ಮನುಷ್ಯಪುತ್ರನೇ, ತೂರ್, ಯೆರೂಸಲೇಮಿನ ವಿಷಯವಾಗಿ ಆಹಾ, ಜನರ ದ್ವಾರವಾಗಿದ್ದದ್ದು ಮುರಿದು ಹೋಯಿತು, ಅದು ನನ್ನ ಕಡೆಗೆ ತಿರುಗಿಕೊಂಡಿದೆ, ಯೆರೂಸಲೇಮು ಹಾಳಾದ ಕಾರಣ ನಾನು ತುಂಬಿಕೊಳ್ಳುವೆನು ಎಂದು ಹೇಳಿದ್ದರಿಂದ
ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಇಗೋ, ತೂರ್ ದೇಶವೇ, ನಾನು ನಿನಗೆ ವಿರೋಧವಾಗಿದ್ದೇನೆ, ಸಮುದ್ರವು ತನ್ನ ಅಲೆಗಳನ್ನು ಹೇಗೆ ಬರಮಾಡುವದೋ ಹಾಗೆಯೇ ನಾನು ನಿನಗೆ ವಿರೋಧವಾಗಿ ಅನೇಕ ಜನಾಂಗಗಳನ್ನು ನಿನ್ನ ಮೇಲೆ ಬರಮಾಡುವೆನು.
ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಇಗೋ, ಉತ್ತರದ ರಾಜಾಧಿರಾಜನೂ ಬಾಬೆಲಿನ ಅರಸನೂ ಆದ ನೆಬೂಕದ್ನೆಚ್ಚರನನ್ನು ಕುದುರೆಗಳ ಸಂಗಡಲೂ ಸವಾರರ ಸಂಗಡಲೂ ರಥಗಳ ಸಂಗಡಲೂ ಬಹು ಜನರ ಸಂಗಡಲೂ ತೂರಿನ ಮೇಲೆ ತರುತ್ತೇನೆ.
ಅವನ ಲೆಕ್ಕವಿಲ್ಲದ ಕುದುರೆಗಳಿಂದ ಎದ್ದ ಧೂಳು ನಿನ್ನನ್ನು ಮುಚ್ಚುವದು; ಗೋಡೆಯಿಲ್ಲದ ಕೋಟೆಯೊಳಗೆ ಶತ್ರು ಗಳು ಪ್ರವೇಶಿಸುವ ಪ್ರಕಾರ ಅವರು ನಿನ್ನ ಬಾಗಿಲು ಗಳಲ್ಲಿ ಪ್ರವೇಶಿಸುವಾಗ ಸವಾರರ, ರಥಗಳ, ಚಕ್ರಗಳ ಶಬ್ದದಿಂದ ನಿನ್ನ ಗೋಡೆಗಳು ಕದಲುವವು.
ನಿನ್ನನ್ನು ಬಂಡೆಯ ತುದಿ ಯಂತೆ ಮಾಡುವೆನು. ನೀನು ಅಲ್ಲಿ ಬಲೆ ಹಾಸುವ ಸ್ಥಳವಾಗುವಿ. ಇನ್ನು ನೀನು ಕಟ್ಟಲ್ಪಡುವದಿಲ್ಲ; ಯಾಕಂ ದರೆ ಕರ್ತನಾದ ನಾನೇ ಅದನ್ನು ಹೇಳಿದ್ದೇನೆಂದು ದೇವರಾದ ಕರ್ತನು ಹೇಳುತ್ತಾನೆ.
ಆಮೇಲೆ ಸಮುದ್ರದ ಎಲ್ಲಾ ಪ್ರಭುಗಳು ತಮ್ಮ ಸಿಂಹಾಸನಗಳನ್ನು ಬಿಟ್ಟು ಇಳಿಯುವರು; ತಮ್ಮ ನಿಲು ವಂಗಿಗಳನ್ನು ತೆಗೆದುಹಾಕುವರು, ಚಿತ್ರವಾಗಿ ಹೊಲಿದ ತಮ್ಮ ವಸ್ತ್ರಗಳನ್ನು ಇಟ್ಟುಬಿಡುವರು; ನಡುಗುವಿಕೆಯನ್ನು ಹೊದ್ದುಕೊಳ್ಳುವರು; ನೆಲದ ಮೇಲೆ ಕುಳಿತುಕೊಳ್ಳು ವರು, ಕ್ಷಣಕ್ಷಣಕ್ಕೂ ನಡುಗುವರು, ನಿನ್ನ ವಿಷಯ ವಾಗಿ ಆಶ್ಚರ್ಯಪಡುವರು.
ನಿನ್ನ ವಿಷಯದಲ್ಲಿ ಗೋಳಾಟವನ್ನೆತ್ತಿ ನಿನಗೆ ಹೇಳುವದೇನಂದರೆ, ಸಮು ದ್ರಗಳ ಬಳಿಯಲ್ಲಿ ವಾಸಿಸಿದವಳೇ, ಹೆಸರು ಗೊಂಡ ಪಟ್ಟಣವೇ, ನೀನೂ ತನ್ನ ನಿವಾಸಿಗಳೂ ಸಮುದ್ರದಲ್ಲಿ ಬಲವಾಗಿದ್ದವಳೇ, ಅದರ ಸಮುದ್ರ ಸಂಚಾರವನ್ನೂ ಭಯಪಡಿಸಿದವಳೇ, ಅಯ್ಯೋ, ಹೇಗೆ ನಾಶವಾದಿ?
ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಾನು ನಿನ್ನನ್ನು ನಿವಾಸಿಗಳಿಲ್ಲದ ಪಟ್ಟಣದ ಹಾಗೆ ಹಾಳಾದ ಪಟ್ಟಣವಾಗಿ ಮಾಡುವಾಗ ಹೆಚ್ಚು ನೀರು ಮುಚ್ಚುವ ಹಾಗೆ ಅಗಾಧವನ್ನು ನಿನ್ನ ಮೇಲೆ ಬರ ಮಾಡುವೆನು.
ನಿನ್ನನ್ನು ಅಧೋಲೋಕಕ್ಕೆ ತಳ್ಳಿ ಪಾತಾಳಕ್ಕೆ ಇಳಿದ ನಿಮ್ಮ ಪೂರ್ವ ಕಾಲದವರೊಂದಿಗೆ ವಾಸಿಸುವಂತೆ ಮಾಡುವೆನು. ನಾನು ನಿನ್ನ ಮಹಿಮೆಯನ್ನು ಜೀವ ಲೋಕದಲ್ಲಿ ನೆಲೆಗೊಳಿಸದ ನಿರ್ನಿವಾಸಿಯಾಗುವಂತೆ ನಿನ್ನನ್ನು ಪಾತಾಳಕ್ಕಿಳಿದವರ ಸಹವಾಸಕ್ಕೆ ಸೇರಿಸುವೆನು.