ಆತನ ಪ್ರತ್ಯಕ್ಷತೆಯ ವಿಷಯವಾದ ವಾಗ್ದಾನವು ಏನಾಯಿತು? ಪಿತೃಗಳು ನಿದ್ರೆ ಹೊಂದಿದಂದಿನಿಂದ ಸಮಸ್ತವೂ ಸೃಷ್ಟಿ ಮೊದಲುಗೊಂಡು ಹಾಗೆಯೇ ಇರುತ್ತದಲ್ಲಾ ಎಂದು ಹೇಳುವರೆಂಬದಾಗಿ ನೀವು ಮೊದಲು ತಿಳುಕೊಳ್ಳ ಬೇಕು.
ಕರ್ತನು ತನ್ನ ವಾಗ್ದಾನದ ವಿಷಯವಾಗಿ ತಡಮಾಡುತ್ತಾನೆಂಬದಾಗಿ ಕೆಲವರು ಎಣಿಸುವ ಪ್ರಕಾರ ಆತನು ತಡಮಾಡುವಾತನಲ್ಲ. ಆದರೆ ಯಾವನಾದರೂ ನಾಶವಾಗುವದರಲ್ಲಿ ಆತನು ಇಷ್ಟಪಡದೆ ಎಲ್ಲರೂ ಪಶ್ಚಾತ್ತಾಪಪಡಬೇಕೆಂದು ಅಪೇಕ್ಷಿಸುವವನಾಗಿದ್ದು ನಮ್ಮ ಕಡೆಗೆ ದೀರ್ಘಶಾಂತಿ ಯುಳ್ಳವ
ಆದರೂ ಕರ್ತನ ದಿನವು ರಾತ್ರಿಯಲ್ಲಿ ಕಳ್ಳನು ಬರುವಂತೆ ಬರುತ್ತದೆ. ಆ ದಿನದಲ್ಲಿ ಆಕಾಶಗಳು ಮಹಾಘೋಷದಿಂದ ಇಲ್ಲದೆ ಹೋಗು ವವು. ಅತಿ ಉಷ್ಣದಿಂದ ಪಂಚಭೂತಗಳು ಉರಿದು ಲಯವಾಗಿ ಹೋಗುವವು; ಭೂಮಿಯೂ ಅದರಲ್ಲಿ ರುವ ಕೆಲಸಗಳೂ ಸುಟ್ಟುಹೋಗುವವು.
ಆದಕಾರಣ ಪ್ರಿಯರೇ, ನೀವು ಇಂಥವುಗಳನ್ನು ಎದುರು ನೋಡುವವರಾಗಿರುವದರಿಂದ ಸಮಾಧಾನ ದಲ್ಲಿದ್ದು ನಿರ್ಮಲರಾಗಿಯೂ ನಿರ್ದೋಷಿಗಳಾಗಿಯೂ ಆತನಿಗೆ ಕಾಣಿಸಿಕೊಳ್ಳುವಂತೆ ಜಾಗ್ರತೆಯುಳ್ಳವ ರಾಗಿರ್ರಿ.
ಅವನು ತನ್ನ ಎಲ್ಲಾ ಪತ್ರಿಕೆಗಳಲ್ಲಿಯೂ ಈ ವಿಷಯ ಗಳನ್ನು ಕುರಿತು ಹೇಳಿದ್ದಾನೆ. ಆ ಪತ್ರಿಕೆಗಳಲ್ಲಿರುವ ಕೆಲವು ವಿಷಯಗಳು ತಿಳಿಯುವದಕ್ಕೆ ಕಷ್ಟವಾಗಿವೆ. ವಿದ್ಯಾಹೀನರೂ ಚಪಲಚಿತ್ತರೂ ಮಿಕ್ಕಾದ ಬರಹಗಳಿಗೆ ಸಹ ತಪ್ಪಾದ ಅರ್ಥಮಾಡಿಕೊಂಡ ಹಾಗೆಯೇ ಇವುಗಳಿಗೂ ತಪ್ಪಾದ ಅರ್ಥಮಾಡಿಕೊಂಡು ತವ
ಆದಕಾರಣ ಪ್ರಿಯರೇ, ನೀವು ಈ ಸಂಗತಿಗಳನ್ನು ಮುಂದಾಗಿ ತಿಳಿದುಕೊಂಡಿರುವದರಿಂದ ದುಷ್ಟರ ತಪ್ಪಿನಂತೆ ನಡಿಸ ಲ್ಪಟ್ಟು ನಿಮ್ಮ ಸ್ಥಿರಮನಸ್ಸನ್ನು ಬಿಟ್ಟು ಭ್ರಷ್ಠರಾಗದಂತೆ ಎಚ್ಚರಿಕೆಯಾಗಿರ್ರಿ.