ಆರೋನನಿಗೂ ಅವನ ಕುಮಾರರಿಗೂ ನಡುಕಟ್ಟುಗಳನ್ನು ಕಟ್ಟಿ ಅವರಿಗೆ ಕುಲಾಯಿಗಳನ್ನು ಇಡಬೇಕು. ಹೀಗೆ ಅವರಿಗೆ ಯಾಜಕ ಸೇವೆಯು ಶಾಶ್ವತ ಕಟ್ಟಳೆಯಾಗಿರುವದು. ಆರೋನ ನನ್ನೂ ಅವನ ಕುಮಾರರನ್ನೂ ನೀನು ಪ್ರತಿಷ್ಠೆ ಮಾಡಬೇಕು.
ನೀನು ಕರುಳುಗಳನ್ನೂ ಅವುಗಳ ಮೇಲೆ ಇರುವ ಎಲ್ಲಾ ಕೊಬ್ಬನ್ನೂ ಕಲಿಜದ ಮೇಲೆ ಬರುವ ಕೊಬ್ಬನ್ನೂ ಎರಡು ಮೂತ್ರಜನಕಾಂಗಗಳನ್ನೂ ಅವುಗಳ ಮೇಲೆ ಇರುವ ಕೊಬ್ಬನ್ನೂ ತೆಗೆದುಕೊಂಡು ಯಜ್ಞವೇದಿಯ ಮೇಲೆ ಸುಡಬೇಕು.
ತರುವಾಯ ನೀನು ಅದನ್ನು ವಧಿಸಿ ಅದರ ರಕ್ತವನ್ನು ಆರೋನನ ಮತ್ತು ಅವನ ಕುಮಾರರ ಬಲ ಕಿವಿಯ ತುದಿಗೂ ಬಲಗೈಯ ಹೆಬ್ಬೆರಳಿಗೂ ಬಲಗಾಲಿನ ಹೆಬ್ಬೆರಳಿಗೂ ಹಚ್ಚಿ ಮಿಕ್ಕ ರಕ್ತವನ್ನು ಯಜ್ಞವೇದಿಯ ಸುತ್ತಲೂ ಚಿಮುಕಿಸಬೇಕು.
ಆರೋನನೂ ಅವನ ವಸ್ತ್ರಗಳೂ ಅವನೊಂದಿಗೆ ಅವನ ಕುಮಾರರೂ ಅವರ ವಸ್ತ್ರಗಳೂ ಪರಿಶುದ್ಧ ವಾಗುವ ಹಾಗೆ ಯಜ್ಞವೇದಿಯ ಮೇಲಿರುವ ರಕ್ತವನ್ನೂ ಅಭಿಷೇಕ ತೈಲವನ್ನೂ ತೆಗೆದುಕೊಂಡು ಆರೋನನ ಮೇಲೆಯೂ ಅವನ ವಸ್ತ್ರಗಳ ಮೇಲೆಯೂ ಅವನ ಕುಮಾರರ ಮೇಲೆಯೂ ಅವರ ವಸ್ತ್ರಗಳ ಮೇಲೆಯೂ ನೀನು ಚಿಮುಕಿಸಬೇಕು.
ಇದಲ್ಲದೆ ಆ ಟಗರಿನ ಕೊಬ್ಬನ್ನೂ ಬಾಲವನ್ನೂ ಕರುಳುಗಳ ಮೇಲಿರುವ ಕೊಬ್ಬನ್ನೂ ಕಲಿಜದ ಮೇಲಿ ರುವ ಪರೆಯನ್ನೂ ಮೂತ್ರಜನಕಾಂಗಗಳನ್ನೂ ಅವು ಗಳ ಮೇಲಿರುವ ಕೊಬ್ಬನ್ನೂ ಬಲ ತೊಡೆಯನ್ನೂ ತೆಗೆದುಕೊಳ್ಳಬೇಕು. ಯಾಕಂದರೆ ಅದು ಪ್ರತಿಷ್ಠೆಯ ಟಗರು.
ಅದು ಆರೋನನಿಗೂ ಅವನ ಕುಮಾರರಿಗೂ ಇಸ್ರಾಯೇಲ್ ಮಕ್ಕಳಿಗೆ ನಿತ್ಯ ಕಟ್ಟಳೆಯಾಗಿರತಕ್ಕದ್ದು. ಯಾಕಂದರೆ ಅದು ಎತ್ತುವ ಅರ್ಪಣೆಯಾಗಿದೆ. ಇಸ್ರಾಯೇಲ್ ಮಕ್ಕಳಿಂದ ಎತ್ತುವ ಅರ್ಪಣೆಯೂ ಅವರ ಸಮಾ ಧಾನದ ಬಲಿಗಳ ಅರ್ಪಣೆಗಳಿಂದ ಅವರು ಕರ್ತನಿಗೆ ಎತ್ತುವ ಅರ್ಪಣೆಯೂ ಆಗಿರಬೇಕು.
ಅವ ರನ್ನು ಪ್ರತಿಷ್ಠೆಮಾಡುವದಕ್ಕೋಸ್ಕರ ಮತ್ತು ಪರಿಶುದ್ಧ ಮಾಡುವದಕ್ಕೋಸ್ಕರ ಅವರಿಗಾಗಿ ಪ್ರಾಯಶ್ಚಿತ್ತ ಮಾಡಿ ದವುಗಳನ್ನು ಅವರೇ ಊಟಮಾಡಬೇಕು. ಅನ್ಯರು ಅವುಗಳನ್ನು ಉಣ್ಣಬಾರದು, ಯಾಕಂದರೆ ಅವುಗಳು ಪರಿಶುದ್ಧವಾದವುಗಳು.
ಪಾಪದ ಯಜ್ಞವಾದ ಹೋರಿಯನ್ನು ಪ್ರತಿದಿನ ಪ್ರಾಯಶ್ಚಿತ್ತಕ್ಕಾಗಿ ತಂದು ಯಜ್ಞವೇದಿಗಾಗಿ ಪ್ರಾಯ ಶ್ಚಿತ್ತ ಮಾಡಿದ ಮೇಲೆ ಅದರ ದೋಷವನ್ನು ಪರಿ ಹರಿಸಿ ಅದನ್ನು ಪವಿತ್ರಮಾಡುವದಕ್ಕೆ ಅದನ್ನು ಅಭಿಷೇಕಿಸಬೇಕು.
ಹಿನ್ನಿನ ನಾಲ್ಕನೆಯ ಒಂದು ಪಾಲಿನಷ್ಟು ಹಿಂಡಿದ ಎಣ್ಣೆ ಹೊಯಿದ ನಯವಾದ ಹಿಟ್ಟಿನ ಹತ್ತನೆಯ ಪಾಲೂ ಹಿನ್ನಿನ ನಾಲ್ಕನೆಯ ಪಾಲಿನಷ್ಟು ದ್ರಾಕ್ಷಾರಸದ ಪಾನ ದರ್ಪಣೆಯೂ ಒಂದು ಕುರಿಮರಿಯೊಂದಿಗೆ ಅರ್ಪಿಸ ಬೇಕು.
ಇನ್ನೊಂದು ಕುರಿಮರಿಯನ್ನು ಸಾಯಂಕಾಲ ದಲ್ಲಿ ಅರ್ಪಿಸಬೇಕು. ಉದಯದ ಆಹಾರ ಕಾಣಿಕೆ ಯಂತೆಯೂ ಅದರ ಪಾನದರ್ಪಣೆಯಂತೆಯೂ ಇದಕ್ಕೂ ಮಾಡಿ ಕರ್ತನಿಗೆ ಸುವಾಸನೆಯಾಗಿರುವಂತೆ ಬೆಂಕಿಯಿಂದ ಅರ್ಪಿಸಬೇಕು.