ಇದಾದ ಮೇಲೆ ದಾವೀದನು ಕರ್ತನನ್ನು -- ಯೆಹೂದದ ಪಟ್ಟಣಗಳಲ್ಲಿ ಯಾವದಕ್ಕಾದರೂ ಹೋಗಲೋ ಎಂದು ಕೇಳಿದನು. ಕರ್ತನು ಅವನಿಗೆ--ಹೋಗು ಅಂದನು. ದಾವೀ ದನು--ನಾನು ಎಲ್ಲಿಗೆ ಹೋಗಲಿ ಎಂದು ಕೇಳಿದಕ್ಕೆ ಆತನು -- ಹೆಬ್ರೋನಿಗೆ ಅಂದನು.
ಯಾಬೇಷ್ಗಿಲ್ಯಾದಿನವರು ಸೌಲನನ್ನು ಹೂಣಿಟ್ಟ ರೆಂದು ದಾವೀದನಿಗೆ ತಿಳಿಸಿದಾಗ ಅವನು ದೂತರನ್ನು ಕಳುಹಿಸಿ--ನೀವು ನಿಮ್ಮ ಯಜಮಾನನಾದ ಸೌಲನಿಗೆ ಈ ದಯೆಯನ್ನು ತೋರಿಸಿ ಅವನನ್ನು ಹೂಣಿಟ್ಟ ಕಾರಣ ಕರ್ತನಿಂದ ನಿಮಗೆ ಆಶೀರ್ವಾದವಾಗಲಿ.
ಸೌಲನ ಮಗನಾದ ಈಷ್ಬೋಶೆತನು ಇಸ್ರಾಯೇಲಿನ ಮೇಲೆ ಆಳುವದಕ್ಕೆ ಆರಂಭಿಸಿದಾಗ ನಾಲ್ವತ್ತು ವರುಷ ಪ್ರಾಯದವನಾಗಿದ್ದು ಎರಡು ವರುಷ ಆಳಿದನು. ಆದರೆ ಯೆಹೂದನ ಮನೆಯವರು ದಾವೀದನನ್ನು ಹಿಂಬಾಲಿಸಿದರು.
ಹಾಗೆ ಯೇ ಸೌಲನ ಮಗನಾದ ಈಷ್ಬೋಶೆತನ ಕಡೆಯವ ರಾದ ಬೆನ್ಯಾವಿಾನ್ಯರಲ್ಲಿ ಹನ್ನೆರಡು ಮಂದಿಯೂ ದಾವೀದನ ಸೇವಕರಲ್ಲಿ ಹನ್ನೆರಡು ಮಂದಿಯೂ ಎದ್ದು ಹೊರಟು ಒಬ್ಬರ ತಲೆಯನ್ನು ಒಬ್ಬರು ಹಿಡಿದು ಒಬ್ಬರ ಪಕ್ಕೆಯಲ್ಲಿ ಒಬ್ಬರು ಕತ್ತಿಯನ್ನು ತಿವಿದು ಎಲ್ಲರೂ ಸತ್ತುಹೋದರು.
ಅದಕ್ಕವನುನಾನೇ ಅಂದನು. ಆಗ ಅಬ್ನೇರನು ಅವನಿಗೆ--ನೀನು ಬಲಗಡೆಗಾದರೂ ಎಡಗಡೆಗಾದರೂ ತಿರುಗಿ ಯೌವ ನಸ್ಥರಲ್ಲಿ ಒಬ್ಬನನ್ನು ಹಿಡಿದು ಅವನ ಆಯುಧಗಳನ್ನು ತಕ್ಕೋ ಅಂದನು. ಆದರೆ ಅಸಾಹೇಲನು ಅವನ ಹಿಂದಿನಿಂದ ತಿರುಗಲೊಲ್ಲದೆ ಇದ್ದನು.
ಅಬ್ನೇರನು ಅಸಾಹೇಲನಿಗೆ--ನೀನು ನನ್ನನ್ನು ಹಿಂಬಾಲಿಸುವದನ್ನು ಬಿಟ್ಟು ತಿರುಗಿ ಹೋಗು; ನಾನು ನಿನ್ನನ್ನು ನೆಲಕ್ಕೆ ಹೊಡೆದು ಬಿಡುವದು ಯಾಕೆ? ನಾನು ನಿನ್ನ ಸಹೋ ದರನಾದ ಯೋವಾಬನಿಗೆ ಮುಖತೋರಿಸುವದು ಹೇಗೆ ಅಂದನು.
ಆದರೆ ಅವನು ಹೋಗುವದಕ್ಕೆ ಒಪ್ಪದೆಹೋದದರಿಂದ ಅಬ್ನೇರನು ತನ್ನ ಬರ್ಜಿಯ ಹಿಂಭಾಗದ ಮೊನೆಯಿಂದ ಅವನ ಪಕ್ಕೆಯ ಐದನೇ ಎಲುಬಿನ ಕೆಳಗೆ ಹಾಯುವಂತೆ ತಿವಿದನು; ಅದು ಅವನ ಹಿಂದಿನಿಂದ ಹೊರಗೆ ಬಂತು. ಅವನು ಅಲ್ಲಿ ಬಿದ್ದು ಅದೇ ಸ್ಥಳದಲ್ಲಿ ಸತ್ತನು. ಆಗ ಏನಾಯಿಯತಂದರೆ ಅಸಾಹೇಲನು ಬಿದ್ದು ಸತ್ತ ಸ್ಥಳಕ್ಕೆ ಬಂದವರೆಲ್ಲರು ಅಲ್ಲಿಯೇ ಸುಮ್ಮನೆ ನಿಂತರು.
ಆಗ ಅಬ್ನೇರನು ಯೋವಾಬನಿಗೆ--ಕತ್ತಿಯು ಯಾವಾಗಲೂ ನುಂಗಿಬಿಡುವದೋ? ಅಂತ್ಯ ದಲ್ಲಿ ಅದು ಕಹಿಯಾಗಿರುವದೆಂದು ನಿನಗೆ ಗೊತ್ತಾಗು ವದಿಲ್ಲವೋ? ತಮ್ಮ ಸಹೋದರರನ್ನು ಹಿಂಬಾಲಿಸು ವದನ್ನು ಬಿಟ್ಟು ಹಿಂದಕ್ಕೆ ತಿರುಗುವ ಹಾಗೆ ಜನರಿಗೆ ಎಷ್ಟು ಕಾಲ ಹೇಳದೆ ಇರುವಿ ಎಂದು ಕೂಗಿ ಹೇಳಿದನು.