ದೇವರಾದ ಕರ್ತನು ನನಗೆ ಹೀಗೆ ತೋರಿಸಿದನು; ಇಗೋ, ಹಿಂಗಾರು ಮಳೆ ಬಿದ್ದು ಪೈರು ಸೊಂಪಾಗುವದಕ್ಕೆ ಆರಂಭವಾದಾಗ ಅಂದರೆ, ರಾಜಾದಾಯದ ಹುಲ್ಲನ್ನು ಕೊಯ್ದ ಮೇಲೆ ಬೆಳೆಯು ವೃದ್ಧಿಯಾಗುತ್ತಿದ್ದಾಗ ಇಗೋ, ಕರ್ತನು ಮಿಡತೆಗಳನ್ನು ಉಂಟುಮಾಡಿದನು.
ಆದದ್ದೇ ನಂದರೆ, ಅವು ಆ ದೇಶದ ಹುಲ್ಲನ್ನು ತಿಂದು ಮುಗಿಸಿದ ಮೇಲೆ ನಾನು--ಓ ಕರ್ತನಾದ ದೇವರೇ, ನನ್ನನ್ನು ಮನ್ನಿಸು; ಯಾಕೋಬನು ಹೇಗೆ ನಿಲ್ಲುವನು? ಅದು ಸಣ್ಣ ಜನಾಂಗ ಎಂದು ವಿಜ್ಞಾಪಿಸಿ ಕೊಳ್ಳಲು
ಕರ್ತನು ನನಗೆ--ಆಮೋಸನೇ, ಏನನ್ನು ನೋಡುತ್ತಿರುವೆ ಎಂದಾಗ ನಾನು--ನೂಲುಗುಂಡು ಎನ್ನಲು ಕರ್ತನು ಹೇಳಿದ್ದೇನಂದರೆ--ಇಗೋ, ನಾನು ನನ್ನ ಜನರಾದ ಇಸ್ರಾಯೇಲ್ಯರ ಮಧ್ಯದಲ್ಲಿ ನೂಲು ಗುಂಡನ್ನು ಇಡುತ್ತೇನೆ; ಇನ್ನು ಮೇಲೆ ಅವರನ್ನು ದಾಟಿಹೋಗುವದಿಲ್ಲ.
ಆಗ ಬೇತೇಲಿನ ಯಾಜಕನಾದ ಅಮಚ್ಯನು ಇಸ್ರಾಯೇಲಿನ ಅರಸನಾದ ಯಾರೊಬ್ಬಾಮನಿಗೆ-- ಆಮೋಸನು ಇಸ್ರಾಯೇಲಿನ ಮನೆತನದವರ ಮಧ್ಯ ದಲ್ಲಿ ನಿನಗೆ ವಿರೋಧವಾಗಿ ಒಳಸಂಚು ಮಾಡಿದ್ದಾನೆ. ದೇಶವು ಅವನ ಎಲ್ಲಾ ಮಾತುಗಳನ್ನು ತಾಳಲಾರದು.
ಆದದರಿಂದ ಕರ್ತನು ಹೇಳುವದೇ ನಂದರೆ--ನಿನ್ನ ಹೆಂಡತಿ ಪಟ್ಟಣದಲ್ಲಿ ಸೂಳೆಯಾಗು ವಳು; ನಿನ್ನ ಕುಮಾರರೂ ಕುಮಾರ್ತೆಯರೂ ಕತ್ತಿ ಯಿಂದ ಬೀಳುವರು; ನಿನ್ನ ದೇಶವು ನೂಲಿನಿಂದ ವಿಭಾಗಿಸಲ್ಪಡುವದು; ನೀನು ಅಪವಿತ್ರವಾದ ದೇಶದಲ್ಲಿ ಸಾಯುವಿ. ಇಸ್ರಾಯೇಲ್ ನಿಶ್ಚಯವಾಗಿ ತನ್ನ ದೇಶದಿಂದ ಸೆರೆಯಾಗಿ ಒಯ್ಯಲ್ಪಡುವದು.