ಆರೋನನು ಅದರ ಕೊಂಬುಗಳಿಗೆ ವರುಷಕ್ಕೆ ಒಂದು ಸಾರಿ ಪ್ರಾಯಶ್ಚಿತ್ತದ ಬಲಿಯ ರಕ್ತದಿಂದ ಪ್ರಾಯಶ್ಚಿತ್ತ ಮಾಡಬೇಕು. ವರುಷಕ್ಕೊಂದು ಸಾರಿ ನಿಮ್ಮ ಸಂತತಿಗಳಲ್ಲೆಲ್ಲಾ ಅದನ್ನು ಮಾಡಬೇಕು. ಅದು ಕರ್ತನಿಗೆ ಅತಿಪರಿಶುದ್ಧವಾದದ್ದು.
ನೀನು ಇಸ್ರಾಯೇಲ್ ಮಕ್ಕಳ ಲೆಕ್ಕವನ್ನು ಅದರ ಸಂಖ್ಯೆಗೆ ಸರಿಯಾಗಿ ಎಣಿಸಿದಾಗ ಅವರಲ್ಲಿ ವ್ಯಾಧಿ ಉಂಟಾಗದ ಹಾಗೆ ಅವರನ್ನು ಕ್ರಮವಾಗಿ ಎಣಿಸಿ ಒಬ್ಬೊಬ್ಬನು ತನ್ನ ಪ್ರಾಣದ ವಿಮೋಚನೆಯ ಕ್ರಮವನ್ನು ಕರ್ತನಿಗೆ ಕೊಡಬೇಕು.
ಎಣಿಸಲ್ಪಟ್ಟವರಲ್ಲಿ ಸೇರುವ ಪ್ರತಿ ಮನುಷ್ಯನು ಕೊಡಬೇಕಾದದ್ದು ಏನಂದರೆ: ಶೆಕೆಲಿಗೆ ಇಪ್ಪತ್ತು ಗೇರಾ ಪ್ರಕಾರವಾಗಿ ಪರಿಶುದ್ಧ ಆಲಯದ ಶೆಕೆಲಿನ ಮೇರೆಗೆ ಅರೆ ಶೆಕೆಲ್ ಕೊಡಬೇಕು. ಅರೆ ಶೆಕೆಲ್ ಕರ್ತನಿಗೆ ಅರ್ಪಿಸುವ ಕಾಣಿಕೆಯಾಗಿರಬೇಕು.
ಪ್ರಾಯಶ್ಚಿತ್ತದ ಹಣವನ್ನು ಇಸ್ರಾಯೇಲ್ ಮಕ್ಕಳಿಂದ ತೆಗೆದುಕೊಂಡು ಸಭೆಯ ಗುಡಾರದ ಕೆಲಸಕ್ಕಾಗಿ ಪ್ರತ್ಯೇ ಕಿಸಬೇಕು. ಇದೇ ಕರ್ತನ ಮುಂದೆ ಇಸ್ರಾಯೇಲ್ ಮಕ್ಕಳಿಗೆ ಜ್ಞಾಪಕಾರ್ಥಕ್ಕಾಗಿಯೂ ಅವರ ಪ್ರಾಣಗಳ ಪ್ರಾಯಶ್ಚಿತ್ತಕ್ಕಾಗಿಯೂ ಇರುವದು ಅಂದನು.
ತೊಳೆದುಕೊಳ್ಳುವ ದಕ್ಕಾಗಿ ಹಿತ್ತಾಳೆಯಒಂದು ಗಂಗಾಳವನ್ನೂ ಅದಕ್ಕೆ ಹಿತ್ತಾಳೆಯ ಕಾಲುಗಳನ್ನು ಮಾಡಿ ಅದನ್ನು ಸಭೆಯ ಗುಡಾರಕ್ಕೂ ಯಜ್ಞವೇದಿಗೂ ಮಧ್ಯದಲ್ಲಿಟ್ಟು ಅದರಲ್ಲಿ ನೀರನ್ನು ಹೊಯ್ಯಬೇಕು.
ಅವರು ಸಭೆಯ ಗುಡಾರದಲ್ಲಿ ಪ್ರವೇಶಿಸುವಾಗ ಸೇವೆಮಾಡುವದಕ್ಕೂ ಬೆಂಕಿಯಿಂದ ಕರ್ತನಿಗೆ ದಹನ ಬಲಿಯನ್ನು ಅರ್ಪಿಸುವದಕ್ಕೂ ಯಜ್ಞವೇದಿಯ ಬಳಿಗೆ ಬರುವಾಗ ಅವರು ಸಾಯದ ಹಾಗೆ ನೀರಿನಲ್ಲಿ ತೊಳೆದು ಕೊಳ್ಳಬೇಕು.
ಉತ್ತಮ ವಾದ ತೈಲಗಳನ್ನು ಅಂದರೆ ಐದುನೂರು ಶೆಕೆಲ್ ಸ್ವಚ್ಚವಾದ ರಕ್ತ ಬೋಳವು, ಅದರ ಅರ್ಧದಷ್ಟು ಅಂದರೆ ಇನ್ನೂರೈವತ್ತು ಶೆಕೆಲಿನ ಸುಗಂಧವಾದ ಲವಂಗ ಪಟ್ಟೆ ಯನ್ನು ಮತ್ತು ಇನ್ನೂರೈವತ್ತು ಶೆಕೆಲ್ ಸುಗಂಧವಾದ ಬಜೆಯನ್ನು,