ನೀನು ಅವುಗಳಿಗೆ ಅಡ್ಡಬೀಳಬಾರದು, ಸೇವಿಸಲೂ ಬಾರದು. ನಿನ್ನ ದೇವರಾದ ಕರ್ತನಾಗಿರುವ ನಾನು ರೋಷವುಳ್ಳ ದೇವರಾಗಿದ್ದೇನೆ. ನನ್ನನ್ನು ಹಗೆ ಮಾಡುವ ತಂದೆಗಳ ಅಪರಾಧವನ್ನು ಮಕ್ಕಳ ಮೇಲೆ ಯೂ ಮೂರನೆಯ ನಾಲ್ಕನೆಯ ತಲೆಗಳ ವರೆಗೂ ಬರಮಾಡುವೆನು.
ಆದರೆ ಏಳನೆಯ ದಿನವು ನಿನ್ನ ದೇವರಾದ ಕರ್ತನ ಸಬ್ಬತ್ ಆಗಿದೆ. ಅದರಲ್ಲಿ ನೀನಾಗಲಿ ನಿನ್ನ ಮಗನಾಗಲಿ ಮಗಳಾ ಗಲಿ ದಾಸನಾಗಲಿ ದಾಸಿಯಾಗಲಿ ಪಶುಗಳಾಗಲಿ ಬಾಗಿಲ ಬಳಿಯಲ್ಲಿರುವ ಪ್ರವಾಸಿಯಾಗಲಿ ಯಾವ ಕೆಲಸವನ್ನೂ ಮಾಡಬಾರದು.
ಆರು ದಿನಗಳಲ್ಲಿ ಕರ್ತನು ಆಕಾಶವನ್ನೂ ಭೂಮಿಯನ್ನೂ ಸಮುದ್ರ ವನ್ನೂ ಅವುಗಳಲ್ಲಿ ಇರುವವುಗಳೆಲ್ಲವನ್ನೂ ಉಂಟು ಮಾಡಿ ಏಳೆನೆಯ ದಿನದಲ್ಲಿ ವಿಶ್ರಮಿಸಿಕೊಂಡನು. ಆದದರಿಂದ ಕರ್ತನು ಸಬ್ಬತ್ ದಿನವನ್ನು ಆಶೀರ್ವದಿಸಿ ಅದನ್ನು ಪರಿಶುದ್ಧಮಾಡಿದನು.
ನೀನು ನಿನ್ನ ನೆರೆಯವನ ಮನೆಯನ್ನು ಆಶಿಸ ಬಾರದು, ನಿನ್ನ ನೆರೆಯವನ ಹೆಂಡತಿಯನ್ನೂ ಆಶಿಸ ಬಾರದು; ಅವನ ದಾಸನನ್ನಾಗಲಿ ದಾಸಿಯನ್ನಾಗಲಿ ಎತ್ತನ್ನಾಗಲಿ ಕತ್ತೆಯನ್ನಾಗಲಿ ನಿನ್ನ ನೆರೆಯವನಿಗೆ ಇರುವ ಯಾವದನ್ನೂ ಆಶಿಸಬಾರದು ಎಂದು ಹೇಳಿದನು.
ನನ್ನ ಯಜ್ಞವೇದಿಯನ್ನು ಮಣ್ಣಿನಿಂದ ಮಾಡ ಬೇಕು. ಅದರ ಮೇಲೆ ನಿನ್ನ ದಹನಬಲಿಗಳನ್ನೂ ಸಮಾಧಾನದ ಬಲಿಗಳನ್ನೂ ಕುರಿಗಳನ್ನೂ ಎತ್ತುಗಳನ್ನೂ ಅರ್ಪಿಸಬೇಕು; ನನ್ನ ಹೆಸರನ್ನು ಜ್ಞಾಪಕಮಾಡುವ ಎಲ್ಲಾ ಸ್ಥಳಗಳಲ್ಲಿ ನಾನು ನಿಮ್ಮ ಬಳಿಗೆ ಬಂದು ನಿಮ್ಮನ್ನು ಆಶೀರ್ವದಿಸುವೆನು.