ಪ್ರವಾದಿಯಾದ ಎಲೀಷನು ಪ್ರವಾದಿಗಳ ಮಕ್ಕಳಲ್ಲಿ ಒಬ್ಬನನ್ನು ಕರೆದು ಅವನಿಗೆ--ನಡುವನ್ನು ಕಟ್ಟಿಕೊಂಡು ಈ ಎಣ್ಣೆಯ ಪಾತ್ರೆಯನ್ನು ನಿನ್ನ ಕೈಯಲ್ಲಿ ತೆಗೆದುಕೊಂಡು ಗಿಲ್ಯಾದಿನಲ್ಲಿರುವ ರಾಮೋತಿಗೆ ಹೋಗು.
ನೀನು ಅಲ್ಲಿಗೆ ಸೇರಿದಾಗ ನಿಂಷಿಯ ಮಗನಾಗಿರುವ ಯೆಹೋಷಾಫಾಟನ ಮಗ ನಾದ ಯೇಹುವನ್ನು ಅಲ್ಲಿ ನೋಡಿ ಒಳಗೆ ಹೋಗಿ ಅವನನ್ನು ತನ್ನ ಸಹೋದರರ ಮಧ್ಯದಿಂದ ಏಳ ಮಾಡಿ ಒಳಗಿನ ಕೊಠಡಿಗೆ ಕರಕೊಂಡು ಹೋಗಿ ಎಣ್ಣೆಯ ಪಾತ್ರೆಯನ್ನು ತಕ್ಕೊಂಡು ಅವನ ತಲೆಯ ಮೇಲೆ ಹೊಯ್ದು
ಅವನು ಅಲ್ಲಿ ಸೇರಿದಾಗ ಇಗೋ, ಸೈನ್ಯಾಧಿಪತಿಗಳು ಕುಳಿತುಕೊಂಡಿದ್ದರು. ಆಗ ಅವನು -- ಅಧಿಪತಿಯೇ, ನಿನಗೆ ಹೇಳಬೇಕಾದ ಮಾತು ನನಗೆ ಉಂಟು ಅಂದನು. ಯೇಹುವು ಅವ ನಿಗೆ--ನಮ್ಮೆಲ್ಲರಲ್ಲಿ ಯಾರಿಗೆ ಅಂದನು. ಅವನುಅಧಿಪತಿಯೇ, ನಿನಗೆ ಅಂದನು.
ಅವನು ಎದ್ದು ಮನೆಯೊಳಕ್ಕೆ ಹೋದನು. ಆಗ ಇವನು ಎಣ್ಣೆ ಯನ್ನು ಅವನ ತಲೆಯ ಮೇಲೆ ಹೊಯ್ದು ಅವನಿಗೆ ಹೇಳಿದ್ದು--ಇಸ್ರಾಯೇಲಿನ ದೇವರಾದ ಕರ್ತನು ಹೇಳುವದೇನಂದರೆ, ಕರ್ತನ ಜನರಾದ ಇಸ್ರಾ ಯೇಲಿನ ಮೇಲೆ ಅರಸನಾಗಿರಲು ನಿನ್ನನ್ನು ಅಭಿಷೇ ಕಿಸಿದ್ದೇನೆ.
ಪ್ರವಾದಿಗಳಾದ ನನ್ನ ಸೇವಕರ ರಕ್ತ ಕ್ಕೋಸ್ಕರವೂ ಕರ್ತನ ಎಲ್ಲಾ ಸೇವಕರ ರಕ್ತಕ್ಕೋಸ್ಕ ರವೂ ಈಜೆಬೆಲಳಿಗೆ ಮುಯ್ಯಿಗೆ ಮುಯ್ಯಿ ತೀರಿ ಸುವ ಹಾಗೆಯೂ ನೀನು ನಿನ್ನ ಯಜಮಾನ ನಾದ ಅಹಾಬನ ಮನೆಯವರನ್ನು ಸಂಹರಿಸಬೇಕು.
ಆಗ ಯೇಹುವು ತನ್ನ ಯಜಮಾನನ ಸೇವಕರ ಬಳಿಗೆ ಹೊರಟು ಬಂದನು. ಅವರು ಅವನಿಗೆ ಎಲ್ಲವೂ ಕ್ಷೇಮವೋ? ಈ ಹುಚ್ಚನು ನಿನ್ನ ಬಳಿಗೆ ಬಂದದ್ದೇನು ಅಂದರು. ಅವನು ಅವರಿಗೆ--ಆ ಮನುಷ್ಯನನ್ನೂ ಅವನ ಮಾತನ್ನೂ ನೀವು ಬಲ್ಲಿರಿ ಅಂದನು.
ಅದಕ್ಕವರು--ಅದು ಸುಳ್ಳು, ದಯಮಾಡಿ ನಮಗೆ ತಿಳಿಸು ಅಂದರು. ಆದದರಿಂದ ಅವನು--ಇಸ್ರಾ ಯೇಲಿನ ಮೇಲೆ ಅರಸನಾಗಿರಲು ನಿನ್ನನ್ನು ಅಭಿಷೇಕಿ ಸಿದ್ದೇನೆಂಬದಾಗಿ ಕರ್ತನು ಹೇಳುತ್ತಾನೆಂದು ಹೀಗೆ ನನಗೆ ಹೇಳಿದನು ಅಂದನು.
ಹೀಗೆ ನಿಂಷಿಯ ಮಗನಾಗಿ ರುವ ಯೆಹೋಷಾಫಾಟನ ಮಗನಾದ ಯೇಹುವು ಯೆಹೋರಾಮನಿಗೆ ವಿರೋಧವಾಗಿ ಒಳಸಂಚು ಮಾಡಿ ದನು. ಅರಾಮ್ಯರ ಅರಸನಾದ ಹಜಾಯೇಲನ ನಿಮಿತ್ತ ಯೆಹೋರಾಮನೂ ಎಲ್ಲಾ ಇಸ್ರಾಯೇಲ್ಯರೂ ಗಿಲ್ಯಾ ದಿನ ರಾಮೋತಿನಲ್ಲಿ ಕಾಯುತ್ತಾ ಇದ್ದರು.
ಆಗ ಯೇಹುವು -- ನಿಮಗೆ ಮನಸ್ಸಾದರೆ ಹೋಗಿ ಇದನ್ನು ಇಜ್ರೇಲಿನಲ್ಲಿ ತಿಳಿಸಲು ಪಟ್ಟಣ ದಿಂದ ಯಾರೂ ತಪ್ಪಿಸಿಕೊಂಡು ಹೊರಡದೆ ಇರಲಿ ಅಂದನು. ಯೇಹುವು ರಥದ ಮೇಲೆ ಏರಿ ಇಜ್ರೇಲಿಗೆ ಹೋದನು. ಯಾಕಂದರೆ ಯೋರಾಮನು ಅಲ್ಲಿ ಬಿದ್ದಿದ್ದನು. ಇದಲ್ಲದೆ ಯೋರಾಮನನ್ನು ನೋಡು ವದಕ್ಕೆ ಯೆಹೂದದ ಅರಸನಾದ ಅಹಜ್ಯನು ಅಲ್ಲಿಗೆ ಬಂದಿದ್ದನು.
ಇಜ್ರೇಲಿನ ಬುರುಜಿನ ಮೇಲೆ ಕಾವಲು ಗಾರನು ನಿಂತಿದ್ದನು. ಇವನು ಬರುವ ಯೇಹುವಿನ ಗುಂಪನ್ನು ಕಂಡು--ನಾನು ಗುಂಪನ್ನು ನೋಡುತ್ತೇನೆ ಅಂದನು. ಅದಕ್ಕೆ ಯೋರಾಮನು ರಾಹುತನನ್ನು ಕರೆದು ಅವರಿಗೆ ಎದುರಾಗಿ ಕಳುಹಿಸಿ--ಸಮಾಧಾ ನವೋ ಎಂದು ಕೇಳಲಿ ಅಂದನು.
ಆದದರಿಂದ ಒಬ್ಬನು ಕುದುರೆಯನ್ನು ಹತ್ತಿ ಅವನಿಗೆ ಎದುರಾಗಿ ಹೋಗಿ--ಸಮಾಧಾನವೋ ಎಂದು ಅರಸನು ಕೇಳು ತ್ತಾನೆ ಅಂದನು. ಅದಕ್ಕೆ ಯೇಹುವು--ಸಮಾಧಾನ ನಿನಗೆ ಏನು? ನನ್ನ ಹಿಂದಕ್ಕೆ ಹೋಗು ಅಂದನು. ಆಗ ಕಾವಲುಗಾರನು -- ಸೇವಕನು ಅವರ ಬಳಿಗೆ ಹೋಗಿ ತಿರಿಗಿ ಬರಲಿಲ್ಲ ಅಂದನು.
ಯೋರಾಮನು ರಥಹೂಡಬೇಕೆಂದು ಹೇಳಿದನು. ಅವನ ರಥವು ಸಿದ್ಧವಾಯಿತು. ಆಗ ಇಸ್ರಾಯೇಲಿನ ಅರಸನಾದ ಯೋರಾಮನೂ ಯೆಹೂ ದದ ಅರಸನಾದ ಅಹಜ್ಯನೂ ಹೊರಟು ಅವನವನು ತನ್ನ ತನ್ನ ರಥದಲ್ಲಿ ಏರಿ ಯೇಹುವಿಗೆ ಎದುರಾಗಿ ಹೊರಟು ಇಜ್ರೇಲ್ಯನಾದ ನಾಬೋತನ ಹೊಲದಲ್ಲಿ ಅವನನ್ನು ಸಂಧಿಸಿದರು.
ಆದರೆ ಯೇಹುವು ಪೂರ್ಣಬಲದಿಂದ ಬಿಲ್ಲನ್ನು ಬೊಗ್ಗಿಸಿ ತನ್ನ ಕೈಯಿಂದ ಯೋರಾಮನನ್ನು ಅವನ ತೋಳುಗಳ ನಡುವೆ ಹೊಡೆದನು. ಬಾಣ ಹೃದಯದಲ್ಲಿ ತೂರಿ ಹೊರಟಿತು; ಅವನು ರಥದಲ್ಲಿ ಕೆಳಗೆ ಮುದುರಿ ಕೊಂಡು ಬಿದ್ದನು.
ನಾನೂ ನೀನೂ ಅವನ ತಂದೆಯಾದ ಅಹಾಬನ ಹಿಂದೆ ಕುದುರೆ ಏರಿಕೊಂಡು ಹೋಗುತ್ತಿರುವಾಗ ಕರ್ತನು ಈ ಭಾರವನ್ನು ಅವನ ಮೇಲೆ ಹೊರಿಸಿದನೆಂದು ಜ್ಞಾಪಕಮಾಡಿಕೋ. ಏನಂದರೆ--ನಾಬೋತನ ರಕ್ತವನ್ನೂ ಅವನ ಕುಮಾರರ ರಕ್ತವನ್ನೂ ನಿನ್ನೆ ನಾನು ನಿಶ್ಚಯವಾಗಿ ನೋಡಿದೆನಲ್ಲಾ ಎಂದು ಕರ್ತನು ಹೇಳುತ್ತಾನೆ. ಇದಲ್ಲದೆ--ಇದೇ ಹೊಲದಲ್ಲಿ ನಿನಗೆ ಮುಯ್ಯಿಗೆ ಮುಯ್ಯಿ ಕೊಡುವೆ ನೆಂದು ಕರ್ತನು ಹೇಳುತ್ತಾನೆ. ಆದದರಿಂದ ಕರ್ತನ ವಾಕ್ಯದ ಪ್ರಕಾರ ಅವನನ್ನು ಎತ್ತಿಕೊಂಡು ಆ ಹೊಲ ದಲ್ಲಿ ಹಾಕಿಬಿಡು ಅಂದನು.
ಯೆಹೂದದ ಅರಸ ನಾದ ಅಹಜ್ಯನು ಇದನ್ನು ನೋಡಿದಾಗ ಅವನು ತೋಟದ ಮನೆಯ ಮಾರ್ಗವಾಗಿ ಓಡಿಹೋದನು. ಯೇಹುವು ಅವನ ಹಿಂದೆ ಹೋಗಿ--ರಥದಲ್ಲಿ ಅವ ನನ್ನು ಸಹ ಸಂಹರಿಸಿರಿ ಅಂದನು. ಇಬ್ಲೆಯಾಮಿನ ಬಳಿಯಲ್ಲಿರುವ ಗೂರ್ ಎಂಬ ಸ್ಥಳಕ್ಕೆ ಏರಿ ಹೋಗುವ ಮಾರ್ಗದಲ್ಲಿ ಹೊಡೆದರು. ಅವನು ಮೆಗಿದ್ದೋನಿಗೆ ಓಡಿಹೋಗಿ ಅಲ್ಲಿ ಸತ್ತುಹೋದನು.
ಅವನು-- ಅವಳನ್ನು ಕೆಳಕ್ಕೆ ತಳ್ಳಿಬಿಡಿರಿ ಅಂದನು. ಅವರು ಅವ ಳನ್ನು ಕೆಳಕ್ಕೆ ತಳ್ಳಿಬಿಟ್ಟದ್ದರಿಂದ ಅವಳ ರಕ್ತವು ಗೋಡೆಯ ಮೇಲೆಯೂ ಕುದುರೆಗಳ ಮೇಲೆಯೂ ಚೆಲ್ಲಲ್ಪಟ್ಟಿತು. ಅವನು ಅವಳನ್ನು ತುಳಿಸಿದನು.