ಬಾಗಲಿನ ಅಗಲವು ಹತ್ತು ಮೊಳ ಬಾಗಲಿನ ಪಾರ್ಶ್ವಗಳು ಒಂದು ಕಡೆಯಲ್ಲಿ ಐದು ಮೊಳ, ಇನ್ನೊಂದು ಕಡೆಯಲ್ಲಿ ಐದು ಮೊಳವೆಂದು ಅವನು ಅದರ ಉದ್ದವನ್ನು ನಲವತ್ತು ಮೊಳವೆಂದೂ ಅಗಲವನ್ನು ಇಪ್ಪತ್ತು ಮೊಳವೆಂದೂ ಅಳೆದನು.
ಆ ಪಾರ್ಶ್ವದ ಕೊಠಡಿಗಳು ನೂರು ಇದ್ದವು. ಒಂದರ ಮೇಲೆ ಒಂದರಂತೆ ಮೂವತ್ತು ಅಂತಸ್ತು ಇದ್ದವು; ಅವರು ಹಿಡಿಯಲ್ಪಡುವ ಹಾಗೆ ಪಾರ್ಶ್ವದ ಕೊಠಡಿಗಳಿಗಾಗಿ ಇರುವ ಆಲಯವನ್ನು ಹೊಂದಿದ ಗೋಡೆಯಲ್ಲಿ ಸುತ್ತ ಲಾಗಿ ಸೇರಿಸಲ್ಪಟ್ಟಿದ್ದವು. ಆದರೆ ಮನೆಯ ಗೋಡೆಯಲ್ಲಿ ಹಿಡಿಸಲ್ಪಡಲಿಲ್ಲ.
ಸುತ್ತಣ ಅಂತಸ್ತುಗಳು ಮೇಲೆ ಮೇಲೆ ಹೋದ ಹಾಗೆ ಆಯಾ ಕೊಠಡಿಗಳ ಅಗಲವು ಹೆಚ್ಚುತ್ತಾ ಬಂದಿತು; ಅವು ಮನೆಯನ್ನು ಸುತ್ತಿಕೊಂಡು ಮೇಲೆ ಮೇಲೆ ಹೋದಹಾಗೆಲ್ಲಾ ಅದನ್ನು ಬಿಗಿಯಾಗಿ ಹಿಡಿದು ಕೊಂಡಂತೆ ಇದ್ದವು; ಹೀಗೆ ಮೇಲಿನ ಅಂತಸ್ತುಗಳು ಮನೆಯ ಕಡೆಗೆ ಅಗಲವಾಗುತ್ತಾ ಬಂದವು; ಕೆಳ ಗಿನ ಅಂತಸ್ತಿನಿಂದ ಮಧ್ಯದ ಅಂತಸ್ತಿನ ಮಾರ್ಗವಾಗಿ ಮೇಲಿನ ಅಂತಸ್ತಿಗೆ ಹತ್ತುತ್ತಿದ್ದವು.
ಪಾರ್ಶ್ವದ ಕೊಠಡಿಗಳ ಬಾಗಿಲುಗಳು ಬಿಡಲ್ಪಟ್ಟ ಸ್ಥಳದ ಕಡೆಗೆ ಇದ್ದವು, ಉತ್ತರದ ಕಡೆಗೆ ಒಂದು ಬಾಗಿಲೂ ದಕ್ಷಿಣದ ಕಡೆಗೆ ಮತ್ತೊಂದು ಬಾಗಿಲೂ ಇತ್ತು; ಬಿಡಲ್ಪಟ್ಟ ಸ್ಥಳದ ಅಗಲವು ಸುತ್ತಲೂ ಐದು ಮೊಳವಾಗಿತ್ತು.
ಈಗ ಪ್ರತ್ಯೇಕಿಸಿದ ಸ್ಥಳಕ್ಕೆ ಎದುರಾಗಿ ಪಶ್ಚಿಮದ ಕಡೆಗಿದ್ದ ಕಟ್ಟಡವು ಎಪ್ಪತ್ತು ಮೊಳ ಅಗಲವಾಗಿತ್ತು; ಕಟ್ಟಡದ ಗೋಡೆಯು ಸುತ್ತಲೂ ಐದು ಮೊಳ ದಪ್ಪವಾಗಿತ್ತು; ಅದರ ಉದ್ದವು ತ್ತೊಂಭತ್ತು ಮೊಳ ವಾಗಿತ್ತು.
ಪ್ರತ್ಯೇಕ ಸ್ಥಳಕ್ಕೆ ಎದುರಾಗಿಯೂ ಹಿಂದೆಯೂ ಇದ್ದಂತ ಕಟ್ಟಡ ವನ್ನು ಅಂದರೆ ಕೈಪಡಸಾಲೆಗಳನ್ನೂ ಆ ಕಡೆ ಈ ಕಡೆ ನೂರು ಮೊಳವೆಂದೂ ಅಳೆದನು; ಇದರೊಳಗೆ ಒಳಗಿನ ದೇವಾಲಯವೂ ಅಂಗಳದ ದ್ವಾರಂಗಣ ಶಾಲೆಗಳೂ ಇದ್ದವು;
ಬಾಗಲುಗಳ ಕಂಬಗಳನ್ನೂ ಇಕ್ಕಟ್ಟಾದ ಕಿಟಕಿ ಗಳನ್ನೂ ಅದರ ಸುತ್ತಲೂ ಇದ್ದಂತಹ ಮೂರು ಅಂತಸ್ತು ಗಳಲ್ಲಿ ಬಾಗಲಿಗೆ ಎದುರಾಗಿ ಸುತ್ತಲೂ ಮರದಿಂದ ಹೊದಿಸಲ್ಪಟ್ಟಿದ್ದವು. ಪಡಸಾಲೆಗಳನ್ನೂ ನೆಲವು ಮೊದಲ್ಗೊಂಡು ಮುಚ್ಚಲ್ಪಟ್ಟಂತ ಕಿಟಕಿಗಳ ವರೆಗೂ;
ಮರದ ಯಜ್ಞ ವೇದಿಯು ಮೂರುಮೊಳ ಎತ್ತರವಾಗಿತ್ತು; ಉದ್ದವು ಎರಡು ಮೊಳವಾಗಿತ್ತು; ಅದರ ಮೂಲೆಗಳೂ ಉದ್ದವೂ ಪಾರ್ಶ್ವವೂ ಮರದಿಂದಲೇ ಮಾಡಲ್ಪಟ್ಟಿತ್ತು; ಅವನು ನನಗೆ ಹೇಳಿದ್ದೇನಂದರೆ--ಕರ್ತನ ಮುಂದೆ ಇರುವ ಮೇಜು ಇದೇ ಎಂದು ಹೇಳಿದನು.