ್ರವಾ ದಿಗಳ ಮುಖಾಂತರವಾಗಿಯೂ ಎಲ್ಲಾ ದರ್ಶಿಗಳ ಮುಖಾಂತರವಾಗಿಯೂ ಇಸ್ರಾಯೇಲಿಗೂ ಯೆಹೂ ದಕ್ಕೂ ಸಾಕ್ಷಿ ಹೇಳಿದನು.
ಕಠಿಣಪಡಿಸಿ ಆತನ ಕಟ್ಟಳೆಗಳನ್ನೂ ಆತನು ತಮ್ಮ ಪಿತೃಗಳ ಸಂಗಡ ಮಾಡಿದ ಆತನ ಒಡಂಬಡಿಕೆಯನ್ನೂ ಆತನು ಅವರಿಗೆ ಹೇಳಿದ ಸಾಕ್ಷಿ ಗಳನ್ನೂ ಅಲಕ್ಷ್ಯಮಾಡಿ ವ್ಯರ್ಥವಾದದ್ದನ್ನು ಹಿಂಬಾ ಲಿಸಿ ವ್ಯರ್ಥವಾದವರಾಗಿ -- ನೀವು ಅವರ ಹಾಗೆ ಮಾಡಬೇಡಿರೆಂದು ಕರ್ತನು ಅವರಿಗೆ ಆಜ್ಞಾಪಿಸಿದರೂ ಅವರ ಸುತ್ತಲಿರುವ ಅನ್ಯಜನಾಂಗಗಳ ಹಿಂದೆ ಹೋದರು.
ಇದಲ್ಲದೆ ಅವರು ತಮ್ಮ ದೇವರಾದ ಕರ್ತನ ಎಲ್ಲಾ ಆಜ್ಞೆಗಳನ್ನು ಬಿಟ್ಟು ತಮಗೆ ತಾವೇ ಎರಕ ಹೊಯ್ದ ವಿಗ್ರಹಗಳಾದ ಎರಡು ಹೋರಿಗಳನ್ನು ಮಾಡಿಕೊಂಡು ವಿಗ್ರಹಗಳ ತೋಪನ್ನು ಮಾಡಿ ಆಕಾಶದ ಸೈನ್ಯಕ್ಕೆಲ್ಲಾ ಅಡ್ಡಬಿದ್ದು ಬಾಳನನ್ನು ಸೇವಿಸಿ
ತಮ್ಮ ಕುಮಾರರನ್ನೂ ಕುಮಾರ್ತೆಯರನ್ನೂ ಬೆಂಕಿಯಲ್ಲಿ ದಾಟಮಾಡಿ ಕಣಿಗಳನ್ನೂ ಶಕುನಗಳನ್ನೂ ಬಳಸಿ ಕರ್ತ ನಿಗೆ ಕೋಪ ಬರುವಂತೆ ಆತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಲು ತಮ್ಮನ್ನು ಮಾರಿಬಿಟ್ಟರು.
ಆದದರಿಂದ ಕರ್ತನು ಇಸ್ರಾಯೇಲಿನ ಸಂತತಿ ಯನ್ನೆಲ್ಲಾ ಅಲಕ್ಷ್ಯಮಾಡಿಬಿಟ್ಟು ಅವರನ್ನು ಕುಂದಿಸಿ ಅವರನ್ನು ತನ್ನ ಸಮ್ಮುಖದಿಂದ ತಳ್ಳಿಬಿಡುವ ವರೆಗೆ ಅವರನ್ನು ಕೊಳ್ಳೆಗಾರರ ಕೈಯಲ್ಲಿ ಒಪ್ಪಿಸಿಕೊಟ್ಟನು.
ಅವನು ಇಸ್ರಾಯೇಲನ್ನು ದಾವೀದನ ಮನೆಯಿಂದ ಹರಿದುಬಿಟ್ಟನು; ಅವರು ನೆಬಾಟನ ಮಗನಾದ ಯಾರೊಬ್ಬಾಮನನ್ನು ಅರಸನನ್ನಾಗಿ ಮಾಡಿಕೊಂಡರು. ಆಗ ಯಾರೊಬ್ಬಾಮನು ಇಸ್ರಾಯೇಲ್ಯರನ್ನು ಕರ್ತ ನನ್ನು ಹಿಂಬಾಲಿಸುವದರಿಂದ ತಪ್ಪಿಸಿ ಅವರನ್ನು ಮಹಾ ಪಾಪಮಾಡಲು ಪ್ರೇರೇಪಿಸಿದನು.
ಕರ್ತನು ಪ್ರವಾ ದಿಗಳಾದ ತನ್ನ ಸೇವಕರ ಮುಖಾಂತರ ಹೇಳಿದ ಹಾಗೆ ಅವನು ಇಸ್ರಾಯೇಲನ್ನು ತನ್ನ ಸಮ್ಮುಖದಿಂದ ತೆಗೆದು ಹಾಕುವ ವರೆಗೆ ಇಸ್ರಾಯೇಲಿನ ಮಕ್ಕಳು ಯಾರೊ ಬ್ಬಾಮನು ಮಾಡಿದ ಎಲ್ಲಾ ಪಾಪಗಳಲ್ಲಿ ನಡೆದರು; ಅವುಗಳನ್ನು ತೊರೆದು ಬಿಡಲಿಲ್ಲ.
ಅಶ್ಶೂರಿನ ಅರಸನು ಬಾಬೆಲಿನಿಂದಲೂ ಕೂತಾ ಅವ್ವಾ ಹಮಾತ್ ಸೆಫರ್ವಯಿಮಿನಿಂದಲೂ ಜನರನ್ನು ಬರಮಾಡಿ ಅವರನ್ನು ಇಸ್ರಾಯೇಲ್ ಮಕ್ಕಳಿಗೆ ಬದ ಲಾಗಿ ಸಮಾರ್ಯದ ಪಟ್ಟಣಗಳಲ್ಲಿ ಇರಿಸಿದನು. ಇವರು ಸಮಾರ್ಯವನ್ನು ಸ್ವತಂತ್ರಿಸಿಕೊಂಡು ಅವರ ಪಟ್ಟಣಗಳಲ್ಲಿ ವಾಸಿಸಿದರು.
ಆದಕಾರಣ ಅವರು ಅಶ್ಶೂರಿನ ಅರಸನಿಗೆ--ನೀನು ಸೇರಿಸಿ ಸಮಾರ್ಯದ ಪಟ್ಟಣಗಳಲ್ಲಿ ಇರಿಸಿದ ಜನಾಂಗಗಳು ಆ ದೇಶದ ದೇವರ ಕ್ರಮವನ್ನು ತಿಳಿಯದೆ ಇದ್ದಾರೆ. ಅವರು ಆ ದೇಶದ ದೇವರ ಕ್ರಮವನ್ನು ತಿಳಿಯದೆ ಇದ್ದದರಿಂದ ಆತನು ಅವರ ಮಧ್ಯದಲ್ಲಿ ಸಿಂಹಗಳನ್ನು ಕಳುಹಿಸಿದ್ದಾನೆ; ಇಗೋ, ಅವು ಅವರನ್ನು ಕೊಂದುಹಾಕುತ್ತವೆ ಅಂದರು.
ಆಗ ಅಶ್ಶೂರಿನ ಅರಸನು--ನೀವು ಅಲ್ಲಿಂದ ತಕ್ಕೊಂಡು ಬಂದಯಾಜಕರಲ್ಲಿ ಒಬ್ಬನನ್ನು ಅಲ್ಲಿಗೆ ಕರೆದುಕೊಂಡು ಹೋಗಿರಿ; ಅವರು ಅಲ್ಲಿ ವಾಸವಾಗಿರಲಿ; ಅವನು ಅವರಿಗೆ ಆ ದೇಶದ ದೇವರ ಕ್ರಮವನ್ನು ಬೋಧಿಸಲಿ ಎಂದು ಆಜ್ಞಾಪಿಸಿದನು.
ಹೀಗೆ ಅವರು ಕರ್ತನಿಗೆ ಭಯಪಟ್ಟು ತಮ್ಮಲ್ಲಿರುವ ನೀಚ ರೊಳಗೆ ಉನ್ನತ ಸ್ಥಾನಕ್ಕೋಸ್ಕರ ಯಾಜಕರನ್ನು ಮಾಡಿ ಕೊಂಡರು. ಇವರು ಉನ್ನತ ಸ್ಥಳಗಳ ಮೇಲಿರುವ ಮನೆಗಳಲ್ಲಿ ಅವರಿಗೋಸ್ಕರ ಬಲಿಗಳನ್ನು ಅರ್ಪಿಸುತ್ತಾ ಇದ್ದರು.
ಈ ದಿವಸದ ವರೆಗೂ ಅವರು ತಮ್ಮ ಪೂರ್ವದ ನ್ಯಾಯಗಳ ಪ್ರಕಾರ ಮಾಡುತ್ತಾರೆ; ಅವರು ಕರ್ತನಿಗೆ ಭಯಪಡದೆ ತಮ್ಮ ಕಟ್ಟಳೆಗಳ ಪ್ರಕಾರವಾಗಿಯೂ ತಮ್ಮ ನೀತಿಗಳ ಪ್ರಕಾರವಾಗಿಯೂ ನ್ಯಾಯಪ್ರಮಾ ಣದ ಪ್ರಕಾರವಾಗಿಯೂ ಕರ್ತನು ಇಸ್ರಾಯೇಲೆಂದು ಹೆಸರಿಟ್ಟ ಯಾಕೋಬನ ಮಕ್ಕಳಿಗೆ ಆಜ್ಞಾಪಿಸಿದ ಆಜ್ಞೆಯ ಪ್ರಕಾರವಾಗಿಯೂ ಮಾಡದೆ ಇದ್ದಾರೆ.
ಇದಲ್ಲದೆ ಆತನು ನಿಮಗೆ ಬರೆದುಕೊಟ್ಟ ಕಟ್ಟಳೆಗಳನ್ನೂ ನೀತಿಗಳನ್ನೂ ನ್ಯಾಯಪ್ರಮಾಣವನ್ನೂ ಆಜ್ಞೆಯನ್ನೂ ನೀವು ನಿರಂತರವಾಗಿ ಕೈಕೊಳ್ಳಲು ಎಚ್ಚರಿಕೆ ಯಾಗಿರಬೇಕು; ಇತರ ದೇವರುಗಳಿಗೆ ಭಯಪಡ ಬೇಡಿರಿ.